Site icon Vistara News

Muslim Students: ಭಾರತದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಮುಸ್ಲಿಮ್ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ

Muslim Students

ನವದೆಹಲಿ: ಉನ್ನತ ಶಿಕ್ಷಣ (Higher Education) ಪಡೆಯುತ್ತಿರುವ ಮುಸ್ಲಿಮ್ ವಿದ್ಯಾರ್ಥಿಗಳ (Muslim Students) ಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಸರ್ಕಾರವು (Central Government) ರಾಜ್ಯಸಭೆಗೆ (Rajya Sabha) ತಿಳಿಸಿದೆ. 2016-17ರ ಶೈಕ್ಷಣಿಕ ಸಾಲಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 17.39 ಲಕ್ಷ ಮುಸ್ಲಿಮ್ ವಿದ್ಯಾರ್ಥಿಗಳು ದಾಖಲಾಗಿದ್ದರು. ಆ ಪ್ರಮಾಣವು 2020-21ರ ಸಾಲಿಗೆ 19.22 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯ ಸಚಿವ ಸುಭಾಶ್ ಸರ್ಕಾರ್ (Union Minister of State for Education Subhas Sarkar) ಅವರು ರಾಜ್ಯಸಭೆಗೆ ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯದ ಶಿಕ್ಷಕರ ಸಂಖ್ಯೆಯು 2016-17ರಲ್ಲಿ 67,215 ರಿಂದ 2020-21ರಲ್ಲಿ 86,314ಕ್ಕೆ ಗಣನೀಯವಾಗಿ ಏರಿಕೆಯಾಗಿದೆ ಎಂದು ಸಚಿವರು ಇದೇ ವೇಳೆ ರಾಜ್ಯಸಭೆಗೆ ಮಾಹಿತಿ ನೀಡಿದರು. ಲಿಖಿತ ಪ್ರಶ್ನೆಗೆ ಉತ್ತರ ಒದಗಿಸಿದ ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯ ಸಚಿವ ಸುಭಾಶ್ ಸರ್ಕಾರ್ ಅವರು, ಅಖಿಲ ಭಾರತ ಉನ್ನತ ಶಿಕ್ಷಣ ಸಮೀಕ್ಷೆಯ ಕುರಿತಾದ ಅಂಕಿಸಂಖ್ಯೆಗಳ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

2020-21ರ ಸಾಲಿನ ಉನ್ನತ ಶಿಕ್ಷಣದ ಅಖಿಲ ಭಾರತ ಸಮೀಕ್ಷೆ(AISHE)ಯ ಪ್ರಕಾರ, 2016-17 ರಲ್ಲಿ 17.39 ಲಕ್ಷ ಮುಸ್ಲಿಮ್ ವಿದ್ಯಾರ್ಥಿಗಳ ದಾಖಲಾತಿಯು 2020-21ರ ಹೊತ್ತಿಗೆ 19.22 ಲಕ್ಷಕ್ಕೆ ಏರಿದೆ. ಮುಸ್ಲಿಂ ಸಮುದಾಯದ ಶಿಕ್ಷಕರ ಸಂಖ್ಯೆಯು ಕೂಡ ಹೆಚ್ಚಳವಾಗಿದೆ. ಈ ಸಮೀಕ್ಷೆಯ ಪ್ರಕಾರ, 2016-17 ರಲ್ಲಿದ್ದ ಮುಸ್ಲಿಮ್ ಶಿಕ್ಷರ ಸಂಖ್ಯೆ 67,215 ರಿಂದ 2020-21 ರಲ್ಲಿ 86,314ಕ್ಕೆ ಗಮನಾರ್ಹ ಏರಿಕೆಯಾಗಿದೆ ಎಂದು ಕೇಂದ್ರ ಶಿಕ್ಷಣ (education news) ಇಲಾಖೆಯ ರಾಜ್ಯ ಸಚಿವ ಸುಭಾಶ್ ಸರ್ಕಾರ್ ರಾಜ್ಯಸಭೆಗೆ ತಿಳಿಸಿದರು.

ಈ ಸುದ್ದಿಯನ್ನೂ ಓದಿ: Education News : ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಶುಲ್ಕ ಮರುಪಾವತಿ ನೀತಿ ಜಾರಿಗೆ ಯುಜಿಸಿ ಸೂಚನೆ

ಅಲ್ಪಸಂಖ್ಯಾತ ಸಮುದಾಯದಲ್ಲಿ ಉನ್ನತ ಶಿಕ್ಷಣ ಪಡೆಯಲು ಸರ್ಕಾರವು ಸಾಕಷ್ಟು ಉತ್ತೇಜನ ನೀಡುತ್ತಿದೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ದೇಶದಾದ್ಯಂತ ಬೌದ್ಧ, ಕ್ರಿಶ್ಚಿಯನ್, ಜೈನ್, ಮುಸ್ಲಿಂ, ಸಿಖ್ ಮತ್ತು ಝೋರಾಸ್ಟ್ರಿಯನ್ – ಆರು ಅಧಿಸೂಚಿತ ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಗೆ ಮೂರು ಶೈಕ್ಷಣಿಕ ಸಬಲೀಕರಣ ಯೋಜನೆಗಳನ್ನು ಜಾರಿಗೊಳಿಸುತ್ತದೆ ಎಂದು ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯ ಸಚಿವ ಸುಭಾಶ್ ಸರ್ಕಾರ್ ಹೇಳಿದ್ದಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version