Site icon Vistara News

ವೈವಾಹಿಕ ‘ಅತ್ಯಾಚಾರ ಅಪರಾಧವಲ್ಲ’ ಎಂದ ಅಲಹಾಬಾದ್ ಹೈಕೋರ್ಟ್

Marital Rape is no offence Says Allahabad High Court

ಅಲಹಾಬಾದ್: ಪತ್ನಿಯು 18 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ (wife is 18 or above) ಭಾರತೀಯ ದಂಡ ಸಂಹಿತೆ (IPC) ಅಡಿಯಲ್ಲಿ ವೈವಾಹಿಕ ಅತ್ಯಾಚಾರವನ್ನು ಅಪರಾಧವೆಂದು ಪರಿಗಣಿಸಲಾಗುವುದಿಲ್ಲ (Marital Rape in offence) ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ(Allahabad High Court). ತನ್ನ ಹೆಂಡತಿಯಿಂದ ಅಸ್ವಾಭಾವಿಕ ಅಪರಾಧ ಆರೋಪವನ್ನು ಎದುರಿಸುತ್ತಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ನ್ಯಾಯಾಲಯವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು.

ಈ ಪ್ರಕರಣದ ಆರೋಪಿಗಳಿಗೆ ಐಪಿಸಿಯ ಸೆಕ್ಷನ್ 377 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುವುದಿಲ್ಲ ಎಂದು ಪ್ರತಿಪಾದಿಸಿದ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ ಮಿಶ್ರಾ ಅವರ ಪೀಠವು ಈ ದೇಶದಲ್ಲಿ ವೈವಾಹಿಕ ಅತ್ಯಾಚಾರವನ್ನು ಇನ್ನೂ ಅಪರಾಧವೆಂದು ಪರಿಗಣಿಸಲಾಗಿಲ್ಲ ಎಂದು ಹೇಳಿದೆ.

ವೈವಾಹಿಕ ಅತ್ಯಾಚಾರವನ್ನು ಕ್ರಿಮಿನಲ್‌ಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳು ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವುದರಿಂದ, ಪತ್ನಿ 18 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದಾಗ ವೈವಾಹಿಕ ಅತ್ಯಾಚಾರಕ್ಕೆ ಯಾವುದೇ ಕ್ರಿಮಿನಲ್ ದಂಡನೆ ಇಲ್ಲ ಎಂದು ಹೈಕೋರ್ಟ್ ಹೇಳಿದೆ.

ವೈವಾಹಿಕ ಸಂಬಂಧದಲ್ಲಿ ವೈವಾಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ, ಐಪಿಸಿ ಸೆಕ್ಷನ್ 377ರ ಪ್ರಕಾರ ಯಾವುದೇ ಶಿಕ್ಷೆ ಇಲ್ಲ ಎಂಬ ಮಧ್ಯ ಪ್ರದೇಶ ಹೈಕೋರ್ಟ್ ಅಭಿಪ್ರಾಯವನ್ನು ಅಲಹಾಬಾದ್ ಹೈಕೋರ್ಟ್, ಈ ಪ್ರಕರಣದಲ್ಲಿ ಗಮನಿಸಿದೆ.

ತಮ್ಮ ವಿರುದ್ಧ ಪತಿ ಅಸ್ವಾಭಾವಿಕ ಅಪರಾಧ ಎಸಗುತ್ತಿದ್ದಾರೆಂದು ಆರೋಪಿಸಿ ಮಹಿಳೆ ನ್ಯಾಯಾಲಯದ ಮೊರೆ ಹೋಗಿದ್ದಳು. ಆಕೆ, ಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ತಮ್ಮ ವಿವಾಹ ನಿಂದನೀಯ ಸಂಬಂಧವಾಗಿದೆ. ಗಂಡ ತನ್ನನ್ನು ಮೌಖಿಕ ಮತ್ತು ದೈಹಿಕವಾಗಿ ಹಿಂಸಿಸುತ್ತಿದ್ದಾರೆ. ಅಲ್ಲದೇ ಗುದ ಸಂಭೋಗದಂಥ ಅಸ್ವಾಭಾವಿಕ ಕ್ರಿಯೆಗೆ ಒತ್ತಾಯಿಸುವ ಮೂಲಕ ಲೌಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದರು.

ಪತಿ ಅಥವಾ ಪತಿಯ ಸಂಬಂಧಿಕರಿಂದ ಕ್ರೌರ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ (498-A) ಮತ್ತು ಸ್ವಯಂಪ್ರೇರಣೆಯಿಂದ ನೋವುಂಟುಮಾಡುವ (IPC 323) ಆರೋಪಕ್ಕಾಗಿ ಪತಿಯನ್ನು ದೋಷಿ ಎಂದು ಸ್ಥಳೀಯ ನ್ಯಾಯಾಲಯವು, ಸೆಕ್ಷನ್ 377 ರ ಅಡಿಯಲ್ಲಿ ದಾಖಲಾದ ಆರೋಪದಿಂದ ಅವರನ್ನು ಖುಲಾಸೆಗೊಳಿಸಿದೆ.

ವೈವಾಹಿಕ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸಿ ಕೋರಿ ದಾಖಲಾಗಿರುವ ಅರ್ಜಿಗಳನ್ನ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ವರ್ಷದ ಆರಂಭದಲ್ಲಿ ಹೇಳಿತ್ತು. ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವುದು “ಸಾಮಾಜಿಕ ಪರಿಣಾಮಗಳನ್ನು” ಹೊಂದಿರುತ್ತದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿತ್ತು.

ಈ ಸುದ್ದಿಯನ್ನೂ ಓದಿ: ಲಿವ್- ಇನ್ ರಿಲೇಷನ್‌ಶಿಪ್ ಟೈಮ್ ಪಾಸ್ ಸಂಬಂಧ! ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ

Exit mobile version