Mathura Krishna Janmabhoomi: ಮಥುರಾ ಶ್ರೀಕೃಷ್ಣ ಜನ್ಮಭೂಮಿ ವಿವಾದ; ಮುಸ್ಲಿಂ ಪರ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ - Vistara News

ದೇಶ

Mathura Krishna Janmabhoomi: ಮಥುರಾ ಶ್ರೀಕೃಷ್ಣ ಜನ್ಮಭೂಮಿ ವಿವಾದ; ಮುಸ್ಲಿಂ ಪರ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Mathura Krishna Janmabhoomi: ಪ್ರತಿವಾದಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಇಚ್ಛಿಸಿದ್ದಲ್ಲಿ ಅದನ್ನು ಎದುರಿಸಲೂ ನಾವು ಸಿದ್ಧ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್‌ ಜೈನ್‌ ಹೇಳಿದ್ದಾರೆ.

VISTARANEWS.COM


on

Krishna Janmabhoomi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಲಹಾಬಾದ್‌: ಮಥುರಾ ಕೃಷ್ಣ ಜನ್ಮಭೂಮಿ(Mathura Krishna Janmabhoomi) ಮತ್ತು ಶಾಹಿ ಈದ್ಗಾ ಮಸೀದಿ(Shahi Eidgah mosque) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಬಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಅಲಹಾಬಾದ್‌ ಹೈಕೋರ್ಟ್‌ ಮಹತ್ವದ ಆದೇಶ ಹೊರ ಹಾಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತೀರ್ಪು ಕಾಯ್ದಿರಿಸಿದ್ದ ನ್ಯಾ. ಮಯಾಂಕ್‌ ಕುಮಾರ್‌ ಜೈನ್‌ ಇಂದು ಮುಸ್ಲಿಂ ಪರ ಅರ್ಜಿಯನ್ನು ವಜಾಗೊಳಿಸಿದೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಹಿಂದೂ ಪರ ವಕೀಲ ವಿಷ್ಣು ಶಂಕರ್‌ ಜೈನ್‌, ಪ್ರತಿವಾದಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಇಚ್ಛಿಸಿದ್ದಲ್ಲಿ ಅದನ್ನು ಎದುರಿಸಲೂ ನಾವು ಸಿದ್ಧ ಎಂದಿದ್ದಾರೆ.

ಇಂದು ಅಲಹಾಬಾದ್ ಹೈಕೋರ್ಟ್ ಶಾಹಿ ಈದ್ಗಾ ಮಸೀದಿ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದೆ ಮತ್ತು ಮಸೀದಿ ತೆರವು ಕೋರಿ ಹಿಂದೂ ಪರ ದಾವೆಗಳ ವಿಚಾರಣೆಗೆ ಕೋರ್ಟ್ ಒಪ್ಪಿಗೆ ನೀಡಿದೆ. ವಿಚಾರಣೆಯನ್ನು ದಿನಾಂಕ ಆಗಸ್ಟ್ 12ಕ್ಕೆ ಮುಂದೂಡಲಾಗಿದೆ. ನಾವು ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಸುತ್ತೇವೆ ಮತ್ತು ಶಾಹಿ ಈದ್ಗಾ ಮಸೀದಿ ಸುಪ್ರೀಂಕೋರ್ಟ್‌ ಅನ್ನು ಸಂಪರ್ಕಿಸಿದರೆ, ನಾವು ಅಲ್ಲಿ ಹಾಜರಾಗುತ್ತೇವೆ ಎಂದಿದ್ದಾರೆ.

ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇಗುಲದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಗೆ ಅಡ್ವೊಕೇಟ್ ಕಮಿಷನರ್ ನೇಮಕ ಮಾಡಿರುವ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಜನವರಿಯಲ್ಲಿ ತಡೆಯಾಜ್ಞೆ ನೀಡಿತ್ತು. ಸ್ಥಳೀಯ ಆಯುಕ್ತರ ನೇಮಕವನ್ನು ಕೋರಿ ಸಲ್ಲಿಸಲಾದ ಅರ್ಜಿಯು ಅಸ್ಪಷ್ಟವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿತ್ತು. ಆದರೂ, ಮೊಕದ್ದಮೆಗಳ ವಿಚಾರಣೆಯನ್ನು ಮುಂದುವರಿಸಬಹುದು ಎಂದು ನ್ಯಾಯಾಲಯ ಹೇಳಿತ್ತು.

“ಸಮೀಕ್ಷೆಗೆ ಕಮಿಷನರ್‌ ನೇಮಿಸಲು ಕೋರಿದ ಅರ್ಜಿಯು ತುಂಬಾ ಅಸ್ಪಷ್ಟವಾಗಿದೆ. ಇದು ನಿರ್ದಿಷ್ಟವಾಗಿರಬೇಕು. ನಿಮಗೆ ಕಮಿಷನರ್ ಯಾವುದಕ್ಕಾಗಿ ಬೇಕು ಎಂದು ನೀವು ಸ್ಪಷ್ಟವಾಗಿ ಹೇಳಬೇಕು. ಆದರೆ ನೀವು ಅದನ್ನು ನ್ಯಾಯಾಲಯಕ್ಕೆ ಬಿಡುತ್ತೀರಿ. ಇದು ಗೊಂದಲಕರ ಅರ್ಜಿಯಾಗಿದೆ” ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ ಹೇಳಿತ್ತು.

ಮಸೀದಿಯ ಸಮೀಕ್ಷೆಯ ಮೇಲ್ವಿಚಾರಣೆಗೆ ವಕೀಲ- ಕಮಿಷನರ್ ನೇಮಕಕ್ಕೆ ಡಿಸೆಂಬರ್ 14ರಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿತ್ತು. ಇದಕ್ಕೆ ತಡೆ ನೀಡಿದ ಸುಪ್ರೀಂ ಪೀಠ, ಹಿಂದೂ ವಾದಿಗಳ ಮನವಿಯ ಹಿಂದಿನ ತಾರ್ಕಿಕತೆಯನ್ನು ನಿರ್ದಿಷ್ಟಪಡಿಸಿಲ್ಲ ಎಂದು ಒತ್ತಿ ಹೇಳಿತ್ತು. “ಕಮಿಷನರ್ ಅನ್ನು ನೇಮಿಸಿ ಎಂದು ನೀವು ಕೇಳುವ ಮುನ್ನ ನೀವು ನಿಖರವಾಗಿ ಏನನ್ನು ಕೇಳುತ್ತಿದ್ದೀರಿ ಎಂಬುದು ಸ್ಪಷ್ಟವಾಗಬೇಕು. ಈ ರೀತಿ ಅರ್ಜಿ ಸಲ್ಲಿಸಲಾಗದು. ಅರ್ಜಿಯನ್ನು ನಾವು ಕಾಯ್ದಿರಿಸಿದ್ದೇವೆ. ಇದು ತುಂಬಾ ಅಸ್ಪಷ್ಟವಾಗಿದೆ” ಎಂದು ಪೀಠವು ಪ್ರಕರಣದಲ್ಲಿ ಹಿಂದೂ ಫಿರ್ಯಾದಿಗಳ ಪರ ಹಾಜರಿದ್ದ ಹಿರಿಯ ವಕೀಲ ಶ್ಯಾಮ್ ದಿವಾನ್ ಅವರಿಗೆ ತಿಳಿಸಿತ್ತು.

ಇದನ್ನೂ ಓದಿ: Holi 2024: ಮಥುರಾದಲ್ಲಿ ಪುರುಷರಿಗೆ ಬಿತ್ತು ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ; ಹೋಳಿಯ ಸ್ವೀಟ್‌ ಜತೆಗೆ ʼಖಾರʼ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BJP Padayatra: ಕುಮಾರಸ್ವಾಮಿ ಮುನಿಸು ಶಮನ, ಬಿಜೆಪಿ, ಜೆಡಿಎಸ್‌ ಒಗ್ಗೂಡಿ ಪಾದಯಾತ್ರೆ; ಪ್ರಲ್ಹಾದ್‌ ಜೋಶಿ ಘೋಷಣೆ

BJP Padayatra: ಶನಿವಾರ ಬೆಳಗ್ಗೆ 8.30ಕ್ಕೆ ನೈಸ್ ರೋಡ್ ಜಂಕ್ಷನ್‌ನಿಂದ ಪಾದಯಾತ್ರೆ ಪ್ರಾರಂಭ ಆಗುತ್ತದೆ. ರಾಜ್ಯದ ಎಲ್ಲ ಬಿಜೆಪಿ ಹಾಗೂ ಜೆಡಿಎಸ್ ಸಂಸದರು, ಶಾಸಕರು ಇರುತ್ತಾರೆ ಕುಮಾರಸ್ವಾಮಿ ಅವರು ಸಹ ಬಂದು ಕಾರ್ಯಕ್ರಮ ಉದ್ಘಾಟನೆ ಮಾಡುತ್ತಾರೆ ಎಂದು ಸುದ್ದಿಗೋಷ್ಠಿಯಲ್ಲಿ ಬಿ.ವೈ.ವಿಜಯೇಂದ್ರ ತಿಳಿಸಿದರು.

VISTARANEWS.COM


on

Pralhad Joshi
Koo

ನವದೆಹಲಿ/ಬೆಂಗಳೂರು: ಮುಡಾ ಹಗರಣ ಸೇರಿ ಹಲವು ಭ್ರಷ್ಟಾಚಾರ ಆರೋಪ ಹೊತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೈಗೊಳ್ಳಲು ತೀರ್ಮಾನಿಸಿರುವ ಪಾದಯಾತ್ರೆಗೆ (BJP Padayatra) ಸಹಕಾರ ನೀಡುವುದಿಲ್ಲ ಎಂದು ಬಂಡಾಯದ ಬಾವುಟ ಹಾರಿಸಿದ್ದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರ ಮುನಿಸು ಈಗ ಶಮನವಾಗಿದೆ. ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವರು ಮಾತುಕತೆ ನಡೆಸಿದ್ದು, “ಬಿಜೆಪಿ ಹಾಗೂ ಜೆಡಿಎಸ್‌ ಒಗ್ಗೂಡಿ ಶನಿವಾರದಿಂದ (ಆಗಸ್ಟ್‌ 3) ಪಾದಯಾತ್ರೆ ಆರಂಭಿಸಲಾಗುತ್ತದೆ” ಎಂದು ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ಪ್ರಲ್ಹಾದ್‌ ಜೋಶಿ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದರು. “ಶನಿವಾರದಿಂದ ನಮ್ಮ ಪಾದಯಾತ್ರೆ ಪ್ರಾರಂಭ ಆಗಲಿದೆ. ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದೆ. ಮೂಡಾ ಹಾಗೂ ವಾಲ್ಮೀಕಿ ಹಗರಣಗಳು ಇದಕ್ಕೆ ಜ್ವಲoತ ಉದಾಹರಣೆಗಳಾಗಿವೆ. ಕಾಂಗ್ರೆಸ್‌ನವರು ಕೂಡ ಮೂಡಾ ಹಗರಣದ ಬಗ್ಗೆ ಮಾತನಾಡುತ್ತಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಒಟ್ಟಿಗೆ ಪಾದಯಾತ್ರೆ ಕೈಗೊಳ್ಳುತ್ತವೆ. ಕುಮಾರಸ್ವಾಮಿ ಅವರ ಜತೆ ಇದ್ದ ಸಣ್ಣ ಕಮ್ಯುನಿಕೇಷನ್ ಗ್ಯಾಪ್ ಸರಿ ಆಗಿದೆ. ನಾವು ಕುಮಾರಸ್ವಾಮಿ ಅವರ ಹತ್ತಿರ ಮಾತಾಡಿದ್ದೇವೆ. 7 ದಿನಗಳ ಪಾದಯಾತ್ರೆ ಪೂರ್ಣಗೊಳ್ಳಲಿದೆ” ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದರು.

ಕುಮಾರಸ್ವಾಮಿ ಅವರಿಂದ ಉದ್ಘಾಟನೆ ಎಂದ ವಿಜಯೇಂದ್ರ

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು. ಶನಿವಾರ ಬೆಳಗ್ಗೆ 8.30ಕ್ಕೆ ನೈಸ್ ರೋಡ್ ಜಂಕ್ಷನ್‌ನಿಂದ ಪಾದಯಾತ್ರೆ ಪ್ರಾರಂಭ ಆಗುತ್ತದೆ. ರಾಜ್ಯದ ಎಲ್ಲ ಬಿಜೆಪಿ ಹಾಗೂ ಜೆಡಿಎಸ್ ಸಂಸದರು, ಶಾಸಕರು ಇರುತ್ತಾರೆ ಕುಮಾರಸ್ವಾಮಿ ಅವರು ಸಹ ಬಂದು ಕಾರ್ಯಕ್ರಮ ಉದ್ಘಾಟನೆ ಮಾಡುತ್ತಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ ಮಾಡುತ್ತಿದ್ದೇವೆ. ಇದನ್ನು ಯಶಸ್ವಿಗೊಳಿಸುತ್ತೇವೆ” ಎಂದು ತಿಳಿಸಿದರು.

“ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಹಿಂದ ಹೆಸರು ಹೇಳಿಕೊಂಡು ಅಧಿಕಾರ ಹಿಡಿದಿದ್ದು, ಈಗ ಈಗ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಬಗ್ಗೆ ರಾಜ್ಯದಲ್ಲಿ ಅಲ್ಲ, ದೇಶದಲ್ಲೇ ಚರ್ಚೆ ಆಗುತ್ತಿದೆ. ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಇಟ್ಟಿದ್ದ ಹಣ ದೋಚಿದ್ದಾರೆ. ಸಿದ್ದರಾಮಯ್ಯ ನವರೇ ಒಪ್ಪಿಕೊಂಡಿದ್ದಾರೆ ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಆಗಿದೆ ಅಂತ. ಇನ್ನು ಮೂಡಾದಲ್ಲೂ 4,000 ಕೋಟಿ ರೂ.ಗಿಂತ ಹೆಚ್ಚು ಬೆಲೆ ಬಾಳುವ ನಿವೇಶನಗಳನ್ನು ಬೇರೆಯವರಿಗೆ ಕೊಟ್ಟಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಖಂಡಿಸಿ ಬೆಂಗಳೂರಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರಿಗೆ ಪಾದಯಾತ್ರೆ ಕೈಗೊಳ್ಳಲು ಬಿಜೆಪಿ ತೀರ್ಮಾನಿಸಿದೆ. ಆಗಸ್ಟ್‌ 3ರಿಂದ ಪಾದಯಾತ್ರೆ ಆರಂಭವಾಗಲಿದೆ. ಆದರೆ, ಪಾದಯಾತ್ರೆಗೆ ನಾನು ಬೆಂಬಲ ನೀಡುವುದಿಲ್ಲ ಎಂಬುದಾಗಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದರು. ಪಾದಯಾತ್ರೆ ಕುರಿತ ಚರ್ಚೆ ಸಭೆಗೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಕರೆಸಿದ್ದರಿಂದ ಕುಮಾರಸ್ವಾಮಿ ಬೇಸರಗೊಂಡು ಬೆಂಬಲ ವಾಪಸ್‌ ಪಡೆದಿದ್ದರು.

ಇದನ್ನೂ ಓದಿ: BJP-JDS Padayatra: ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

Continue Reading

ದೇಶ

Parliament Building: ಸೋರುತಿಹುದು ನೂತನ ಸಂಸತ್‌ ಭವನದ ಮಾಳಿಗೆ! ವಿಡಿಯೋ ಶೇರ್‌ ಮಾಡಿ ಪ್ರತಿಪಕ್ಷಗಳು ಕಿಡಿ

Parliament Building: ಸಮಾಜವಾದಿ ಪಕ್ಷದ ಸಂಸದ ಅಖಲೇಶ್‌ ಯಾದವ್‌ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, 1000ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಂಸತ್‌ ಭವನದ ಛಾವಣಿ ಸೋರುತ್ತಿದೆ. ಛಾವಣಿ ಮೇಲಿನ ಗ್ಲಾಸ್‌ ಒಡೆದಿದ್ದು, ನೆಲದಲ್ಲಿ ನೀಲಿ ಬಕೆಟ್‌ ಇಟ್ಟಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Parliament session
Koo

ನವದೆಹಲಿ: ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ(Heavy Rain)ಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಇದುವರೆಗೆ ಒಂಬತ್ತು ಮಂದಿಯನ್ನು ಬಲಿ ತೆಗೆದುಕೊಂಡಿದೆ. ಸಾಲದೆನ್ನುವಂತೆ ಇದೀಗ ಭಾರೀ ಮಳೆಗೆ ನೂತನ ಸಂಸತ್‌ ಭವನ(Parliament Building)ದ ಛಾವಣಿಯೇ ಸೋರುತ್ತಿದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ಪ್ರತಿಪಕ್ಷಗಳು ಕಳಪೆ ಕಾಮಗಾರಿ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿವೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌(Viral Video) ಆಗುತ್ತಿದೆ.

ಸಮಾಜವಾದಿ ಪಕ್ಷದ ಸಂಸದ ಅಖಲೇಶ್‌ ಯಾದವ್‌ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, 1000ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಂಸತ್‌ ಭವನದ ಛಾವಣಿ ಸೋರುತ್ತಿದೆ. ಛಾವಣಿ ಮೇಲಿನ ಗ್ಲಾಸ್‌ ಒಡೆದಿದ್ದು, ನೆಲದಲ್ಲಿ ನೀಲಿ ಬಕೆಟ್‌ ಇಟ್ಟಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಈ ನೂತನ ಸಂಸತ್‌ ಭವನಕ್ಕಿಂತ ಹಳೆಯ ಕಟ್ಟಡವೇ ಉತ್ತಮವಾಗಿತ್ತು. ಕೊನೇಪಕ್ಷ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸಂಸತ್‌ ಭವನದಲ್ಲಿ ನೀರು ಸೋರುತ್ತಿರುವುದು ನಿಲ್ಲುವವರೆಗೆ ನಾವು ಹಳೆಯ ಸಂಸತ್‌ ಭವನಕ್ಕೆ ಹೋಗಬಾರದೇಕೆ? ಇದು ಕೇಂದ್ರ ಸರ್ಕಾರದ ಕಲಪೆ ಕಾಮಗಾರಿಗೆ ನಿದರ್ಶನವೇ ಎಂದು ಜನ ಕೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮತ್ತೊಂದೆಡೆ ತೃಣಮೂಲ ಕಾಂಗ್ರೆಸ್‌ ಸಂಸದ ಮಹುವಾ ಮೋಯಿತ್ರಾ ಕೂಡ ಇದೇ ವಿಡಿಯೋವನ್ನು ಶೇರ್‌ ಮಾಡಿದ್ದು, ಹೊರಗಡೆ ಪ್ರಶ್ನೆ ಪತ್ರಿಕೆ ಸೋರಿಕೆ…ಒಳಗಡೆ ಮಳೆ ನೀರು ಸೋರಿಕೆ ಎಂದು ಟೀಕಿಸಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಅಯೋಧ್ಯೆ ಶ್ರೀರಾಮ ಮಂದಿರದ ಛಾವಣಿಯೂ ಮಳೆಗೆ ಸೋರಿತ್ತು. ಈ ಬಗ್ಗೆ ಎಂಬುದಾಗಿ ದೇವಾಲಯದ ಮುಖ್ಯ ಅರ್ಚಕರೇ ಮಾಹಿತಿ ನೀಡಿದ್ದರು. ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಅವರು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡುವಾಗ ಈ ವಿಷಯ ತಿಳಿಸಿದ್ದರು. “ಮೊದಲ ಮಳೆಗೇ ಗರ್ಭಗುಡಿಯ ಚಾವಣಿ ಮೂಲಕ ನೀರು ಒಳಗೆ ಬಂದಿದೆ. ನೂರಾರು ಎಂಜಿನಿಯರ್‌ಗಳು ಇಲ್ಲಿದ್ದಾರೆ. ಸುಸಜ್ಜಿತವಾಗಿಯೇ ರಾಮಮಂದಿರ ನಿರ್ಮಿಸಲಾಗಿದೆ. ಹೀಗಿದ್ದರೂ ಗರ್ಭಗುಡಿಯೇ ಸೋರುತ್ತಿರುವುದು ಆತಂಕ ಸೃಷ್ಟಿಸಿದೆ. ಹೀಗಾಗುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಕೂಡಲೇ ರಾಮಮಂದಿರ ಕಡೆ ಗಮನ ಹರಿಸಿ, ಸಮಸ್ಯೆಯನ್ನು ಸರಿಪಡಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ನೆರೆ ಹಾನಿ ಪ್ರದೇಶಕ್ಕೆ ಛಲವಾದಿ ನಾರಾಯಣಸ್ವಾಮಿ ಭೇಟಿ

Continue Reading

ಉದ್ಯೋಗ

Job Alert: ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ ಪಾಸಾದವರು ಅಪ್ಲೈ ಮಾಡಿ

Job Alert: ಐಟಿಐ, ಬಿಟೆಕ್‌ ಅಥವಾ ಬಿಇ ಓದಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 8.

VISTARANEWS.COM


on

Job Alert
Koo

ಬೆಂಗಳೂರು: ಐಟಿಐ, ಬಿಟೆಕ್‌ ಅಥವಾ ಬಿಇ ಓದಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ ಲಿಮಿಟೆಡ್‌ (Electronics Corporation of India Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (ECIL Recruitment 2024). ಪ್ರಾಜೆಕ್ಟ್‌ ಎಂಜಿನಿಯರ್‌, ಟೆಕ್ನಿಕಲ್‌ ಆಫೀಸರ್‌ ಸೇರಿ ಸುಮಾರು 115 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ತಿಳಿಸಿದೆ. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 8 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಪ್ರಾಜೆಕ್ಟ್ ಎಂಜಿನಿಯರ್ 20 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿಟೆಕ್
ಟೆಕ್ನಿಕಲ್ ಆಫೀಸರ್ 53 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿಟೆಕ್
ಜೂನಿಯರ್ ಟೆಕ್ನಿಷಿಯನ್ 42 ಹುದ್ದೆ, ವಿದ್ಯಾರ್ಹತೆ: ಐಟಿಐ

ವಯೋಮಿತಿ

ಪ್ರಾಜೆಕ್ಟ್ ಎಂಜಿನಿಯರ್: ಗರಿಷ್ಠ ವಯಸ್ಸು 33 ವರ್ಷ
ಟೆಕ್ನಿಕಲ್ ಆಫೀಸರ್: ಗರಿಷ್ಠ ವಯಸ್ಸು 33 ವರ್ಷ
ಜೂನಿಯರ್ ಟೆಕ್ನಿಷಿಯನ್: ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ವಿದ್ಯಾರ್ಹತೆ, ಉದ್ಯೋಗದ ಅನುಭವ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮಾಸಿಕ ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾಜೆಕ್ಟ್ ಎಂಜಿನಿಯರ್: 40,000 ರೂ. – 55,000 ರೂ., ಟೆಕ್ನಿಕಲ್ ಆಫೀಸರ್: 25,000 ರೂ. – 31,000 ರೂ. ಮತ್ತು ಜೂನಿಯರ್ ಟೆಕ್ನಿಷಿಯನ್: 22,412 ರೂ. – 27,258 ರೂ. ಮಾಸಿಕ ವೇತನ ದೊರೆಯಲಿದೆ. ಆಯ್ಕೆಯಾದವರಿಗೆ ಜಾಮ್ನಗರ, ಬಾರಕ್‌ಪುರ, ಕೈಗಾ, ಹೈದರಾಬಾದ್‌, ವಿಶಾಖಪಟ್ಟಣ, ಗೌರಿಬಿದನೂರು, ಮಂಗಳೂರು, ಮುಂಬೈ, ಚೆನ್ನೈ, ಥಾಣೆ, ನವದೆಹಲಿ, ಅಲಹದಾಬಾದ್‌, ಗುವಹಾಟಿ, ನಾಗ್ಪುರ, ರಾವತ್‌ಭಾಟ, ಗುಜರಾತ್‌, ತಾರಾಪುರ, ಖರಕ್‌ಪುರ, ಕುಂಡಕುಳಂ ಮುಂತಾಡೆ ಪೋಸ್ಟಿಂಗ್‌ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ECIL Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.ecil.co.in/job_details_17_2024.php)
  • ಅಗತ್ಯ ವಿವರಗಳನ್ನು ತುಂಬಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಂಡು ಪ್ರಿಂಟ್‌ಔಟ್‌ ತೆಗೆಯಿರಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ ecil.co.inಗೆ ಭೇಟಿ ನೀಡಿ.

ಇದನ್ನೂ ಓದಿ: SSC Recruitment 2024: 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯುಸಿ ಪಾಸಾದವರು ಅಪ್ಲೈ ಮಾಡಿ

Continue Reading

ಶಿಕ್ಷಣ

ಪದವಿ, ಸ್ನಾತಕೋತ್ತರ ಪದವಿ ಸೀಟುಗಳು ಖಾಲಿ ಉಳಿದರೆ ಸಿಇಟಿ ನಡೆಸಲು ವಿವಿಗಳಿಗೆ ಯುಜಿಸಿ ಅನುಮತಿ!

CUET: ಸಾಮಾನ್ಯ ಪ್ರವೇಶ ಪರೀಕ್ಷೆ ಕೈಗೊಳ್ಳಲು ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕೆಲ ಪ್ರಕ್ರಿಯೆಗಳನ್ನು ಸೂಚಿಸಲಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸದಿದ್ದರೆ ಸಿಯುಇಟಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಬಹುದಾಗಿದೆ ಎಂದು ಯುಜಿಸಿ ತಿಳಿಸಿದೆ.

VISTARANEWS.COM


on

Students
Koo

ನವದೆಹಲಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಪದವಿ ಹಾಗೂ ಸ್ನಾತಕೋತ್ತರ ಪದವಿ ಸೇರಲು ಬಯಸುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯ (CUET) ಬಳಿಕ ಕೋರ್ಸ್‌ಗಳಿಗೆ ಪ್ರವೇಶಾತಿ ಮಾಡಿಕೊಂಡರೂ ಸೀಟುಗಳು ಖಾಲಿ ಉಳಿದರೆ ಕೇಂದ್ರೀಯ ವಿಶ್ವವಿದ್ಯಾಲಯಗಳೇ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CUET) ನಡೆಸುವ ಮೂಲಕ ಉಳಿದ ಸೀಟುಗಳನ್ನು ಭರ್ತಿ ಮಾಡಿಕೊಳ್ಳಲು ಯುಜಿಸಿಯು ಅನುಮತಿ ನೀಡಿದೆ.

ಯುಜಿಸಿ ಚೇರ್ಮನ್‌ ಪ್ರೊ.ಎಂ.ಜಗದೇಶ ಕುಮಾರ್‌ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. “ಪ್ರವೇಶಾತಿ ಪ್ರಕ್ರಿಯೆ ಮುಗಿದ ಬಳಿಕವೂ ವಿಶ್ವವಿದ್ಯಾಲಯಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಸೀಟುಗಳು ಖಾಲಿ ಉಳಿಯುವುದು ಸಮಂಜಸ ಅಲ್ಲ. ಹಾಗಾಗಿ, ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಸೀಟುಗಳು ಖಾಲಿ ಉಳಿಯಬಾರದು ಎಂಬ ದೃಷ್ಟಿಯಿಂದ ವಿವಿಗಳೇ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕವೇ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಮಾಡಲು ಅನುಮತಿ ನೀಡಲಾಗಿದೆ” ಎಂದು ತಿಳಿಸಿದರು.

ಸಾಮಾನ್ಯ ಪ್ರವೇಶ ಪರೀಕ್ಷೆ ಕೈಗೊಳ್ಳಲು ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕೆಲ ಪ್ರಕ್ರಿಯೆಗಳನ್ನು ಸೂಚಿಸಲಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸದಿದ್ದರೆ ಸಿಯುಇಟಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಬಹುದಾಗಿದೆ ಎಂದು ಯುಜಿಸಿ ತಿಳಿಸಿದೆ. ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಕೋರ್ಸ್‌ಗಳಿಗೆ ಸೀಟುಗಳು ಬಾಕಿ ಉಳಿಯುವುದು ಮೂಲ ಸಂಪನ್ಮೂಲದ ಸದ್ಬಳಕೆಯಾದಂತೆ ಆಗುವುದಿಲ್ಲ. ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂಬ ಕಾರಣಕ್ಕಾಗಿ ಯುಜಿಸಿ ಈ ತೀರ್ಮಾನ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.

ಸೀಟುಗಳು ಏಕೆ ಖಾಲಿ ಉಳಿಯುತ್ತಿದ್ದವು?

ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಾತಿಗಾಗಿ ಸಿಯುಇಟಿ ನಡೆಸಲಾಗುತ್ತದೆ. ಮೂರು ಸುತ್ತಿನ ಪರೀಕ್ಷೆ, ಕೌನ್ಸೆಲಿಂಗ್ ನಡೆಸಿದ ಬಳಿಕ, ಅಂಕಗಳ ಆಧಾರದ ಮೇಲೆ ಪ್ರವೇಶಾತಿ ನೀಡಲಾಗುತ್ತದೆ. ಇಂತಹ ವಿಶಿಷ್ಟ ಪರೀಕ್ಷೆ, ಸೀಟು ಹಂಚಿಕೆ ಪದ್ಧತಿ ಇರುವ ಕಾರನ ಕೇಂದ್ರೀಯ ವಿವಿಗಳಲ್ಲಿ ಸೀಟುಗಳು ಬಾಕಿ ಉಳಿಯುತ್ತಿವೆ. ಹಾಗಾಗಿ, ಯುಜಿಸಿಯು ವಿಶ್ವವಿದ್ಯಾಲಯಗಳೇ ವಿವಿ ಮಟ್ಟದಲ್ಲಿ ಪರೀಕ್ಷೆ ನಡೆಸಿ ಸೀಟುಗಳನ್ನು ಭರ್ತಿ ಮಾಡಿಕೊಳ್ಳಲು ಅವಕಾಶ ನೀಡಿದೆ.

ಕಳೆದ ವಾರವಷ್ಟೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಸಿಯುಇಟಿ ಯುಜಿ 2024ರ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ದೇಶದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಎನ್‌ಟಿಎ ಮೇ 15 ಹಾಗೂ 24ರಂದು ಸಿಯುಇಟಿಯನ್ನು ನಡೆಸಿತ್ತು. ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು 13.48 ಲಕ್ಷ ಹಾಗೂ ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಪಡೆಯಲು 2.62 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

ಇದನ್ನೂ ಓದಿ: Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕ ರದ್ದು, ಪರೀಕ್ಷೆಯಿಂದಲೇ ಯುಪಿಎಸ್‌ಸಿ ಬ್ಯಾನ್!

Continue Reading
Advertisement
karnataka Weather Forecast
ಮಳೆ4 mins ago

Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

Paris Olympics
ಕ್ರೀಡೆ9 mins ago

Paris Olympics: ಕ್ವಾರ್ಟರ್‌ ಫೈನಲ್‌ನಲ್ಲಿ ಸಾತ್ವಿಕ್​-ಚಿರಾಗ್​ ಜೋಡಿಗೆ ಆಘಾತಕಾರಿ ಸೋಲು

MS Dhoni
ಪ್ರಮುಖ ಸುದ್ದಿ17 mins ago

MS Dhoni: ಆ ಒಂದು ರನ್​​ ಔಟ್ ನನ್ನ ​​ ಕ್ರಿಕೆಟ್​ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ; ವಿಶ್ವ ಕಪ್​ ಆಘಾತವನ್ನು ವಿವರಿಸಿದ ಧೋನಿ

MLA Belur Gopalakrishna visits and inspects flood affected areas in hosanagara taluk
ಶಿವಮೊಗ್ಗ17 mins ago

Hosanagara News: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

State Level hasiru nairmalya shala abhyudaya Award for Hadlubailu Government School
ಶಿವಮೊಗ್ಗ18 mins ago

Hosanagara News: ಹಡ್ಲುಬೈಲು ಸರ್ಕಾರಿ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

Viral Video
Latest20 mins ago

Viral Video: ಜಲಾವೃತ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಮಹಿಳೆಗೆ ಪುಂಡರ ಕಿರುಕುಳ; ವಿಡಿಯೊ ನೋಡಿ ಜನಾಕ್ರೋಶ

Viral Video
Latest28 mins ago

Viral Video: ಪ್ರೀತಿಸಿದ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕ; ಗಾಬರಿಗೊಳಿಸುವ ವಿಡಿಯೊ

New Traffic Rules
ಕರ್ನಾಟಕ33 mins ago

New Traffic Rules: ಹೆದ್ದಾರಿಯಲ್ಲಿ ವೇಗದ ಮಿತಿ 130 ಕಿ.ಮೀ ದಾಟಿದರೆ ದಂಡ, ಜೈಲು ಶಿಕ್ಷೆ; ಇಂದಿನಿಂದಲೇ ಹೊಸ ರೂಲ್ಸ್‌

Wayanad Tragedy
Latest44 mins ago

Wayanad Tragedy: ಈ ಮುದ್ದು ವಿದ್ಯಾರ್ಥಿನಿಯರ ನಗು, ಸೈಕಲ್‌ ಸವಾರಿ ಇನ್ನೆಲ್ಲಿ? ಮಣ್ಣಿನಡಿ ಸಮಾಧಿ; ಕಣ್ಣಂಚಲಿ ನೀರು ತರಿಸುವ ವಿಡಿಯೊ

murder case
ಬೆಂಗಳೂರು47 mins ago

Murder Case : ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌