Site icon Vistara News

Delhi Earthquake: ದೆಹಲಿಯಲ್ಲಿ ಮತ್ತೆ ಭೂಕಂಪ; ವಾರದಲ್ಲಿ 3ನೇ ಬಾರಿ ಭೂಮಿ ಗಡ ಗಡ!

Earthquake in Delhi

Minor tremors felt in Delhi, 2.6 magnitude earthquake strikes north district

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಕಂಪ (Delhi Earthquake) ಸಂಭವಿಸಿದೆ. ದೆಹಲಿಯ ಉತ್ತರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಮನೆಯಿಂದ ಹೊರಗೆ ಓಡಿಬಂದಿದ್ದಾರೆ ಎಂದು ತಿಳಿದುಬಂದಿದೆ. ರಿಕ್ಟರ್‌ ಮಾಪನದಲ್ಲಿ 2.6 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ (National Center for Seismology) ಮಾಹಿತಿ ನೀಡಿದೆ.

ಕೇವಲ ಒಂದು ವಾರದ ಅಂತರದಲ್ಲಿ ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ಸಂಭವಿಸುತ್ತಿರುವ ಮೂರನೇ ಭೂಕಂಪ ಇದಾಗಿದೆ. ನವೆಂಬರ್‌ 3ರಂದು ರಾತ್ರಿ ದೆಹಲಿ, ಗುರುಗ್ರಾಮ, ಘಾಜಿಯಾಬಾದ್‌ ಸೇರಿ ಹಲವೆಡೆ ಭೂಕಂಪ ಸಂಭವಿಸಿತ್ತು. ನವೆಂಬರ್‌ 6ರ ಸಂಜೆ ಕೂಡ ಭೂಮಿ ಕಂಪಿಸಿದ ಅನುಭವವಾಗಿತ್ತು. ಈಗ ಮತ್ತೆ ಭೂಕಂಪ ಸಂಭವಿಸಿದ ಕಾರಣ ಜನ ಆತಂಕದಲ್ಲಿಯೇ ಕಾಲ ಕಳೆಯುವಂತಾಗಿದೆ.

ನೇಪಾಳದಲ್ಲಿ 157 ಜನ ಸಾವು

ನೇಪಾಳದಲ್ಲಿ ವಾರದ ಹಿಂದೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 157 ಜನ ಮೃತಪಟ್ಟಿದ್ದು, 250ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಕಟ್ಟಡಗಳು ಧರೆಗುರುಳಿದ್ದು, ಜನರ ರಕ್ಷಣೆಗೆ ಹರಸಾಹಸ ಮಾಡಬೇಕಾಗಿತ್ತು. ಮಹಿಳೆಯರು, ಮಕ್ಕಳು, ಹಿರಿಯರು ಭೂಕಂಪಕ್ಕೆ ಬಲಿಯಾಗಿದ್ದರು. ಅಷ್ಟಕ್ಕೂ, ನೇಪಾಳದಲ್ಲಿ ಕಳೆದ ಮೂರು ದಿನಗಳಲ್ಲಿ ಮೂರ್ನಾಲ್ಕು ಬಾರಿ ಭೂಮಿ ಕಂಪಿಸಿದ ಕಾರಣ ಜನರಲ್ಲಿ ಭಯ ಮನೆಮಾಡಿದೆ.

ಇದನ್ನೂ ಓದಿ: Delhi Earthquake: ದೆಹಲಿ ಸೇರಿ ಹಲವೆಡೆ ಭಾರಿ ಭೂಕಂಪ; ನಿದ್ದೆ ಬಿಟ್ಟು ಕುಳಿತ ಜನ

ಕೆಲ ದಿನಗಳ ಹಿಂದೆ ಅಫಘಾನಿಸ್ತಾನದ ಹೆರಾತ್‌ನಲ್ಲಿ ಸಂಭವಿಸಿದ ಸರಣಿ ಭೂಕಂಪದಲ್ಲಿ 2 ಸಾವಿರಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಹೆರಾತ್ ನಗರ ಮಾತ್ರವಲ್ಲದೇ, ಪಶ್ಚಿಮ ಅಫಘಾನಿಸ್ತಾನದ ಗ್ರಾಮೀಣ ಪ್ರದೇಶದಲ್ಲೂ ಭೂಕಂಪದ ತೀವ್ರತೆ ಹೆಚ್ಚಾಗಿದ್ದು, ಸಾಕಷ್ಟು ಸಾವು ನೋವು ಸಂಭವಿಸಿತ್ತು. ತಾಲಿಬಾನ್ (Taliban Administration) ಆಡಳಿತದ ಹಿನ್ನೆಲೆಯಲ್ಲಿ ಈಗಾಗಲೇ ಸಾಕಷ್ಟು ಮಾನವೀಯ ಬಿಕ್ಕಟ್ಟು ಎದುರಿಸುತ್ತಿರುವ ಅಫಘಾನಿಸ್ತಾನಕ್ಕೆ ಈ ಭೂಕಂಪವು ಭಾರೀ ಹೊಡೆತ ನೀಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version