Site icon Vistara News

Mayank Agarwal: ವಿಮಾನದಲ್ಲಿ ನೀರೆಂದು ಆ್ಯಸಿಡ್ ಕುಡಿದ ಕ್ರಿಕೆಟಿಗ ಮಯಾಂಕ್ ಅಗರ್ವಾಲ್? ಐಸಿಯುನಲ್ಲಿ ಚಿಕಿತ್ಸೆ

Mayank Aggarwal is critically ill; Treatment in ICU

ನವದೆಹಲಿ: ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕದ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ (Karnataka Ranji team captain Mayank Agarwal) ಅವರು ತೀವ್ರ ಅಸ್ವಸ್ಥರಾಗಿದ್ದು(critically ill), ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ರಣಜಿ ಪಂದ್ಯಕ್ಕಾಗಿ ತ್ರಿಪುರಾದಲ್ಲಿದ್ದ ಅವರು, ವಿಮಾನದಲ್ಲಿ ವಾಪಸ್ ಆಗುತ್ತಿದ್ದಾಗ ತೀವ್ರವಾಗಿ ಅಸ್ವಸ್ಥರಾದರು ಎಂದು ತಿಳಿದು ಬಂದಿದೆ.

ತ್ರಿಪುರಾ ವಿರುದ್ಧ ರಣಜಿ ಪಂದ್ಯವನ್ನು ಗೆದ್ದಿರುವ ಕರ್ನಾಟಕ ತಂಡವು ತನ್ನ ಮುಂದಿನ ಪಂದ್ಯವನ್ನು ಫೆಬ್ರವರಿ 2ರಿಂದ ಗುಜರಾತ್‌ನ ಸೂರತ್‌ನಲ್ಲಿ ಆಡಬೇಕಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ತಂಡವು ಸೋಮವಾರ ತ್ರಿಪುರಾದ ಅಗರ್ತಲಾದಿಂದ ವಿಮಾನದಲ್ಲಿ ಪ್ರಯಾಣ ಬೆಳೆಸಿತ್ತು. ಈ ವೇಳೆ, ಮಯಾಂಕ್ ಅಗರ್ವಾಲ್ ಅವರು ವಿಮಾನದ ಮುಂಭಾಗದಲ್ಲಿಡಲಾಗಿದ್ದ ನೀರಿನ ಬಾಟಲಿಯಿಂದ ನೀರು ಕುಡಿದಿದ್ದಾರೆ. ತಕ್ಷಣವೇ ಅವರಿಗೆ ಅಸ್ವಸ್ಥ ಕಾಡಲಾರಂಭಿಸಿದೆ.

ನೀರು ಕುಡಿಯುತ್ತಿದ್ದಂತೆ ಅವರ ಗಂಟಲಿನಲ್ಲಿ ಉರಿ ಶುರುವಾಗಿದೆ. ಬಾಯಿ ಮತ್ತು ನಾಲಿಗೆಗೆ ಕೂಡ ಸುಟ್ಟಂತ ಅನುಭವಾಗಿದೆ. ಅವರಿಗೆ ಮಾತನಾಡಲು ಸಾಧ್ಯವಾಗಿಲ್ಲ. ತೀವ್ರ ಅಸ್ವಸ್ಥಗೊಂಡ ಅವರನ್ನು ಕೂಡಲೇ ಅಗರ್ತಲಾದ ಎಎಲ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚಿನ ಮಾಹಿತಿಗಳ ಪ್ರಕಾರ, ಸ್ಟೋರೇಜ್ ಏರಿಯಾದಲ್ಲಿ ವಿಮಾನದ ಸಿಬ್ಬಂದಿಯು ವಾಟರ್ ಬಾಟಲ್‌ನಲ್ಲಿ ಆ್ಯಸಿಡ್ ಇಟ್ಟಿದ್ದರು ಎನ್ನಲಾಗಿದೆ. ಮಯಾಂಕ್ ಅಗರ್ವಾಲ್ ಅವರು ನೀರೆಂದು ತಪ್ಪಾಗಿ ಭಾವಿಸಿ ಆ್ಯಸಿಡ್ ಕುಡಿದಿದ್ದಾರೆ. ಆ್ಯಸಿಡ್ ಕುಡಿದ ಮರುಕ್ಷಣವೇ ಅವರು ಎಲ್ಲವನ್ನು ಉಗುಳಿದ್ದಾರೆ. ಹಾಗಾಗಿ ಆ್ಯಸಿಡ್ ಅವರ ಹೊಟ್ಟೆಯನ್ನು ತಲುಪಿರುವ ಸಾಧ್ಯತೆ ಕ್ಷೀಣವಾಗಿದೆ. ವೈದ್ಯರು ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: IPL 2024 : ಆರ್​ಸಿಬಿ ತಂಡ ಸೇರಿದ ಮಯಾಂಕ್​

Exit mobile version