ಭೋಪಾಲ್: ಮಧ್ಯಪ್ರದೇಶದಲ್ಲಿ ಆದಿವಾಸಿ ಕಾರ್ಮಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ (MP Urinating Case) ಪ್ರವೇಶ್ ಶುಕ್ಲಾ ಎಂಬ ದುರುಳನನ್ನು ಬಂಧಿಸಲಾಗಿದೆ. ಪ್ರಕರಣ ನಡೆಯುತ್ತಲೇ ಅಧಿಕಾರಿಗಳಿಗೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕ್ಷಿಪ್ರವಾಗಿ ಕ್ರಮ ತೆಗೆದುಕೊಂಡಿದ್ದಾರೆ. ಹಾಗೆಯೇ, ಅಕ್ರಮವಾಗಿ ನಿರ್ಮಿಸಿದ ಪ್ರವೇಶ್ ಶುಕ್ಲಾ ಮನೆಯನ್ನೂ ಧ್ವಂಸಗೊಳಿಸಲಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶ ಅಪರಾಧಿಗಳಿಗೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.
“ಮಧ್ಯಪ್ರದೇಶದಲ್ಲಿ ಅಪರಾಧ ಎಸಗುವವರು 10 ಬಾರಿ ಯೋಚಿಸಬೇಕು. ಇಲ್ಲದಿದ್ದರೆ ಮಾಮಾಜಿ ಸರ್ಕಾರವು (ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಜನ ಮಾಮಾಜಿ ಎಂದು ಕರೆಯುತ್ತಾರೆ) ಅಪರಾಧ ಎಸಗುವವರನ್ನು 10 ಅಡಿ ಆಳದ ಭೂಮಿಯಲ್ಲಿ ಹೂತು ಹಾಕುತ್ತದೆ” ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಕಚೇರಿಯು ಟ್ವೀಟ್ ಮಾಡುವ ಮೂಲಕ ಅಪರಾಧ ಎಸಗುವವರಿಗೆ ಎಚ್ಚರಿಕೆ ನೀಡಿದೆ. ಅಕ್ರಮವಾಗಿ ನಿರ್ಮಿಸಿದ ಪ್ರವೇಶ್ ಮಿಶ್ರಾ ಮನೆಯನ್ನು ಈಗಾಗಲೇ ಬುಲ್ಡೋಜರ್ ಮೂಲಕ ಧ್ವಂಸಗೊಳಿಸಿದ್ದು, ಅಪರಾಧಿಗಳಿಗೆ ತಕ್ಕ ಪಾಠ ಕಲಿಸಲಿದ್ದೇವೆ ಎಂಬ ಸಂದೇಶ ರವಾನಿಸಲಾಗಿದೆ.
ಚೌಹಾಣ್ ಕಚೇರಿ ಟ್ವೀಟ್
एनएसए लगा दिया गया है, बुलडोजर भी चला दिया गया है और अगर जरूरत पड़ी तो मामा जी अपराधियों को 10 फुट जमीन के नीचे भी गाड़ देंगे।
— Office of Shivraj (@OfficeofSSC) July 5, 2023
मामाजी का संदेश साफ है, इसलिए गलत मंशा वालों मध्यप्रदेश में अपराध करने से पहले 10 बार सोच लेना। https://t.co/x1SUjRuUGb
ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆಯನ್ನು ಖಂಡಿಸಿದ್ದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು, ಆರೋಪಿಯ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ಪ್ರಕರಣ ದಾಖಲಿಸುವಂತೆ ಸೂಚಿಸಿದ್ದರು. ಈ ಘಟನೆಯ 10 ದಿನಗಳ ಹಿಂದೆ ಸಿಧಿ ಜಿಲ್ಲೆಯ ಕುಬ್ರಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿತ್ತು. ಸಾಮಾಜಿಕ ಜಾಲತಾಣಗಳಲ್ಲಂತೂ ಹೆಚ್ಚಿನ ಆಕ್ರೋಶ ವ್ಯಕ್ತವಾಗಿತ್ತು. ಎನ್‌ಎಸ್‌ಎ ಪ್ರಕರಣ ದಾಖಲಾದ ಬಳಿಕ ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಆದಿವಾಸಿ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ, ಬಿಜೆಪಿ ಶಾಸಕನ ಆಪ್ತ ರಾತ್ರೋರಾತ್ರಿ ಅರೆಸ್ಟ್
ಶಾಸಕನ ಪ್ರತಿನಿಧಿ ಹೌದು ಎಂದ ಪ್ರವೇಶ್ ಶುಕ್ಲಾ ತಂದೆ
ಆದಿವಾಸಿ ಕಾರ್ಮಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರವೇಶ್ ಶುಕ್ಲಾ ಬಿಜೆಪಿ ಮುಖಂಡ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಹಾಗೆಯೇ, ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ, ಪ್ರವೇಶ್ ಶುಕ್ಲಾ ತಂದೆ ರಮಾಕಾಂತ್ ಶುಕ್ಲಾ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ಪ್ರವೇಶ್ ಶುಕ್ಲಾ ಬಿಜೆಪಿ ಶಾಸಕ ಕೇದಾರ್ ಶುಕ್ಲಾ ಅವರ ಪ್ರತಿನಿಧಿ ಎಂದು ತಿಳಿಸಿದ್ದಾರೆ. “ನನ್ನ ಮಗ ಶಾಸಕ ಕೇದಾರ್ ಶುಕ್ಲಾ ಅವರ ಪ್ರತಿನಿಧಿಯಾಗಿದ್ದಾನೆ. ಹಾಗಾಗಿಯೇ, ಆತನ ವಿರುದ್ಧ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಪ್ರಕರಣದಲ್ಲಿ ನ್ಯಾಯ ಗೆಲ್ಲಲಿ” ಎಂದು ಹೇಳಿದ್ದಾರೆ.
ದೇಶದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ