ನವದೆಹಲಿ: ನ್ಯಾಯಮೂರ್ತಿಗಳ ನೇಮಕಕ್ಕಾಗಿ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಮಾಡಿದ ಶಿಫಾರಸುಗಳಿಗೆ ಅನುಮೋದನೆ ನೀಡಲು ಕೇಂದ್ರ ಸರ್ಕಾರ ವಿಳಂಬ ಧೋರಣೆ (Collegium Row) ಅನುಸರಿಸುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, 3 ದಿನದಲ್ಲಿ 44 ನ್ಯಾಯಮೂರ್ತಿಗಳ ನೇಮಕಕ್ಕೆ ಅನುಮೋದನೆ ನೀಡಲಾಗುವುದು ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಸರ್ಕಾರ ತಿಳಿಸಿದೆ.
“ಕೊಲಿಜಿಯಂ ಶಿಫಾರಸುಗಳಿಗೆ ಅನುಮೋದನೆ ನೀಡುವಲ್ಲಿ ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ. ಈಗಾಗಲೇ 22 ಹೆಸರುಗಳನ್ನು ಕೇಂದ್ರ ಸರ್ಕಾರ ವಾಪಸ್ ಕಳುಹಿಸಿದೆ ಹಾಗೂ ಇದನ್ನೇ ಪುನರಾವರ್ತಿಸುತ್ತಿದೆ. ಹೀಗೆ ವಿಳಂಬ ಧೋರಣೆ ಅನುಸರಿಸುತ್ತಿರುವ ಕಾರಣ ಪ್ರತಿಭಾವಂತ ವಕೀಲರು ನ್ಯಾಯಮೂರ್ತಿಗಳಾಗಲು ಹಿಂದೇಟು ಹಾಕುತ್ತಿದ್ದಾರೆ” ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಹಾಗೂ ಎ.ಎಸ್.ಓಕಾ ಅವರು ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, “ಕೊಲಿಜಿಯಂ ಮಾಡಿದ 104 ಶಿಫಾರಸುಗಳಲ್ಲಿ 44 ನ್ಯಾಯಮೂರ್ತಿಗಳ ನೇಮಕಕ್ಕೆ ಮೂರು ದಿನದಲ್ಲಿಯೇ ಸರ್ಕಾರ ಅನುಮೋದನೆ ನೀಡಿ, ವಾರಾಂತ್ಯದೊಳಗೆ ಸುಪ್ರೀಂ ಕೋರ್ಟ್‌ಗೆ ಕಳುಹಿಸಲಾಗುವುದು” ಎಂದು ಸ್ಪಷ್ಟಪಡಿಸಿದರು. ಬಳಿಕ ಕೊಲಿಜಿಯಂ ಕುರಿತ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಫೆಬ್ರವರಿ 3ಕ್ಕೆ ಮುಂದೂಡಿತು.
ಇದನ್ನೂ ಓದಿ | Collegium | 2022ರಲ್ಲಿ ಅತಿ ಹೆಚ್ಚು ಜಡ್ಜ್‌ಗಳ ನೇಮಕ, ಕೊಲಿಜಿಯಂ ಬಿಕ್ಕಟ್ಟಿನ ಮಧ್ಯೆಯೇ ಕೇಂದ್ರ ಸರ್ಕಾರ ಸ್ಪಷ್ಟನೆ