ನನ್ನ ಅಮ್ಮ ಎಷ್ಟು ಅಸಾಧಾರಣಳೋ, ಅಷ್ಟೇ ಸರಳ... ತಾಯಿಯ ನೂರನೇ ಜನ್ಮದಿನ ನೂರೆಂಟು ನೆನಪು ಹರವಿಟ್ಟ ಪ್ರಧಾನಿ ಮೋದಿ - Vistara News

ದೇಶ

ನನ್ನ ಅಮ್ಮ ಎಷ್ಟು ಅಸಾಧಾರಣಳೋ, ಅಷ್ಟೇ ಸರಳ… ತಾಯಿಯ ನೂರನೇ ಜನ್ಮದಿನ ನೂರೆಂಟು ನೆನಪು ಹರವಿಟ್ಟ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ತಾಯಿ ಹೀರಾಬೆನ್‌ ಅವರ ನೂರನೇ ಜನ್ಮ ದಿನದ ಸಂದರ್ಭ ಆಶೀರ್ವಾದ ಪಡೆದಿದ್ದಾರೆ. ಅಮ್ಮನ ಜೀವನ ಮೌಲ್ಯಗಳನ್ನು ಬ್ಲಾಗ್‌ನಲ್ಲಿ ಭಾವ ಪೂರ್ಣವಾಗಿ ಬರೆದಿದ್ದಾರೆ.

VISTARANEWS.COM


on

modi mother
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಂಧಿ ನಗರ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ವಿಶೇಷ ದಿನ. ಅವರ ತಾಯಿ ಹೀರಾಬೆನ್ ಅವರ ನೂರನೇ ಜನ್ಮದಿನದ ಅವಿಸ್ಮರಣೀಯ ದಿನ. ಹೀಗಾಗಿ ಗಾಂಧಿನಗರದಲ್ಲಿರುವ ನಿವಾಸಕ್ಕೆ ಬೆಳಗ್ಗೆಯೇ ತೆರಳಿ ಅಮ್ಮನ ಪಾದಪೂಜೆ ನೆರವೇರಿಸಿ ಕೆಲ ಹೊತ್ತು ಸ್ಮರಣೀಯ ಕ್ಷಣಗಳನ್ನು ಕಳೆದರು. ಎಂದಿನಂತೆ ಹೀರಾಬೆನ್‌ ಅವರೂ ವಾತ್ಸಲ್ಯದಿಂದ ಆಶೀರ್ವದಿಸಿದರು. ಸಿಹಿ ತಿನ್ನಿಸಿದರು. ದೇಶಕ್ಕೆ ಪ್ರಧಾನಿಯಾದರೂ, ತಾಯಿಗೆ ಮಗನಲ್ಲವೇ. ಭಾರತೀಯರು ತಾಯಿಗೆ “ಮಾತೃ ದೇವೋಭವʼ ಎಂದು ಎಲ್ಲರಿಗಿಂತ ಮಿಗಿಲಾದ ಉನ್ನತ ಹಾಗೂ ಪೂಜ್ಯ ಸ್ಥಾನಮಾನವನ್ನು ಮತ್ತು ಶ್ರೇಷ್ಠ ಮೌಲ್ಯವನ್ನು ಪ್ರಾಚೀನ ಕಾಲದಿಂದಲೇ ನೀಡಿದ್ದಾರೆ. ತಾಯಿಯಲ್ಲಿ ದೇವರನ್ನು ಕಾಣುವುದು ಭಾರತದ ಸಂಸ್ಕೃತಿಯೂ ಹೌದು.

ಪ್ರಧಾನಿ ಮೋದಿ ಅವರು ಪ್ರತಿ ವರ್ಷವೂ ತಾಯಿ ಹೀರಾಬೆನ್‌ ಅವರ ಜನ್ಮ ದಿನ ಎಲ್ಲಿದ್ದರೂ ತಪ್ಪದೆ ಮನೆಗೆ ಬಂದು ಅಮ್ಮನ ಆಶೀರ್ವಾದ ಪಡೆಯುತ್ತಾರೆ. ಅಮ್ಮ ಎಂದರೆ ಮೋದಿಯವರಿಗೆ ತುಂಬ ಪ್ರೀತಿ ಮತ್ತು ಹೆಮ್ಮೆ. ಈ ಹಿಂದೆ ಹಲವಾರು ಸಂದರ್ಭಗಳಲ್ಲಿ ಮೋದಿಯವರು ಅಮ್ಮನ ಬಗ್ಗೆ ಭಾವಪೂರ್ಣವಾಗಿ ಪ್ರಸ್ತಾಪಿಸಿದ್ದಾರೆ. ಆದರೆ ಈ ಸಲ ಪ್ರಧಾನಿ ಮೋದಿಯವರು ತಾಯಿಯ ಸರಳ ಸ್ವಭಾವ, ಕಷ್ಟ ಸಹಿಷ್ಣುತೆ, ತ್ಯಾಗ, ಅವರ ಜೀವನದಲ್ಲಿ ಉಂಡ ಕಡುಬಡತನದ ದಿನಗಳು, ಮಕ್ಕಳನ್ನು ಬೆಳೆಸಲು ತಾಯಿ ಹೀರಾಬೆನ್‌ ಪಟ್ಟ ಬವಣೆ ಎಲ್ಲವನ್ನೂ ತೆರೆದಿಟ್ಟ ಪುಸ್ತಕದಂತೆ ತಮ್ಮ ಬ್ಲಾಗ್‌ನಲ್ಲಿ ವಿವರಿಸಿದ್ದಾರೆ. ಇದಕ್ಕಿಂತ ಮುಖ್ಯವಾಗಿ ಅವರು ಕೇವಲ ವೈಯಕ್ತಿಕ ಬದುಕಿನ ಕಥೆಯನ್ನು ಹೇಳಿದ್ದಲ್ಲ, ಇಡೀ ದೇಶದ ಸಮಸ್ತ ತಾಯಂದಿರ ಹೃದಯ ವೈಶಾಲ್ಯತೆಯನ್ನು ಸಮೀಕರಿಸಿದ್ದಾರೆ. ನಿಮ್ಮ ತಾಯಿ ಕೂಡ ನನ್ನ ತಾಯಿಯ ಹಾಗೆ ಎಂಬುದು ನನಗೆ ಖಾತರಿ ಇದೆ ಎನ್ನುವ ಮೂಲಕ ಎಲ್ಲ ತಾಯಂದರಿಗೂ ಪ್ರಧಾನಿ ಮೋದಿ ಗೌರವ ಸಲ್ಲಿಸಿದ್ದಾರೆ. ಈ ಮೂಲಕ “ಮಾತೃ ದೇವೊಭವʼದ ಆದರ್ಶವನ್ನು ಸಾರಿದ್ದಾರೆ.

ಹೀರಾಬೆನ್‌ ಅವರನ್ನು ಹೀರಾಬಾ ಎಂದೂ ಕರೆಯುತ್ತಾರೆ. ಹಾಗಾದರೆ ಬ್ಲಾಗ್‌ ಬರಹದಲ್ಲಿ ಮೋದಿಯವರು ಅಮ್ಮನ ಬಗ್ಗೆ ಏನು ಹೇಳಿದ್ದಾರೆ? ನೋಡೋಣ ಬನ್ನಿ.

ನನ್ನಲ್ಲಿರುವ ಒಳ್ಳೆಯತನಕ್ಕೆ ಹೆತ್ತವರೇ ಕಾರಣ

ನನ್ನ ಅಮ್ಮ ಶ್ರೀಮತಿ ಹೀರಾಬಾ ನೂರನೇ ವರ್ಷಕ್ಕೆ ಕಾಲಿಡುತ್ತಿರುವುದನ್ನು ಹಂಚಿಕೊಳ್ಳಲು ನನಗೆ ಅತ್ಯಂತ ಸಂತೋಷವಾಗುತ್ತಿದೆ. ಇದು ಅವರ ಜನ್ಮ ಶತಮಾನೋತ್ಸವ ವರ್ಷ. ನನ್ನ ತಂದೆ ಬದುಕಿದ್ದರೆ ಅವರೂ ಕಳೆದ ವಾರ ನೂರನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ತಾಯಿಯ ಶತಮಾನೋತ್ಸವ ವರ್ಷ ಆರಂಭವಾಗುತ್ತಿರುವುದರಿಂದ ಮತ್ತು ನನ್ನ ತಂದೆಯವರು ಶತಮಾನೋತ್ಸವವನ್ನು ಪೂರ್ಣಗೊಳಿಸುತ್ತಿದ್ದರಿಂದ 2022 ಒಂದು ವಿಶೇಷ ವರ್ಷ.

ಕಳೆದ ವಾರವಷ್ಟೇ, ನನ್ನ ಸೋದರ ಸಂಬಂಧಿಯು ಗಾಂಧಿನಗರದಲ್ಲಿರುವ ನನ್ನ ತಾಯಿಯ ಕೆಲವು ವೀಡಿಯೊಗಳನ್ನು ಕಳುಹಿಸಿದ್ದರು. ಕೆಲವು ಯುವಕರು ಮನೆಗೆ ಬಂದಿದ್ದರು, ತಂದೆಯ ಭಾವಚಿತ್ರವನ್ನು ಕುರ್ಚಿಯ ಮೇಲೆ ಇಡಲಾಗಿತ್ತು, ಕೀರ್ತನೆ ನಡೆಯುತ್ತಿತ್ತು ಮತ್ತು ತಾಯಿ ಮಂಜೀರ ನುಡಿಸುತ್ತಾ ಭಜನೆಯಲ್ಲಿ ಮಗ್ನರಾಗಿದ್ದರು. ಅಮ್ಮ ಇನ್ನೂ ಹಾಗೆಯೇ ಇದ್ದಾರೆ – ವಯೋಸಹಜತೆಯಿಂದ ದೈಹಿಕವಾಗಿ ಕ್ಷೀಣಿಸಿರಬಹುದು, ಆದರೆ ಮಾನಸಿಕವಾಗಿ ಆಕೆ ಎಂದಿನಂತೆಯೇ ಚುರುಕಾಗಿದ್ದಾರೆ.

ನಮ್ಮ ಕುಟುಂಬದಲ್ಲಿ ಹುಟ್ಟುಹಬ್ಬವನ್ನು ಆಚರಿಸುವ ಪದ್ಧತಿ ಇರಲಿಲ್ಲ. ಆದರೆ, ನನ್ನ ತಂದೆಯ ಜನ್ಮದಿನದಂದು ಅವರ ನೆನಪಿಗಾಗಿ ಯುವ ಪೀಳಿಗೆಯ ಮಕ್ಕಳು 100 ಗಿಡಗಳನ್ನು ನೆಟ್ಟರು.

ನನ್ನ ಜೀವನದಲ್ಲಿ ನಡೆದ ಒಳ್ಳೆಯದಕ್ಕೆ ಮತ್ತು ನನ್ನಲ್ಲಿರುವ ಒಳ್ಳೆಯತನಕ್ಕೆ ನನ್ನ ಹೆತ್ತವರೇ ಕಾರಣ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಇಂದು, ದೆಹಲಿಯಲ್ಲಿ ಕುಳಿತಿರುವ ನನಗೆ ಹಿಂದಿನ ನೆನಪುಗಳು ತುಂಬಿ ಬರುತ್ತವೆ.

ನನ್ನ ತಾಯಿ ಎಷ್ಟು ಅಸಾಧಾರಣಳೋ ಅಷ್ಟೇ ಸರಳ, ಎಲ್ಲಾ ತಾಯಂದಿರಂತೆ!. ನಾನು ನನ್ನ ತಾಯಿಯ ಬಗ್ಗೆ ಬರೆಯುವಾಗ, ನಿಮ್ಮಲ್ಲಿ ಅನೇಕರಿಗೆ ನಿಮ್ಮ ತಾಯಂದಿರ ಬಗ್ಗೆ ಹೇಳಿದಂತೆಯೂ ಆಗಬಹುದು ಎಂದು ನನಗೆ ಖಾತ್ರಿಯಿದೆ. ಇದನ್ನು ಓದುವಾಗ, ನೀವು ನಿಮ್ಮ ಸ್ವಂತ ತಾಯಿಯ ಚಿತ್ರವನ್ನೇ ನೋಡಬಹುದು.

ಬಾಲ್ಯದಲ್ಲೇ ಅಮ್ಮನನ್ನು ಕಳೆದುಕೊಂಡಿದ್ದ ಹೀರಾಬೆನ್‌

ನನ್ನ ತಾಯಿ ಗುಜರಾತ್‌ನ ಮೆಹ್ಸಾನಾದ ವಿಸ್ನಗರದಲ್ಲಿ ಜನಿಸಿದರು, ಇದು ನನ್ನ ತವರು ವಡ್ನಾಗರಕ್ಕೆ ಬಹಳ ಹತ್ತಿರದಲ್ಲಿದೆ. ಆಕೆಗೆ ಸ್ವಂತ ತಾಯಿಯ ವಾತ್ಸಲ್ಯ ಸಿಗಲಿಲ್ಲ. ನನ್ನ ತಾಯಿಯು ಎಳೆವಯಸ್ಸಿನಲ್ಲಿಯೇ ನನ್ನ ಅಜ್ಜಿಯನ್ನು ಸ್ಪ್ಯಾನಿಷ್ ಫ್ಲೂ ಸಾಂಕ್ರಾಮಿಕ ರೋಗದಿಂದಾಗಿ ಕಳೆದುಕೊಂಡರು. ಆಕೆಗೆ ನನ್ನ ಅಜ್ಜಿಯ ಮುಖವಾಗಲಿ, ಅವಳ ಮಡಿಲಿನ ನೆಮ್ಮದಿಯಾಗಲಿ ನೆನಪಿಲ್ಲ. ಬಾಲ್ಯವನ್ನು ತನ್ನ ತಾಯಿಯಿಲ್ಲದೆ ಕಳೆದರು. ನಾವೆಲ್ಲರೂ ಮಾಡುವಂತೆ ಅವರು ತನ್ನ ತಾಯಿಯ ಮೇಲೆ ಕೋಪತಾಪ ತೋರಿಸಲು ಸಾಧ್ಯವಾಗಲಿಲ್ಲ. ನಮ್ಮೆಲ್ಲರಂತೆ ಅವರಿಗೆ ತನ್ನ ತಾಯಿಯ ಮಡಿಲಿನಲ್ಲಿ ಮಲಗಲಾಗಲಿಲ್ಲ. ಶಾಲೆಗೆ ಹೋಗಿ ಓದು ಬರಹ ಕಲಿಯಲೂ ಆಗಲಿಲ್ಲ. ಆಕೆಯ ಬಾಲ್ಯವು ಬಡತನ ಮತ್ತು ಕಷ್ಟದಿಂದ ಕೂಡಿತ್ತು.

ಇಂದಿಗೆ ಹೋಲಿಸಿದರೆ ಅಮ್ಮನ ಬಾಲ್ಯ ಅತ್ಯಂತ ಕಷ್ಟಕರವಾಗಿತ್ತು. ಬಹುಶಃ, ದೇವರು ಆಕೆಗೆ ನೀಡಿದ್ದು ಇದನ್ನೇ ಅನ್ನಿಸುತ್ತದೆ. ಇದು ದೇವರ ಇಚ್ಛೆ ಎಂದು ತಾಯಿಯೂ ನಂಬುತ್ತಾರೆ. ಆದರೆ ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡು, ತಾಯಿಯ ಮುಖವನ್ನೂ ನೋಡಲಾಗಲಿಲ್ಲವಲ್ಲ ಎಂಬ ಕೊರಗು ಆಕೆಗೆ ನೋವು ನೀಡುತ್ತಲೇ ಇದೆ.
ಈ ಹೆಣಗಾಟಗಳಿಂದಾಗಿ ತಾಯಿಯು ಬಾಲ್ಯವನ್ನು ಅನುಭವಿಸಲಾಗಲಿಲ್ಲ, ಆಕೆಯು ತನ್ನ ವಯಸ್ಸಿಗೆ ಮೀರಿ ಬೆಳೆಯುವಂತೆ ಮಾಡಿತು. ಕುಟುಂಬದಲ್ಲಿ ಹಿರಿಯ ಮಗುವಾಗಿದ್ದ ಅವರು ಮದುವೆಯ ನಂತರ ಹಿರಿಯ ಸೊಸೆಯಾದರು. ಆಕೆಯ ಬಾಲ್ಯದಲ್ಲಿ, ಇಡೀ ಕುಟುಂಬವನ್ನು ನೋಡಿಕೊಳ್ಳುತ್ತಿದ್ದರು ಮತ್ತು ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಿದ್ದರು. ಮದುವೆಯ ನಂತರವೂ ಆಕೆ ಈ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸಿದರು. ದುರ್ಭರವಾದ ಜವಾಬ್ದಾರಿಗಳು ಮತ್ತು ದೈನಂದಿನ ಹೋರಾಟಗಳ ಹೊರತಾಗಿಯೂ, ತಾಯಿ ಇಡೀ ಕುಟುಂಬವನ್ನು ಸಹನೆ ಮತ್ತು ಸ್ಥೈರ್ಯದಿಂದ ಒಟ್ಟಿಗೆ ಹಿಡಿದಿಟ್ಟರು.

ಮಳೆಗೆ ಸೋರುತ್ತಿದ್ದ ಪುಟ್ಟ ಗುಡಿಸಲೇ ಮನೆ

ಅಮ್ಮನ ಬಾಲ್ಯ ಅತ್ಯಂತ ಕಷ್ಟಕರವಾಗಿತ್ತು. ಬಹುಶಃ, ದೇವರು ಆಕೆಗೆ ನೀಡಿದ್ದು ಇದನ್ನೇ ಅನ್ನಿಸುತ್ತದೆ. ಇದು ದೇವರ ಇಚ್ಛೆ ಎಂದು ತಾಯಿಯೂ ನಂಬುತ್ತಾರೆ. ಆದರೆ ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡು, ತಾಯಿಯ ಮುಖವನ್ನೂ ನೋಡಲಾಗಲಿಲ್ಲವಲ್ಲ ಎಂಬ ಕೊರಗು ಆಕೆಗೆ ನೋವು ನೀಡುತ್ತಲೇ ಇದೆ.
ಈ ಹೆಣಗಾಟಗಳಿಂದಾಗಿ ತಾಯಿಯು ಬಾಲ್ಯವನ್ನು ಅನುಭವಿಸಲಾಗಲಿಲ್ಲ, ಆಕೆಯು ತನ್ನ ವಯಸ್ಸಿಗೆ ಮೀರಿ ಬೆಳೆಯುವಂತೆ ಮಾಡಿತು. ಕುಟುಂಬದಲ್ಲಿ ಹಿರಿಯ ಮಗುವಾಗಿದ್ದ ಅವರು ಮದುವೆಯ ನಂತರ ಹಿರಿಯ ಸೊಸೆಯಾದರು. ಆಕೆಯ ಬಾಲ್ಯದಲ್ಲಿ, ಇಡೀ ಕುಟುಂಬವನ್ನು ನೋಡಿಕೊಳ್ಳುತ್ತಿದ್ದರು ಮತ್ತು ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಿದ್ದರು. ಮದುವೆಯ ನಂತರವೂ ಆಕೆ ಈ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸಿದರು. ದುರ್ಭರವಾದ ಜವಾಬ್ದಾರಿಗಳು ಮತ್ತು ದೈನಂದಿನ ಹೋರಾಟಗಳ ಹೊರತಾಗಿಯೂ, ತಾಯಿ ಇಡೀ ಕುಟುಂಬವನ್ನು ಸಹನೆ ಮತ್ತು ಸ್ಥೈರ್ಯದಿಂದ ಒಟ್ಟಿಗೆ ಹಿಡಿದಿಟ್ಟರು.

ವಡ್ನಾಗರದಲ್ಲಿ, ನಮ್ಮ ಕುಟುಂಬವು ಶೌಚಾಲಯ ಅಥವಾ ಸ್ನಾನದ ಮನೆಯಂತಹ ಐಷಾರಾಮಗಳಿರಲಿ, ಕಿಟಕಿಯೂ ಇಲ್ಲದ ಪುಟ್ಟ ಮನೆಯಲ್ಲಿ ವಾಸಿಸುತ್ತಿತ್ತು. ಮಣ್ಣಿನ ಗೋಡೆಗಳು ಮತ್ತು ಮಣ್ಣಿನ ಹೆಂಚುಗಳ ಛಾವಣಿಯಿದ್ದ ಒಂದು ಕೋಣೆಯನ್ನೇ ನಾವು ನಮ್ಮ ಮನೆ ಎಂದು ಕರೆಯುತ್ತಿದ್ದೆವು. ನಾವೆಲ್ಲರೂ-ನನ್ನ ಹೆತ್ತವರು, ನನ್ನ ಒಡಹುಟ್ಟಿದವರು ಮತ್ತು ನಾನು ಅದರಲ್ಲಿಯೇ ಇದ್ದೆವು.

ಬೆಳಗ್ಗೆ ನಾಲ್ಕು ಗಂಟೆಗೆ ದಿನಚರಿ ಶುರು

ಗಡಿಯಾರದ ಗಂಟೆ ಬಾರಿಸಿದಂತೆ, ನನ್ನ ತಂದೆ ಬೆಳಗ್ಗೆ ನಾಲ್ಕು ಗಂಟೆಗೆ ಕೆಲಸಕ್ಕೆ ಹೋಗುತ್ತಿದ್ದರು. ಅವರ ಹೆಜ್ಜೆ ಸಪ್ಪಳವು ಅಕ್ಕಪಕ್ಕದವರಿಗೆ ಈಗ ನಾಲ್ಕು ಗಂಟೆಯಾಗಿದೆ ಮತ್ತು ದಾಮೋದರ್ ಕಾಕಾ ಕೆಲಸಕ್ಕೆ ಹೋಗುತ್ತಿದ್ದಾರೆ ಎಂದು ಹೇಳುತ್ತಿದ್ದವು. ತನ್ನ ಪುಟ್ಟ ಚಹಾ ಅಂಗಡಿಯನ್ನು ತೆರೆಯುವ ಮೊದಲು ಸ್ಥಳೀಯ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವುದು ಅವರ ಮತ್ತೊಂದು ದೈನಂದಿನ ಆಚರಣೆಯಾಗಿತ್ತು.

ತಾಯಿಯೂ ಅಷ್ಟೇ ಸಮಯಪಾಲನೆ ಮಾಡುತ್ತಿದ್ದರು. ಅವರು ಕೂಡ ನನ್ನ ತಂದೆಯೊಂದಿಗೆ ಏಳುತ್ತಿದ್ದರು ಮತ್ತು ಬೆಳಗ್ಗೆಯೇ ಅನೇಕ ಕೆಲಸಗಳನ್ನು ಮುಗಿಸುತ್ತಿದ್ದರು. ಕಾಳುಗಳನ್ನು ಅರೆಯುವುದರಿಂದ ಹಿಡಿದು ಅಕ್ಕಿ ಮತ್ತು ಬೇಳೆಯನ್ನು ಜರಡಿ ಹಿಡಿಯುವವರೆಗೆ ತಾಯಿಗೆ ಯಾರದೇ ನೆರವಿರಲಿಲ್ಲ. ಕೆಲಸ ಮಾಡುವಾಗ ಆಕೆ ತನ್ನ ನೆಚ್ಚಿನ ಭಜನೆ ಮತ್ತು ಸ್ತೋತ್ರಗಳನ್ನು ಗುನುಗುತ್ತಿದ್ದರು. 

ಕೆಲ ಮನೆಗಳಲ್ಲಿ ಪಾತ್ರೆ ತೊಳೆಯುತ್ತಿದ್ದ ಅಮ್ಮ

ಮನೆಯ ಖರ್ಚನ್ನು ನಿಭಾಯಿಸಲು ತಾಯಿ ಕೆಲವು ಮನೆಗಳಲ್ಲಿ ಪಾತ್ರೆಗಳನ್ನು ತೊಳೆಯುತ್ತಿದ್ದರು. ನಮ್ಮ ಅಲ್ಪ ಆದಾಯಕ್ಕೆ ಪೂರಕವಾಗಿ ಚರಖಾದಲ್ಲಿ ನೂಲುತ್ತಿದ್ದರು. ಹತ್ತಿ ಬಿಡಿಸುವುದರಿಂದ ಹಿಡಿದು ನೂಲುವವರೆಗೆ ಎಲ್ಲವನ್ನೂ ಮಾಡುತ್ತಿದ್ದರು. ಇಂತಹ ಕಷ್ಟದ ಕೆಲಸದ ನಡುವೆಯೂ ಹತ್ತಿಗಿಡದ ಮುಳ್ಳು ನಮಗೆ ಚುಚ್ಚದಂತೆ ಕಾಳಜಿ ವಹಿಸುತ್ತಿದ್ದರು.

ಮಳೆಗಾಲದಲ್ಲಿ ಸೋರುತ್ತಿದ್ದ ಛಾವಣಿ

ತಾಯಿ ಇತರರ ಮೇಲೆ ಅವಲಂಬಿತರಾಗುತ್ತಿರಲಿಲ್ಲ ಅಥವಾ ಇತರರನ್ನು ತನ್ನ ಕೆಲಸ ಮಾಡುವಂತೆ ಕೇಳುತ್ತಿರಲಿಲ್ಲ. ಮುಂಗಾರು ಮಳೆಯು ನಮ್ಮ ಮಣ್ಣಿನ ಮನೆಗೆ ಅದರದೇ ಆದ ಸಮಸ್ಯೆಗಳನ್ನು ತರುತ್ತಿತ್ತು. ಆದಾಗ್ಯೂ, ನಮಗೆ ತೊಂದರೆಗಳು ಆದಷ್ಟು ಕಡಿಮೆಯಾಗುವಂತೆ ತಾಯಿ ನೋಡಿಕೊಳ್ಳುತ್ತಿದ್ದರು. ಜೂನ್ ತಿಂಗಳ ಬಿಸಿಲಿನಲ್ಲಿ, ಅವಳು ನಮ್ಮ ಮಣ್ಣಿನ ಮನೆಯ ಛಾವಣಿಯ ಮೇಲೆ ಹತ್ತಿ ಹೆಂಚುಗಳನ್ನು ಸರಿಪಡಿಸುತ್ತಿದ್ದಳು. ಆದರೆ, ಆಕೆಯ ಈ ಎಲ್ಲ ಪ್ರಯತ್ನಗಳ ಹೊರತಾಗಿಯೂ, ನಮ್ಮ ಮನೆಯು ಮಳೆಯ ಆರ್ಭಟವನ್ನು ತಡೆದುಕೊಳ್ಳಲಾರದಷ್ಟು ಹಳೆಯದಾಗಿತ್ತು.

ಮನೆಗೆಲಸದಲ್ಲಿ ಒಪ್ಪ ಓರಣ

ತಾಯಿ ಮನೆಯನ್ನು ಒಪ್ಪವಾಗಿಡಲು ಇಷ್ಟಪಡುತ್ತಿದ್ದರು ಮತ್ತು ಅದನ್ನು ಸ್ವಚ್ಛಗೊಳಿಸಲು ಮತ್ತು ಸುಂದರಗೊಳಿಸಲು ಸಾಕಷ್ಟು ಸಮಯವನ್ನು ಕಳೆಯುತ್ತಿದ್ದರು. ಹಸುವಿನ ಸಗಣಿಯಿಂದ ನೆಲವನ್ನು ಸಾರಿಸುತ್ತಿದ್ದರು. ಹಸುವಿನ ಸಗಣಿಯ ಬೆರಣಿಯನ್ನು ಉರಿಸಿದಾಗ ಹೆಚ್ಚಿನ ಹೊಗೆ ಬರುತ್ತಿತ್ತು. ತಾಯಿ ನಮ್ಮ ಕಿಟಕಿಗಳಿಲ್ಲದ ಮನೆಯಲ್ಲಿ ಅದರಲ್ಲಿಯೇ ಅಡುಗೆ ಮಾಡುತ್ತಿದ್ದರು! ಗೋಡೆಗಳು ಮಸಿಯಿಂದ ಕಪ್ಪಾಗುತ್ತಿದ್ದವು ಮತ್ತು ಅವುಗಳಿಗೆ ಹೊಸ ಸುಣ್ಣ ಹೊಡೆಯುವ ಅಗತ್ಯವಿರುತ್ತಿತ್ತು. ಇದನ್ನೂ ತಾಯಿ ಕೆಲವು ತಿಂಗಳಿಗೊಮ್ಮೆ ಸ್ವತಃ ಮಾಡುತ್ತಿದ್ದರು. ಇದು ನಮ್ಮ ಪಾಳುಬಿದ್ದ ಮನೆಗೆ ತಾಜಾತನದ ಪರಿಮಳವನ್ನು ನೀಡುತ್ತಿತ್ತು. ಮನೆಯನ್ನು ಅಲಂಕರಿಸಲು ಸಾಕಷ್ಟು ಚಿಕ್ಕ ಮಣ್ಣಿನ ಬಟ್ಟಲುಗಳನ್ನೂ ಮಾಡುತ್ತಿದ್ದರು ಮತ್ತು ಮನೆಯ ಹಳೆಯ ವಸ್ತುಗಳನ್ನು ಮರುಬಳಕೆ ಮಾಡುವಲ್ಲಿ ಪ್ರಸಿದ್ಧವಾದ ಭಾರತೀಯ ಅಭ್ಯಾಸದಲ್ಲಿ ಅಮ್ಮ ಚಾಂಪಿಯನ್ ಆಗಿದ್ದರು.

ಅಮ್ಮನ ಮತ್ತೊಂದು ವಿಶಿಷ್ಟ ಅಭ್ಯಾಸ ನನಗೆ ನೆನಪಿದೆ. ಆಕೆ ಹಳೆಯ ಕಾಗದವನ್ನು ನೀರಿನಲ್ಲಿ ಅದ್ದಿ ಹುಣಸೆ ಬೀಜಗಳೊಂದಿಗೆ ಅಂಟಿನಂತಹ ಪೇಸ್ಟ್ ಅನ್ನು ತಯಾರಿಸುತ್ತಿದ್ದರು. ಈ ಪೇಸ್ಟ್‌ನಿಂದ ಗೋಡೆಗಳ ಮೇಲೆ ಕನ್ನಡಿಯ ತುಂಡುಗಳನ್ನು ಅಂಟಿಸಿ ಸುಂದರವಾದ ಚಿತ್ರಗಳನ್ನು ಮಾಡುತ್ತಿದ್ದರು. ಬಾಗಿಲಿಗೆ ನೇತು ಹಾಕಲು ಮಾರುಕಟ್ಟೆಯಿಂದ ಸಣ್ಣ ಪುಟ್ಟ ಅಲಂಕಾರಿಕ ವಸ್ತುಗಳನ್ನು ತರುತ್ತಿದ್ದರು.

ಹಾಸಿಗೆ ಸ್ವಚ್ಛವಾಗಿರಬೇಕು, ಸುಕ್ಕು, ಧೂಳು ಇರಕೂಡದು

ಹಾಸಿಗೆ ಸ್ವಚ್ಛವಾಗಿರಬೇಕು ಮತ್ತು ಸರಿಯಾಗಿ ಹಾಸಿರಬೇಕು ಎಂದು ತಾಯಿ ತುಂಬಾ ಗಮನಿಸುತ್ತಿದ್ದರು. ಹಾಸಿಗೆಯ ಮೇಲಿನ ಧೂಳನ್ನು ಸಹ ಅವರು ಸಹಿಸುತ್ತಿರಲಿಲ್ಲ. ಸ್ವಲ್ಪವೇ ಸುಕ್ಕು ಕಂಡರೂ ಅದನ್ನು ಕೊಡವಿ ಮತ್ತೆ ಹಾಸುತ್ತಿದ್ದರು. ಈ ಅಭ್ಯಾಸದ ಬಗ್ಗೆ ನಾವೆಲ್ಲರೂ ಬಹಳ ಎಚ್ಚರದಿಂದ ಇದ್ದೆವು. ಇಂದಿಗೂ, ಈ ವಯಸ್ಸಿನಲ್ಲೂ, ತನ್ನ ಹಾಸಿಗೆಯ ಮೇಲೆ ಒಂದೇ ಒಂದು ಸುಕ್ಕುಇರಬಾರದು ಎಂದು ನಮ್ಮ ತಾಯಿ ಬಯಸುತ್ತಾರೆ.

ಅಮ್ಮನ ಶುಚಿತ್ವದ ಮೇಲಿನ ಉಪಕಥೆಗಳ ಬಗ್ಗೆ ನಾನು ರಿಮ್ಗಟ್ಟಲೆ ಬರೆಯಬಲ್ಲೆ. ಅವರು ಇನ್ನೊಂದು ಗುಣವನ್ನು ಹೊಂದಿದ್ದರು – ಸ್ವಚ್ಛತೆ ಮತ್ತು ನೈರ್ಮಲ್ಯದಲ್ಲಿ ತೊಡಗಿರುವವರಿಗೆ ತುಂಬಾ ಗೌರವ ನೀಡುತ್ತಿದ್ದರು. ನನಗೆ ನೆನಪಿದೆ, ವಡ್ನಾಗರದಲ್ಲಿರುವ ನಮ್ಮ ಮನೆಯ ಪಕ್ಕದ ಚರಂಡಿಯನ್ನು ಸ್ವಚ್ಛಗೊಳಿಸಲು ಯಾರಾದರೂ ಬಂದಾಗ, ತಾಯಿ ಅವರಿಗೆ ಚಹಾ ನೀಡದೆ ಕಳುಹಿಸುತ್ತಿರಲಿಲ್ಲ.

ಪಶು-ಪಕ್ಷಿಗಳ ಬಗ್ಗೆ ವಾತ್ಸಲ್ಯ

ನಾನು ಯಾವಾಗಲೂ ನೆನಪಿಸಿಕೊಳ್ಳುವ ತಾಯಿಯ ಮತ್ತೊಂದು ಅಭ್ಯಾಸವೆಂದರೆ ಇತರ ಜೀವಿಗಳ ಬಗ್ಗೆ ಅವರ ವಿಶೇಷ ವಾತ್ಸಲ್ಯ. ಪ್ರತಿ ಬೇಸಿಗೆಯಲ್ಲಿ, ಅವರು ಪಕ್ಷಿಗಳಿಗೆ ನೀರಿನ ಪಾತ್ರೆಗಳನ್ನು ಇಡುತ್ತಿದ್ದರು. ನಮ್ಮ ಮನೆಯ ಸುತ್ತ ಮುತ್ತಲಿನ ಬೀದಿನಾಯಿಗಳು ಎಂದಿಗೂ ಹಸಿವಿನಿಂದ ಇರದಂತೆ ನೋಡಿಕೊಳ್ಳುತ್ತಿದ್ದರು.
ನನ್ನ ತಂದೆ ಚಹಾ ಅಂಗಡಿಯಿಂದ ತರುತ್ತಿದ್ದ ಹಾಲಿನ ಕೆನೆಯಿಂದ ತಾಯಿ ರುಚಿಕರವಾದ ತುಪ್ಪವನ್ನು ಮಾಡುತ್ತಿದ್ದರು. ಈ ತುಪ್ಪ ಕೇವಲ ನಮ್ಮ ಬಳಕೆಗೆ ಮಾತ್ರವಾಗಿರಲಿಲ್ಲ. ನಮ್ಮ ನೆರೆಹೊರೆಯಲ್ಲಿರುವ ಹಸುಗಳಿಗೂ ಅದರ ಪಾಲು ಸಿಗುತ್ತಿತ್ತು. ತಾಯಿ ಹಸುಗಳಿಗೆ ಪ್ರತಿದಿನ ರೊಟ್ಟಿ ತಿನ್ನಿಸುತ್ತಿದ್ದರು. ಒಣ ರೊಟ್ಟಿಗಳ ಮೇಲೆ ಮನೆಯಲ್ಲಿ ಮಾಡಿದ ತುಪ್ಪ ಮತ್ತು ಪ್ರೀತಿಯನ್ನು ಸುರಿದು ಅವುಗಳಿಗೆ ನೀಡುತ್ತಿದ್ದರು.

ಒಂದು ಅಗುಳೂ ವ್ಯರ್ಥಮಾಡುತ್ತಿರಲಿಲ್ಲ

ಒಂದು ಅಗಳು ಆಹಾರವನ್ನೂ ವ್ಯರ್ಥ ಮಾಡಬಾರದು ಎಂದು ತಾಯಿ ಹೇಳುತ್ತಿದ್ದರು. ನಮ್ಮ ನೆರೆಹೊರೆಯಲ್ಲಿ ಮದುವೆಗಳು ನಡೆದಾಗ ಯಾವುದೇ ಆಹಾರವನ್ನು ವ್ಯರ್ಥ ಮಾಡಬೇಡಿ ಎಂದು ನಮಗೆ ನೆನಪಿಸುತ್ತಿದ್ದರು. ಮನೆಯಲ್ಲಿ – ನೀವು ತಿನ್ನಬಹುದಾದಷ್ಟನ್ನು ಮಾತ್ರ ಹಾಕಿಸಿಕೊಳ್ಳಿ- ಎಂಬ ಸ್ಪಷ್ಟವಾದ ನಿಯಮವಿತ್ತು
ಇಂದಿಗೂ ತಾಯಿ ತಟ್ಟೆಯಲ್ಲಿ ಎಷ್ಟು ತಿನ್ನಲು ಸಾಧ್ಯವೋ ಅಷ್ಟು ಮಾತ್ರ ಹಾಕಿಸಿಕೊಳ್ಳುತ್ತಾರೆ ಮತ್ತು ಒಂದು ತುತ್ತು ಕೂಡ ವ್ಯರ್ಥ ಮಾಡುವುದಿಲ್ಲ. ಸಮಯಕ್ಕೆ ಸರಿಯಾಗಿ ತಿನ್ನುತ್ತಾರೆ ಮತ್ತು ಆಹಾರವು ಸರಿಯಾಗಿ ಜೀರ್ಣವಾಗಲು ಅಗಿದು ತಿನ್ನುತ್ತಾರೆ.

ಎಲ್ಲರೊಡನೆ ಸಂತಸದಿಂದ ಬಾಳಿದವರು

ತಾಯಿ ಇತರರ ಸಂತೋಷದಲ್ಲಿ ತನ್ನ ಸಂತೋಷವನ್ನು ಕಂಡುಕೊಳ್ಳುತ್ತಾರೆ. ನಮ್ಮ ಮನೆ ಚಿಕ್ಕದಾಗಿರಬಹುದು, ಆದರೆ ಅವರು ತುಂಬಾ ವಿಶಾಲ ಹೃದಯದವರು. ನನ್ನ ತಂದೆಯ ಆಪ್ತ ಸ್ನೇಹಿತರೊಬ್ಬರು ಹತ್ತಿರದ ಹಳ್ಳಿಯಲ್ಲಿದ್ದರು. ಅವರ ಅಕಾಲಿಕ ಮರಣದ ನಂತರ, ನನ್ನ ತಂದೆ ತನ್ನ ಸ್ನೇಹಿತನ ಮಗ ಅಬ್ಬಾಸ್ ನನ್ನು ನಮ್ಮ ಮನೆಗೆ ಕರೆತಂದರು. ಅವನು ನಮ್ಮಲ್ಲಿಯೇ ಇದ್ದು ಓದು ಮುಗಿಸಿದ. ತಾಯಿಯು ನಮ್ಮೆಲ್ಲರಂತೆಯೇ ಅಬ್ಬಾಸ್ ಬಗ್ಗೆಯೂ ಪ್ರೀತಿ ಮತ್ತು ಕಾಳಜಿಯನ್ನು ಹೊಂದಿದ್ದರು. ಪ್ರತಿ ವರ್ಷ ಈದ್ನಂದು ಅವನ ನೆಚ್ಚಿನ ಖಾದ್ಯಗಳನ್ನು ತಯಾರಿಸುತ್ತಿದ್ದರು. ಹಬ್ಬ ಹರಿದಿನಗಳಲ್ಲಿ ನೆರೆಹೊರೆಯ ಮಕ್ಕಳು ನಮ್ಮ ಮನೆಗೆ ಬಂದು ಅಮ್ಮನ ವಿಶೇಷ ಅಡುಗೆಯನ್ನು ಸವಿಯುವುದು ಮಾಮೂಲಿಯಾಗಿತ್ತು.

ತಪ್ಪದೆ ಮತ ಚಲಾಯಿಸುತ್ತಾರೆ

ತಾಯಿಯು ಯಾವಾಗಲೂ ನಾಗರಿಕಳಾಗಿ ತನ್ನ ಕರ್ತವ್ಯಗಳ ಬಗ್ಗೆ ಬಹಳ ಜಾಗೃತರಾಗಿರುತ್ತಾರೆ. ಚುನಾವಣೆಗಳು ಪ್ರಾರಂಭವಾದಾಗಿನಿಂದ, ಅವರು ಪಂಚಾಯತಿಯಿಂದ ಸಂಸತ್ತಿನವರೆಗೆ ಪ್ರತಿ ಚುನಾವಣೆಯಲ್ಲೂ ಮತ ಚಲಾಯಿಸಿದ್ದಾರೆ. ಕೆಲ ದಿನಗಳ ಹಿಂದೆ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಮತ ಚಲಾಯಿಸಿದರು.

ಇಂದಿಗೂ ತಾಯಿ ಹೆಸರಿನಲ್ಲಿ ಆಸ್ತಿ ಇಲ್ಲ

ಜೀವನದಲ್ಲಿ ಅಮ್ಮ ಯಾವುದರ ಬಗ್ಗೆಯೂ ದೂರುವುದನ್ನು ನಾನು ಕೇಳಿಲ್ಲ. ಅವರು ಯಾರ ಬಗ್ಗೆಯೂ ದೂರುವುದಿಲ್ಲ ಅಥವಾ ಯಾರಿಂದಲೂ ಯಾವುದೇ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದಿಲ್ಲ.

ಇಂದಿಗೂ ತಾಯಿಯ ಹೆಸರಿನಲ್ಲಿ ಯಾವುದೇ ಆಸ್ತಿ ಇಲ್ಲ. ಆಕೆ ಚಿನ್ನದ ಆಭರಣಗಳನ್ನು ಧರಿಸಿರುವುದನ್ನು ನಾನು ನೋಡಿಲ್ಲ ಮತ್ತು ಅವರಿಗೆ ಅದರಲ್ಲಿ ಆಸಕ್ತಿಯೂ ಇಲ್ಲ. ಮೊದಲಿನಂತೆಯೇ, ಅವರು ತನ್ನ ಸಣ್ಣ ಕೋಣೆಯಲ್ಲಿ ಅತ್ಯಂತ ಸರಳವಾದ ಜೀವನವನ್ನು ಮುಂದುವರಿಸಿದ್ದಾರೆ.

ತಾಯಿಗೆ ದೇವರಲ್ಲಿ ಅಪಾರವಾದ ನಂಬಿಕೆ ಇದೆ, ಆದರೆ ಅದೇ ಸಮಯದಲ್ಲಿ, ಅವರು ಮೂಢನಂಬಿಕೆಗಳಿಂದ ದೂರವಿದ್ದಾರೆ ಮತ್ತು ಅದೇ ಗುಣಗಳನ್ನು ನಮ್ಮಲ್ಲಿ ತುಂಬಿದ್ದಾರೆ. ಅವರು ಸಾಂಪ್ರದಾಯಿಕವಾಗಿ ಕಬೀರಪಂಥಿಯಾಗಿದ್ದಾರೆ ಮತ್ತು ಅವರ ದೈನಂದಿನ ಪ್ರಾರ್ಥನೆಗಳಲ್ಲಿ ಆ ಪದ್ಧತಿಗಳನ್ನು ಅನುಸರಿಸುತ್ತಿದ್ದಾರೆ. ಅವರು ತಮ್ಮ ಮಣಿಮಾಲೆಯೊಂದಿಗೆ ಜಪ ಮಾಡುತ್ತಾ ಸಾಕಷ್ಟು ಸಮಯವನ್ನು ಕಳೆಯುತ್ತಾರೆ. ವಯಸ್ಸಾಗಿದ್ದರೂ, ತಾಯಿಗೆ ಉತ್ತಮ ಜ್ಞಾಪಕ ಶಕ್ತಿ ಇದೆ. ಅವರು ದಶಕಗಳ ಹಿಂದಿನ ಘಟನೆಗಳನ್ನು ಸ್ಪಷ್ಟವಾಗಿ ನೆನಪಿಸಿಕೊಳ್ಳುತ್ತಾರೆ. ಕೆಲವು ಸಂಬಂಧಿಕರು ಅವರನ್ನು ಭೇಟಿ ಮಾಡಿದಾಗ, ಅವರು ತಕ್ಷಣವೇ ಅವರ ಅಜ್ಜಿಯರ ಹೆಸರನ್ನು ನೆನಪಿಸಿಕೊಳ್ಳುತ್ತಾರೆ.

ಮೋದಿ ಮನೆ ಬಿಟ್ಟಾಗ ಮೊಸರು, ಬೆಲ್ಲ ನೀಡಿದ್ದ ಅಮ್ಮ

ನಾನು ಮನೆ ಬಿಟ್ಟು ಹೊರಡಲು ನಿರ್ಧರಿಸಿದಾಗ, ನಾನು ಅವರಿಗೆ ಹೇಳುವ ಮೊದಲೇ ನನ್ನ ನಿರ್ಧಾರವನ್ನು ತಾಯಿ ಗ್ರಹಿಸಿದ್ದರು. ನಾನು ಹೊರಗೆ ಹೋಗಿ ಜಗತ್ತನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇನೆ ಎಂದು ನಾನು ಆಗಾಗ್ಗೆ ನನ್ನ ಹೆತ್ತವರಿಗೆ ಹೇಳುತ್ತಿದ್ದೆ. ನಾನು ಅವರಿಗೆ ಸ್ವಾಮಿ ವಿವೇಕಾನಂದರ ಬಗ್ಗೆ ಹೇಳುತ್ತಿದ್ದೆ ಮತ್ತು ನಾನು ರಾಮಕೃಷ್ಣ ಮಿಷನ್ ಮಠಕ್ಕೆ ಭೇಟಿ ನೀಡಬೇಕು ಎಂದು ಹೇಳುತ್ತಿದ್ದೆ. ಇದು ಹಲವು ದಿನಗಳ ಕಾಲ ನಡೆದಿತ್ತು.

ಅಂತಿಮವಾಗಿ, ನಾನು ಮನೆ ಬಿಟ್ಟು ಹೊರಡುವ ನನ್ನ ಆಸೆಯನ್ನು ಬಿಚ್ಚಿಟ್ಟೆ ಮತ್ತು ಅವರ ಆಶೀರ್ವಾದವನ್ನು ಕೇಳಿದೆ. ನನ್ನ ತಂದೆ ತುಂಬಾ ನಿರಾಶೆಗೊಂಡರು ಮತ್ತು ಕಿರಿಕಿರಿಯಿಂದ “ನಿನ್ನಿಷ್ಟ” ಎಂದರು. ಅವರ ಆಶೀರ್ವಾದವಿಲ್ಲದೆ ನಾನು ಮನೆ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದೆ. ಆದರೆ, ಅಮ್ಮ ನನ್ನ ಆಸೆಗಳನ್ನು ಅರ್ಥಮಾಡಿಕೊಂಡು, “ನಿನ್ನ ಮನಸ್ಸು ಹೇಳಿದಂತೆ ಮಾಡು”ಎಂದು ಆಶೀರ್ವದಿಸಿದರು, ನನ್ನ ತಂದೆಯನ್ನು ಸಮಾಧಾನಪಡಿಸಲು, ಅವರು ನನ್ನ ಜಾತಕವನ್ನು ಜ್ಯೋತಿಷಿಗೆ ತೋರಿಸಲು ಕೇಳಿದರು. ನನ್ನ ತಂದೆ ಜ್ಯೋತಿಷ್ಯ ತಿಳಿದ ಸಂಬಂಧಿಕರ ಬಳಿ ಹೋದರು. ನನ್ನ ಜಾತಕವನ್ನು ಅಧ್ಯಯನ ಮಾಡಿದ ನಂತರ, “ಅವನ ಹಾದಿ ವಿಭಿನ್ನವಾಗಿದೆ. ದೇವರು ಅವನಿಗಾಗಿ ಆರಿಸಿರುವ ಮಾರ್ಗದಲ್ಲಿ ಮಾತ್ರ ಅವನು ಹೋಗುತ್ತಾನೆ.” ಎಂದು ಅವರು ಹೇಳಿದರು.

ಕೆಲವು ಗಂಟೆಗಳ ನಂತರ, ನಾನು ಮನೆಯಿಂದ ಹೊರಟೆ. ಅಷ್ಟೊತ್ತಿಗಾಗಲೇ ನನ್ನ ತಂದೆ ಕೂಡ ನನ್ನ ನಿರ್ಧಾರವನ್ನು ಒಪ್ಪಿ ಆಶೀರ್ವಾದ ಮಾಡಿದ್ದರು. ಹೊರಡುವ ಮೊದಲು, ಅಮ್ಮ ನನಗೆ ಮೊಸರು ಮತ್ತು ಬೆಲ್ಲವನ್ನು ಉಣಿಸಿದರು, ಒಂದು ಮಂಗಳಕರ ಹೊಸ ಆರಂಭಕ್ಕಾಗಿ. ಇನ್ನು ಮುಂದೆ ನನ್ನ ಜೀವನವು ತುಂಬಾ ವಿಭಿನ್ನವಾಗಿರುತ್ತದೆ ಎಂದು ಅವರು ತಿಳಿದಿದ್ದರು. ತಾಯಂದಿರು ತಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ಅತ್ಯಂತ ಪ್ರವೀಣರಾಗಿರುತ್ತಾರೆ. ಆದರೆ ಅವರ ಮಗು ಮನೆ ಬಿಟ್ಟು ಹೊರಟಾಗ ಅವರಿಗೆ ಕಷ್ಟವಾಗುತ್ತದೆ. ತಾಯಿ ಕಣ್ಣೀರು ಹಾಕಿದರು. ಆದರೆ ನನ್ನ ಭವಿಷ್ಯಕ್ಕಾಗಿ ಅವರ ಅಪಾರ ಆಶೀರ್ವಾದವಿತ್ತು.

ಸಿಎಂ ಆದಾಗ ಲಂಚ ತೆಗೆದುಕೊಳ್ಳಬಾರದು ಎಂದಿದ್ದ ತಾಯಿ

ಗುಜರಾತಿನ ಮುಖ್ಯಮಂತ್ರಿ ನಾನೇ ಎಂದು ನಿರ್ಧರಿಸಿದಾಗ ನಾನು ರಾಜ್ಯದಲ್ಲಿ ಇರಲಿಲ್ಲ ಎಂದು ನನಗೆ ನೆನಪಿದೆ. ನಾನು ಗುಜರಾತಿಗೆ ಹೋದ ಕೂಡಲೇ, ನಾನು ನೇರವಾಗಿ ತಾಯಿಯನ್ನು ಭೇಟಿ ಮಾಡಲು ಹೋದೆ. ಅವರು ಅತ್ಯಂತ ಭಾವಪರವಶಳಾಗಿದ್ದರು ಮತ್ತು ನಾನು ಮತ್ತೆ ಅವಳೊಂದಿಗೆ ಇರುತ್ತೇನೆಯೇ ಎಂದು ವಿಚಾರಿಸಿದರು. ಆದರೆ ಅವರಿಗೆ ನನ್ನ ಉತ್ತರ ಗೊತ್ತಿತ್ತು! “ಸರ್ಕಾರದಲ್ಲಿ ನಿಮ್ಮ ಕೆಲಸ ಏನೆಂದು ನನಗೆ ಅರ್ಥವಾಗುವುದಿಲ್ಲ, ಆದರೆ ನೀವು ಎಂದಿಗೂ ಲಂಚ ತೆಗೆದುಕೊಳ್ಳಬಾರದು ಎಂಬುದು ನನ್ನ ಬಯಕೆ.” ಎಂದು ತಾಯಿ ಹೇಳಿದ್ದರು.
ದೆಹಲಿಗೆ ತೆರಳಿದ ನಂತರ, ಅವರೊಂದಿಗಿನ ನನ್ನ ಭೇಟಿಗಳು ಮೊದಲಿಗಿಂತ ಕಡಿಮೆಯಾಗಿವೆ. ಕೆಲವೊಮ್ಮೆ ನಾನು ಗಾಂಧಿನಗರಕ್ಕೆ ಭೇಟಿ ನೀಡಿದಾಗ, ನಾನು ಸ್ವಲ್ಪ ಕಾಲ ತಾಯಿಯನ್ನು ಭೇಟಿ ಮಾಡುತ್ತೇನೆ. ನಾನು ಮೊದಲಿನಂತೆ ಅವರನ್ನು ಭೇಟಿಯಾಗಲು ಆಗುವುದಿಲ್ಲ. ಆದಾಗ್ಯೂ, ನನ್ನ ಅನುಪಸ್ಥಿತಿಯ ಬಗ್ಗೆ ನಾನು ತಾಯಿಯಿಂದ ಯಾವುದೇ ಅಸಮಾಧಾನವನ್ನು ಕೇಳಿಲ್ಲ. ಅವರ ಪ್ರೀತಿ ಮತ್ತು ವಾತ್ಸಲ್ಯ ಹಾಗೆಯೇ ಇದೆ; ಅವರ ಆಶೀರ್ವಾದ ಹಾಗೆಯೇ ಇರುತ್ತದೆ.

ಹೀರಾಬೆನ್‌ ಅವರಿಗೂ ಮೋದಿ ಎಂದರೆ ಬಲು ಮಮತೆ. “ದೇಶಕ್ಕೆ ಏನು ಬೇಕೋ, ಅದನ್ನು ನನ್ನ ಮಗ ಮಾಡುತ್ತಾನೆʼʼ ಎನ್ನುತ್ತಾರೆ ಆ ಹಿರಿಯ ಮಾತೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಕಳವಳ; ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕದ ಕಮಿಷನ್‌ ಆನ್‌ ಇಂಟರ್‌ನ್ಯಾಷನಲ್‌ ರಿಲಿಜಿಯಸ್‌ ಫ್ರೀಡಂ ಸಂಸ್ಥೆಯು ವರದಿ ಬಿಡುಗಡೆ ಮಾಡಿದೆ. ಇದರಲ್ಲಿ, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಆದರೆ, ಅಮೆರಿಕದ ವರದಿಗೆ ಕೇಂದ್ರ ಸರ್ಕಾರವು ಅಸಮಾಧಾನ ವ್ಯಕ್ತಪಡಿಸಿದೆ. ಇದು ರಾಜಕೀಯ ಪ್ರೇರಿತ ವರದಿ ಎಂದು ತಿರುಗೇಟು ನೀಡಿದೆ.

VISTARANEWS.COM


on

Religious Freedom
Koo

ನವದೆಹಲಿ: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಸರ್ಕಾರದ ಕಮಿಷನ್‌ ಆನ್‌ ಇಂಟರ್‌ನ್ಯಾಷನಲ್‌ ರಿಲಿಜಿಯಸ್‌ ಫ್ರೀಡಂ (USCIRF Report) ವರದಿ ಬಿಡುಗಡೆ ಮಾಡಿದೆ. ಅದರಲ್ಲೂ, ಭಾರತ ಸೇರಿ 17 ದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ (Religious Freedom) ಕುರಿತು ಕಳವಳ ವ್ಯಕ್ತಪಡಿಸಿದೆ. ಇದಕ್ಕೆ ಭಾರತ ಸರ್ಕಾರವು ತಿರುಗೇಟು ನೀಡಿದ್ದು, “ಯುಎಸ್‌ಸಿಐಆರ್‌ಎಫ್‌ ವರದಿಯು ಪಕ್ಷಪಾತ ಹಾಗೂ ರಾಜಕೀಯ ಪ್ರೇರಿತವಾಗಿ ತಯಾರಿಸಿದ್ದಾಗಿದೆ” ಎಂಬುದಾಗಿ ಅಸಮಾಧಾನ ವ್ಯಕ್ತಪಡಿಸಿದೆ.

ಅಮೆರಿಕದ ವರದಿಯಲ್ಲಿ ಏನಿದೆ?

ಅಮೆರಿಕ ಸರ್ಕಾರದ ಆಯೋಗ ರಚಿಸಿದ ವರದಿಯಲ್ಲಿ ಭಾರತದ ಕುರಿತು ಉಲ್ಲೇಖವಿದೆ. “ಭಾರತ ಸೇರಿ 17 ದೇಶಗಳಲ್ಲಿ ಜನರು ತಮ್ಮ ಧರ್ಮವನ್ನು ಅನುಸರಿಸುವ, ಧಾರ್ಮಿಕ ವಿಚಾರಗಳ ಮೇಲೆ ನಂಬಿಕೆ ಇರಿಸುವ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತಿದೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಭಾರತದಲ್ಲಂತೂ ತಾರತಮ್ಯದಿಂದ ಕೂಡಿರುವ ರಾಷ್ಟ್ರೀಯವಾದ ನೀತಿಗಳ ಹೇರಿಕೆಯಿಂದಾಗಿ ಧಾರ್ಮಿಕ ನಂಬಿಕೆ ಹೊಂದಿದವರಿಗೆ ಹಿನ್ನಡೆಯಾಗುತ್ತಿದೆ” ಎಂಬುದಾಗಿ ವರದಿ ತಿಳಿಸಿದೆ.

“ಭಾರತದಲ್ಲಿ ರಾಷ್ಟ್ರೀಯವಾದಿ ನೀತಿಗಳ ಹೇರಿಕೆಯಿಂದಾಗಿ ಧರ್ಮಗಳಲ್ಲಿ ನಂಬಿಕೆ ಇಟ್ಟುಕೊಂಡವರಿಗೆ ಸಮಸ್ಯೆಯಾಗಿದೆ. ದ್ವೇಷ ಕಾರುವ ವಾಕ್ಚಾತುರ್ಯ, ಕೋಮುವಾದದಿಂದ ಕೂಡಿದ ಹಿಂಸಾಚಾರಗಳನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದರಿಂದಾಗಿ ಧಾರ್ಮಿಕ ವಿಚಾರಗಳನ್ನು ಇಟ್ಟುಕೊಂಡವರಿಗೆ ಅವುಗಳನ್ನು ಪಾಲಿಸಲು ಕಷ್ಟವಾಗುತ್ತಿದೆ. ಇದು ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದಕ್ಕೆ ಉದಾಹರಣೆಯಾಗಿದೆ” ಎಂಬುದಾಗಿ ಅಮೆರಿಕದ ಆಯೋಗವು ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ಕೇಂದ್ರ ಸರ್ಕಾರ ತಿರುಗೇಟು

ಅಮೆರಿಕದ ವರದಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಅವರು ತಿರುಗೇಟು ನೀಡಿದ್ದಾರೆ. “ಯುಎಸ್‌ಸಿಐಆರ್‌ಎಫ್‌ ಎಂಬುದು ಪಕ್ಷಪಾತದ ಧೋರಣೆಗಳಿಂದ ಕೂಡಿದ ಸಂಘಟನೆಯಾಗಿದ್ದು, ರಾಜಕೀಯದಿಂದ ಪ್ರೇರೇಪಿತವಾಗಿದೆ. ಇದಕ್ಕೂ ಮೊದಲು ಕೂಡ ಇಂತಹ ವರದಿಗಳನ್ನು ಅದು ಪ್ರಕಟಿಸಿತ್ತು. ಭಾರತದ ಕುರಿತು ಷಡ್ಯಂತ್ರದಿಂದ ಕೂಡಿದ ವರದಿ ಬಿಡುಗಡೆ ಮಾಡುವುದು ಅದಕ್ಕೆ ರೂಢಿಯೇ ಆಗಿದೆ. ಯುಎಸ್‌ಸಿಐಆರ್‌ಎಫ್‌ ವರದಿಯಲ್ಲಿ ಯಾವುದೇ ಹುರುಳಿಲ್ಲ” ಎಂಬುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಪಾಕ್‌ ಯುವತಿಗೆ ಭಾರತದ ಹಿಂದು ವ್ಯಕ್ತಿ ಹೃದಯದ ಕಸಿ; ತಕರಾರು ತೆಗೆದ ನೆರೆ ರಾಷ್ಟ್ರದ ಇಸ್ಲಾಂ ಧರ್ಮಗುರು!

Continue Reading

ದೇಶ

Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Covaxin: ಕೊವ್ಯಾಕ್ಸನ್‌ ಲಸಿಕೆಯನ್ನು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯವು ಕೂಡ ಮೌಲ್ಯಮಾಪನ ಮಾಡಿದೆ. ಕೊವ್ಯಾಕ್ಸಿನ್‌ ಲಸಿಕೆಯ ಸುರಕ್ಷತೆ ಹಾಗೂ ಅದರ ದಕ್ಷತೆಯ ಕುರಿತು ಕೂಡ ಮೌಲ್ಯಮಾಪನ ಮಾಡಲಾಗಿದೆ. ಇದುವರೆಗೆ ವ್ಯಾಕ್ಸಿನ್‌ ಸಂಬಂಧಿಸಿದಂತೆ ಯಾವುದೇ ಅಡ್ಡ ಪರಿಣಾಮಗಳು ಉಂಟಾಗಿಲ್ಲ ಎಂಬುದಾಗಿ ಭಾರತ್‌ ಬಯೋಟೆಕ್‌ ಪ್ರಕಟಣೆ ಹೊರಡಿಸಿದೆ. ಕೋವಿಶೀಲ್ಡ್‌ ಅಡ್ಡಪರಿಣಾಮಗಳ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಭಾರತ್‌ ಬಯೋಟೆಕ್‌ ಕಂಪನಿಯು ಸ್ಪಷ್ಟನೆ ನೀಡಿದೆ.

VISTARANEWS.COM


on

Covaxin
Koo

ನವದೆಹಲಿ: ಬ್ರಿಟನ್‌ನಲ್ಲಿ (UK) ಅಸ್ಟ್ರಾಜೆನಿಕಾ ಕಂಪನಿಯ ಕೋವಿಶೀಲ್ಡ್‌ ಲಸಿಕೆಯ (Covishield vaccine) ಅಡ್ಡ ಪರಿಣಾಮಗಳ (Side effects) ಬಗ್ಗೆ ಕೋಲಾಹಲ ಹೆಚ್ಚುತ್ತಿರುವಂತೆಯೇ ಭಾರತದಲ್ಲಿಯೂ ಕೋವಿಶೀಲ್ಡ್‌ ಲಸಿಕೆ ಸೈಡ್‌ ಎಫೆಕ್ಟ್‌ಗಳ ಕುರಿತು ಅಧ್ಯಯನ ನಡೆಯಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಕೊವ್ಯಾಕ್ಸಿನ್‌ (Covaxin) ಅತ್ಯಂತ ಸುರಕ್ಷಿತವಾಗಿ ತಯಾರಿಸಲಾದ ಲಸಿಕೆಯಾಗಿದೆ ಎಂಬುದಾಗಿ ಭಾರತದ ಲಸಿಕಾ ತಯಾರಿಕಾ ಕಂಪನಿಯಾದ ಭಾರತ್‌ ಬಯೋಟೆಕ್‌ (Bharat Biotech) ಪ್ರಕಟಣೆ ತಿಳಿಸಿದೆ.

“ಸುರಕ್ಷತೆ ಹಾಗೂ ದಕ್ಷತೆಯೇ ಮೊದಲು ಎಂಬ ದೃಷ್ಟಿಕೋನದಿಂದ ಹಲವು ಮಾನದಂಡಗಳನ್ನು ಇಟ್ಟುಕೊಂಡು ಲಸಿಕೆಯನ್ನು ಉತ್ಪಾದಿಸಲಾಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರದ ಲಸಿಕಾಕರಣ ಯೋಜನೆಯ ವೇಳೆ ಅತಿ ಹೆಚ್ಚು ಪ್ರಯೋಗಕ್ಕೀಡಾದ ಲಸಿಕೆ ಎಂದರೆ ಅದು ಕೊವ್ಯಾಕ್ಸಿನ್‌ ಮಾತ್ರ. ಪರವಾನಗಿ ಪ್ರಕ್ರಿಯೆಯ ವೇಳೆ ಸುಮಾರು 27 ಸಾವಿರ ಅಂಶಗಳ ಕುರಿತು ಅಧ್ಯಯನ, ಪರಿಶೀಲನೆ ನಡೆಸಲಾಗಿದೆ. ವೈದ್ಯಕೀಯ ಪ್ರಯೋಗಕ್ಕೂ ಲಸಿಕೆಯನ್ನು ಒಳಪಡಿಸಲಾಗಿದೆ” ಎಂಬುದಾಗಿ ಭಾರತ್‌ ಬಯೋಟೆಕ್‌ ಕಂಪನಿಯು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದೆ.

“ಕೊವ್ಯಾಕ್ಸನ್‌ ಲಸಿಕೆಯನ್ನು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯವು ಕೂಡ ಮೌಲ್ಯಮಾಪನ ಮಾಡಿದೆ. ಕೊವ್ಯಾಕ್ಸಿನ್‌ ಲಸಿಕೆಯ ಸುರಕ್ಷತೆ ಹಾಗೂ ಅದರ ದಕ್ಷತೆಯ ಕುರಿತು ಕೂಡ ಮೌಲ್ಯಮಾಪನ ಮಾಡಲಾಗಿದೆ. ಇದುವರೆಗೆ ವ್ಯಾಕ್ಸಿನ್‌ ಸಂಬಂಧಿಸಿದಂತೆ ಯಾವುದೇ ಅಡ್ಡ ಪರಿಣಾಮಗಳು, ರಕ್ತ ಹೆಪ್ಪುಗಟ್ಟುವುದು, ಥ್ರಂಬೊಸಿಟೋಪೇನಿಯಾ, ಪೆರಿಕಾರ್ಡಿಟಿಸ್‌ ಹಾಗೂ ಮೈಯೋಕಾರ್ಡಿಟಿಸ್‌ ಸೇರಿ ಯಾವುದೇ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ. ಹಾಗಾಗಿ, ಕೊವ್ಯಾಕ್ಸಿನ್‌ ಲಸಿಕೆಯು ಅತ್ಯಂತ ಸುರಕ್ಷಿತವಾಗಿದೆ” ಎಂದು ಮಾಹಿತಿ ನೀಡಿದೆ.

ಅಸ್ಟ್ರಾಜೆನೆಕಾ ಕೋವಿಶೀಲ್ಡ್‌ ಲಸಿಕೆ ಮತ್ತು ಥ್ರಂಬೋಸಿಸ್ (ಟಿಟಿಎಸ್) ನಡುವಿನ ಸಂಬಂಧವನ್ನು ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ ಲಸಿಕೆ ಸೂತ್ರವನ್ನು ಪುಣೆ ಮೂಲದ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ನೀಡಲಾಗಿದೆ. ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಕೋಟ್ಯಂತರ ಮಂದಿ ಪಡೆದಿದ್ದಾರೆ. ಈಗ ಅಮೆರಿಕದಲ್ಲಿ ಅಡ್ಡಪರಿಣಾಮದ ಕುರಿತು ಕಂಪನಿಯೇ ಒಪ್ಪಿಕೊಂಡಿರುವುದರಿಂದ ಭಾರತದಲ್ಲೂ ಈ ಕುರಿತು ಅಧ್ಯಯನ ನಡೆಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

Prajwal Revanna Case: ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕ್ರಮವಾಗಬೇಕಾದರೆ, ಅವರನ್ನು ಕರೆತರಬೇಕಾದರೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಇಲಾಖೆ ಹಾಗೂ ವಿದೇಶಾಂಗ ವ್ಯವಹಾರಗಳ ಖಾತೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಕೋರಿದ್ದರು.

VISTARANEWS.COM


on

Prajwal Revanna Case Centre says it has no power to revoke Prajwal diplomatic passport Big relief for MP
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಬೆನ್ನಲ್ಲೇ, ಇದು ತಮ್ಮಿಂದ ಸಾಧ್ಯವಿಲ್ಲ ಎಂದು ಕೇಂದ್ರದ ಉತ್ತರ ಬಂದಿದೆ.

ಪ್ರಜ್ವಲ್ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ (ರಾಜತಾಂತ್ರಿಕ ಪಾಸ್‌ಪೋರ್ಟ್‌) ರದ್ದುಗೊಳಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್ ಪ್ರತಿಕ್ರಿಯೆ ನೀಡಿ, ಯಾವುದೇ ವ್ಯಕ್ತಿಯ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕೆಂದರೆ ಅದಕ್ಕೆ ನ್ಯಾಯಾಲಯದ ಆದೇಶ ಬೇಕು. ಈವರೆಗೂ ನಮಗೆ ಯಾವುದೇ ನ್ಯಾಯಾಲಯವು ಪಾಸ್‌ಪೋರ್ಟ್‌ ರದ್ದುಗೊಳಿಸಲು ನಿರ್ದೇಶನ ನೀಡಿಲ್ಲ. ಹೀಗಾಗಿ ಪಾಸ್‌ಪೋರ್ಟ್ ರದ್ದುಗೊಳಿಸುವ ಪ್ರಮೇಯ ಬರುವುದಿಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಸಿದ್ದರಾಮಯ್ಯ!

ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದರು.

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ, ಒಬ್ಬ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸೆಗಿದ್ದಾರೆ. ಈ ಪ್ರಕರಣದ ಮಹತ್ವದ ಬಗ್ಗೆ ನೀವು ತಿಳಿದಿರಲೇಬೇಕಿತ್ತು. ಅಲ್ಲದೆ, ಪ್ರಜ್ವಲ್‌ 2024ರ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಎನ್‌ಡಿಎ ಅಭ್ಯರ್ಥಿಯೂ ಆಗಿದ್ದಾರೆ. ಜತೆಗೆ ಇಂಥ ಭಯಾನಕ ಹಾಗೂ ನಾಚಿಕೆಗೇಡಿನ ಪ್ರಕರಣ ಪ್ರಜ್ವಲ್‌ ಮೇಲಿದೆ. ಅಲ್ಲದೆ, ಈ ಪ್ರಕರಣವು ದೇಶದ ಜನತೆಯ ಆತ್ಮಸಾಕ್ಷಿಯನ್ನೇ ಕದಡಿಬಿಟ್ಟಿದೆ. ಹೀಗಾಗಿ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು ಎಂದು ಪತ್ರ ಬರೆದು ಮನವಿ ಮಾಡಿದ್ದರು.

ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕ್ರಮವಾಗಬೇಕಾದರೆ, ಅವರನ್ನು ಕರೆತರಬೇಕಾದರೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಇಲಾಖೆ ಹಾಗೂ ವಿದೇಶಾಂಗ ವ್ಯವಹಾರಗಳ ಖಾತೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಕೋರಿದ್ದರು.

Prajwal Revanna Case  and Hassan Pen Drive case Siddaramaiah writes to PM Modi seeking cancellation of Prajwal Revanna diplomatic passport
ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಬರೆದಿರುವ ಪತ್ರ

ಆದರೆ, ಈಗ ಈ ಸಂಬಂಧ ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್ ಪ್ರತಿಕ್ರಿಯೆ ನೀಡಿದ್ದು, ಪಾಸ್‌ಪೋರ್ಟ್‌ ರದ್ದುಗೊಳಿಸುವ ಅಧಿಕಾರ ವಿದೇಶಾಂಗ ಸಚಿವಾಲಯಕ್ಕೆ ಇಲ್ಲ. ಇದಕ್ಕೆ ನ್ಯಾಯಾಲಯದಿಂದ ಆದೇಶ ಬರಬೇಕು. ಅಂತಹ ಯಾವುದೇ ಆದೇಶವು ಈ ವರೆಗೆ ಯಾವುದೇ ನ್ಯಾಯಾಲಯದಿಂದ ತಮಗೆ ಬಂದಿಲ್ಲ ಎಂದು ಹೇಳಿಕೊಂಡಿದ್ದಾರೆ.

ಸದ್ಯಕ್ಕೆ ಪ್ರಜ್ವಲ್‌ಗೆ ರಿಲೀಫ್‌

ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ನ್ಯಾಯಾಲಯದಿಂದ ಆದೇಶ ಬರುವವರೆಗೂ ಹೊರ ದೇಶದಲ್ಲಿ ಪ್ರಜ್ವಲ್‌ ಸೇಫ್‌ ಎಂದು ಹೇಳಲಾಗುತ್ತಿದೆ. ಅಲ್ಲಿಯವರಿಗೆ ಅವರು ಹಲವು ದೇಶಕ್ಕೆ ಪ್ರಯಾಣ ಮಾಡಬಹುದಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ತನಿಖಾ ತಂಡವು ಕೂಡಲೇ ಕೋರ್ಟ್‌ ಮೊರೆ ಹೋಗಿ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಮನವಿ ಸಲ್ಲಿಸಿದರೆ ಪ್ರಜ್ವಲ್‌ಗೆ ಸಂಕಷ್ಟ ಎದುರಾಗಬಹುದು ಎಂದು ಹೇಳಲಾಗುತ್ತಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ: Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಅರೆಸ್ಟ್‌ ಮಾಡುವುದು ಸಾಧ್ಯವೇ ಇಲ್ಲ

ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ

ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ.

Continue Reading

ದೇಶ

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ಮಹಿಳಾ ಕುಸ್ತಿಪಟುಗಳು ಅವರನ್ನು ಮುಖ್ಯ ಹುದ್ದೆಯಿಂದ ತೆಗೆದುಹಾಕುವಂತೆ ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ, ಅವರಿಗೆ ಬಿಜೆಪಿಯು ಟಿಕೆಟ್‌ ನಿರಾಕರಿಸಿದೆ.

VISTARANEWS.COM


on

Brij Bhushan Singh
Koo

ನವದೆಹಲಿ: ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ, ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್‌ ಸಿಂಗ್‌ಗೆ (Brij Bhushan Sharan Singh) ಈ ಬಾರಿ ಬಿಜೆಪಿಯು ಟಿಕೆಟ್‌ ನಿರಾಕರಿಸಿದೆ. ಕೈಸರ್‌ಗಂಜ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯು ಬ್ರಿಜ್‌ಭೂಷಣ್‌ ಸಿಂಗ್‌ ಬದಲಿಗೆ ಅವರ ಕಿರಿಯ ಪುತ್ರ ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ. ಇನ್ನು, ರಾಯ್‌ಬರೇಲಿ ಕ್ಷೇತ್ರದಲ್ಲಿ ಬಿಜೆಪಿಯು ದಿನೇಶ್‌ ಪ್ರತಾಪ್‌ ಸಿಂಗ್‌ (Dinesh Pratap Singh) ಅವರಿಗೆ ಟಿಕೆಟ್‌ ನೀಡಿದೆ.

ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದಿರುವ ಕಾರಣ ನಾಲ್ಕನೇ ಬಾರಿ ಟಿಕೆಟ್‌ ಘೋಷಿಸಿಲ್ಲ ಎಂದು ತಿಳಿದುಬಂದಿದೆ. ಇದಕ್ಕೂ ಮೊದಲೇ, ಬ್ರಿಜ್‌ ಭೂಷಣ್‌ ಸಿಂಗ್‌ಗೆ ಟಿಕೆಟ್‌ ಸಿಗುವುದಿಲ್ಲ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ, ಅವರ ಪುತ್ರನಿಗೆ ಬಿಜೆಪಿ ಮಣೆಹಾಕಿದೆ. ಕೈಸರ್‌ಗಂಜ್‌ನಲ್ಲಿ ಐದನೇ ಹಂತದಲ್ಲಿ ಅಂದರೆ ಮೇ 20ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ.

ರಾಯ್‌ಬರೇಲಿಯಲ್ಲಿ ದಿನೇಶ್‌ ಪ್ರತಾಪ್‌ ಸಿಂಗ್‌

2019ರ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರ ವಿರುದ್ಧ ಸೋಲನುಭವಿಸಿದ್ದ ದಿನೇಶ್‌ ಪ್ರತಾಪ್‌ ಸಿಂಗ್‌ ಅವರಿಗೆ ಬಿಜೆಪಿಯು ಮತ್ತೆ ಟಿಕೆಟ್‌ ನೀಡಿದೆ. ಈ ಬಾರಿ ರಾಯ್‌ಬರೇಲಿಯಲ್ಲಿ ಸೋನಿಯಾ ಗಾಂಧಿ ಅವರು ಸ್ಪರ್ಧಿಸುತ್ತಿಲ್ಲ. ಪ್ರಿಯಾಂಕಾ ವಾದ್ರಾ ಅಥವಾ ಅವರ ಪತಿ ರಾಬರ್ಟ್‌ ವಾದ್ರಾಗೆ ಟಿಕೆಟ್‌ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇದರ ಮಧ್ಯೆಯೇ, ಮತ್ತೆ ದಿನೇಶ್‌ ಪ್ರತಾಪ್‌ ಸಿಂಗ್‌ ಅವರನ್ನು ಬಿಜೆಪಿಯು ರಾಯ್‌ಬರೇಲಿಯಲ್ಲಿ ಕಣಕ್ಕಿಳಿಸಿದೆ. ನಾಮಪತ್ರ ಸಲ್ಲಿಕೆಗೆ ಮೇ 3 ಕೊನೆಯ ದಿನವಾದ ಕಾರಣ ಇಂದು (ಮೇ 2) ಅಥವಾ ನಾಳೆ ರಾಯ್‌ಬರೇಲಿ ಹಾಗೂ ಅಮೇಥಿ ಲೋಕಸಭೆ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ ಎಂದು ತಿಳಿದುಬಂದಿದೆ.

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ಮಹಿಳಾ ಕುಸ್ತಿಪಟುಗಳು ಅವರನ್ನು ಮುಖ್ಯ ಹುದ್ದೆಯಿಂದ ತೆಗೆದುಹಾಕುವಂತೆ ಒತ್ತಾಯಿಸಿದ್ದರು. ಭಾರತದ ಅಗ್ರ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಜಂತರ್ ಮಂತರ್​ನಲ್ಲಿ ಪ್ರತಿಭಟನೆ ನಡೆಸಿದ್ದರು. ಹಲವು ಬೆಳವಣಿಗೆಗಳ ಬಳಿಕ ಜೂನ್​ನಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ (354, 354 ಎ ಮತ್ತು 354 ಡಿ) ಅಡಿ ಬ್ರಿಜ್‌ ಭೂಷಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದರು. ಪ್ರಕರಣದಲ್ಲಿ ಬ್ರಿಜ್‌ ಭೂಷಣ್‌ ಜಾಮೀನು ಪಡೆದಿದ್ದಾರೆ.

ಇದನ್ನೂ ಓದಿ: Ujjwal Nikam: ಪ್ರಮೋದ್‌ ಮಹಾಜನ್‌ ಪುತ್ರಿಗೆ ಕೊಕ್‌, ಮುಂಬೈ ದಾಳಿ ವಕೀಲನಿಗೆ ಬಿಜೆಪಿ ಟಿಕೆಟ್!

Continue Reading
Advertisement
Religious Freedom
ದೇಶ51 seconds ago

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಕಳವಳ; ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

Lok Sabha Election 2024 Raju Kage calls those chanting Jai Shri Ram are beggars
Lok Sabha Election 20242 mins ago

Lok Sabha Election 2024: ಜೈ ಶ್ರೀರಾಮ್ ಘೋಷಣೆ ಕೂಗುವವರು ಭಿಕಾರಿಗಳು ಎಂದ ರಾಜು ಕಾಗೆ; ಚುನಾವಣಾ ಆಯೋಗದಿಂದ ನೋಟಿಸ್‌!

Prajwal Revanna Case Revanna denied anticipatory bail today Court allows SIT to file objections
ಕ್ರೈಂ39 mins ago

Prajwal Revanna Case: ರೇವಣ್ಣಗೆ ಇಂದು ಸಿಗಲಿಲ್ಲ ನಿರೀಕ್ಷಣಾ ಜಾಮೀನು; ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚಿಸಿದ ಕೋರ್ಟ್!

Covaxin
ದೇಶ1 hour ago

Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 hour ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

KL Rahul
ಕ್ರೀಡೆ1 hour ago

KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

T20 World Cup
ಕ್ರೀಡೆ2 hours ago

T20 World Cup : ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

Shine Shetty Summer Fashion
ಫ್ಯಾಷನ್2 hours ago

Summer Fashion: ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

IPL 2024
ಕ್ರೀಡೆ2 hours ago

IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

assault Case
ಬೆಂಗಳೂರು2 hours ago

Assault Case : ಪೊಲೀಸ್‌ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದ ಮಹಿಳೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 hour ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ15 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌