ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯ ಫಲಿತಾಂಶ ಹೊರಬಿದ್ದಿದ್ದು, ಸ್ಪಷ್ಟ ಬಹುಮತದ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ (Narendra Modi) ಇಂದು (ಜೂನ್ 9) ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ (Modi 3.0 Cabinet). ಈ ಕಾರ್ಯಕ್ರಮಕ್ಕೆ ದೇಶ ವಿದೇಶಗಳ ನಾಯಕರು ಭಾಗಿಯಾಗಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಮೋದಿ ಅವರು ಇಂದು ಬೆಳಗ್ಗೆ ಮಹಾತ್ಮ ಗಾಂಧಿ ಮತ್ತು ವಾಜಪೇಯಿ ಸಮಾಧಿ ಬಳಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು.
ಮೊದಲಿಗೆ ರಾಜಘಾಟ್ ಗೆ ತೆರಳಿ, ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದ ಮೋದಿ, ತದನಂತರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು. ರಾಷ್ಯ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಮೋದಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಮೂರು ಸೇನಾಪಡೆಗಳು ಮುಖ್ಯಸ್ಥರು ಮೋದಿ ಅವರಿಗೆ ಸಾಥ್ ನೀಡಿದರು.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಪೂರ್ಣಗೊಂಡಿದೆ. ಏಳು ವಿದೇಶಿ ನಾಯಕರು ಸೇರಿದಂತೆ ಒಟ್ಟು 8,000 ಗಣ್ಯರು ಉಪಸ್ಥಿತರಿರಲಿದ್ದಾರೆ. ಇನ್ನು ಗಣ್ಯರಲ್ಲಿ ವಿವಿಧ ವೃತ್ತಿಪರರು, ಸಾಂಸ್ಕೃತಿಕ ಕಲಾವಿದರು ಸೇರಿದ್ದಾರೆ. ಸಂಜೆ 7:31ರ ಹೊತ್ತಿಗೆ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.
#WATCH | Delhi: PM-designate Narendra Modi arrives at Rajghat to pay tribute to Mahatma Gandhi, ahead of his swearing-in ceremony, to be held today at Rashtrapati Bhawan.
— ANI (@ANI) June 9, 2024
He will take the Prime Minister's oath for the third consecutive term, today at 7:15 PM. pic.twitter.com/L7u5S0uvHo
7 ವಿದೇಶಿ ನಾಯಕರ ಉಪಸ್ಥಿತಿ
ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ: Viral Video: ರೈಲಿನಲ್ಲಿ ಊಟ ಸೇವಿಸುವ ಮುನ್ನ ಎಚ್ಚರ…ಎಚ್ಚರ..! ಭಾರೀ ವೈರಲ್ ಆಗ್ತಿದೆ ಈ ವಿಡಿಯೋ
ಸದ್ಯ ಯಾರಿಗೆಲ್ಲ ಮೋದಿ ಅವರ ಕ್ಯಾಬಿನೆಟ್‌ನಲ್ಲಿ ಸಚಿವ ಸ್ಥಾನ ದೊರೆಯಲಿದೆ ಎನ್ನುವ ಚರ್ಚೆ ಆರಂಭವಾಗಿದೆ. ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಅಮಿತ್ ಶಾ, ರಾಜನಾಥ್ ಸಿಂಗ್ ಜತೆಗೆ ಟಿಡಿಪಿಯ ರಾಮ್ ಮೋಹನ್ ನಾಯ್ಡು, ಲಾಲನ್ ಸಿಂಗ್, ಸಂಜಯ್ ಝಾ, ಜೆಡಿಯುನ ರಾಮನಾಥ್ ಠಾಕೂರ್, ಲೋಕ ಜನ ಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್, ಕರ್ನಾಟಕದ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೇರಿ ಹಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.