ನವದೆಹಲಿ: 32 ವರ್ಷಗಳ ಹಿಂದಿನ ಅವದೇಶ್ ರೈ ಮರ್ಡರ್ ಪ್ರಕರಣಕ್ಕೆ (Murder Case) ಸಂಬಂಧಿಸಿದಂತೆ ಗ್ಯಾಂಗಸ್ಟರ್ ರಾಜಕಾರಣಿ ಮುಖ್ತಾರ್ ಅನ್ಸಾರಿಯನ್ನು (Mukhtar Ansari) ದೋಷಿ ಎಂದು ವಾರಾಣಸಿಯ ಕೋರ್ಟ್ ಹೇಳಿದೆ. ಸೋಮವಾರ ಮಧ್ಯಾಹ್ನ 2 ಗಂಟೆಗೆ ತೀರ್ಪು ಪ್ರಕಟಿಸಿದ ವಾರಾಣಸಿ ಕೋರ್ಟ್, ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.
ಅನ್ಸಾರಿ ಅವರು 1991ರಲ್ಲಿ ರಾಜಕೀಯವಾಗಿ ಪ್ರಾಮುಖ್ಯತೆ ಪಡೆಯುತ್ತಿರುವಾಗಲೇ, ಅವರ ವಿರುದ್ಧ ಕಾಂಗ್ರೆಸ್ ಮುಖಂಡರ ಕೊಲೆ ಆರೋಪವನ್ನು ಹೊರಿಸಲಾಗಿತ್ತು. 1991 ಆಗಸ್ಟ್ 3 ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅಜಯ್ ರೈ ಅವರ ಸಹೋದರ ಅವಧೇಶ್ ರೈ ಅವರನ್ನು ವಾರಣಾಸಿಯಲ್ಲಿ ರೈ ಅವರ ಮನೆಯ ಹೊರಗೆ ಗುಂಡಿಕ್ಕಿ ಕೊಲ ಮಾಡಲಾಗಿತ್ತು. ಈ ಕೊಲೆ ನಡೆದಾಗ ಮುಕ್ತಾರ್ ಅನ್ಸಾರಿ ಅವರು ಶಾಸಕರಾಗಿರಲಿಲ್ಲ. ಈ ಕೊಲೆ ಪ್ರಕರಣದ ಎಫ್‌ಐಆರ್‌ನಲ್ಲಿ ಮುಖ್ತಾರ್ ಅನ್ಸಾರಿ, ಭೀಮ್ ಸಿಂಗ್, ಮಾಜಿ ಶಾಸಕ ಅಬ್ದುಲ್ ಕಲೀಂ ಮತ್ತು ಇತರ ಇಬ್ಬರನ್ನು ಹೆಸರಿಸಲಾಗಿತ್ತು.
ಮುಖ್ತಾರಿ ಅನ್ಸಾರಿ ಒಟ್ಟು 61 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಈ ಪೈಕಿ ಐದನೇ ಕೇಸಿನಲ್ಲಿ ಅವರಿಗೆ ಈಗ ಶಿಕ್ಷೆಗೆ ಒಳಪಟ್ಟಿದ್ದಾರೆ. ಉತ್ತರ ಪ್ರದೇಶದ ವಿವಿಧ ಕೋರ್ಟುಗಳಲ್ಲಿ ಇನ್ನೂ 20 ಪ್ರಕರಣಗಳು ವಿಚಾರಣೆಗೆ ಬಾಕಿ ಇವು. ಐದು ಬಾರಿ ಶಾಸಕನಾಗಿದ್ದ ಅನ್ಸಾರಿ, ಕಳೆದ ಏಪ್ರಿಲ್ ತಿಂಗಳಲ್ಲಿ ಮತ್ತೊಂದು ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸಲಾಗಿತ್ತು.
ಇತ್ತೀಚೆಗಷ್ಟೇ ಅನ್ಸಾರಿಗೆ ಸೇರಿದ ಮನೆ ನೆಲಸಮ ಮಾಡಿದ್ದ ಉತ್ತರ ಪ್ರದೇಶ ಸರ್ಕಾರ
ರಾಜಕಾರಣಿ ಹಾಗೂ ಜೈಲು ಶಿಕ್ಷೆ ಅನುಭವಿಸುತ್ತಿರುವ ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿಯ (Mukthar Ansari) ಮಕ್ಕಳಿಗೆ ಸೇರಿದ ಎರಡು ಅಂತಸ್ತಿನ ಮನೆಯನ್ನು ಉತ್ತರ ಪ್ರದೇಶದ ಪೊಲೀಸರು ಮಾರ್ಚ್ ತಿಂಗಳಲ್ಲಿ ನೆಲಸಮ ಮಾಡಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶದ ಪ್ರಕಾರ ಕ್ರಮ ಕೈಗೊಂಡಿರುವ ಪೊಲೀಸರು ಮನೆಯನ್ನು ಸಂಪೂರ್ಣವಾಗಿ ನೆಲಸಮಗೊಳಿಸಿದ್ದರು. ಮುಖ್ತಾರ್ ಅನ್ಸಾರಿಯ ಮಕ್ಕಳಾದ ಅಬ್ಬಾಸ್ ಹಾಗೂ ಉಮರ್ ಅನ್ಸಾರಿಯ ಮಕ್ಕಳಿಗೆ ಸೇರಿದ್ದ ಕಟ್ಟಡವನ್ನು ನೆಲಸಮ ಮಾಡುವಂತೆ ಕೋರ್ಟ್ ಆದೇಶ ನೀಡಿತ್ತು. ಅದರಂತೆ ಕಾರ್ಯಾಚರಣೆ ಆರಂಭಿಸಿ ಶನಿವಾರ ಮುಗಿಸಲಾಗಿದೆ ಎಂದು ವಲಯ ಅಧಿಕಾರಿ ಅಭಯ್ ಸಿಂಗ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Mukhtar Ansari: ಬಿಜೆಪಿ ಶಾಸಕನ ಹತ್ಯೆ ಕೇಸ್; ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು
ಮುಖ್ತಾರಿ ಅನ್ಸಾರಿ ಬೇರೆಯವರಿಗೆ ಸೇರಿದ್ದ ಜಮೀನಿನಲ್ಲಿ ಮನೆ ಕಟ್ಟಿದ್ದರು. ಅಲ್ಲದೆ ಮನೆ ಕಟ್ಟುವ ಮೊದಲು ಸಂಬಂಧಿಸಿದ ಅಧಿಕಾರಿಗಳಿಂದ ಅನುಮೋದನೆ ಕೂಡ ಪಡೆದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ. ಮುಖ್ತಾರ್ ಅನ್ಸಾರಿ ಜೈಲು ಸೇರಿರುವ ಜತೆಗೆ ಪುತ್ರ ಅಬ್ಬಾಸ್ ಕೂಡ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ) ಪಕ್ಷದ ಶಾಸಕರಾಗಿದ್ದ ಅವರು ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ.