Site icon Vistara News

Rain news: ಭಾರೀ ಮಳೆ ಎಫೆಕ್ಟ್; 700 ರೈಲುಗಳು ಸಂಚಾರ ಸ್ಥಗಿತ!

Train

ನವದೆಹಲಿ: ವ್ಯಾಪಕ ಮಳೆಯು (Rain) ರೈಲು ಸಂಚಾರದ (Train Transport) ಮೇಲೂ ಪರಿಣಾಮ ಬೀರಿದೆ. ರೈಲ್ವೆ ಇಲಾಖೆಯು ಜುಲೈ 7ರಿಂದ 15ರ ನಡುವೆ ಒಟ್ಟು 300 ಮೇಲ್ ಮತ್ತು ಎಕ್ಸ್‌ಪ್ರೆಸ್ ಮತ್ತು 406 ಪ್ಯಾಸೇಂಜರ್ ಟ್ರೈನ್‌ಗಳ ಸಂಚಾರವನ್ನು ರದ್ದುಗೊಳಿಸಿದೆ(Trains Cancelled). ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರೈಲು ಹಳಿಗಳು ನೀರಲ್ಲಿ ಮುಳುಗಿದ್ದೇ ಒಟ್ಟಾರೆ 700ಕ್ಕೂ ಅಧಿಕ ರೈಲುಗಳ ಸಂಚಾರ ರದ್ದಾಗಲು ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ(Rain News).

ಹಳಿಗಳು ಜಲಾವೃತ್ತದ ಪರಿಣಾಮ ಒಟ್ಟಾರೆ 600 ಮೇಲ್ ಮತ್ತು ಎಕ್ಸ್‌ಪ್ರೆಸ್ ಹಾಗೂ 500 ಪ್ಯಾಸೇಂಜರ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿ ತಿಳಇಸಿದ್ದಾರೆ. ಈಶಾನ್ಯ ಭಾರತದಲ್ಲಿ ಶನಿವಾರದಿಂದ ವ್ಯಾಪಕ ಮಳೆಯಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರ್, ಉತ್ತರಾಖಂಡ, ಹಿಮಾಚಲ ಪ್ರದೇಶ, ಹರ್ಯಾಣ, ಉತ್ತರ ಪ್ರದೇಶ, ರಾಜಸ್ಥಾನಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇದರ ಪರಿಣಾಮ ಈ ಭಾಗದ ಎಲ್ಲ ನದಿಗಳು, ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಮೂಲಸೌಕರ್ಯಗಳು ಹಾಳಾಗುತ್ತಿವೆ. ಜಮ್ಮು ಮತ್ತು ಕಾಶ್ಮೀರ್, ಹಿಮಾಚಲ ಪ್ರದೇಶ, ಉತ್ತರಾಖಂಡ ಹಾಗೂ ಪಂಜಾಬ್‌ಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಈ ಸುದ್ದಿಯನ್ನೂ ಓದಿ:Bengaluru airport trains : ಬೆಂಗಳೂರು ಏರ್‌ಪೋರ್ಟ್‌ಗೆ ರೈಲು ಸಂಚಾರ ಸ್ಥಗಿತ, ಕಾರಣವೇನು?

ಉತ್ತರ ರೈಲ್ವೆಯು ಸುಮಾರು 300 ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ರದ್ದು ಮಾಡಿದೆ. 191 ರೈಲುಗಳ ಮಾರ್ಗಗಳನ್ನು ಬದಲಿಸಲಾಗಿದೆ. ಅಲ್ಪಾವಧಿಗೆ ಸುಮಾರು 100 ರೈಲು ಸಂಚಾರವನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version