Site icon Vistara News

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

Monsoon 2024

Monsoon 2024 to arrive in Kerala on May 31, predicts Met department

ನವದೆಹಲಿ: ದೇಶಾದ್ಯಂತ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ (Karnataka) ವರುಣ ಕೃಪೆ ತೋರಿದ ಕಾರಣ (Rain News) ಬಿಸಿಲಿನಿಂದ ಕಂಗೆಟ್ಟಿದ್ದ ಜನ ನಿಟ್ಟುಸಿರು ಬಿಡುವಂತಾಗಿದೆ. ಜನ-ಜಾನುವಾರುಗಳಿಗೆ ನೀರು ಸಿಗುವಂತಾಗಿದೆ. ಬಿತ್ತನೆ ಮಾಡಲು ರೈತರು ಜಮೀನನ್ನು ಹದಗೊಳಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ರೈತರಿಗೆ ಹವಾಮಾನ ಇಲಾಖೆಯು (Met Department) ಸಿಹಿ ಸುದ್ದಿ ನೀಡಿದೆ. ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಮಳೆಯು ದೇಶದ ಕೃಷಿಯ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ, ಈ ಬಾರಿ ವಾಡಿಕೆಗಿಂತ ಒಂದು ದಿನ ಮೊದಲೇ ಅಂದರೆ, ಮೇ 31 ದೇಶವನ್ನು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದು ರೈತರ ಪಾಲಿಗೆ ಸಿಹಿ ಸುದ್ದಿಯೇ ಆಗಿದೆ. ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮುಂಗಾರು ಮಳೆ ಅಂತ್ಯವಾಗಲಿದೆ.

monsoon rain

ರಾಜ್ಯದಲ್ಲಿ ನಾಳೆಯೂ ಭರ್ಜರಿ ಮಳೆ

ಮೇ 16ರಂದು ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 64.5ರಿಂದ 115.5 ಮಿ.ಮೀ ಮಳೆ (Rain News) ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಮೇ 16ರಂದು ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (50-60 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೀದ‌ರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (50-60 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 kmph) ಬೀಸುವ ಸಂಭವವಿದೆ. ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದ ಮೇಲೆ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇಲ್ಲ.

ಇದನ್ನೂ ಓದಿ: Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Exit mobile version