ನವದೆಹಲಿ: ದೆಹಲಿ ಅಬಕಾರಿ ನೀತಿ ಅಕ್ರಮ ಹಗರಣದಲ್ಲಿ (Delhi Liquor Policy Case) ಆರೋಪಿಯಾಗಿ ಜೈಲು ಸೇರಿರುವ ಆಪ್ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ಸುಪ್ರೀಂ ಕೋರ್ಟ್(Supreme Court) ಜಾಮೀನು ನೀಡಿದೆ. ಇದೀಗ ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಪ್ರಕರಣಗಳಲ್ಲಿ ಮನೀಶ್ ಸಿಸೋಡಿಯಾಗೆ ನ್ಯಾಯಾಲಯವು ನಿಯಮಿತ ಜಾಮೀನು ಮಂಜೂರು ಮಾಡಿದೆ. 17 ತಿಂಗಳ ಬಳಿಕ ಸಿಸೋಡಿಯಾ ಜೈಲಿನಿಂದ ಹೊರಬರಲಿದ್ದಾರೆ.
#WATCH | Delhi Minister and AAP leader Atishi breaks down as she remembers AAP leader Manish Sisodia
— ANI (@ANI) August 9, 2024
He has been granted bail by the Supreme Court in the Delhi Excise policy case. pic.twitter.com/eh9oib3uRp
ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಜಾಮೀನು ಅರ್ಜಿ ವಿಚಾರಣೆ ನಡೆಸಿ ಅದನ್ನು ಪುರಸ್ಕರಿಸಿದೆ. ಎರಡು ಶ್ಯೂರಿಟಿಗಳೊಂದಿಗೆ ₹ 10 ಲಕ್ಷ ಜಾಮೀನು ಬಾಂಡ್ ನೀಡುವಂತೆ ನ್ಯಾಯಾಲಯವು ಸಿಸೋಡಿಯಾ ಅವರಿಗೆ ಸೂಚಿಸಿದೆ. ಅಲ್ಲದೇ ಅವರ ಪಾಸ್‌ಪೋರ್ಟ್ ಕೋರ್ಟ್ ಅನ್ನು ಒಪ್ಪಿಸಿ ಮತ್ತು ವಾರಕ್ಕೆ ಎರಡು ಬಾರಿ ಅಂದರೆ ಸೋಮವಾರ ಮತ್ತು ಗುರುವಾರ ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಸೂಚನೆ ನೀಡಿದೆ. ಇನ್ನು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಅಥವಾ ಸಾಕ್ಷ್ಯವನ್ನು ಹಾಳುಮಾಡುವ ಯಾವುದೇ ಪ್ರಯತ್ನವನ್ನು ಮಾಡಬಾರದು ಎಂದು ಅದು ಹೇಳಿದೆ. ಈ ಪ್ರಕರಣದ ಆದೇಶವನ್ನು ಆಗಸ್ಟ್ 6 ರಂದು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು.
#WATCH | Delhi Minister and AAP leader Atishi breaks down as she remembers AAP leader Manish Sisodia
— ANI (@ANI) August 9, 2024
He has been granted bail by the Supreme Court in the Delhi Excise policy case. pic.twitter.com/eh9oib3uRp
ಏನಿದು ಪ್ರಕರಣ?
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಮಾತ್ರವಲ್ಲ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್ ಈ ಹಿಂದೆಯೇ ಆದೇಶಿಸಿತ್ತು. ಅದರಂತೆ ಅವರು ಜೈಲಿಗೆ ತೆರಳಿದ್ದರು. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಉಪ ಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ ಸೇರಿ ಹಲವರನ್ನು ಬಂಧಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನೂ ಇ.ಡಿ ವಿಚಾರಣೆ ನಡೆಸಿದೆ.
ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಸ್ವಾತಿ ಮಾಲಿವಾಲ್ ಕೇಸ್‌ನಲ್ಲೂ ಸಿಎಂ ವಿರುದ್ಧ ಚಾರ್ಜ್‌ಶೀಟ್!