ಹೊಸದಿಲ್ಲಿ: ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊಲದ ಬಾರಿಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರ ಮನ್ ಕೀ ಬಾತ್(Mann Ki Baat) ಕಾರ್ಯಕ್ರಮ ಇಂದು ಪ್ರಸಾರವಾಗಲಿದೆ. ಬರೋಬ್ಬರಿ ಮೂರು ನಾಲ್ಕು ನಂತರ ನಡೆಯುತ್ತಿರುವ ಈ ರೇಡಿಯೋ ಕಾರ್ಯಕ್ರಮದ ಬೆಳಗ್ಗೆ 11 ಗಂಟೆಗೆ ಪ್ರಸಾವಾಗಲಿದೆ. ಈ ಬಾರಿ ಹಲವು ಮಹತ್ವದ ವಿಚಾರಗಳ ಬಗ್ಗೆ ಪ್ರಧಾನಿ ಮಾತನಾಡುವ ನಿರೀಕ್ಷೆ ಇದೆ.
ಇನ್ನು ಈ ಬಗ್ಗೆ ಪ್ರಧಾನಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ಮತ್ತೆ ನಿಮ್ಮನ್ನು ಭೇಟಿಯಾಗುತ್ತಿರುವುದು ಸಂತಸದ ವಿಚಾರ. ಎಲ್ಲರನ್ನೂ ಈ ಕಾರ್ಯಕ್ರಮಕ್ಕೆ ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ಬೆಳಗ್ಗೆ 11ಗಂಟೆಗೆ ಭೇಟಿಯಾಗೋಣ ಎಂದಿದ್ದಾರೆ.
Inviting you all to tune in this month’s #MannKiBaat at 11 AM. Glad to be back on this medium, highlighting collective efforts for societal good. pic.twitter.com/1tjusJ3RcN
— Narendra Modi (@narendramodi) June 30, 2024
ಮನ್ ಕಿ ಬಾತ್ ಕಾರ್ಯಕ್ರಮ ಅಕ್ಟೋಬರ್ 3, 2014 ರಂದು ಪ್ರಾರಂಭವಾದಾಯಿತು. ಪ್ರಧಾನಿ ಪ್ರತಿ ತಿಂಗಳು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತದ ಅಭಿವೃದ್ಧಿ ಪಯಣದಲ್ಲಿ ಭಾಗವಹಿಸಲು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದ್ದಾರೆ. ಪ್ರತಿ ತಿಂಗಳು ವಿವಿಧ ಕ್ಷೇತ್ರದ ಸಾಧನೆಗಳು, ಕಹಿಘಟನೆ, ಸಂತೋಷ ಮತ್ತು ಹೆಮ್ಮೆಯ ಕ್ಷಣಗಳನ್ನು ಮತ್ತು ನವ ಭಾರತಕ್ಕಾಗಿ ಸಲಹೆಗಳನ್ನು ಮೋದಿ ಈ ಕಾರ್ಯಕ್ರಮದ ಮೂಲಕ ಹಂಚಿಕೊಳ್ಳುತ್ತಿದ್ದಾರೆ.
22 ಭಾರತೀಯ ಭಾಷೆಗಳು ಮತ್ತು 29 ಉಪಭಾಷೆಗಳನ್ನು ಹೊರತುಪಡಿಸಿ, ‘ಮನ್ ಕಿ ಬಾತ್’ ಅನ್ನು ಫ್ರೆಂಚ್, ಚೈನೀಸ್, ಇಂಡೋನೇಷಿಯನ್, ಟಿಬೆಟಿಯನ್, ಬರ್ಮೀಸ್, ಬಲೂಚಿ, ಅರೇಬಿಕ್, ಪಶ್ತು, ಪರ್ಷಿಯನ್, ಡಾರಿ ಮತ್ತು ಸ್ವಾಹಿಲಿ ಸೇರಿದಂತೆ 11 ವಿದೇಶಿ ಭಾಷೆಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಮನ್ ಕಿ ಬಾತ್ ಅನ್ನು ಆಲ್ ಇಂಡಿಯಾ ರೇಡಿಯೊದ 500 ಕ್ಕೂ ಹೆಚ್ಚು ಪ್ರಸಾರ ಕೇಂದ್ರಗಳು ಪ್ರಸಾರ ಮಾಡುತ್ತವೆ.
ಇನ್ನು ನಿನ್ನೆಯಷ್ಟೇ ಐಸಿಸಿ ಟಿ 20 ವಿಶ್ವಕಪ್ (T20 World Cup 2024 ) ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಫೈನಲ್ ನಲ್ಲಿ ಭಾರತ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಸೋಲಿಸಿತು. ರೋಹಿತ್ ಶರ್ಮಾ ಮತ್ತು ತಂಡವು 11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ದೇಶಕ್ಕೆ ತಂದಿತು ಮತ್ತು 2011 ರ ನಂತರ ಭಾರತದ ಮೊದಲ ವಿಶ್ವಕಪ್ ಗೆಲುವಾಗಿದೆ.
ಚಾಂಪಿಯನ್ಸ್! ನಮ್ಮ ತಂಡವು ಟಿ 20 ವಿಶ್ವಕಪ್ ಅನ್ನು ತನ್ನದೇ ಶೈಲಿಯಲ್ಲಿ ಮನೆಗೆ ತರುತ್ತಿದೆ. ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!