Site icon Vistara News

Oscars 2023: ಇತಿಹಾಸ ಸೃಷ್ಟಿಸಿದ RRR ಸಿನಿಮಾ, ನಾಟು ನಾಟು… ಹಾಡಿಗೆ ಆಸ್ಕರ್ ಪ್ರಶಸ್ತಿ!

Naatu Naatu Song from RRR cinema won the oscars 2023 award in best orignal song

ಲಾಸ್‌ ಏಂಜಲೀಸ್‌, ಅಮೆರಿಕ: ಆಸ್ಕರ್ 2023 (Oscars 2023) ಘೋಷಣೆಯಾಗಿದೆ. ಬೆಸ್ಟ್ ಒರಿಜಿನಲ್ ಕೆಟಗರಿಯಲ್ಲಿ ಸ್ಪರ್ಧಿಸಿದ್ದ ಭಾರತದ ಆರ್‌ಆರ್‌ಆರ್ ಸಿನಿಮಾದ ನಾಟು ನಾಟು…(Naatu Naatu…) ಗೀತೆಯು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಈ ಮೂಲಕ ಎಸ್ ‌ಎಸ್ ರಾಜಮೌಳಿ ನಿರ್ದೇಶನ ಹಾಗೂ ರಾಮ ಚರಣ್ ಮತ್ತು ಜೂ. ಎನ್‌ಟಿಆರ್ ಚಿತ್ರವು ಇತಿಹಾಸವನ್ನು ಸೃಷ್ಟಿಸಿದೆ. ಆಸ್ಕರ್ ಪ್ರಶಸ್ತಿ ಗೆದ್ದ ಸಂಪೂರ್ಣವಾದ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ ಆರ್‌ಆರ್‌ಆರ್(RRR) ಚಿತ್ರವು ಪಾತ್ರವಾಗಿದೆ. ಬೆಸ್ಟ್ ಡ್ಯಾಕುಮೆಂಟರಿ ಶಾರ್ಟ್ ಫಿಲಮ್ ಕೆಟಗರಿಯಲ್ಲಿ ದಿ ಎಲಿಫೆಂಟ್ ವಿಸ್ಪರ್ಸ್(the elephant whisperers) ಆಸ್ಕರ್ ಗೆದ್ದಿದೆ.

2023ರ ಸಾಲಿನ ಬೆಸ್ಟ್ ಒರಿಜಿಯನ್ ಸಾಂಗ್ ಕೆಟಗರಿಯಲ್ಲಿ ಆರ್‌ಆರ್‌ಆರ್ ಚಿತ್ರದ ನಾಟು ನಾಟು ಹಾಡಿನ ಜತೆಗೆ, ಲಿಫ್ಟ್ ಮಿ ಅಪ್(Black Panther: Wakanda Forever), ದಿ ಈಸ್ ಎ ಲೈಫ್(Everything Everywhere All at Once), ಅಪ್ಲೋಸ್(Tell It Like a Woman), ಹೋಲ್ಡ್ ಮೈ ಹ್ಯಾಂಡ್(Top Gun: Maverick) ಸ್ಪರ್ಧಿಸಿದ್ದವು. ರಿಹನ್ನಾ ಮತ್ತು ಲೇಡಿ ಗಾಗಾ ಅವರಂಥ ಸಿಂಗರ್ ಅವರ ಹಾಡುಗಳನ್ನು ಹಿಂದಿಕ್ಕಿ ಆರ್‌ಆರ್‌ಆರ್‌ ಚಿತ್ರದ ನಾಟು ನಾಟು ಹಾಡು ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

RRR Movie ಚಿತ್ರದ ಟ್ವೀಟ್ ಹೀಗಿದೆ…

ಇದನ್ನೂ ಓದಿ: Oscars 2023: ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಅತ್ಯುತ್ತಮ ಕಿರು ಸಾಕ್ಷ್ಯಚಿತ್ರ ಪ್ರಶಸ್ತಿ

ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ ಭಾರತೀಯರು ಕುಣಿದು ಕುಪ್ಪಳಿಸಿದ್ದಾರೆ. ಈ ಹಿಂದೆಯೂ ಭಾರತೀಯ ಕಲಾವಿದರು, ಭಾರತದ ಕಥಾ ವಸ್ತುಗಳನ್ನು ಒಳಗೊಂಡ ಸಿನಿಮಾಗಳಿಗೆ ಆಸ್ಕರ್ ಪ್ರಶಸ್ತಿ ಬಂದಿವೆ. ಆದರೆ, ಸಂಪೂರ್ಣವಾಗಿ ಭಾರತೀಯ ಸಿನಿಮಾವೊಂದು ಆಸ್ಕರ್ ಪ್ರಶಸ್ತಿಯನ್ನು ಗೆಲ್ಲುತ್ತಿರುವುದು ಇದೇ ಮೊದಲು. ಹಾಗಾಗಿ, ಈ ಆಸ್ಕರ್ ಪ್ರಶಸ್ತಿಗೆ ವಿಶೇಷ ಮನ್ನಣೆ ಇದೆ.

Exit mobile version