ಹೊಸದಿಲ್ಲಿ: ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊಲದ ಬಾರಿಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರ ಮನ್ ಕೀ ಬಾತ್(Mann Ki Baat) ಕಾರ್ಯಕ್ರಮ ಇಂದು ಪ್ರಸಾರವಾಗಿದೆ. ಕಾರ್ಯಕ್ರಮದಲ್ಲಿ ಹಲವು ವಿಚಾರಗಳನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಬೆಂಬಲ ನೀಡಿದ ದೇಶದ ಎಲ್ಲಾ ಜನರಿಗೆ ಕೃತಜ್ಞತೆ ಸಲ್ಲಿಸಿದರು.
"मम प्रिया: देशवासिन:
— Mann Ki Baat Updates मन की बात अपडेट्स (@mannkibaat) June 30, 2024
अद्य अहं किञ्चित् चर्चा संस्कृत भाषायां आरभे |
आप सोच रहे होंगे कि ‘मन की बात’ में अचानक संस्कृत में क्यों बोल रहा हूँ ? "
– पीएम @narendramodi.#MannKiBaat @MIB_India pic.twitter.com/Yflow0PCia
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕೇರಳದ ಪಾಲಕಾಡ್‌ನಲ್ಲಿ ಆದಿವಾಸಿ ಮಹಿಳೆಯರು ತಯಾರಿಸುವ ಛತ್ರಿಗಳ ಬಗ್ಗೆಯೂ ಮಾತನಾಡಿದರು. ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತೀಯ ಆಟಗಾರರನ್ನು ಹುರಿದುಂಬಿಸಬೇಕು ಎಂದು ಭಾರತೀಯ ಆಟಗಾರರಿರಗೆ ಪ್ರಧಾನಿಗಳು ಶುಭಾಶಯಗಳನ್ನು ತಿಳಿಸಿದರು. ಇದೇ ವೇಳೆ ಲೋಕಸಭಾ ಚುನಾವಣೆಯನ್ನು ಶಾಂತಯುತವಾಗಿ ನಡೆಸಿಕೊಟ್ಟ ಎಲ್ಲಾ ಭಾರತೀಯರಿಗೂ ಧನ್ಯವಾದಗಳನ್ನು ತಿಳಿಸಿದರು. 65 ಕೋಟಿ ಜನರು ಮತ ಚಲಾಯಿಸಿದ ಜಗತ್ತಿನ ಯಾವುದೇ ದೇಶದಲ್ಲಿ ಇಷ್ಟು ದೊಡ್ಡ ಚುನಾವಣೆ ನಡೆದಿಲ್ಲ. ನಾನು ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಪ್ರತಿಯೊಬ್ಬರನ್ನು ಅಭಿನಂದಿಸುತ್ತೇನೆ ಎಂದರು.
ಮೋದಿ ಮನ್ ಕೀ ಬಾತ್ ಹೈಲೈಟ್ಸ್
- ವಿಶ್ಯಾದ್ಯಂತ 10ನೇ ಯೋಗ ದಿನಾಚರಣೆ ಯಶಸ್ವಿಯಾಗಿ ನಡೆದಿರುವ ಬಗ್ಗೆ ಹೆಮ್ಮೆ ಇದೆ. ಅನೇಕರು ಬಹಳ ಉತ್ಸುಕತೆಯಿಂದ ಭಾಗಿಯಾಗಿದ್ದೀರಿ.
- ಸ್ನೇಹಿತರೇ, ಭಾರತದ ಹಲವಾರು ಉತ್ಪನ್ನಗಳಿಗೆ ಪ್ರಪಂಚದಾದ್ಯಂತ ಹೆಚ್ಚಿನ ಬೇಡಿಕೆ ಇದೆ. ಅಂತಹ ಒಂದು ಉತ್ಪನ್ನಗಳಲ್ಲಿ ಆಂಧ್ರಪ್ರದೇಶದ ಅರಕು ಕಾಫಿ.
- ಈ ವರ್ಷದ ವಿಶ್ವ ಪರಿಸರ ದಿನದಂದು ‘ಏಕ್ ಪೆಡ್ ಮಾ ಕೆ ನಾಮ್’ ಎಂಬ ವಿಶೇಷ ಅಭಿಯಾನವನ್ನು ಪ್ರಾರಂಭಿಸಲಾಗಿದೆ.
#WATCH | Union Minister Shivraj Singh Chouhan listens to Prime Minister Narendra Modi's monthly radio programme 'Mann Ki Baat', in Sehore, Madhya Pradesh pic.twitter.com/Xa9Xagh17m
— ANI (@ANI) June 30, 2024
ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!
ಮನ್ ಕಿ ಬಾತ್ ಕಾರ್ಯಕ್ರಮ ಅಕ್ಟೋಬರ್ 3, 2014 ರಂದು ಪ್ರಾರಂಭವಾದಾಯಿತು. ಪ್ರಧಾನಿ ಪ್ರತಿ ತಿಂಗಳು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತದ ಅಭಿವೃದ್ಧಿ ಪಯಣದಲ್ಲಿ ಭಾಗವಹಿಸಲು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದ್ದಾರೆ. ಪ್ರತಿ ತಿಂಗಳು ವಿವಿಧ ಕ್ಷೇತ್ರದ ಸಾಧನೆಗಳು, ಕಹಿಘಟನೆ, ಸಂತೋಷ ಮತ್ತು ಹೆಮ್ಮೆಯ ಕ್ಷಣಗಳನ್ನು ಮತ್ತು ನವ ಭಾರತಕ್ಕಾಗಿ ಸಲಹೆಗಳನ್ನು ಮೋದಿ ಈ ಕಾರ್ಯಕ್ರಮದ ಮೂಲಕ ಹಂಚಿಕೊಳ್ಳುತ್ತಿದ್ದಾರೆ.
22 ಭಾರತೀಯ ಭಾಷೆಗಳು ಮತ್ತು 29 ಉಪಭಾಷೆಗಳು ಸೇರಿದಂತೆ, ‘ಮನ್ ಕಿ ಬಾತ್’ ಅನ್ನು ಫ್ರೆಂಚ್, ಚೈನೀಸ್, ಇಂಡೋನೇಷಿಯನ್, ಟಿಬೆಟಿಯನ್, ಬರ್ಮೀಸ್, ಬಲೂಚಿ, ಅರೇಬಿಕ್, ಪಶ್ತು, ಪರ್ಷಿಯನ್, ಡಾರಿ ಮತ್ತು ಸ್ವಾಹಿಲಿ ಸೇರಿದಂತೆ 11 ವಿದೇಶಿ ಭಾಷೆಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಮನ್ ಕಿ ಬಾತ್ ಅನ್ನು ಆಲ್ ಇಂಡಿಯಾ ರೇಡಿಯೊದ 500 ಕ್ಕೂ ಹೆಚ್ಚು ಪ್ರಸಾರ ಕೇಂದ್ರಗಳು ಪ್ರಸಾರ ಮಾಡುತ್ತವೆ.