ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರು ತಮ್ಮ ನಿವಾಸ ಆಂಟಿಲಿಯಾ (Antilia)ದಲ್ಲಿ ಶುಕ್ರವಾರ ಆಯೋಜಿಸಿದ್ದ ಆತಿಥ್ಯವನ್ನು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಸ್ವೀಕರಿಸಿದರು. ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ (Nita Ambani) ದಂಪತಿ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಅವರ ವಿವಾಹ ಜುಲೈಯಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಆಗಮಿಸಿದ ಮೋಹನ್ ಭಾಗವತ್ ಅವರನ್ನು ಖುದ್ದು ಮುಕೇಶ್ ಅಂಬಾನಿ, ನೀತಾ ಅಂಬಾನಿ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಸ್ವಾಗತಿಸಿದರು.
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ಜುಲೈ 12ರಂದ್ ಅದ್ಧೂರಿಯಾಗಿ ನೆರವೇರಲಿದ್ದು, ಗಣ್ಯರನ್ನು ಆಮಂತ್ರಿಸಲಾಗುತ್ತಿದೆ. ಮೋಹನ್ ಭಾಗವತ್ ಭೇಟಿ ವೇಳೆ ರಾಧಿಕಾ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡರೆ, ಅನಂತ್ ಕುರ್ತಾ ಮತ್ತು ಜಾಕೆಟ್ ಧರಿಸಿ ಮಿಂಚಿದರು. ನೀತಾ ಅವರು ರೇಷ್ಮೆ ಸೀರೆಯಲ್ಲಿ ಕಾಣಿಸಿಕೊಂಡರೆ ಮುಕೇಶ್ ಅಂಬಾನಿ ಸರಳವಾಗಿ ಪ್ಯಾಂಟ್-ಷರ್ಟ್ ಧರಿಸಿದ್ದರು. ನೀತಾ ಅಂಬಾನಿ ಕೈ ಮುಗಿದು ಮೋಹನ್ ಭಾಗವತ್ ಅವರನ್ನು ಸ್ವಾಗತಿಸಿದರು.
ಕೆಲವು ದಿನಗಳ ಹಿಂದೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಅಂಬಾನಿ ಕುಟುಂಬ ಸದಸ್ಯರು ಆಮಂತ್ರಣ ಪತ್ರಿಕೆ ನೀಡಿದ್ದರು. ಜತೆಗೆ ಸೋಮವಾರ ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮನೆಗೆ ತೆರಳಿದ್ದರು.
#WATCH | Mumbai: Reliance Industries Chairman Mukesh Ambani along with his son Anant Ambani and Radhika Merchant met Maharashtra CM Eknath Shinde and extended the invitation for the wedding of Anant Ambani and Radhika Merchant, scheduled on July 12. pic.twitter.com/BpG0WVBjy3
— ANI (@ANI) June 26, 2024
ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ
ನೀತಾ ಅಂಬಾನಿ ಅವರು ಸೋಮವಾರ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಿ ದೇವರಿಗೆ ಮದುವೆಯ ಆಮಂತ್ರಣ ನೀಡಿದ್ದರು. ದೇವರ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼನಾನು ಈಗಷ್ಟೇ ಬಾಬಾ ಭೋಲೆನಾಥ್ ಅವರ ದರ್ಶನ ಪಡೆದಿದ್ದೇನೆ. ಹಿಂದೂ ಸಂಪ್ರದಾಯದ ಪ್ರಕಾರ ನಾವು ಮೊದಲು ಭಗವಂತನ ಆಶೀರ್ವಾದವನ್ನು ಪಡೆಯುತ್ತೇವೆ. ನಾನು ಬಾಬಾಗೆ ಮದುವೆಯ ಆಮಂತ್ರಣವನ್ನು ನೀಡಿದ್ದೇನೆ. ನನಗೆ ತುಂಬಾ ಸಂತೋಷವಾಗಿದೆ. 10 ವರ್ಷಗಳ ಅನಂತರ ಇಲ್ಲಿಗೆ ಬಂದಿದ್ದೇನೆ. ಅಭಿವೃದ್ಧಿ ಮತ್ತು ಕಾಶಿ ವಿಶ್ವನಾಥ ಕಾರಿಡಾರ್, ನಮೋ ಘಾಟ್, ಸೌರಶಕ್ತಿ ಸ್ಥಾವರಗಳು ಮತ್ತು ಸ್ವಚ್ಛತೆಯನ್ನು ನೋಡಲು ನನಗೆ ಸಂತೋಷವಾಗಿದೆʼʼ ಎಂದು ಹೇಳಿದ್ದರು.
ʼʼ10 ವರ್ಷಗಳ ಹಿಂದೆ ಕಾಶಿ ವಿಶ್ವನಾಥ ದೇವಸ್ಥಾನದ ದರ್ಶನಕ್ಕೆ ಬಂದಿದ್ದೆ. ಇಲ್ಲಿನ ಕುಶಲಕರ್ಮಿಗಳೊಂದಿಗೆ ನನಗೆ ವಿಶೇಷ ಬಾಂಧವ್ಯವಿದೆ. ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ರಿಲಯನ್ಸ್ ಫೌಂಡೇಶನ್ ಮತ್ತು ಸ್ವದೇಶ್ ಮಾಧ್ಯಮದ ಮೂಲಕ ನಾವು ಅವರಿಗೆ ಜಾಗತಿಕ ಮನ್ನಣೆ ಮತ್ತು ಗೌರವವನ್ನು ನೀಡಲು ಬಯಸುತ್ತೇವೆʼʼ ಎಂದು ತಿಳಿಸಿದ್ದರು.
ಜುಲೈ 12ರಂದು ಮದುವೆ
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಆಹ್ವಾನ ಪತ್ರಿಕೆ ರಿಲೀಸ್ ಆಗಿ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?