Site icon Vistara News

Menstruation Leave | ಶೀಘ್ರವೇ ಕೇರಳದ ಎಲ್ಲ ವಿವಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ!

Menstruation Leave kerala

ನವದೆಹಲಿ: ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ (Menstruation Leave) ನೀಡುವ ಬಗ್ಗೆ ಕೇರಳ ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಕೇರಳ ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು ಹೇಳಿದ್ದಾರೆ. ಈಗಾಗಲೇ ಪ್ರಾಯೋಗಿಕವಾಗಿ ಕೊಚ್ಚಿನ್ ಯುನಿವರ್ಸಿಟಿ ಆ್ಯಪ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ(ಸಿಯುಎಸ್ಎಟಿ)ಯಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಮುಂಬರುವ ದಿನಗಳಲ್ಲಿ ಈ ವ್ಯವಸ್ಥೆಯನ್ನು ಇಡೀ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಿಯುಎಸ್ಎಟಿ‌ನಲ್ಲಿ ಎಸ್ಎಫ್ಐ, ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ನೀಡುವಂತೆ ಮನವಿ ಮಾಡಿಕೊಂಡಿತ್ತು. ಬಳಿಕ ಆಡಳಿತ ಮಂಡಳಿಯು ಈ ಮನವಿಗೆ ಒಪ್ಪಿಗೆ ನೀಡಿತ್ತು. ಮುಟ್ಟಿನ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ರಜೆ ನೀಡವ ಬಗ್ಗೆ ರಾಜ್ಯ ಸರ್ಕಾರ ಯೋಚಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಿ ಸೆಮಿಸ್ಟರ್‌ನಲ್ಲಿ ಶೇ.75ರಷ್ಟು ಹಾಜರಾತಿ ಇದ್ದರೆ ಮಾತ್ರವೇ ಪರೀಕ್ಷೆಗೆ ಅನುಮತಿ ನೀಡಲಾಗುತ್ತದೆ. ಒಂದೊಮ್ಮೆ ಮುಟ್ಟಿನ ರಜೆ ಪರಿಗಣಿಸುವುದಾದರೆ, ಶೇ.73ರ ಹಾಜರಾತಿ ಇದ್ದರೂ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕಾಗುತ್ತದೆ. ಈ ಒಂದು ಬದಲಾವಣೆಯನ್ನು ಸಿಯುಎಸ್ಎಟಿ ಮಾಡಿಕೊಂಡಿತ್ತು. ಒಂದೊಮ್ಮೆ ಈ ವ್ಯವಸ್ಥೆಯನ್ನು ಕೇರಳದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಜಾರಿಗೆ ತಂದರೆ ವಿದ್ಯಾರ್ಥಿನಿಯರಿಗೆ ಹೆಚ್ಚು ಉಪಯೋಗವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ | Menstrual Hygiene day: ಮುಟ್ಟು ಕಳಂಕವಲ್ಲ, ಕೊಳಕೂ ಅಲ್ಲ; ಮೌಢ್ಯ ಬಿಟ್ಟು ಸ್ವಚ್ಛತೆಯತ್ತ ಗಮನಕೊಡಿ

Exit mobile version