ಮುಂಬೈ: ನಿನ್ನೆ ಮುಂಬೈನಲ್ಲಿ ನಡೆದ ಡ್ರಂಕ್ ಆಂಡ್ ಡ್ರೈವ್(Mumbai Hit And Run) ಕೇಸ್‌ನ ಪ್ರಮುಖ ಆರೋಪಿ ಶಿವಸೇನೆ ಮುಖಂಡನ ಪುತ್ರ ಘಟನೆಗೂ ಮುನ್ನ ಪಬ್‌ನಿಂದ ಹೋರಬರುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ(Video Viral) ವೈರಲ್ ಆಗಿದೆ. ಆರೋಪಿ ಮಿಹಿರ್ ಶಾ ತನ್ನ ಸ್ನೇಹಿತರೊಂದಿಗೆ ಪಬ್‌ನಿಂದ ಹೊರಬಂದು ಬಿಎಂಡಬ್ಲ್ಯೂ ಕಾರಿನಲ್ಲಿ ತೆರಳುತ್ತಿರುವುದನ್ನು ಸಿಸಿಟಿವಿ(CCTV Footage) ದೃಶ್ಯಾವಳಿಯಲ್ಲಿ ಕಾಣಬಹುದಾಗಿದೆ.
ನಿನ್ನೆ ಮುಂಬೈನ ವೊರ್ಲಿಯಲ್ಲಿ ರಾಜೇಶ್ ಶಾ (Rajesh Shah) ಅವರ ಪುತ್ರ ಮಿಹಿರ್ ಶಾ (Mihir Shah) ಕುಡಿದು ವಾಹನ ಚಲಾಸುವಾಗ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದು, ಮಹಿಳೆ ಮೃತಪಟ್ಟಿದ್ದಾರೆ. ಆಕೆಯ ಪತಿಯು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ 24 ವರ್ಷದ ಮಿಹಿರ್ ಶಾ ಪರಾರಿಯಾಗಿದ್ದ, ಬಳಿಕ ಪೊಲೀಸರು ಅವನ ತಂದೆಯನ್ನು ವಶಪಡಿಸಿಕೊಂಡಿದ್ದಾರೆ.
#Video Of Sena Leader's Son Leaving Pub Just Before BMW Crash Goes Viral https://t.co/My9R7tobI9 pic.twitter.com/t0FIFzs31f
— NDTV (@ndtv) July 8, 2024
ಕಾವೇರಿ ನಖ್ವಾ ಮತ್ತು ಪ್ರದೀಕ್ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದಿದ್ದು, ಕೂಡಲೇ ಮಿಹಿರ್ ಶಾ ಎಸ್ಕೇಪ್ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್ ಡಾಕ್ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ. ಕಾರು ಡಿಕ್ಕಿಯಗುತ್ತಿದ್ದಂತೆ ರಸ್ತೆಗೆ ಬಿದ್ದಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಕಾವೇರಿ ಮತ್ತು ಪ್ರದೀಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾವೇರಿ ಕೊನೆಯುಸಿರೆಳೆದಿದ್ದಾರೆ.
ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮಿಹಿರ್ ಶಾ ನಾಪತ್ತೆಯಾಗಿದ್ದ. ಮಿಹಿರ್ ಶಾ ತನ್ನ ಫೋನನ್ನೂ ಸ್ವಿಚ್ ಆಫ್ ಮಾಡಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದರು. ಮಿಹಿರ್ ಪೊಲೀಸರಿಗೆ ಹೆದರಿ ತನ್ನ ಪ್ರೇಯಸಿ ಮನೆಯಲ್ಲಿ ಅವಿತಿದ್ದ. ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ. ಪೊಲೀಸರ ಪ್ರಕಾರ ಮಿಹಿರ್ ಕಳೆದ ರಾತ್ರಿ ಜೂಹೂ ಪ್ರದೇಶದಲ್ಲಿರುವ ಬಾರ್‌ನಲ್ಲಿ ಕಂಠಪೂರ್ತಿ ಕುಡಿದಿದ್ದು. ತನ್ನ ಮನೆಗೆ ಹಿಂದಿರುಗುವ ವೇಳೆ ಲಾಂಗ್ ಡ್ರೈವ್ ಕರೆದುಕೊಂಡು ಹೋಗುವಂತೆ ಡ್ರೈವರ್‌ಗೆ ಹೇಳಿದ್ದಾನೆ. ವರ್ಲಿಗೆ ತಲುಪುತ್ತಿದ್ದಂತೆ ತಾನು ಕಾರು ಚಲಾಯಿಸುವುದಕ್ಕೆ ಮುಂದಾಗಿದ್ದಾನೆ. ಆಗ ಅತ್ಯಂತ ವೇಗವಾಗಿ ಕಾರು ಚಲಾಯಿಸಿದ ಮಿಹಿರ್, ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.
ಇನ್ನು ಘಟನೆ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾತ್ ಶಿಂಧೆ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ದುರಾದೃಷ್ಟಕರವಾದುದು. ಕಾನೂನಿನ ಎದುರು ಎಲ್ಲರೂ ಸಮಾನ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಪೊಲೀಸರು ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ