Site icon Vistara News

Monsoon: ವಾಡಿಕೆಗಿಂತ ಮುನ್ನವೇ ಲಗ್ಗೆ ಇಟ್ಟ ಮಾನ್ಸೂನ್‌; ಕೇರಳದಲ್ಲಿ ಮುಂಗಾರು ಆರಂಭ

Mansoon

Monsoon

ನವದೆಹಲಿ: ಈ ಬಾರಿಯ ಮುಂಗಾರು(Mansoon) ಇಂದು ಕೇರಳ(Kerala) ಮತ್ತು ಈಶಾನ್ಯ ರಾಜ್ಯ(North East states)ಗಳಿಗೆ ಲಗ್ಗೆ ಇಟ್ಟಿದೆ. ವಾಡಿಕೆಗಿಂತ ಎರಡು ದಿನ ಮುನ್ನವೇ ಮುಂಗಾರು ಆರಂಭವಾಗಿದೆ. ಈ ಬಾರಿ ಮೇ 30 ಮತ್ತು ಜೂ.1 ರಂದುಮುಂಗಾರು ಮಳೆ ಆಗಬೇಕಾಗಿತ್ತು. ರೆಮಲ್‌ ಚಂಡಮಾರುತ(Remal Cyclone)ದ ಪರಿಣಾಮವಾಗಿ ಕೇರಳ ಮತ್ತು ಜೂ. 5ರಂದು ಈಶಾನ್ಯ ರಾಜ್ಯಗಳಲ್ಲಿ ಈ ಬಾರಿ ವಾಡಿಕೆಗಿಂತ ಮೊದಲೇ ಮಳೆಯಾಗುತ್ತಿದೆ. ಇನ್ನು ಜು.15ರೊಳಗೆ ಇಡೀ ಭಾರತದಲ್ಲಿ ಮುಂಗಾರು ಮಳೆ ಆಗಲಿದೆ.

ಹವಾಮಾನ ತಜ್ಞರ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕೇರಳ ಮತ್ತು ಈಶಾನ್ಯ ಭಾರತದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಸಾಧಾರಣ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕೇರಳ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ರಾಜ್ಯದಲ್ಲಿ ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಾರುತಗಳು (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಗಳು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇದನ್ನೂ ಓದಿ:Viral Video: ಬಾಯ್‌ಫ್ರೆಂಡನ್ನು ಹೆದರಿಸಲು ರೈಲ್ವೇ ಟ್ರ್ಯಾಕ್‌ಗೆ ಇಳಿದಳು.. ಆಮೇಲೆ ಆಗಿದ್ದೇ ಬೇರೆ! ಶಾಕಿಂಗ್‌ ವಿಡಿಯೋ ನೋಡಿ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೇಲೆ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 22 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Exit mobile version