Site icon Vistara News

Monsoon Session | ಸಂಸತ್ತಿನ ಮುಂಗಾರು ಅಧಿವೇಶನ ಜು.18 ರಿಂದ ಆರಂಭ

monsoon session

ನವ ದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ (Monsoon Session) ಜುಲೈ 18 ರಿಂದ ಪ್ರಾರಂಭವಾಗಲಿದೆ. ಆಗಸ್ಟ್‌ ೧೨ರ ವರೆಗೆ ನಡೆಯಲಿದೆ. ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಹುದ್ದೆಗಳಿಗೆ ಚುನಾವಣೆ ನಡೆಯುವ ಹೊತ್ತಿನಲ್ಲಿಯೇ ಈ ಅಧಿವೇಶನ ನಡೆಯುತ್ತಿರುವುದು ವಿಶೇಷವಾಗಿದೆ.

ಲೋಕ ಸಭೆ ಮತ್ತು ರಾಜ್ಯ ಸಭೆಯ ಕಲಾಪಗಳು ಒಟ್ಟು ೧೮ ದಿನ ನಡೆಯಲಿದ್ದು, ಬೆಳಗ್ಗೆ ೧೧ ಗಂಟೆಗೆ ಆರಂಭವಾಗಲಿದೆ ಎಂದು ಲೋಕಸಭಾ ಕಾರ್ಯದರ್ಶಿ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾನ್ಯವಾಗಿ, ಪ್ರತಿ ವರ್ಷ ಮುಂಗಾರು ಅಧಿವೇಶನವು ಜುಲೈ ಮೂರನೇ ವಾರದಲ್ಲಿ ಪ್ರಾರಂಭವಾಗುತ್ತದೆ ಮತ್ತು ಸ್ವಾತಂತ್ರ್ಯ ದಿನದ ಹಿಂದಿನ ದಿನ ಮುಕ್ತಾಯಗೊಳ್ಳುತ್ತದೆ. ವಾಡಿಕೆಯಂತೆ ಈ ವರ್ಷವೂ ಜುಲೈ 3ನೇ ವಾರವೇ ಮುಂಗಾರು ಅಧಿವೇಶನ ಆರಂಭವಾಗಲಿದೆ.

ಈ ಬಾರಿಯ ಅಧಿವೇಶನದಲ್ಲಿ ಎಷ್ಟು ಮಸೂದೆಗಳನ್ನು ಮಂಡಿಸಲಾಗುತ್ತದೆ ಎಂದು ಸರ್ಕಾರ ಇನ್ನೂ ತಿಳಿಸಿಲ್ಲ. ಆದರೆ ಅಗ್ನಿಪಥ್‌ ಯೋಜನೆ, ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ, ನಿರುದ್ಯೋಗ ಸಮಸ್ಯೆ ಹೆಚ್ಚಳ, ರೂಪಾಯಿ ಮೌಲ್ಯ ಕುಸಿತ, ಉದಯಪುರ ಹತ್ಯೆ ಪ್ರಕರಣ ಸೇರಿದಂತೆ ಅನೇಕ ಪ್ರಮುಖ ವಿಷಯಗಳ ಕುರಿತು ಗಂಭೀರ ಚರ್ಚೆ ನಡೆಯಲಿದೆ.

Exit mobile version