ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಮುಖ್ಯಸ್ಥ, ದೇಶದ ಆಗರ್ಭ ಶ್ರೀಮಂತ ಮುಕೇಶ್ ಅಂಬಾನಿ (Mukesh Ambani) ಅವರ ಪುತ್ರ ಅನಂತ್ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚಂಟ್ (Radhika Merchant) ಅವರ ವಿವಾಹಕ್ಕೆ ದಿನಗಣನೆ ಆರಂಭವಾಗಿದೆ. ಜುಲೈ 12ರಂದು ಮುಂಬೈನಲ್ಲಿರುವ ಜಿಯೋ ವರ್ಲ್ಡ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಜೋಡಿಯು ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. ಹಾಗಾಗಿ, ಗುರುವಾರ (ಜುಲೈ 4) ಮುಕೇಶ್ ಅಂಬಾನಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರನ್ನು ಭೇಟಿಯಾಗಿ, ಮಗನ ಮದುವೆಗೆ ಆಹ್ವಾನಿಸಿದ್ದಾರೆ.
ನವದೆಹಲಿಯ 10 ಜನಪಥದಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿದ ಮುಕೇಶ್ ಅಂಬಾನಿ ಅವರು ಕಾಂಗ್ರೆಸ್ ನಾಯಕಿಯನ್ನು ಮದುವೆಗೆ ಆಹ್ವಾನಿಸಿದ್ದಾರೆ. ಅದ್ಧೂರಿಯಾಗಿ ನಡೆಯುವ ವಿವಾಹ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ನೂರಾರು ರಾಜಕಾರಣಿಗಳು, ಬಾಲಿವುಡ್ ನಟ-ನಟಿಯರು, ಕ್ರಿಕೆಟಿಗರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಬಹುತೇಕ ಜನರಿಗೆ ಮುಕೇಶ್ ಅಂಬಾನಿ ಅವರ ಕುಟುಂಬದಿಂದ ವಿವಾಹ ಆಮಂತ್ರಣ ಪತ್ರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.
#WATCH | Delhi: Industrialist Mukesh Ambani leaves from 10 Janpath (the residence of Congress Parliamentary Party Chairperson Sonia Gandhi).
— ANI (@ANI) July 4, 2024
As per sources, he has presented Sonia Gandhi, an invitation card to the wedding of his son Anant Ambani. pic.twitter.com/tycvHQzNr0
ಜುಲೈ 12ರಂದು ನಡೆಯುವ ಅದ್ಧೂರಿ ವಿವಾಹ ಸಮಾರಂಭಕ್ಕೆ ಮುನ್ನುಡಿಯಾಗಿ ಜುಲೈ 2ರಂದು ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಸುಮಾರು 50 ಬಡ ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿ ಮಾದರಿಯಾಗಿದ್ದಾರೆ. ಮುಂಬೈಯಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಫಾಲ್ಘರ್‌ನಲ್ಲಿ ಈ ಸಾಮೂಹಿಕ ವಿವಾಹ ನೆರವೇರಿತು. ರಿಲಯನ್ಸ್ ಕಾರ್ಪೋರೇಟ್ ಪಾರ್ಕ್‌ನಲ್ಲಿ ನಡೆದ ಈ ವಿವಾಹ ಸಮಾರಂಭದಲ್ಲಿ ಆರ್ಥಿಕವಾಗಿ ಹಿಂದುಳಿದ 50 ಜೋಡಿಗಳು ಹಸೆಮಣೆ ಏರಿದವು.
Anant Ambani and Radhika’s Wedding to be held in Mumbai on 12th July at the Jio World Convention Centre in BKC. Wedding to be performed in accordance with the traditional Hindu Vedic way.
— ANI (@ANI) May 30, 2024
The main wedding ceremonies will start on Friday, 12th July with the auspicious Shubh… pic.twitter.com/YKnaAIAs7o
ಈ ಸಾಮೂಹಿಕ ವಿವಾಹದಲ್ಲಿ ವಧು-ವರರ ಕುಟುಂಬದ ಸುಮಾರು 800 ಮಂದಿ ಪಾಲ್ಗೊಂಡಿದ್ದರು. ಸ್ವತಃ ಮುಕೇಶ್ ಅಂಬಾನಿ, ನೀತಾ ಅಂಬಾನಿ, ಆಕಾಶ್ ಅಂಬಾನಿ, ಶ್ಲೋಕ ಮೆಹ್ತಾ, ಇಶಾ ಅಂಬಾನಿ, ಆನಂದ್ ಪಿರಮಾಲ್ ಆಗಮಿಸಿ ನೂತನ ವಧು-ವರರನ್ನು ಹಾರೈಸಿದರು.
ಪ್ರತಿ ಜೋಡಿಗೆ ಚಿನ್ನದ ಉಂಗುರ, ಮಂಗಳ ಸೂತ್ರ, ಮೂಗುತ್ತಿ ಉಡುಗೊರೆಯಾಗಿ ನೀಡಲಾಯಿತು. ಜತೆಗೆ ಬೆಳ್ಳಿಯ ಆಭರಗಳನ್ನೂ ನೀಡಲಾಗಿದೆ. ಜತೆಗೆ ಸ್ತ್ರೀಧನವಾಗಿ ಪ್ರತಿ ವಧುವಿಗೆ 1.01 ಲಕ್ಷ ರೂ. ಚೆಕ್ ಅನ್ನು ಅಂಬಾನಿ ಕುಟುಂಬಸ್ಥರು ವಿತರಿಸಿದ್ದಾರೆ. ಮಾತ್ರವಲ್ಲ ಪ್ರತಿ ಜೋಡಿಗೆ ಒಂದು ವರ್ಷಕ್ಕೆ ಅಗತ್ಯವಾದ ದಿನಸಿ ಸಾಮಗ್ರಿಗಳನ್ನೂ ವಿತರಿಸಲಾಗಿದೆ. ಇದು ಪಾತ್ರೆ ಪರಿಕರಗಳು, ಗ್ಯಾಸ್ ಸ್ಟವ್, ಮಿಕ್ಸಿ, ಫ್ಯಾನ್, ಹಾಸಿಗೆ ಮತ್ತು ತಲೆ ದಿಂಬುಗಳನ್ನು ಒಳಗೊಂಡಿದೆ. ಅದ್ಧೂರಿ ಭೋಜನದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಈ ವೇಳೆ ವರ್ಲಿ ಬುಡಕಟ್ಟು ಜನಾಂಗದವರು ಪ್ರದರ್ಶಿಸಿದ ಸಾಂಪ್ರದಾಯಿಕ ತಾರ್ಪ ನೃತ್ಯವನ್ನು ಅತಿಥಿಗಳು ಮತ್ತು ಅಂಬಾನಿ ಕುಟುಂಬದ ಸದಸ್ಯರು ವೀಕ್ಷಿಸಿದರು.
ಇದನ್ನೂ ಓದಿ: Anant Ambani: ಅನಂತ್ ಅಂಬಾನಿ ಬಳಿ ಇವೆ 300 ಕೋಟಿಯ ವಾಚ್‌ಗಳು! ಎಂಥೆಂಥ ಗಡಿಯಾರಗಳಿವೆ ನೋಡಿ!