Manipur Violence: ಮಹಿಳೆಯರು ಸೈನಿಕರಿಗೆ ಅಡ್ಡ ನಿಂತು 12 ಉಗ್ರರನ್ನು ಬಿಡಿಸಿಕೊಂಡು ಹೋದರು, ಅರಾಜಕತೆಯತ್ತ ಮಣಿಪುರ - Vistara News

ದೇಶ

Manipur Violence: ಮಹಿಳೆಯರು ಸೈನಿಕರಿಗೆ ಅಡ್ಡ ನಿಂತು 12 ಉಗ್ರರನ್ನು ಬಿಡಿಸಿಕೊಂಡು ಹೋದರು, ಅರಾಜಕತೆಯತ್ತ ಮಣಿಪುರ

Manipur Violence: ಮಣಿಪುರದಲ್ಲಿ ಸೈನಿಕರು ಕಾರ್ಯಾಚರಣೆ ನಡೆಸಿ 12 ಬಂಡುಕೋರರನ್ನು ಬಂಧಿಸಿದ್ದರು. ಆದರೆ, ಸಾವಿರಾರು ಮಹಿಳೆಯರು ಯೋಧರಿಗೆ ಪ್ರತಿರೋಧ ಒಡ್ಡಿ, ಬಂಧಿತ ಬಂಡುಕೋರರನ್ನು ಬಿಡಿಸಿಕೊಂಡು ಹೋಗಿದ್ದಾರೆ.

VISTARANEWS.COM


on

Manipur Violence: Army Releases 12 militants
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ಕೈಮೀರುತ್ತಿದೆ. ದಿನೇದಿನೆ ಹೊತ್ತಿ ಉರಿಯುತ್ತಿದೆ. ಮೈತೈ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ಕೊಡುವ ವಿಚಾರದ ಕಾರಣಕ್ಕೆ ಭುಗಿಲೆದ್ದಿರುವ ಸಂಘರ್ಷವು ಮಿತಿಮೀರಿದೆ. ಇನ್ನು, ಹಿಂಸಾಚಾರದಿಂದ ಸುದ್ದಿಯಾಗುತ್ತಿರುವ ರಾಜ್ಯದಲ್ಲಿ ಹೆಣ್ಣುಮಕ್ಕಳು ಕೂಡ ಬಂಡುಕೋರರಿಗೆ ಬೆಂಬಲ ನೀಡುತ್ತಿದ್ದಾರೆ. ಇದು ರಾಜ್ಯವನ್ನು ಅರಾಜಕತೆಗೆ ತಳ್ಳುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಮಣಿಪುರದಲ್ಲಿ ಸುಮಾರು 1,500 ಮಹಿಳೆಯರು ಸೈನಿಕರನ್ನೇ (Manipur Violence) ಅಡ್ಡಹಾಕಿ 12 ಬಂಡುಕೋರರನ್ನು ಬಿಡಿಸಿಕೊಂಡು ಹೋಗಿದ್ದಾರೆ.

ಹೌದು, ಮಹಿಳೆಯರ ಗುಂಪೊಂದು ಸೈನಿಕರನ್ನು ಸುತ್ತುವರಿದು, 12 ಕಾಂಗ್ಲೇಯಿ ಯವೋಲ್‌ ಕನ್ನಾ ಲುಪ್‌ (KYKL) ಉಗ್ರರನ್ನು ಬಿಡಿಸಿಕೊಂಡು ಹೋಗಿದ್ದಾರೆ ಎಂದು ಸೇನೆಯೇ ಮಾಹಿತಿ ನೀಡಿದೆ. ಮಣಿಪುರದಲ್ಲಿ ಶಾಂತಿಸ್ಥಾಪನೆ ಕುರಿತು ಭಾರತೀಯ ಸೇನೆಯು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇದಕ್ಕಾಗಿ, ಯೋಧರು ಬಂಡುಕೋರರನ್ನು ನಿಗ್ರಹಿಸಲು ಕಾರ್ಯಾಚರಣೆ ಕೈಗೊಳ್ಳುತ್ತಿದ್ದಾರೆ. ಹೀಗೆ ಕಾರ್ಯಾಚರಣೆ ಕೈಗೊಳ್ಳುವಾಗ 12 ಬಂಡುಕೋರರನ್ನು ಬಂಧಿಸಿದ್ದರು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ 1,500ಕ್ಕೂ ಅಧಿಕ ಮಹಿಳೆಯರು ಸೈನಿಕರನ್ನು ಅಡ್ಡಹಾಕಿ, ಅವರಿಂದ ಬಂಡುಕೋರರನ್ನು ಬಿಡಿಸಿಕೊಂಡು ಹೋಗಿದ್ದಾರೆ.

ದಾಳಿಯ ಮಾಸ್ಟರ್‌ ಮೈಂಡ್‌ ಸಿಕ್ಕಿದ್ದ

“ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ಭದ್ರತಾ ಸಿಬ್ಬಂದಿಗೆ ನಿಖರ ಮಾಹಿತಿ ಲಭ್ಯವಾದ ಕಾರಣ ಇಂಫಾಲದ ಪೂರ್ವಭಾಗದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಇಥಮ್‌ ಎಂಬ ಗ್ರಾಮದಲ್ಲಿ ಕೆವೈಕೆಎಲ್‌ನ 12 ಬಂಡುಕೋರರನ್ನು ವಶಪಡಿಸಿಕೊಳ್ಳಲಾಗಿತ್ತು. ಇವರಲ್ಲಿ 2015ರಲ್ಲಿ ದೋಗ್ರಾ ಹಿಂಸಾಚಾರದ ಮಾಸ್ಟರ್‌ ಮೈಂಡ್‌ ಮೊಯಿರಂಗ್‌ಥೆಮ್‌ ತಂಬಾ ಎಂಬಾತನೂ ಇದ್ದ. ಆದರೆ, ಸಾವಿರಾರು ಮಹಿಳೆಯರು ಯೋಧರನ್ನು ಅಡ್ಡಹಾಕಿ ಬಂಡುಕೋರರನ್ನು ಬಿಡಿಸಿಕೊಂಡು ಹೋಗಿದ್ದಾರೆ” ಎಂದು ಸೇನೆಯ ವಕ್ತಾರರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Manipur Violence: ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಸ್ಥಳೀಯ ಶಾಸಕ, ಬಿಜೆಪಿ ಅಧ್ಯಕ್ಷರ ಮನೆ ಟಾರ್ಗೆಟ್

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಇದುವರೆಗೆ 100 ಕ್ಕೂ ಹೆಚ್ಚಿನ ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ, 300ಕ್ಕೂ ಅಧಿಕ ನಾಗರಿಕರು ಗಾಯಗೊಂಡಿದ್ದಾರೆ. ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದ್ದರೂ ಬಂಡುಕೋರರ ಅಟ್ಟಹಾಸ ಮುಂದುವರಿದಿದೆ. ಮಣಿಪುರದಲ್ಲಿ ಈಗಾಗಲೇ ಹಿಂಸಾಚಾರ ಭುಗಿಲೆದ್ದಿದ್ದು, ಹೆಣ್ಣುಮಕ್ಕಳನ್ನು ಬಂಧಿಸುವುದು, ಗುಂಡಿನ ದಾಳಿ ನಡೆಸುವುದರಿಂದ ಹಿಂಸೆ ಮತ್ತಷ್ಟು ವ್ಯಾಪಿಸಲಿದೆ ಎಂಬ ಕಾರಣಕ್ಕಾಗಿ ಸೈನಿಕರು ಪ್ರತಿರೋಧ ಒಡ್ಡಿಲ್ಲ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Stock Market: ಷೇರುಪೇಟೆಯಲ್ಲಿ ಗೂಳಿ ಗುಟುರು; ಸೆನ್ಸೆಕ್ಸ್‌, ನಿಫ್ಟಿ ಏರಿಕೆ

Stock Market: ಷೇರು ಮಾರುಕಟ್ಟೆಯಲ್ಲಿ ಗುರುವಾರ (ಜೂನ್‌ 13) ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್‌ 300ಕ್ಕೂ ಅಧಿಕ ಅಂಕಗಳೊಂದಿಗೆ ವಹಿವಾಟು ನಡೆಸಿದೆ. ಎನ್‌ಎಸ್‌ಇ ನಿಫ್ಟಿ 110 ಅಂಕಗಳ ಜಿಗಿತದೊಂದಿದೆ 23,480.95 ಅಂಕಗಳ ಗಡಿ ತಲುಪಿದೆ. ಇತ್ತ ಸೆನ್ಸೆಕ್ಸ್‌ 495 ಪಾಯಿಂಟ್‌ಗಳ ಹೆಚ್ಚಳದೊಂದಿಗೆ 77,102.05 ಅಂಕ ತಲುಪಿದೆ.

VISTARANEWS.COM


on

Stock Market
Koo

ಮುಂಬೈ: ಷೇರು ಮಾರುಕಟ್ಟೆಯಲ್ಲಿ (Stock Market) ಚೇತರಿಕೆ ಕಂಡು ಬಂದಿದ್ದು, ಗುರುವಾರ (ಜೂನ್‌ 13) ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್‌ 300ಕ್ಕೂ ಅಧಿಕ ಅಂಕಗಳೊಂದಿಗೆ ವಹಿವಾಟು ನಡೆಸಿದೆ. ಎನ್‌ಎಸ್‌ಇ ನಿಫ್ಟಿ 110 ಅಂಕಗಳ ಜಿಗಿತದೊಂದಿದೆ 23,480.95 ಅಂಕಗಳ ಗಡಿ ತಲುಪಿದೆ. ಇತ್ತ ಸೆನ್ಸೆಕ್ಸ್‌ 495 ಪಾಯಿಂಟ್‌ಗಳ ಹೆಚ್ಚಳದೊಂದಿಗೆ 77,102.05 ಅಂಕ ತಲುಪಿದೆ.

ಬುಧವಾರದ ವಹಿವಾಟಿನಲ್ಲಿ ನಿಫ್ಟಿ ಸಾರ್ವಕಾಲಿಕ ದಾಖಲೆ ಮಟ್ಟ ತಲುಪಿತ್ತು. ʼʼಸೆನ್ಸೆಕ್ಸ್‌ ದೀರ್ಘ ಕಾಲದ ಏರಿಕೆಯೊಂದಿಗೆ ಮುಂದುವರಿಯಲಿದೆ ಎನ್ನುವ ನಿರೀಕ್ಷೆ ಇಲ್ಲ. ಯಾವ ಸಮಯದಲ್ಲಿಯಾದರೂ ಭಾರೀ ಕುಸಿತ ಕಾಣಬಹುದುʼʼ ಎಂದು ಆರ್ಥಿಕ ತಜ್ಞರು ಎಚ್ಚರಿಸಿದ್ದಾರೆ.

ಹಣದುಬ್ಬರ ಶೇ. 4.75ಕ್ಕೆ ಇಳಿಕೆ

ಈ ಮಧ್ಯೆ ಭಾರತದ ಹಣದುಬ್ಬರ ದರ ಶೇ. 4.75ಕ್ಕೆ ಇಳಿಕೆಯಾಗಿದೆ. ಏಪ್ರಿಲ್‌ನಲ್ಲಿ ಶೇ. 4.83ರಷ್ಟಿದ್ದ ಹಣದುಬ್ಬರ ಮೇಯಲ್ಲಿ ಶೇ. 4.75ಕ್ಕೆ ಇಳಿದಿದೆ. ಕಳೆದ 12 ತಿಂಗಳ ಅವಧಿಯಲ್ಲಿ ಇದು ಅತಿ ಕಡಿಮೆ ಹಣದುಬ್ಬರ ದರ ಎನ್ನುವುದು ವಿಶೇಷ. ಆದರೆ ಹಿಂದಿನ ವರ್ಷದ ಹಿಂದಿನ ದರಕ್ಕೆ ಹೋಲಿಸಿದರೆ ಹಣುದಬ್ಬರ ಅಧಿಕವೇ ಇದೆ. 2023ರ ಮೇಯಲ್ಲಿ ಇದು ಶೇ. 4.31ರಷ್ಟಿತ್ತು. 2024-25ರ ಹಣಕಾಸು ವರ್ಷದಲ್ಲಿ ಹಣದುಬ್ಬರ ಶೇ. 4.5ರಷ್ಟಿರಬಹುದು ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (RBI) ಅಂದಾಜು ಮಾಡಿದೆ. ಹಣದುಬ್ಬರವನ್ನು ಶೇ. 4ಕ್ಕೆ ತಂದು ನಿಲ್ಲಿಸುವ ಗುರಿ ಆರ್​ಬಿಐಗಿದೆ.

ಯಥಾಸ್ಥಿತಿ ಕಾಯ್ದುಕೊಂಡ ರೆಪೋ ದರ

ಇತ್ತೀಚೆಗೆ ಆರ್‌ಬಿಐ ರೆಪೋ ದರವನ್ನು ಪ್ರಕಟಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ 6.5% ಬಡ್ಡಿ ದರವನ್ನೇ ಮುಂದುವರಿಸಿದೆ. ಆ ಮೂಲಕ ಗೃಹ, ವಾಹನ ಸಾಲ ಸೇರಿ ಹಲವು ರೀತಿಯ ಸಾಲಗಾರರಿಗೆ ಆರ್‌ಬಿಐ ಸಮಾಧಾನದ ಸುದ್ದಿ ನೀಡಿದೆ. ಇಎಂಐ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸಾಲಗಾರರು ನಿರಾಳರಾಗಿದ್ದಾರೆ. ಆರ್‌ಬಿಐ ಕೊನೆಯ ಬಾರಿಗೆ 2023ರ ಫೆಬ್ರವರಿಯಲ್ಲಿ ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಏರಿಕೆ ಮಾಡಿತ್ತು.

ಗೃಹ ಸಾಲದ ಮೇಲೆ ಪರಿಣಾಮ ಬೀರುವುದಿಲ್ಲ

ರೆಪೋ ದರ ಯಥಾಸ್ಥಿಯಲ್ಲಿರುವುದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ತಕ್ಷಣದ ಪರಿಣಾಮ ಬೀರುವುದಿಲ್ಲ. ರೆಪೋ ದರವು ಬದಲಾಗದೆ ಉಳಿದಿರುವುದರಿಂದ ಬ್ಯಾಂಕ್‌ಗಳು ಶೀಘ್ರದಲ್ಲೇ ತಮ್ಮ ಸಾಲದ ದರಗಳನ್ನು ಬದಲಾಯಿಸುವ ಸಾಧ್ಯತೆಯಿಲ್ಲ. 

ರೆಪೋ ದರವನ್ನು ಬದಲಾಯಿಸದೆ ಇರಿಸುವುದರಿಂದ ಮನೆ ಖರೀದಿದಾರರು ನಿರಾಳರಾಗಲಿದ್ದಾರೆ ಎಂದು ಆರ್ಥಿಕ ತಜ್ಞರು ತಿಳಿಸಿದ್ದಾರೆ. ಹಣದುಬ್ಬರವನ್ನು ನಿಯಂತ್ರಿಸುವುದು ಆರ್‌ಬಿಐಯ ಹಣಕಾಸು ನೀತಿಯ ಪ್ರಮುಖ ಗುರಿ. ಪ್ರಸ್ತುತ ಹಣದುಬ್ಬರ ದರ ವಿಶೇಷವಾಗಿ ಆಹಾರ ಹಣದುಬ್ಬರ ದರವು ಆರ್‌ಬಿಐಯ ಗುರಿಯಾದ ಶೇ. 4ಕ್ಕಿಂತ ಹೆಚ್ಚಾಗಿದೆ. ರೆಪೋ ದರವನ್ನು ಕಡಿಮೆ ಮಾಡುವುದು ಆರ್ಥಿಕತೆಯಲ್ಲಿ ಹಣದುಬ್ಬರದ ಒತ್ತಡದ ಹೆಚ್ಚಳಕ್ಕೆ ಕಾರಣವಾಗಬಹುದು. ಪ್ರಸ್ತುತ ದರವನ್ನು ಕಾಯ್ದುಕೊಳ್ಳುವುದು ಹಣದುಬ್ಬರವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಮತ್ತು ಸ್ವಲ್ಪ ಆರ್ಥಿಕ ಬೆಳವಣಿಗೆಗೆ ಅನುವು ಮಾಡಿಕೊಡುತ್ತದೆ ಎಂದು ಆರ್‌ಬಿಐ ಹೇಳಿದೆ.

ಇದನ್ನೂ ಓದಿ: Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

Continue Reading

ದೇಶ

Pema Khandu: ಅರುಣಾಚಲ ಪ್ರದೇಶದ ಸಿಎಂ ಆಗಿ ಪೇಮಾ ಖಂಡು ಪ್ರಮಾಣ ವಚನ ಸ್ವೀಕಾರ

Pema Khandu: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿಯ ಪೇಮಾ ಖಂಡು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ಸಿಎಂ ಹುದ್ದೆಗೆ ಏರುತ್ತಿರುವುದು ಇದು ಮೂರನೇ ಬಾರಿ ಎನ್ನುವುದು ವಿಶೇಷ. ಇವರ ಜತೆಗೆ ಉಪಮುಖ್ಯಮಂತ್ರಿಯಾಗಿ ಚೌವ್ನ ಮೇಯ್ನ್‌ ಪದಗ್ರಹಣ ಮಾಡಿದರು. ಇವರಲ್ಲದೆ 10 ಕ್ಯಾಬಿನೆಟ್‌ ಸಚಿವರಿಗೆ ಅರುಣಾಚಲ ಪ್ರದೇಶದ ರಾಜ್ಯಪಾಲ ಕೆ.ಟಿ.ಪರ್ನಾಯಕ್ ಪ್ರಮಾಣ ವಚನ ಬೋಧಿಸಿದರು.

VISTARANEWS.COM


on

Pema Khandu
Koo

ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿಯ ಪೇಮಾ ಖಂಡು (Pema Khandu) ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ಸಿಎಂ ಹುದ್ದೆಗೆ ಏರುತ್ತಿರುವುದು ಇದು ಮೂರನೇ ಬಾರಿ ಎನ್ನುವುದು ವಿಶೇಷ. ಇವರ ಜತೆಗೆ ಉಪಮುಖ್ಯಮಂತ್ರಿಯಾಗಿ ಚೌವ್ನ ಮೇಯ್ನ್‌ (Chowna Mein) ಪದಗ್ರಹಣ ಮಾಡಿದರು.

ಇವರಲ್ಲದೆ 10 ಕ್ಯಾಬಿನೆಟ್‌ ಸಚಿವರಿಗೆ ಅರುಣಾಚಲ ಪ್ರದೇಶದ ರಾಜ್ಯಪಾಲ ಕೆ.ಟಿ.ಪರ್ನಾಯಕ್ ಪ್ರಮಾಣ ವಚನ ಬೋಧಿಸಿದರು. ಇಟಾನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ನಿಂಗ್‌, ಜೆ.ಪಿ.ನಡ್ಡಾ, ಕಿರಣ್‌ ರಿಜಿಜು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಮತ್ತಿತರರು ಪಾಲ್ಗೊಂಡಿದ್ದಾರೆ.

ಬಿಯುರಾಮ್ ವಾಘೆ, ನ್ಯಾಟೊ ಡುಕಾಮ್, ಗ್ಯಾನ್ರಿಯಲ್ ಡೆನ್ವಾಂಗ್ ವಾಂಗ್ಸು, ವಾಂಕಿ ಲೋವಾಂಗ್, ಪಸಾಂಗ್ ದೋರ್ಜಿ ಸೋನಾ, ಮಾಮಾ ನಾತುಂಗ್, ದಸಾಂಗ್ಲು ಪುಲ್, ಬಾಲೊ ರಾಜಾ, ಕೆಂಟೊ ಜಿನಿ ಮತ್ತು ಓಜಿಂಗ್ ತಾಸಿಂಗ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು. ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ಕಲಿಖೋ ಪುಲ್ ಅವರ ಪತ್ನಿ ದಸಾಂಗ್ಲು ಪುಲ್ ಅವರು ದಶಕಗಳ ನಂತರ ಆಯ್ಕೆಯಾದ ಏಕೈಕ ಸಚಿವೆ ಎನಿಸಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಯೊಂದಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 60 ಸೀಟುಗಳ ಪೈಕಿ ಬಿಜೆಪಿ 46 ಕಡೆ ಜಯ ಗಳಿಸಿ ಬಹುಮತ ಪಡೆದು ಸರ್ಕಾರ ರಚಿಸಿದೆ. ವಿಶೇಷ ಎಂದರೆ 10 ಕ್ಷೇತ್ರಗಳಲ್ಲಿ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿದೆ. ಮುಕ್ತೋ ಕ್ಷೇತ್ರದಲ್ಲಿ ಪೇಮಾ ಖಂಡು, ಬೊಮ್ಡಿಲದಲ್ಲಿ ಡೊಂಗ್ರು ಸಿಯೊಂಗ್ಜು, ಚೌಕಂನಲ್ಲಿ ಚೌನಾ ಮೇ ಹಯುಲಿಯಾಂಗ್‌ನಲ್ಲಿ ದಸಾಂಗ್ಲು ಪುಲ್, ಇಟಾನಗರದಲ್ಲಿ ಟೆಚಿ ಕಾಸೊ, ರೋಯಿಂಗ್‌ದಲ್ಲಿ ಮುಚ್ಚು ಮಿಥಿ, ಸಾಗಲೀ ಕ್ಷೇತ್ರದಲ್ಲಿ ರತು ಟೆಚಿ, ತಾಲಿ ಕ್ಷೇತ್ರದಲ್ಲಿ ಜಿಕ್ಕೆ ಟಾಕೊ, ತಾಲಿಹಾದಲ್ಲಿ ನ್ಯಾತೋ ದುಕಮ್ ಜಿರೋ, ಹಾಪೋಲಿ ಕ್ಷೇತ್ರದಲ್ಲಿ ಹಗೆ ಅಪ್ಪಾ ಅವಿರೋಧವಾಗಿ ಆಯ್ಕೆಯಾದ ಶಾಸಕರು.

44 ವರ್ಷದ ಪೇಮಾ ಖಂಡು ಮೊದಲು ಕಾಂಗ್ರೆಸ್‌ನಲ್ಲಿದ್ದರು. ಬಳಿಕ ಕೇಸರಿ ಪಾಳಯದತ್ತ ಮುಖ ಮಾಡಿದರು. 2016ರಲ್ಲಿ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಅದೇ ವರ್ಷದ ಕೊನೆಯಲ್ಲಿ ಖಂಡು ನೇತೃತ್ವದ 43 ಶಾಸಕರು ಕಾಂಗ್ರೆಸ್‌ನಿಂದ ಬಿಜೆಪಿ ಮಿತ್ರ ಪಕ್ಷವಾದ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (PPA)ಕ್ಕೆ ಪಕ್ಷಾಂತರಗೊಂಡರು. ಇದರ ನಂತರ 33 ಪಿಪಿಎ ಶಾಸಕರು ಬಿಜೆಪಿಗೆ ಸೇರಿದ ಬಳಿಕ ಪೇಮಾ ಖಂಡು ಮುಖ್ಯಮಂತ್ರಿಯಾಗಿ ವಿಧಾನಸಭೆಯಲ್ಲಿ ತಮ್ಮ ಬಹುಮತವನ್ನು ಸಾಬೀತುಪಡಿಸಿದರು. 2019ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಚುಕ್ಕಾಣಿ ಹಿಡಿಯಿತು. ಆಗಲೂ ಮುಖ್ಯಮಂತ್ರಿಯಾಗಿ ಪೇಮಾ ಖಂಡು ಆಯ್ಕೆಯಾಗಿದರು.

ಇದನ್ನೂ ಓದಿ: Assembly Election Results 2024: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ, ಸಿಕ್ಕಿಂನಲ್ಲಿ SKMಗೆ ಪ್ರಚಂಡ ಗೆಲುವು

ಚುನಾವಣೆಯಲ್ಲಿ ಬಹುಮತ ಪಡೆದ ಬಳಿಕ ಜೂನ್‌ 3ರಂದು ಪೇಮಾ ಖಂಡು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮತದಾರರಿಗೆ ಧನ್ಯವಾದ ಅರ್ಪಿಸಿದ್ದರು. ʼʼಮತ ಚಲಾಯಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ರಾಜ್ಯದ ಅಭಿವೃದ್ಧಿ ಮತ್ತು ಜನರ ಉನ್ನತಿಗಾಗಿ ಹಗಲಿರುಳು ಶ್ರಮಿಸುತ್ತೇನೆʼʼ ಎಂದು ಅವರು ಭರವಸೆ ನೀಡಿದ್ದರು.

Continue Reading

ಪ್ರಮುಖ ಸುದ್ದಿ

NEET UG : 1563 ಅಭ್ಯರ್ಥಿಗಳ ಗ್ರೇಸ್ ಮಾರ್ಕ್​ ರದ್ದು, ಜೂನ್​ 23ರಂದು ಮರುಪರೀಕ್ಷೆ

NEET UG : ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯದ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

VISTARANEWS.COM


on

NEET UG
Koo

ನವದೆಹಲಿ: ನೀಟ್​ ಯುಜಿ (NEET UG) ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್​ (ಕೃಪಾಂಕ) ಪಡೆದಿರುವ 1,563 ಅಭ್ಯರ್ಥಿಗಳಿಗೆ ಜೂನ್​ 23ರಂದು ಮರು ಪರೀಕ್ಷೆ ನಡೆಸುವುದಾಗಿ ಕೇಂದ್ರ ಸರ್ಕಾರ ಮತ್ತು ಎನ್​ಟಿಎ (National Testing Agency) ಗುರುವಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯದ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್​ಗಳ ಪ್ರವೇಶಕ್ಕಾಗಿ ನೀಟ್-ಯುಜಿ, 2024 ಪರೀಕ್ಷೆಗೆ ಸಂಬಂಧಿಸಿದ ವಿವಾದಕ್ಕೆ ಕುರಿತ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಪೀಠಕ್ಕೆ ಕೇಂದ್ರ ಸರ್ಕಾರ ಹಾಗೂ ಎನ್​ಟಿಎ ಮಾಹಿತಿ ನೀಡಿದೆ.

ಗ್ರೇಸ್ ಅಂಕಗಳನ್ನು ನೀಡಿದ 1,563 ನೀಟ್-ಯುಜಿ 2024 ಅಭ್ಯರ್ಥಿಗಳ ಸ್ಕೋರ್ ಕಾರ್ಡ್​ಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಸಮಿತಿ ತೆಗೆದುಕೊಂಡಿದೆ. ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ತೆಗೆದುಕೊಳ್ಳುವ ಆಯ್ಕೆಯನ್ನು ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್​ಗೆ ಏಜೆನ್ಸಿ ತಿಳಿಸಿದೆ. ಪರೀಕ್ಷೆಗಳನ್ನು ಜೂನ್ 23 ರಂದು ನಡೆಸಲಾಗುವುದು ಮತ್ತು ಜೂನ್ 30 ರೊಳಗೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಎನ್​​ಟಿಎ ಸುಪ್ರೀಂ ಕೋರ್ಟ್​​ಗೆ ತಿಳಿಸಿದೆ.

ಜುಲೈ 6ರಿಂದ ಕೌನ್ಸೆಲಿಂಗ್​

ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್​​ಗಳ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಜುಲೈ 6 ರಿಂದ ಪ್ರಾರಂಭವಾಗಲಿದೆ ಎಂದು ಎನ್​ಟಿಎ ತಿಳಿಸಿದೆ. ಮರುಪರೀಕ್ಷೆಗೆ ಸಂಬಂಧಿಸಿದಂತೆ ಎನ್​ಟಿಎ ಕೊಟ್ಟಿರುವ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಗಣನೆಗೆ ತೆಗೆದುಕೊಂಡಿದೆ. ಇವೆಲ್ಲದರ ನಡುವೆ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ಕೌನ್ಸೆಲಿಂಗ್ ಮುಂದುವರಿಯುತ್ತದೆ ಮತ್ತು ನಾವು ಅದನ್ನು ನಿಲ್ಲಿಸುವುದಿಲ್ಲ. ಪರೀಕ್ಷೆ ನಡೆದ ಬಳಿಕ ಎಲ್ಲವೂ ಒಟ್ಟಾಗಿ ನಡೆಯುತ್ತದೆ. ಆದ್ದರಿಂದ ಭಯಪಡಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಯ ನೀಡಿದೆ.

ಬಹು ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮಗಳ ನಡುವೆ ಮೇ 5 ರಂದು ಪರೀಕ್ಷೆಯನ್ನು ನಡೆಸಲಾಯಿತು ಎಂದು ಎನ್​​ಟಿಎ ವಿರುದ್ಧ ಸುಪ್ರೀಂ ಕೋರ್ಟ್​​ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಪ್ರಶ್ನೆ ಪತ್ರಿಕೆ ಸೋರಿಕೆಯು ಸಂವಿಧಾನದ 14 ನೇ ವಿಧಿಯ (ಸಮಾನತೆಯ ಹಕ್ಕು) ಉಲ್ಲಂಘನೆಯಾಗಿದೆ. ಏಕೆಂದರೆ ಇದು ನ್ಯಾಯಯುತ ರೀತಿಯಲ್ಲಿ ಪರೀಕ್ಷೆ ಬರೆದ ಇತರ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತೆ. ಅಲ್ಲದೆ ಅಕ್ರಮವಾಗಿ ಬರೆದ ಅಭ್ಯರ್ಥಿಗಳಿಗೆ ಅನಗತ್ಯ ಪ್ರಯೋಜನವನ್ನು ನೀಡುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ನೀಟ್​ ಪರೀಕ್ಷೆಯಲ್ಲಿ ಅಕ್ರಮ

ಕೆಲವೊಂದು ಸಮಸ್ಯೆಗಳಿಂದಾಗಿ 1,563 ಅಭ್ಯರ್ಥಿಗಳಿಗೆ ಸಮಯ ನಷ್ಟವಾಗಿದೆ ಎಂದು ಕೃಪಾಂಕವನ್ನು ನೀಡಲಾಗಿತ್ತು. ಅಲ್ಲದೆ ಈ ಅಂಕಗಳನ್ನು ಪಡೆದ ಅಭ್ಯರ್ಥಿಗಳ ಗರಿಷ್ಠ ರ್ಯಾಂಕ್​ಗಳನ್ನು ಪಡೆದಿದ್ದರು. ಇದು ಅನುಮಾನಕ್ಕೆ ಕಾರಣವಾಯಿತು. ಪೂರ್ವಯೋಜಿತ ಕೃತ್ಯ ಹಾಗೂ ಪ್ರಶ್ನಾ ಪತ್ರಿಕೆಯ ಸೋರಿಕೆ ಎಂಬುದಾಗಿ ಗದ್ದಲವೆದ್ದಿತು. ದೇಶಾದ್ಯಂತ ಪರೀಕ್ಷೆ ಬರೆದ ಅಭ್ಯರ್ಥಿಗಳು ಮೋಸ ನಡೆದಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಈ ಅಕ್ರಮಗಳನ್ನು ಎತ್ತಿ ತೋರಿಸಿದ್ದವು. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಎಸ್ಐಟಿ ತನಿಖೆ ನಡೆಸಬೇಕೆಂದು ಎಎಪಿ ಒತ್ತಾಯಿಸಿದೆ.

ಇದನ್ನೂ ಓದಿ: Tollgates: ಇನ್ನು ಫಾಸ್ಟ್‌ಟ್ಯಾಗ್‌‌ ಮರೆತುಬಿಡಿ; ಟೋಲ್‌ ಸಂಗ್ರಹಕ್ಕೆ ಬರುತ್ತಿದೆ ಸ್ಯಾಟಲೈಟ್‌ ಆಧಾರಿತ ವ್ಯವಸ್ಥೆ: ಏನಿದರ ಪ್ರಯೋಜನ?

ಈ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, “ಲಕ್ಷಾಂತರ ಮಕ್ಕಳು ನೀಟ್ ನಂತಹ ಪರೀಕ್ಷೆಗಳಿಗೆ ಕಠಿಣ ತಯಾರಿ ನಡೆಸುತ್ತಾರೆ/ ಅದಕ್ಕಾಗಿ ತಯಾರಿ ನಡೆಸಲು ತಮ್ಮ ಜೀವನದ ಅತ್ಯಂತ ಅಮೂಲ್ಯ ಕ್ಷಣಗಳನ್ನು ಕಳೆಯುತ್ತಾರೆ. ಇಡೀ ಕುಟುಂಬವು ಅವರ ಬೆನ್ನಿಗೆ ನಿಲ್ಲುತ್ತದೆ. ಆದರೆ ವರ್ಷದಿಂದ ವರ್ಷಕ್ಕೆ ಈ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಫಲಿತಾಂಶಗಳಿಗೆ ಸಂಬಂಧಿಸಿದ ಅಕ್ರಮಗಳು ವರದಿಯಾಗುತ್ತಿವೆ ಎಂದು ಹೇಳಿದ್ದರು.

Continue Reading

ದೇಶ

G7 Summit: ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೋದಿ ಮೊದಲ ವಿದೇಶ ಪ್ರವಾಸ ಇಂದು; ಇಟಲಿಯ ಜಿ7 ಶೃಂಗಸಭೆಯಲ್ಲಿ ಭಾಗಿ

G7 Summit: ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರು ತಮ್ಮ ಮೊದಲ ವಿದೇಶ ಪ್ರವಾಸವನ್ನು ಗುರುವಾರ (ಜೂನ್‌ 13) ಕೈಗೊಂಡಿದ್ದಾರೆ. ಇಟಲಿಯಲ್ಲಿ ಆಯೋಜಿಸಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಅವರು ತೆರಳುತ್ತಿದ್ದಾರೆ. ಇಟಲಿಯ ಅಪುಲಿಯಾ ಪ್ರದೇಶದ ಐಷಾರಾಮಿ ರೆಸಾರ್ಟ್ ಬೊರ್ಗೊ ಎಗ್ನಾಜಿಯಾದಲ್ಲಿ ಜೂನ್‌ 13ರಿಂದ 15ರವರೆಗೆ ಈ ಬಾರಿಯ, 50ನೇ ಜಿ7 ಶೃಂಗಸಭೆಯನ್ನು ಆಯೋಜಿಸಲಾಗಿದೆ.

VISTARANEWS.COM


on

G7 Summit
Koo

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ (Narendra Modi) ಅವರು ತಮ್ಮ ಮೊದಲ ವಿದೇಶ ಪ್ರವಾಸವನ್ನು ಗುರುವಾರ (ಜೂನ್‌ 13) ಕೈಗೊಂಡಿದ್ದಾರೆ. ಇಟಲಿಯಲ್ಲಿ ಆಯೋಜಿಸಿರುವ ಜಿ7 ಶೃಂಗಸಭೆ (G7 Summit)ಯಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಅವರು ತೆರಳುತ್ತಿದ್ದಾರೆ.

ಇಟಲಿಯ ಅಪುಲಿಯಾ ಪ್ರದೇಶದ ಐಷಾರಾಮಿ ರೆಸಾರ್ಟ್ ಬೊರ್ಗೊ ಎಗ್ನಾಜಿಯಾದಲ್ಲಿ ಜೂನ್‌ 13ರಿಂದ 15ರವರೆಗೆ ಈ ಬಾರಿಯ, 50ನೇ ಜಿ7 ಶೃಂಗಸಭೆಯನ್ನು ಆಯೋಜಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ವಿನಯ್ ಅವರನ್ನು ಒಳಗೊಂಡಿರುವ ಉನ್ನತ ಮಟ್ಟದ ನಿಯೋಗವು ಪ್ರಧಾನಿ ಅವರೊಂದಿಗೆ ಇರಲಿದೆ. ಜೂನ್‌ 14ರಂದು ಸಭೆಯಲ್ಲಿ ಮೋದಿ ಅವರು ಪಾಲ್ಗೊಂಡು ಅಂದೇ ಭಾರತಕ್ಕೆ ಹಿಂದಿರುಗಲಿದ್ದಾರೆ.

ಚರ್ಚಾ ವಿಷಯ

ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧ ಮತ್ತು ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ವಿಚಾರವು ಜಿ7 ಶೃಂಗಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ರಷ್ಯಾದ ಆಕ್ರಮಣದ ಕುರಿತು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ. ಜತೆಗೆ ಭಾರತ ರಕ್ಷಣಾ ಮತ್ತು ಸಮುದ್ರ ಮಾರ್ಗದಲ್ಲಿನ ಸಹಕಾರದ ಬಗ್ಗೆ ಪ್ರಸ್ತಾವಿಸಲಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕ, ಇಂಗ್ಲೆಂಡ್‌, ಕೆನಡಾ, ಜರ್ಮನಿ, ಇಟಲಿ, ಜಪಾನ್, ಫ್ರಾನ್ಸ್ ಮತ್ತು ಯುರೋಪಿಯನ್ ಒಕ್ಕೂಟದ ಏಳು ಸದಸ್ಯ ರಾಷ್ಟ್ರಗಳ ನಾಯಕರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ʼʼವಿಶೇಷ ಆಹ್ವಾನಿತರಾಗಿರುವ ಪ್ರಧಾನಿ ಮೋದಿ ಗುರುವಾರ ಉನ್ನತ ಮಟ್ಟದ ನಿಯೋಗದೊಂದಿಗೆ ಇಟಲಿಗೆ ತೆರಳಲಿದ್ದು, ಮೂರನೇ ಬಾರಿಗೆ ಪ್ರಧಾನಿಯಾಗಿ ಮರಳಿದ ನಂತರ ಇದು ಅವರ ಮೊದಲ ವಿದೇಶ ಪ್ರವಾಸʼʼ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ತಿಳಿಸಿದ್ದಾರೆ. ʼʼಭಾರತದ ಜಿ20 ಅಧ್ಯಕ್ಷತೆಯ ಅವಧಿಯಲ್ಲಿ ಚರ್ಚಿಸಲಾದ ಕೆಲವು ಪ್ರಮುಖ ವಿಷಯಗಳ ಬಗ್ಗೆ ಅವರು ಪ್ರಸ್ತಾವಿಸಲಿದ್ದಾರೆʼʼ ಎಂದೂ ಹೇಳಿದ್ದಾರೆ.

ಶೃಂಗಸಭೆಯಲ್ಲಿ ರಷ್ಯಾ-ಉಕ್ರೇನ್ ಸಂಘರ್ಷ ಚರ್ಚೆಯ ವಿಷಯಗಳಲ್ಲಿ ಒಂದಾಗುವ ನಿರೀಕ್ಷೆಯಿದೆ. ಸಂಘರ್ಷವನ್ನು ಪರಿಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆ ಉತ್ತಮ ಆಯ್ಕೆಯಾಗಿದೆ ಎಂದು ಭಾರತ ಪುನರುಚ್ಚರಿಸಿದೆ. “ಸಂಘರ್ಷ, ಸಂವಾದ ಮತ್ತು ರಾಜತಾಂತ್ರಿಕತೆಯ ಅಗತ್ಯತೆಯ ಬಗ್ಗೆ ಮಾತ್ರವಲ್ಲ, ಸಂಘರ್ಷವು ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಬೀರುವ ಪರಿಣಾಮ ಬೀರುವ ಬಗ್ಗೆಯೂ ಮಾತನಾಡಲಿದ್ದೇವೆ” ಎಂದು ಕ್ವಾತ್ರಾ ತಿಳಿಸಿದ್ದಾರೆ.

ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರೂ ಪಾಲ್ಗೊಳ್ಳುತ್ತಿದ್ದು, ಮೋದಿ ಅವರೊಂದಿಗೆ ಮಾತುಕತೆ ನಡೆಸುವ ನಿರೀಕ್ಷೆ ಇದೆ. ಜತೆಗೆ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಒಪ್ಪಂಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

ಗ್ರೂಪ್ ಆಫ್ ಸೆವೆನ್ (ಜಿ 7) ಏಳು ಪ್ರಮುಖ ದೇಶಗಳನ್ನು ಒಳಗೊಂಡಿರುವ ಅಂತರ್ ಸರ್ಕಾರಿ ಸಂಸ್ಥೆಯಾಗಿದೆ. ಆರ್ಥಿಕ ನೀತಿ, ಜಾಗತಿಕ ಭದ್ರತೆ ಮತ್ತು ಇತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಸಮನ್ವಯಗೊಳಿಸಲು ಈ ದೇಶಗಳು ವಾರ್ಷಿಕವಾಗಿ ಸಭೆ ಸೇರುತ್ತವೆ. 

Continue Reading
Advertisement
Hamare Baarah Release Supreme Court has imposed a stay
ಬಾಲಿವುಡ್3 mins ago

Hamare Baarah: ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾʼ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Stock Market
ವಾಣಿಜ್ಯ4 mins ago

Stock Market: ಷೇರುಪೇಟೆಯಲ್ಲಿ ಗೂಳಿ ಗುಟುರು; ಸೆನ್ಸೆಕ್ಸ್‌, ನಿಫ್ಟಿ ಏರಿಕೆ

Actor Darshan
ಬೆಂಗಳೂರು4 mins ago

Actor Darshan : ರೇಣುಕಾಸ್ವಾಮಿಯನ್ನು ಕೊಂದು ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಫೋನ್‌ ಮಾಡಿದ್ದು ಯಾರಿಗೆ?

Darshan Old Case Coming Out darshan gang
ಕ್ರೈಂ8 mins ago

Actor Darshan: ಬಡಪಾಯಿ ಕಾರ್ಮಿಕರ ಮೇಲೆ ನಾಯಿ ಛೂ ಬಿಟ್ಟು ಹಿಂಸಿಸಿದ್ದ ದರ್ಶನ್‌ & ಗ್ಯಾಂಗ್‌!

IND vs USA
ಕ್ರೀಡೆ24 mins ago

IND vs USA: ಬೆಸ್ಟ್​ ಫೀಲ್ಡಿಂಗ್​ಗೆ 2ನೇ ಚಿನ್ನದ ಪದಕ ಗೆದ್ದ ಮೊಹಮ್ಮದ್ ಸಿರಾಜ್

Actor Darshan case ram gopal varma Reaction
ಸ್ಯಾಂಡಲ್ ವುಡ್42 mins ago

Actor Darshan: ಆರಾಧನೆ ಅತಿರೇಕವಾದರೆ ದುರಂತ ಖಚಿತ; ದರ್ಶನ್​ ಬಗ್ಗೆ ರಾಮ್​ಗೋಪಾಲ್ ವರ್ಮಾ ಹೇಳಿದ್ದು ಹೀಗೆ…

Gold Rate Today
ಚಿನ್ನದ ದರ54 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

Karnataka Rain Effect
ಮಳೆ55 mins ago

Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

Lionel Messi Retirement
ಕ್ರೀಡೆ1 hour ago

Lionel Messi Retirement: ನಿವೃತ್ತಿಯ ಸುಳಿವು ನೀಡಿದ ಲಿಯೋನೆಲ್​ ಮೆಸ್ಸಿ

wild elephant attack
ಪ್ರಮುಖ ಸುದ್ದಿ1 hour ago

Wild Elephant Attack : ನಾಡಿಗೆ ಬಂದ ಕಾಡಾನೆಯಿಂದ ರೈತನ ಮೇಲೆ ದಾಳಿ, ಕಾಲು ಮುರಿತ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌