ಮುಂಬೈ: ೨೬/೧೧ ಮಾದರಿಯಲ್ಲಿ ದಾಳಿ ಮಾಡುವುದಾಗಿ ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ (Terror Alert) ರವಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸಿಟಿ ಕ್ರೈಂ ಬ್ರ್ಯಾಂಚ್ ತಂಡವು ವಿರಾರ್ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್‌ನ ವಾಟ್ಸ್ಯಾಪ್ ಸಂಖ್ಯೆಗೆ ಪಾಕ್ ಮೂಲದ ಸಂಖ್ಯೆಯಿಂದ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಪಾಕಿಸ್ತಾನದ ೧೦ ಉಗ್ರರು ೨೬/೧೧ರ ಮಾದರಿಯಲ್ಲೇ ದಾಳಿ ನಡೆಸುತ್ತಾರೆ ಎಂದು ಎಚ್ಚರಿಕೆ ನೀಡಲಾಗಿತ್ತು. ಇದಾದ ಬಳಿಕ ಪೊಲೀಸರು, ತನಿಖಾ ಸಂಸ್ಥೆಗಳು ಅಲರ್ಟ್ ಆಗಿದ್ದವು. ಈಗ ಪ್ರಕರಣದಲ್ಲಿ ಒಬ್ಬನನ್ನು ಬಂಧಿಸಲಾಗಿದೆ.
ಪೊಲೀಸರಿಗೆ ಮಾಹಿತಿ ತಲುಪುತ್ತಲೇ ಹೈ ಅಲರ್ಟ್ ಘೋಷಿಸಲಾಗಿತ್ತು. ಗೃಹ ಸಚಿವ ದೇವೇಂದ್ರ ಫಡ್ನವಿಸ್ ಅವರೇ ಪ್ರಕರಣದ ಕುರಿತು ಮಾಹಿತಿ ನೀಡಿದ್ದರು. ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದ್ದರು.
ಇದನ್ನೂ ಓದಿ | Terror Alert | 26/11ರ ಮಾದರಿಯಲ್ಲಿ ದಾಳಿ ಎಂದು ಮುಂಬೈ ಪೊಲೀಸರಿಗೆ ಮೆಸೇಜ್, ಹೈ ಅಲರ್ಟ್ ಘೋಷಣೆ