ನವದೆಹಲಿ: ಭಾರತದ ನೂತನ ಸಂಸತ್ ಭವನ (New Parliament Building) ಇದೇ ಭಾನುವಾರ (ಮೇ 28) ಲೋಕಾರ್ಪಣೆಗೊಳ್ಳಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನ ನಿರ್ಮಾಣ ಕೆಲಸದಲ್ಲಿ ತೊಡಗಿಸಿಕೊಂಡಿದ್ದ 60,000 ಕೆಲಸಗಾರರನ್ನು ಸನ್ಮಾನಿಸಲಿದ್ದಾರೆ. ಹೀಗೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಹಿತಿ ಕೊಟ್ಟಿದ್ದಾರೆ.
“ಸುಮಾರು 60,000 ಶ್ರಮ ಯೋಗಿಗಳು ಈ ಸಂಸತ್ ಭವನದ ನಿರ್ಮಾಣವನ್ನು ದಾಖಲೆ ಸಮಯದಲ್ಲಿ ಪೂರ್ಣಗೊಳಿಸಲು ಕೊಡುಗೆ ನೀಡಿದ್ದಾರೆ. ಮೇ 28ರಂದು ಪ್ರಧಾನಿ ಮೋದಿ ನೂತನ ಸಂಸತ್ ಭವನವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿಯವರು ಈ ಕಾರ್ಮಿಕರನ್ನು (ಶ್ರಮ ಯೋಗಿಗಳು) ಗೌರವಿಸಲಿದ್ದಾರೆ”ಎಂದು ಅಮಿತ್ ಶಾ ಹೇಳಿದ್ದಾರೆ.
ಇದನ್ನೂ ಓದಿ: PM Narendra Modi: ಮೋದಿ ಭೇಟಿ ಹಿನ್ನೆಲೆಯಲ್ಲಿ ತಿರಂಗಾ ಬಣ್ಣಗಳಲ್ಲಿ ಮಿನುಗಿದ ಸಿಡ್ನಿ ಹಾರ್ಬರ್, ಓಪೇರಾ ಹೌಸ್!
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಲ್ಲಾ ರಾಜಕೀಯ ಪಕ್ಷಗಳಿಗೆ ಹೊಸ ಸಂಸತ್ ಭವನದ ಉದ್ಘಾಟನೆಗೆ ಆಹ್ವಾನಗಳನ್ನು ಕಳುಹಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು.
ಬ್ರಿಟಿಷರಿಂದ ಅಧಿಕಾರದ ಹಸ್ತಾಂತರವನ್ನು ಪ್ರತಿನಿಧಿಸಲು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಸ್ವೀಕರಿಸಿದ ಮತ್ತು ಅಲಹಾಬಾದ್‌ನ ವಸ್ತುಸಂಗ್ರಹಾಲಯದಲ್ಲಿ ಇರಿಸಲಾಗಿದ್ದ ತಮಿಳುನಾಡಿನ ಐತಿಹಾಸಿಕ ರಾಜದಂಡ ‘ಸೆಂಗೊಲ್’ ಅನ್ನು ಹೊಸ ಸಂಸತ್ತಿನ ಕಟ್ಟಡದಲ್ಲಿ ಸ್ಥಾಪಿಸಲಾಗುವುದು ಎಂದು ಅವರು ಘೋಷಿಸಿದರು.
ಇದನ್ನೂ ಓದಿ: ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಕಂಗೊಳಿಸಲಿದೆ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದು ರಾಜದಂಡ?