ಲಂಡನ್‌ನಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆ - Vistara News

ದೇಶ

ಲಂಡನ್‌ನಲ್ಲಿ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆ

Indian student: ಮಿತಕುಮಾರ್ ಕಳೆದ ಸೆಪ್ಟೆಂಬರ್‌ನಲ್ಲಿ ಉನ್ನತ ವಿದ್ಯಾಭ್ಯಾಸವನ್ನು ಕೈಗೊಳ್ಳುವುದಕ್ಕಾಗಿ ಲಂಡನ್‌ಗೆ ತೆರಳಿದ್ದರು ಮತ್ತು ನವೆಂಬರ್ 17ರಂದು ಕಾಣೆಯಾಗಿದ್ದರು.

VISTARANEWS.COM


on

Missing Indian student found dead in Thames river, London
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಇಂಗ್ಲೆಂಡ್‌ನಲ್ಲಿ (United Kingdom) ಕಳೆದ ತಿಂಗಳ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ (Indian Student) ಈಗ ಲಂಡನ್‌ನ ಥೇಮ್ಸ್ ನದಿಯಲ್ಲಿ (Thames River) ಶವವಾಗಿ ಪತ್ತೆಯಾಗಿದ್ದಾರೆ. 23 ವರ್ಷದ ಮಿತಕುಮಾರ್ ಪಟೇಲ್ (Mitkumar Patel) ಉನ್ನತ ಶಿಕ್ಷಣಕ್ಕಾಗಿ ಕಳೆದ ಸೆಪ್ಟೆಂಬರ್‌ನಲ್ಲಿ ಲಂಡನ್‌ಗೆ ಆಗಮಿಸಿದ್ದರು ಮತ್ತು ನವೆಂಬರ್ 27ರಿಂದ ನಾಪತ್ತೆಯಾಗಿದ್ದರು. ಕೊನೆಗೆ ಅವರ ಶವ ನದಿಯಲ್ಲಿ ಪತ್ತೆಯಾಗಿದೆ.

ಭಾರತೀಯ ವಿದ್ಯಾರ್ಥಿಯ ಮೃತದೇಹವನ್ನು ನವೆಂಬರ್ 21 ರಂದು ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿ ಥೇಮ್ಸ್ ನದಿಯಲ್ಲಿ ಮೆಟ್ರೋಪಾಲಿಟನ್ ಪೊಲೀಸರು ಪತ್ತೆ ಮಾಡಿದರು. ಈ ಸಾವು ಅನುಮಾನಾಸ್ಪದ ಅಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಂಬಂಧಿ ಪಾರ್ಥ್ ಪಟೇಲ್ ಅವರು GoFundMe ಆನ್‌ಲೈನ್ ನಿಧಿಸಂಗ್ರಹವನ್ನು ಪ್ರಾರಂಭಿಸಿದ್ದಾರೆ ಮತ್ತು ಕಳೆದ ವಾರದಿಂದ 4,500 ಪೌಂಡ್‌ಗಿಂತಲೂ ಹೆಚ್ಚು ಹಣವನ್ನು ಸಂಗ್ರಹಿಸಿದ್ದಾರೆ.

23 ವರ್ಷದ ಮಿತಕುಮಾರ್ ಪಟೇಲ್ ಅವರು ಉನ್ನತ ಅಧ್ಯಯನಕ್ಕಾಗಿ 2023ರ ಸೆಪ್ಟೆಂಬರ್ 19ರಂದು ಇಂಗ್ಲೆಂಡ್‌ಗೆ ಆಗಮಿಸಿದ್ದರು ಎಂದು ನಿಧಿ ಸಂಗ್ರಹ ಮನಿಯಲ್ಲಿ ಹೇಳಲಾಗಿದೆ. ಮಿತಕಮಾರ್ ಅವರು ಹಳ್ಳಿಯಲ್ಲಿ ವಾಸಿಸುತ್ತಿರುವ ರೈತನ ಮಗನಾಗಿದ್ದಾರೆ. 2023ರ ನವೆಂಬರ್ 17ರಿಂದ ಮಿತಕುಮಾರ್ ನಾಪತ್ತೆಯಾಗಿದ್ದರು ಮತ್ತು ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿ ಥೇಮ್ಸ್ ನದಿಯಲ್ಲಿ ಮೆಟ್ರೋಪಾಲಿಟನ್ ಪೊಲೀಸರು ಆತನ ಶವವನ್ನು ಪತ್ತೆ ಮಾಡಿದರು. ಇದು ನಮಗೆಲ್ಲ ದುಃಖದ ಸಂಗತಿಯಾಗಿದೆ, ಆದ್ದರಿಂದ ಆತನ ಕುಟುಂಬಕ್ಕೆ ಸಹಾಯ ಮಾಡಲು ಮತ್ತು ಶವವನ್ನು ಭಾರತಕ್ಕೆ ಕಳುಹಿಸುವ ಸಂಬಂಧ ನಿಧಿ ಸಂಗ್ರಹಿಸುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಭಾರತದಲ್ಲಿನ ಮಿತಕುಮಾರ್ ಅವರ ಕುಟುಂಬಕ್ಕೆ ಹಣವನ್ನು ಸುರಕ್ಷಿತವಾಗಿ ರವಾನಿಸಲಾಗುವುದು ಎಂದು ಮನವಿ ಪುನರುಚ್ಚರಿಸಲಾಗಿದೆ. ವಿದ್ಯಾರ್ಥಿಯು ನವೆಂಬರ್ 20 ರಂದು ಶೆಫೀಲ್ಡ್ ಹಾಲಮ್ ವಿಶ್ವವಿದ್ಯಾಲಯದಲ್ಲಿ ಪದವಿ ಮತ್ತು ಅಮೆಜಾನ್‌ನಲ್ಲಿ ಅರೆಕಾಲಿಕ ಉದ್ಯೋಗವನ್ನು ಪ್ರಾರಂಭಿಸಲು ಶೆಫೀಲ್ಡ್‌ಗೆ ತೆರಳಬೇಕಿತ್ತು ಎಂದು ಇಂಗ್ಲೆಂಡ್‌ನ ಈವ್ನಿಂಗ್ ಸ್ಟ್ಯಾಂಡರ್ಡ್ ಪತ್ರಿಕೆ ವರದಿ ಮಾಡಿದೆ. ಲಂಡನ್ ನಿವಾಸಕ್ಕೆ ತನ್ನ ದೈನಂದಿನ ವಾಕಿಂಗ್‌ನಿಂದ ಆತ ಮರಳಿ ಬಂದಿರಲಿಲ್ಲ. ಆಗ ಆತನ ಬಗ್ಗೆ ಆತಂಕ ಶುರುವಾಯಿತು ಮತ್ತು ಪೋಷಕರು ಈ ಕುರಿತು ವರದಿ ಮಾಡಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Indian Student: ಅಮೆರಿಕದಲ್ಲಿ ಗುಂಡಿನ ದಾಳಿಗೆ ಭಾರತೀಯ ವಿದ್ಯಾರ್ಥಿ ಬಲಿ; ತಿಂಗಳಲ್ಲೇ ಇಬ್ಬರ ಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

NEET UG Result 2024: ಏನಿದು ನೀಟ್‌ ವಿವಾದ? ಗ್ರೇಸ್‌ ಅಂಕ ಕೊಟ್ಟಿದ್ಯಾಕೆ? ಮರು ಪರೀಕ್ಷೆ ಮಾಡೋದ್ಯಾಕೆ?

ಅಕ್ರಮ ಆರೋಪದ ನಡುವೆಯೇ ಕೇಂದ್ರ ಸರ್ಕಾರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದೆ. ಗ್ರೇಸ್ ಅಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರು ಪರೀಕ್ಷೆ ನಡೆಸಿ ಜೂನ್ 30ರಂದು ಫಲಿತಾಂಶ (NEET UG Result 2024) ಪ್ರಕಟಿಸುವುದಾಗಿ ಘೋಷಿಸಿದೆ. ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 6ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ. ನೀಟ್‌ ವಿವಾದದ ಸಂಪೂರ್ಣ ಚಿತ್ರಣ ಇಲ್ಲಿದೆ.

VISTARANEWS.COM


on

By

NEET UG Result 2024
Koo

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG Result 2024) ಅಕ್ರಮ ನಡೆದಿದೆ ಎಂದು ನೀಟ್ ಆಕಾಂಕ್ಷಿಗಳು ಒಂದೆಡೆ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ (exam) ಗ್ರೇಸ್ ಅಂಕಗಳನ್ನು (grace marks) ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ (retest) ನಡೆಸಲು ಕೇಂದ್ರ ಸರ್ಕಾರ (central govt) ಗುರುವಾರ ಪ್ರಸ್ತಾವನೆ ಸಲ್ಲಿಸಿದೆ. ನೀಟ್ ಫಲಿತಾಂಶ ಘೋಷಣೆಯಾದ ಬಳಿಕ ಆಕಾಂಕ್ಷಿಗಳು ಮತ್ತು ಪೋಷಕರು ಕೆಲವು ಕೇಂದ್ರಗಳಲ್ಲಿ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ತನಿಖೆ ಮತ್ತು ಮರು ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ.

ನೀಟ್- ಯುಜಿ ಅನ್ನು ಮೊದಲು ಆಲ್ ಇಂಡಿಯಾ ಪ್ರಿ ಮೆಡಿಕಲ್ ಟೆಸ್ಟ್ (AIPMT) ಎಂದು ಕರೆಯಲಾಗುತ್ತಿತ್ತು. ಇದು ದೇಶದಾದ್ಯಂತ ಎಲ್ಲಾ ವೈದ್ಯಕೀಯ ಸಂಸ್ಥೆಗಳಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನಡೆಯುವ ಏಕೈಕ ಪ್ರವೇಶ ಪರೀಕ್ಷೆಯಾಗಿದೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಸೇರಿದಂತೆ ಹದಿಮೂರು ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸುವ ಉಸ್ತುವಾರಿ ವಹಿಸಿಕೊಂಡಿದೆ. ಈ ಹಿಂದೆ ಸೆಂಟ್ರಲ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್ (CBSE) ಇದನ್ನು ನಡೆಸುತ್ತಿತ್ತು.

ನೀಟ್ ಯುಜಿ ಫಲಿತಾಂಶಗಳ ಸುತ್ತ ವಿವಾದ

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಸುದ್ದಿ ಆಯಿತು. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರಿಪೂರ್ಣ ಅಂಕಗಳನ್ನು ಸಾಧಿಸಲು ಪ್ರಶ್ನೆ ಪತ್ರಿಕೆ ಸೋರಿಕೆಯೇ ಕಾರಣ ಎಂಬ ಆರೋಪಗಳೂ ಕೇಳಿ ಬಂದಿದೆ.

ನೀಟ್ ಯುಜಿ ಪರೀಕ್ಷೆ ಬರೆದ 67 ವಿದ್ಯಾರ್ಥಿಗಳು ಒಟ್ಟು 720 ಅಂಕಗಳನ್ನು ಗಳಿಸಿದ್ದಾರೆ ಎಂಬುದು ಫಲಿತಾಂಶ ತೋರಿಸಿವೆ. ಇದು ಹಿಂದಿನ ವರ್ಷಗಳ ಫಲಿತಾಂಶಗಳಿಗೆ ಹೋಲಿಸಿದರೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ಮಾತ್ರ ಪೂರ್ಣ ಅಂಕ ಗಳಿಸಿದ್ದರೆ, 2022ರಲ್ಲಿ ಮೂವರು, 2021ರಲ್ಲಿ ಇಬ್ಬರು, 2020ರಲ್ಲಿ ಒಬ್ಬರು ಮಾತ್ರ ಪೂರ್ಣ ಅಂಕ ಗಳಿಸಿದ್ದರು. ಈ ಬಾರಿ ಹರ್ಯಾಣದ ಒಂದೇ ಕೇಂದ್ರದಲ್ಲಿ ಆರು ಮಂದಿ ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಇದು ಸಂಶಯಕ್ಕೆ ಆಸ್ಪದ ಮಾಡಿ ಕೊಟ್ಟಿದೆ.


ಸುಪ್ರೀಂ ಕೋರ್ಟ್ ಹೇಳಿದ್ದೇನು?

ನೀಟ್ ಯುಜಿ 2024ರಲ್ಲಿ ಗ್ರೇಸ್ ಅಂಕಗಳನ್ನು ಪಡೆದ 1,563 ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಮರು ಪರೀಕ್ಷೆಯು ಜೂನ್ 23ರಂದು ನಡೆಯಲಿದೆ. ಆದರೆ ಪ್ರವೇಶ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನಿಲ್ಲಿಸದಿರಲು ಸುಪ್ರೀಂ ಕೋರ್ಟ್ ಆದೇಶಿಸಿದೆ. 1,563 ಅಭ್ಯರ್ಥಿಗಳಲ್ಲಿ ಯಾರಾದರೂ ಮರುಪರೀಕ್ಷೆಯಿಂದ ಹೊರಗುಳಿದಿದ್ದರೆ ಗ್ರೇಸ್ ಅಂಕಗಳಿಲ್ಲದ ಅವರ ಹಿಂದಿನ ಅಂಕಗಳನ್ನು ಫಲಿತಾಂಶಗಳಿಗಾಗಿ ಬಳಸಲಾಗುತ್ತದೆ.

ಜುಲೈ 6ರಂದು ಕೌನ್ಸೆಲಿಂಗ್ ಪ್ರಾರಂಭ

ಮರು ಪರೀಕ್ಷೆಯ ಫಲಿತಾಂಶವನ್ನು ಜೂನ್ 30ರಂದು ಪ್ರಕಟಿಸಲಾಗುವುದು ಮತ್ತು ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 6 ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.

ಸುಪ್ರೀಂ ಕೋರ್ಟ್‌ಗೆ ಮೊರೆ

ನೀಟ್ ಯುಜಿ 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಮತ್ತು ಗ್ರೇಸ್ ಮಾರ್ಕ್‌ ಗಳಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಲು ಮರುಪರೀಕ್ಷೆಯನ್ನು ನಡೆಸುವಂತೆ ಕೋರಿ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿತ್ತು. ನ್ಯಾಯಾಧೀಶರಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಗಳನ್ನು ಆಲಿಸಿತು.

ಫಿಸಿಕ್ಸ್ ವಾಲಾ ಸಿಇಒ ಅಲಖ್ ಪಾಂಡೆ, ಅರ್ಜಿದಾರರಲ್ಲಿ ಒಬ್ಬರು ಗ್ರೇಸ್ ಅಂಕಗಳನ್ನು ನೀಡುವ ಎನ್‌ಟಿಎ ನಿರ್ಧಾರವು ನಿರಂಕುಶ ಎಂದು ವಾದಿಸಿದರು. ಅವರು ಸುಮಾರು 20,000 ವಿದ್ಯಾರ್ಥಿಗಳ ಪ್ರತಿಕ್ರಿಯೆಯನ್ನು ಸಂಗ್ರಹಿಸಿದ್ದಾರೆ. ಸುಮಾರು 70-80 ಅಂಕಗಳನ್ನು ಕನಿಷ್ಠ 1,500 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳಾಗಿ ನೀಡಿರುವುದು ಆಕ್ಷೇಪಕಾರಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿ: ಕೌನ್ಸೆಲಿಂಗ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಎರಡನೇ ಅರ್ಜಿಯನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ (ಎಸ್‌ಐಒ) ಸದಸ್ಯರಾದ ಅಬ್ದುಲ್ಲಾ ಮೊಹಮ್ಮದ್ ಫೈಜ್ ಮತ್ತು ಡಾ. ಶೇಕ್ ರೋಷನ್ ಮೊಹಿದ್ದೀನ್ ಅವರು ಎನ್‌ಇಇಟಿ ಮರುಪರೀಕ್ಷೆಗೆ ವಿನಂತಿಸಿದ್ದರು. ಹಲವಾರು ವಿದ್ಯಾರ್ಥಿಗಳು ಗ್ರೇಸ್ ಅಂಕಗಳನ್ನು ಪಡೆದಿರುವುದು ಇಡೀ ನೀಟ್‌ ಪರೀಕ್ಷಾ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ ಎಂದು ಅವರು ವಾದಿಸಿದ್ದರು.

ಮೂರನೇ ಅರ್ಜಿಯನ್ನು ನೀಟ್ ಅಭ್ಯರ್ಥಿ ಜಾರಿಪಿಟಿ ಕಾರ್ತೀಕ್ ಅವರು ಸಲ್ಲಿಸಿದ್ದು, ಪರೀಕ್ಷೆಯ ಸಮಯದಲ್ಲಿ ಕಳೆದುಹೋದ ಸಮಯಕ್ಕೆ ಪರಿಹಾರವಾಗಿ ಗ್ರೇಸ್ ಅಂಕಗಳನ್ನು ನೀಡುವುದನ್ನು ಪ್ರಶ್ನಿಸಿದ್ದರು.

Continue Reading

Latest

Hindu Girl Kidnaping: ಪಾಕ್‌ನಲ್ಲಿ ಹಿಂದೂ ಬಾಲಕಿಯ ಅಪಹರಿಸಿ ಇಸ್ಲಾಂಗೆ ಮತಾಂತರ, ಬಲವಂತದ ಮದುವೆ

Hindu Girl Kidnaping: ಅಪ್ರಾಪ್ತ ವಯಸ್ಸಿನ ಹಿಂದೂ ಹುಡುಗಿಯನ್ನು ಪಾಕಿಸ್ತಾನದ ಶಹದಾಬ್ಕೋಟ್ ಪಟ್ಟಣದ ನಿವಾಸಿ ಗುಲ್ ಹಸನ್ ಅವರ ಪುತ್ರ ಸಮೀರ್ ಅಲಿ ಎಂಬಾತ ಅಪಹರಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಿಸಿ ನಂತರ ಬಲವಂತವಾಗಿ ಮದುವೆಯಾದ ಘಟನೆ ನಡೆದಿದೆ.

VISTARANEWS.COM


on

Hindu Girl Kidnaping
Koo

ಪಾಕಿಸ್ತಾನ : ಪಾಕಿಸ್ತಾನದ ಕರಾಚಿ ಪ್ರದೇಶದಿಂದ ಅಪ್ರಾಪ್ತ ವಯಸ್ಸಿನ ಹಿಂದೂ ಹುಡುಗಿಯನ್ನು ಅಪಹರಿಸಿ ((Hindu Girl Kidnaping) ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿ ನಂತರ ಆಕೆಯನ್ನು ಬಲವಂತವಾಗಿ ಮದುವೆಯಾದ ಆಘಾತಕಾರಿ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. 16 ವರ್ಷದ ಹುಡುಗಿಯನ್ನು ಪಾಕಿಸ್ತಾನದ ಶಹದಾಬ್ಕೋಟ್ ಪಟ್ಟಣದ ನಿವಾಸಿ ಗುಲ್ ಹಸನ್ ಅವರ ಪುತ್ರ ಸಮೀರ್ ಅಲಿ ಎಂಬಾತ ಅಪಹರಿಸಿ ಮುಸ್ಲಿಂಧರ್ಮಕ್ಕೆ ಮತಾಂತರಿಸಿ ನಂತರ ಬಲವಂತವಾಗಿ ಮದುವೆಯಾದ ಎಂದು ಆರೋಪಿಸಲಾಗಿದೆ.

ಪಾಕಿಸ್ತಾನಿ ಕ್ರಿಶ್ಚಿಯನ್ ಕಾರ್ಯಕರ್ತ ಫರಾಜ್ ಪರ್ವೈಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಸಾರ್ವಜನಿಕವಾಗಿ ಅನಾವರಣಗೊಳಿಸಿದ್ದಾರೆ. ಅದರ ಪ್ರಕಾರ ಸಂಗೀತಾ ಎಂಬ ಬಾಲಕಿಯನ್ನು ಸಮೀರ್ ಅಲಿ ಅಪಹರಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿ ನಂತರ ಆಕೆಯನ್ನು ಬಲವಂತವಾಗಿ ಮದುವೆಯಾಗಿದ್ದಾನೆ. ಅಷ್ಟೇ ಅಲ್ಲದೇ ಮತಾಂತರದ ನಂತರ ಆಕೆಗೆ ಹಮೀದಾ ಎಂಬ ಹೊಸ ಹೆಸರನ್ನು ನೀಡಿದ್ದಾರೆ. ಆಕೆಗೆ 15 ವರ್ಷ ವಯಸ್ಸಾಗಿದ್ದರೂ ಕೂಡ ಆರೋಪಿ ಆಕೆಯ ದಾಖಲೆಗಳನ್ನು ಪೋರ್ಜರಿ ಮಾಡಿ ಆಕೆ 19 ವರ್ಷದ ವಯಸ್ಕಳು ಎಂದು ಬಿಂಬಿಸಿ ಆಕೆ ತನ್ನನ್ನು ಮದುವೆಯಾಗಲು ಸಿದ್ಧಳಿದ್ದಾಳೆ ಎಂಬುದಾಗಿ ನಿರೂಪಿಸಿದ್ದಾನೆ.

ಅದಕ್ಕಾಗಿ ಆರೋಪಿಯು ಹುಡುಗಿಗೆ ತಾನು ವಯಸ್ಕಳು ಹಾಗೂ ತನ್ನ ಇಚ್ಛೆಯಂತೆ ಪ್ರೀತಿಯಿಂದ ಆರೋಪಿಯನ್ನು ಮದುವೆಯಾಗುತ್ತಿರುವೆ ಎಂದು ಅಫಿಡವಿಟ್‌ಗೆ ಸಹಿ ಹಾಕುವಂತೆ ಒತ್ತಾಯಿಸಿದ್ದಾನೆ. ಮತ್ತು ಆರೋಪಿಯ ವಿರುದ್ಧ ಯಾರಾದರೂ ಪೊಲೀಸರಿಗೆ ದೂರು ನೀಡಿದರೆ ಸಂತ್ರಸ್ತೆ ಇಚ್ಛೆಯಂತೆ ಮದುವೆಯಾಗುತ್ತಿರುವುದು ಎಂದು ತೋರಿಸಲು ಈ ತಯಾರಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಪಾಕಿಸ್ತಾನದಲ್ಲಿ ಹಿಂದೂ ಹುಡುಗಿಯನ್ನು ಅಪಹರಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿದ್ದು ಇದೇ ಮೊದಲಲ್ಲ. ಇತ್ತೀಚೆಗೆ ಜೂನ್ 2ರಂದು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 14 ವರ್ಷದ ಹಿಂದೂ ಹುಡುಗಿಯನ್ನು ಗನ್ ತೋರಿಸಿ ಹೆದರಿಸಿ ಅಪಹರಣ ಮಾಡಿ ಬಲವಂತವಾಗಿ ಮತಾಂತರಿಸಿ ಮುಸ್ಲಿಂ ಯುವಕನ ಜೊತೆ ಮದುವೆ ಮಾಡಿಸಿದ್ದರು. ಈ ಬಗ್ಗೆ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಿನ ಆಕ್ರೋಶ ವ್ಯಕ್ತವಾದ ಕಾರಣ ಪೊಲೀಸರು ಆಕೆಯನ್ನು ಪೋಷಕರ ಬಳಿ ಮರಳಿಸಿದ್ದಾರೆ. ಹಾಗೇ ತನಗಾದ ಅನ್ಯಾಯದ ಬಗ್ಗೆ ಸಂತ್ರಸ್ತೆ ಕೋರ್ಟ್‌ನಲ್ಲಿ ತಿಳಿಸಿದರೂ ನ್ಯಾಯಾಧೀಶರು ಆಕೆಗೆ ಹೆತ್ತವರೊಡನೆ ಕಳುಹಿಸಲು ನಿರಾಕರಿಸಿದರು ಎನ್ನಲಾಗಿದೆ.

ಇದನ್ನೂ ಓದಿ: Terror attack : ಉಗ್ರರ ದಾಳಿ; ತನ್ನ ಪ್ರಾಣ ತ್ಯಾಗ ಮಾಡಿ ಪ್ರಯಾಣಿಕರ ಜೀವ ಉಳಿಸಿದ ಬಸ್‌ ಚಾಲಕ

ಇಷ್ಟೆಲ್ಲಾ ದೌರ್ಜನ್ಯಗಳು ಪಾಕಿಸ್ತಾನದಲ್ಲಿ ಹಿಂದೂ ಹುಡುಗಿಯರ ಮೇಲೆ ಆಗುವುದನ್ನು ಕಂಡು ವಿಶ್ವಸಂಸ್ಥೆಯು ಖಂಡಿಸಿದೆ. ಮುಸ್ಲಿಂರು ಹಿಂದೂಗಳ ಮೇಲೆ ದೌರ್ಜನ್ಯ ಎಸಗುವುದನ್ನು ಕಂಡು ನಿರಾಶೆ ವ್ಯಕ್ತಪಡಿಸಿದೆ. ಬಲವಂತದ ವಿವಾಹ ಮತ್ತು ಧಾರ್ಮಿಕ ಮತಾಂತರಗಳಿಂದಾಗಿ ಪಾಕಿಸ್ತಾನವನ್ನು ಟೀಕಿಸಿದೆ. ಹಾಗೇ ಇಂತಹ ಪ್ರಕ್ರಿಯೆಗಳು ಇನ್ನು ಮುಂದೆ ನಡೆಯಬಾರದೆಂದು ವಿಶ್ವಸಂಸ್ಥೆ ಪಾಕಿಸ್ತಾನಕ್ಕೆ ಕರೆ ನೀಡಿದೆ. ಹಾಗೇ ಬಲವಂತದ ಮದುವೆ ಮತ್ತು ಅಪಹರಣದಿಂದ ರಕ್ಷಿಸುವ ಕಾನೂನುಗಳ ಜಾರಿಯನ್ನು ಬಲಪಡಿಸಲು ಮತ್ತು ದೇಶದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಬದ್ಧತೆಗಳನ್ನು ಪೂರೈಸಲು ವಿಶ್ವಸಂಸ್ಥೆ ತಿಳಿಸಿದೆ.

Continue Reading

ದೇಶ

Ajit Doval: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್‌ ದೋವಲ್‌ 3ನೇ ಅವಧಿಗೆ ನೇಮಕ; ಉಗ್ರರಿಗೆ ನಡುಕ

Ajit Doval: ಅಜಿತ್ ದೋವಲ್‌ ಅವರನ್ನು ಮೂರನೇ ಅವಧಿಗೆ ನೇಮಿಸಿರುವ ಕುರಿತು ಸಂಪುಟದ ನೇಮಕಾತಿ ಸಮಿತಿಯು ಜೂನ್‌ 10ರಂದೇ ಆದೇಶ ಹೊರಡಿಸಿದೆ. ನೂತನ ಆದೇಶದ ಪ್ರಕಾರ, ಅಜಿತ್‌ ದೋವಲ್‌ ಅವರು ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವವರೆಗೆ ಅಥವಾ ಮುಂದಿನ ಆದೇಶದವರೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಇರಲಿದ್ದಾರೆ. ಇದೇ ನಿಯಮವು ಪಿ.ಕೆ.ಮಿಶ್ರಾ ಅವರಿಗೂ ಅನ್ವಯವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

VISTARANEWS.COM


on

Ajit Doval
Koo

ನವದೆಹಲಿ: ಭಾರತದ ಜೇಮ್ಸ್‌ ಬಾಂಡ್‌ ಎಂದೇ ಖ್ಯಾತಿಯಾಗಿರುವ, ಪಾಕಿಸ್ತಾನದ ಉಗ್ರರ ವಿರುದ್ಧ ಸರ್ಜಿಕಲ್‌ ಸ್ಟ್ರೈಕ್, ಬಾಲಾಕೋಟ್‌ ವಾಯುದಾಳಿ ಸೇರಿ ಹಲವು ಕಾರ್ಯಾಚರಣೆಗಳ ಸೂತ್ರಧಾರಿಯಾಗಿರುವ, ದೇಶದ ಟ್ರಬಲ್‌ ಶೂಟರ್‌ ಎಂದೇ ಹೆಸರು ಗಳಿಸಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ (National Security Advisor) ಅಜಿತ್‌ ದೋವಲ್‌ (Ajit Doval) ಅವರನ್ನು ಕೇಂದ್ರ ಸರ್ಕಾರವು (Central Government) ಮೂರನೇ ಅವಧಿಗೂ ಸಲೆಹೆಗಾರರನ್ನಾಗಿ ನೇಮಿಸಿದೆ. ಮತ್ತೊಂದೆಡೆ, ಪ್ರಧಾನಿ ನರೇಂದ್ರ ಮೋದಿ ಅವರ ಮುಖ್ಯ ಕಾರ್ಯದರ್ಶಿಯಾಗಿ ಪಿ.ಕೆ.ಮಿಶ್ರಾ (PK Mishra) ಅವರೇ ಮುಂದುವರಿಯಲಿದೆ. ಇವರ ನೇಮಕದ ಕುರಿತು ಕೂಡ ಸರ್ಕಾರ ಆದೇಶ ಹೊರಡಿಸಿದೆ.

ಅಜಿತ್ ದೋವಲ್‌ ಅವರನ್ನು ಮೂರನೇ ಅವಧಿಗೆ ನೇಮಿಸಿರುವ ಕುರಿತು ಸಂಪುಟದ ನೇಮಕಾತಿ ಸಮಿತಿಯು ಜೂನ್‌ 10ರಂದೇ ಆದೇಶ ಹೊರಡಿಸಿದೆ. ನೂತನ ಆದೇಶದ ಪ್ರಕಾರ, ಅಜಿತ್‌ ದೋವಲ್‌ ಅವರು ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವವರೆಗೆ ಅಥವಾ ಮುಂದಿನ ಆದೇಶದವರೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಇರಲಿದ್ದಾರೆ. ಇದೇ ನಿಯಮವು ಪಿ.ಕೆ.ಮಿಶ್ರಾ ಅವರಿಗೂ ಅನ್ವಯವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಅಜಿತ್‌ ದೋವಲ್‌ ಅವರು 1968ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದು, ಕೇಂದ್ರ ಸರ್ಕಾರದ ಮಿಲಿಟರಿ, ಇಂಟಲಿಜೆನ್ಸ್‌ ಸೇರಿ ಹಲವು ವಿಭಾಗಗಳಲ್ಲಿ ಮಹತ್ವದ ಸಲಹೆ-ಸೂಚನೆ ನೀಡುತ್ತಾರೆ. ಇನ್ನು ಡಾ.ಪಿ.ಕೆ.ಮಿಶ್ರಾ ಅವರು 1972ರ ಬ್ಯಾಚ್‌ ಅಧಿಕಾರಿಯಾಗಿದ್ದು, ಪಿಎಂಒದ ಪ್ರಮುಖ ನೇಮಕಾತಿಗಳ ಉಸ್ತುವಾರಿ ನೋಡಿಕೊಳ್ಳುತ್ತಾರೆ. ಆಡಳಿತಾತ್ಮಕ ವಿಚಾರಗಳ ಹೊಣೆಯೂ ಇವರದ್ದೇ ಆಗಿದೆ.

ಪಿಎಫ್‌ಐ ನಿಷೇಧದ ಹಿಂದೆಯೂ ಅಜಿತ್‌ ದೋವಲ್‌ ಅವರ ಪಾತ್ರ ದೊಡ್ಡದಿದೆ. ಅಜಿತ್‌ ದೋವಲ್‌ ಅವರು 2022ರಲ್ಲಿ ಎನ್‌ಐಎ ದಾಳಿಗೂ ಐದು ದಿನದ ಮೊದಲೇ ಅಂದರೆ, ಸೆಪ್ಟೆಂಬರ್‌ 17ರಂದು ಪ್ರಮುಖ ಮುಸ್ಲಿಂ ಸಂಘಟನೆಗಳ ಮುಖಂಡರ ಜತೆ ಮಾತುಕತೆ ನಡೆಸಿದ್ದರು. ಎನ್‌ಐಎ, ಇ.ಡಿ, ರಾಜ್ಯ ಪೊಲೀಸರು ಸೆ.22ರಂದು ನಡೆಸುವ ದಾಳಿ, ಪಿಎಫ್‌ಐ ವಿರುದ್ಧ ಕ್ರಮ, ಇದರ ಕುರಿತು ಮುಸ್ಲಿಂ ಸಂಘಟನೆಗಳ ಮುಖಂಡರ ಅಭಿಪ್ರಾಯವೇನು ಎಂಬುದನ್ನು ಸಂಗ್ರಹಿಸಿಯೇ ದಾಳಿ, ನಿಷೇಧ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಷ್ಟೇ ಅಲ್ಲ, ಅಗಸ್ಟಾ ವೆಸ್ಟ್‌ಲ್ಯಾಂಡ್‌ ವಿವಿಐಪಿ ಹೆಲಿಕಾಪ್ಟರ್‌ ಖರೀದಿ ವೇಳೆ 3,600 ಕೋಟಿ ರೂ. ವಂಚನೆ ಪ್ರಕರಣದ ಪ್ರಮುಖ ಆರೋಪಿ ಕ್ರಿಶ್ಟಿಯನ್‌ ಮೈಕೆಲ್‌ನನ್ನು ಭಾರತಕ್ಕೆ ಕರೆತರುವುದು, ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವುದು ಸೇರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೈಗೊಂಡ ಪ್ರಮುಖ ತೀರ್ಮಾನಗಳ ಹಿಂದೆ ಅಜಿತ್‌ ದೋವಲ್‌ ಅವರು ಇದ್ದಾರೆ.

ಇದನ್ನೂ ಓದಿ: NSA Ajit Doval: ಅಜಿತ್‌ ದೋವಲ್‌ ಲಂಡನ್‌ ಭೇಟಿ: ಖಲಿಸ್ತಾನ್‌, ಬಿಬಿಸಿ, ಭಯೋತ್ಪಾದನೆ ವಿಚಾರದಿಂದಾಗಿ ಈ ಬಾರಿ ಮಾತುಕತೆ ಕಠಿಣ

Continue Reading

ದೇಶ

Narendra Modi: ಕಾಶ್ಮೀರಲ್ಲಿ ಉಗ್ರರ ದಾಳಿ ಬೆನ್ನಲ್ಲೇ ದೋವಲ್‌ ಜತೆ ಮೋದಿ ಸಭೆ; ಉಗ್ರರ ನಿರ್ನಾಮಕ್ಕೆ ಸೂಚನೆ!

Narendra Modi: ರಿಯಾಸಿಯಲ್ಲಿ ಉಗ್ರರ ದಾಳಿ ಸೇರಿ ಕಳೆದ ನಾಲ್ಕು ದಿನಗಳಲ್ಲಿ ಮೂರು ಕಡೆ ಉಗ್ರರು ದಾಳಿಗಳನ್ನು ನಡೆಸಿದ್ದಾರೆ. ಇದಾದ ನಂತರ ದೋಡಾದಲ್ಲಿ ಸೇನಾ ನೆಲೆಯ ಮೇಲೆ ಉಗ್ರರು ದಾಳಿ ನಡೆಸಿದ್ದು, ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಇದೇ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, ಕಥುವಾದಲ್ಲಿಯೂ ಉಗ್ರರು ನಡೆಸಿದ ದಾಳಿಯಲ್ಲಿ ಒಬ್ಬ ನಾಗರಿಕ ಮೃತಪಟ್ಟಿದ್ದರು. ಹಾಗಾಗಿ, ಮೋದಿ ಅವರು ಭದ್ರತಾ ಪರಿಶೀಲನೆ ಸಭೆ ನಡೆಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಇತ್ತೀಚೆಗೆ ಉಗ್ರರ ದಾಳಿಗಳು ಜಾಸ್ತಿಯಾಗಿವೆ. ಅದರಲ್ಲೂ, ಯಾತ್ರೆಗೆ ತೆರಳುವ ಹಿಂದುಗಳು, ನಾಗರಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ಮಾಡುತ್ತಿದ್ದು, ಕಣಿವೆಯಲ್ಲಿ ಭದ್ರತೆ ಕುರಿತು ಆತಂಕ ಎದುರಾಗಿದೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸೇರಿ ಹಲವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಕಾಶ್ಮೀರದಲ್ಲಿ ಉಗ್ರರ ನಿರ್ನಾಮಕ್ಕೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ, ಎನ್‌ಎಸ್‌ಎ ಅಜಿತ್‌ ದೋವಲ್‌ ಸೇರಿ ಹಲವು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮೋದಿ ಅವರು ಕಣಿವೆಯ ಭದ್ರತೆಯನ್ನು ಪರಿಶೀಲಿಸಿದರು. ಕಣಿವೆಯಲ್ಲಿ ಶಾಂತಿ ಸ್ಥಾಪನೆಯಾಗಬೇಕು. ಉಗ್ರರ ದಾಳಿಗಳನ್ನು ನಿಗ್ರಹಿಸಬೇಕು. ಗಡಿಯುದ್ದಕ್ಕೂ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಸೂಕ್ಷ್ಮ ನೆಲೆಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಬೇಕು ಎಂದು ಸೂಚಿಸುವ ಜತೆಗೆ ಆಧುನಿಕ ತಂತ್ರಜ್ಞಾನದ ಬಳಕೆ, ಉಗ್ರರ ನಿಗ್ರಹಕ್ಕೆ ಇದುವರೆಗೆ ತೆಗೆದುಕೊಂಡ ಕ್ರಮಗಳ ಕುರಿತು ಕೂಡ ಮೋದಿ ಅವರು ಪರಿಶೀಲನೆ ನಡೆಸಿದರು ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಜೂನ್ 9ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದಲ್ಲಿರುವ ಶಿವ ಖೋರಿ ದೇವಸ್ಥಾನಕ್ಕೆ ಹಿಂದು ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಪಾಕಿಸ್ತಾನದ ಲಷ್ಕರೆ ತಯ್ಬಾ ಉಗ್ರ ಸಂಘಟನೆಯು ದಾಳಿ ನಡೆಸಿದ್ದು, ಉಗ್ರನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅಲ್ಲದೆ, ಉಗ್ರನ ಕುರಿತು ಸುಳಿವು ನೀಡಿದರೆ 20 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

ರಿಯಾಸಿಯಲ್ಲಿ ಉಗ್ರರ ದಾಳಿ ಸೇರಿ ಕಳೆದ ನಾಲ್ಕು ದಿನಗಳಲ್ಲಿ ಮೂರು ಕಡೆ ಉಗ್ರರು ದಾಳಿಗಳನ್ನು ನಡೆಸಿದ್ದಾರೆ. ಇದಾದ ನಂತರ ದೋಡಾದಲ್ಲಿ ಸೇನಾ ನೆಲೆಯ ಮೇಲೆ ಉಗ್ರರು ದಾಳಿ ನಡೆಸಿದ್ದು, ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಇದೇ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, ಕಥುವಾದಲ್ಲಿಯೂ ಉಗ್ರರು ನಡೆಸಿದ ದಾಳಿಯಲ್ಲಿ ಒಬ್ಬ ನಾಗರಿಕ ಮೃತಪಟ್ಟಿದ್ದರು. ಇದರಿಂದಾಗಿ ಕಣಿವೆಯಲ್ಲಿ ಭದ್ರತೆ ಕುರಿತು ಜನರಲ್ಲಿ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ: Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

Continue Reading
Advertisement
Siddaramaiah
ಕರ್ನಾಟಕ4 mins ago

ಸರ್ಕಾರಿ ನೌಕರರಿಗೆ ನಿರಾಸೆ; ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಬಗ್ಗೆ ಯಾವುದೇ ನಿರ್ಣಯ ಇಲ್ಲ!

NEET UG Result 2024
ಶಿಕ್ಷಣ24 mins ago

NEET UG Result 2024: ಏನಿದು ನೀಟ್‌ ವಿವಾದ? ಗ್ರೇಸ್‌ ಅಂಕ ಕೊಟ್ಟಿದ್ಯಾಕೆ? ಮರು ಪರೀಕ್ಷೆ ಮಾಡೋದ್ಯಾಕೆ?

Actor Darshan
ಕರ್ನಾಟಕ32 mins ago

Actor Darshan: ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದ ದರ್ಶನ್‌ ಪುತ್ರ ವಿನೀಶ್;‌ ಪೋಸ್ಟ್‌ನಲ್ಲಿ ಇನ್ನೇನಿದೆ?

Viral Video
ವೈರಲ್ ನ್ಯೂಸ್1 hour ago

Viral Video: ಮಗನಿಗೆ ಮುಸಲ್ಮಾನರ ಕ್ಯಾಪ್‌ ಹಾಕಿದ ನಟಿ; ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ!

Donkey Population In Pak
ವಿದೇಶ1 hour ago

Donkey Population In Pak: ಹೆಚ್ಚುಹೆಚ್ಚು ಕತ್ತೆಗಳನ್ನು ಸಾಕಿ, ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಿ; ಪಾಕ್‌ಗೆ ಚೀನಾ ಸಲಹೆ!

Celebrity Fashion
ಫ್ಯಾಷನ್1 hour ago

Celebrity Fashion: ಬ್ಲೇಜರ್‌ನಲ್ಲಿ ನಟ ಸುದೀಪ್‌ ಪುತ್ರಿ ಸಾನ್ವಿ ಕ್ಲಾಸಿ ಲುಕ್‌!

There is a Taliban government in the state Opposition party leader R Ashok alleges
ಬೆಂಗಳೂರು1 hour ago

R Ashok: ರಾಜ್ಯದಲ್ಲಿರುವುದು ತಾಲಿಬಾನ್‌ ಸರ್ಕಾರ; ಆರ್. ಅಶೋಕ್‌ ಆರೋಪ

Hindu Girl Kidnaping
Latest2 hours ago

Hindu Girl Kidnaping: ಪಾಕ್‌ನಲ್ಲಿ ಹಿಂದೂ ಬಾಲಕಿಯ ಅಪಹರಿಸಿ ಇಸ್ಲಾಂಗೆ ಮತಾಂತರ, ಬಲವಂತದ ಮದುವೆ

Glasses or Lenses
ಆರೋಗ್ಯ2 hours ago

Glasses or Lenses?: ಕನ್ನಡಕವೋ ಕಾಂಟ್ಯಾಕ್ಟ್‌ ಲೆನ್ಸ್‌ ಬೇಕೋ? ಇದನ್ನು ಓದಿ, ನೀವೇ ನಿರ್ಧರಿಸಿ!

SSLC examination-2 to begin from tomorrow at over 700 centres
ಬೆಂಗಳೂರು2 hours ago

SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌