ಗಾಂಧಿನಗರ: ಇತ್ತೀಚೆಗಷ್ಟೇ ನಡೆದ ಗುಜರಾತ್ ವಿಧಾನಸಭಾ ಚುನಾವಣೆ ಕೇವಲ ಗುಜರಾತ್ಗಷ್ಟೇ ಅಲ್ಲ, ಇಡೀ ದೇಶಕ್ಕೇ ಮಹತ್ವದ್ದಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಯೇ ಗೆದ್ದು ಅಧಿಕಾರಕ್ಕೆ ಬರುತ್ತದೆ ಮತ್ತು ನರೇಂದ್ರ ಮೋದಿಯವರೇ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂಬ ಸಂದೇಶವನ್ನು ಈ ಚುನಾವಣೆ ರವಾನೆ ಮಾಡಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು. ಗುಜರಾತ್ನ ಗಾಂಧಿನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಅಮಿತ್ ಶಾ ‘ಮುಂದಿನ ಅವಧಿಗೂ ನರೇಂದ್ರ ಮೋದಿಯವರೇ ಪ್ರಧಾನಿ’ ಎಂದು ಹೇಳಿದರು.
ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ ‘ಗುಜರಾತ್ ಜನರು ಜಾತೀಯತೆ ಎಂಬ ವಿಷವನ್ನು ತೊಡೆದುಹಾಕಿದ್ದಾರೆ. ಅಷ್ಟೇ ಅಲ್ಲ, ಸುಳ್ಳು, ಖಾಲಿ ಭರವಸೆಗಳನ್ನು ನೀಡುವ ಮೂಲಕ ಆಮಿಷವೊಡ್ಡಿದವರಿಗೆ ಸರಿಯಾಗಿಯೇ ಮುಖಭಂಗ ಮಾಡಿದ್ದಾರೆ. ಗುಜರಾತ್ ರಾಜ್ಯಕ್ಕೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಪಕೀರ್ತಿ ತರಲು ಯತ್ನಿಸಿದವರಿಗೆ ತಕ್ಕ ಶಾಸ್ತಿ ಮಾಡಿದ್ದಾರೆ’ ಎಂದು ಅಮಿತ್ ಶಾ ಹೇಳಿದ್ದಾರೆ.
‘ನನ್ನನ್ನೂ ಸೇರಿಸಿ, ಚುನಾವಣೆ ನಂತರ ಹುಟ್ಟಿದ ಅನೇಕರಿಗೆ ಈ ದೇಶಕ್ಕಾಗಿ ಸಾಯುವ ಅವಕಾಶ ಸಿಗಲಿಲ್ಲ/ಸಿಗುವುದಿಲ್ಲ. ರಕ್ಷಣಾ ಕ್ಷೇತ್ರದಲ್ಲಿ ಇರುವವರನ್ನು ಹೊರತು ಪಡಿಸಿ ನಾನು ಈ ಮಾತುಗಳನ್ನು ಹೇಳುತ್ತಿದ್ದೇನೆ. ಆದರೆ ನಾವು ನಮ್ಮನ್ನು ದೇಶಕ್ಕಾಗಿ ಸಂಪೂರ್ಣವಾಗಿ ಅರ್ಪಿಸಿಕೊಂಡು ಬದುಕುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾವು ನಮ್ಮ ರಾಷ್ಟ್ರವನ್ನು ಇಡೀ ವಿಶ್ವದಲ್ಲೇ ನಂಬರ್ ಒನ್ ಮಾಡುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ: Karnataka Election | ಅಮಿತ್ ಶಾ ರೌಡಿ ಇದ್ದ ಹಾಗೆ, ಒಳಗೊಂದು, ಹೊರಗೊಂದು; ಸಿಪಿವೈ ವೈರಲ್ ಆಡಿಯೊದಲ್ಲಿದೆ ಈ ಹೇಳಿಕೆ