Narendra Dabholkar Case: ವಿಚಾರವಾದಿ ದಾಭೋಲ್ಕರ್ ಹತ್ಯೆ ಪ್ರಕರಣ; ಹಂತಕರಿಗೆ ಜೀವಾವಧಿ ಶಿಕ್ಷೆ - Vistara News

ದೇಶ

Narendra Dabholkar Case: ವಿಚಾರವಾದಿ ದಾಭೋಲ್ಕರ್ ಹತ್ಯೆ ಪ್ರಕರಣ; ಹಂತಕರಿಗೆ ಜೀವಾವಧಿ ಶಿಕ್ಷೆ

Narendra Dabholkar Case:ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 11 ವರ್ಷಗಳ ಬಳಿಕ ಮಹತ್ವದ ತೀರ್ಪು ಹೊರಬಿದ್ದಿದ್ದು, ಇಬ್ಬರು ಹಂತಕರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ಉಳಿದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ

VISTARANEWS.COM


on

Narendra Dabholkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಾಮಾಜಿಕ ಕಾರ್ಯಕರ್ತ ಹಾಗೂ ಮಹಾರಾಷ್ಟ್ರ(Maharashtra) ಅಂಧಶ್ರದ್ಧ ನಿರ್ಮೂಲನ ಸಮಿತಿ ಮುಖ್ಯಸ್ಥ ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಹತ್ಯೆ (Narendra Dabholkar Case) ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 11 ವರ್ಷಗಳ ಬಳಿಕ ಮಹತ್ವದ ತೀರ್ಪು ಹೊರಬಿದ್ದಿದ್ದು, ಇಬ್ಬರು ಹಂತಕರಿಗೆ ಜೀವಾವಧಿ(Life imprisonment) ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ಉಳಿದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಮಹಾರಾಷ್ಟ್ರದ ಪುಣೆಯ ವಿಶೇಷ ನ್ಯಾಯಾಲಯ ಆರೋಪಿಗಳಾದ ಸಚಿನ್ ಅಂಡುರೆ ಮತ್ತು ಸರದ್ ಕಲಾಸ್ಕರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಅಲ್ಲದೇ ತಲಾ 5ಲಕ್ಷ ರೂ, ದಂಡವನ್ನೂ ವಿಧಿಸಿ ಆದೇಶ ಹೊರಡಿಸಿದೆ. ಇನ್ನು ದಾಭೋಲ್ಕರ್ ಹತ್ಯೆ ಸಂಚಿನ ಮಾಸ್ಟರ್ ಮೈಂಡ್ ಡಾ.ವೀರೇಂದ್ರ ತಾವ್ಡೆ ಮತ್ತು ಇತರ ಇಬ್ಬರು ಆರೋಪಿತ ವಕೀಲರಾದ ಸಂಜೀವ್ ಪುನಾಲೇಕರ್ ಮತ್ತು ವಿಕ್ರಮ್ ಭಾವೆಯನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯವು ಖುಲಾಸೆಗೊಳಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಗೆ ಸಂಬಂಧಿಸಿದ ಪ್ರಕರಣಗಳಿಗೆ ವಿಶೇಷ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎ.ಎ. ಜಾಧವ್ ಈ ತೀರ್ಪು ಪ್ರಕಟಿಸಿದ್ದಾರೆ.

2013ರಲ್ಲಿ ನಡೆದಿದ್ದೇನು?

ಪುಣೆಯ ಓಂಕಾರೇಶ್ವರ ಸೇತುವೆಯ ಮೇಲೆ ಬೆಳಗಿನ ವಾಕಿಂಗ್‌ಗೆ ಹೊರಟಿದ್ದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು 2013ರ ಆಗಸ್ಟ್ 20 ರಂದು ಕಿರಾತಕರು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಐವರನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಸಂಚುಕೋರ ಸನಾತನ ಸಂಸ್ಥೆ ಜೊತೆ ಸಂಪರ್ಕ ಹೊಂದಿದ್ದ ಡಾ.ವೀರೇಂದ್ರ ತಾವ್ಡೆ ಎಂದು ಸಿಬಿಐ ಆರೋಪಿಸಿತ್ತು. ದಾಭೋಲ್ಕರ್ ಅವರು ಹಲವು ವರ್ಷಗಳಿಂದ ಆ ಸಮಿತಿಯನ್ನು ನಡೆಸುತ್ತಿದ್ದರು, ಅವರು ಮೂಢನಂಬಿಕೆ ನಿರ್ಮೂಲನೆಗೆ ಸಂಬಂಧಿಸಿದ ವಿವಿಧ ಪುಸ್ತಕಗಳನ್ನು ಪ್ರಕಟಿಸಿದ್ದಾರೆ ಮತ್ತು ಅನೇಕ ಕಾರ್ಯಾಗಾರಗಳನ್ನು ಸಹ ಆಯೋಜಿಸಿದ್ದರು.

ಈ ಹತ್ಯೆಯ ನಂತರ ದೇಶಾದ್ಯಂತ ಸಾಕಷ್ಟು ಗಲಾಟೆ ನಡೆದಿತ್ತು. ನಂತರ, ದಾಭೋಲ್ಕರ್ ಅವರ ಮಕ್ಕಳು ಸಲ್ಲಿಸಿದ ಅರ್ಜಿಗಳ ಮೇಲೆ, ಬಾಂಬೆ ಹೈಕೋರ್ಟ್ ಪ್ರಕರಣವನ್ನು ಪುಣೆ ಪೊಲೀಸರಿಂದ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿತ್ತು. ದಾಭೋಲ್ಕರ್ ಅವರ ಕೊಲೆಗೆ ಷಡ್ಯಂತ್ರ ರೂಪಿಸಲಾಗಿದೆ, ಇದರಿಂದಾಗಿ ಜನರ ಮನಸ್ಸಿನಲ್ಲಿ ದೊಡ್ಡ ಮಟ್ಟದಲ್ಲಿ ಭಯವನ್ನು ಉಂಟುಮಾಡಬಹುದು ಮತ್ತು ಅವರ ಕೊಲೆಯ ನಂತರ ‘ಅಂಧಶ್ರದ್ಧ ನಿರ್ಮೂಲನ ಸಮಿತಿ’ಯ ಕೆಲಸವನ್ನು ಯಾರೂ ಮಾಡಲು ಸಾಧ್ಯವಿಲ್ಲ ಎಂಬುದು ದುಷ್ಕರ್ಮಿಗಳ ಯೋಚನೆಯಾಗಿತ್ತು ಎಂಬುದು ತನಿಖೆಯಲ್ಲಿ ಬಯಲಾಗಿತ್ತು. ಜೂನ್ 2016 ರಲ್ಲಿ ಹಿಂದುತ್ವ ಪರ ಬಲಪಂಥೀಯ ಸಂಘಟನೆ ಸನಾತನ ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದ ಡಾ. ವೀರೇಂದ್ರ ಸಿಂಗ್ ತಾವ್ಡೆಯನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Mani Shankar Aiyar: ಪಾಕಿಸ್ತಾನವನ್ನು ಕೆಣಕಿದರೆ ಅಣು ಬಾಂಬ್ ಬೀಳಬಹುದು ಹುಷಾರ್! ಮೋದಿಗೆ ಮಣಿಶಂಕರ್ ಅಯ್ಯರ್ ಎಚ್ಚರಿಕೆ!

ಪುಣೆಯಲ್ಲಿ ದಾಭೋಲ್ಕರ್ ಅವರ ಹತ್ಯೆ ಬಳಿಕ ಮತ್ತಷ್ಟು ವಿಚಾರವಾದಿಗಳನ್ನು ಗುರಿಯಾಗಿಸಿ ದಾಳಿ ನಡೆಸಿ ಕೊಲೆಗಳು ನಡೆದಿದ್ದವು. 2015ರ ಫೆಬ್ರವರಿಯಲ್ಲಿ ಗೋವಿಂದ್ ಪನ್ಸಾರೆ, ಅದೇ ವರ್ಷದ ಆಗಸ್ಟ್‌ನಲ್ಲಿ ಕರ್ನಾಟಕದ ಸಂಶೋಧಕ ಎಂಎಂ ಕಲಬುರ್ಗಿ ಹಾಗೂ 2017ರ ಸೆಪ್ಟೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಮನೆಯ ಹೊರಗೆ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಗಳಿಗೆ ಸಾಮ್ಯತೆ ಇದ್ದು, ಒಂದೇ ಸಂಘಟನೆಯವರ ಕೈವಾಡ ಇವುಗಳಲ್ಲಿ ಇವೆ ಎಂದು ಆರೋಪಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

JP Nadda: ರಾಜ್ಯಸಭೆ ಸದನ ನಾಯಕರಾಗಿ ಜೆ.ಪಿ. ನಡ್ಡಾ ಆಯ್ಕೆ; ಪಿಯೂಷ್‌ ಗೋಯಲ್‌ ಬದಲು ನೇಮಕ

JP Nadda: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರ ಅವಧಿಯು ಇದೇ ತಿಂಗಳು ಮುಗಿಯಲಿದೆ. 2020ರಿಂದ ಬಿಜೆಪಿ ಅಧ್ಯಕ್ಷರಾಗಿರುವ ನಡ್ಡಾ ಅವರು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಈಗ ಜೆ.ಪಿ. ನಡ್ಡಾ ಅವರ ಹುದ್ದೆಗೆ ಯಾರು ಆಯ್ಕೆಯಾಗುತ್ತಾರೆ, ಯಾರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂಬ ಕುತೂಹಲ ಮೂಡಿದೆ.

VISTARANEWS.COM


on

JP Nadda
Koo

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಜೆ.ಪಿ.ನಡ್ಡಾ (JP Nadda) ಅವರು ರಾಜ್ಯಸಭೆಯ (Rajya Sabha) ಸದನ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇದುವರೆಗೆ ಪಿಯೂಷ್‌ ಗೋಯಲ್‌ (Piyush Goyal) ಅವರು ಮೇಲ್ಮನೆಯಲ್ಲಿ ಸದನ ನಾಯಕರಾಗದ್ದರು. ಈಗ ಅವರ ಬದಲಿಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಆಯ್ಕೆ ಮಾಡಲಾಗಿದೆ. ಪಿಯೂಷ್‌ ಗೋಯಲ್‌ ಅವರು ಲೋಕಸಭೆ ಚುನಾವಣೆಯಲ್ಲಿ ಮುಂಬೈ ಉತ್ತರ ಕ್ಷೇತ್ರದಿಂದ ಆಯ್ಕೆಯಾದ ಕಾರಣ ಜೆ.ಪಿ.ನಡ್ಡಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪಿಯೂಷ್‌ ಗೋಯಲ್‌ ಅವರು 2010ರ ಜುಲೈ 5ರಂದು ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅವರನ್ನು ರಾಜ್ಯಸಭೆ ಸದನ ನಾಯಕರನ್ನಾಗಿ 2021ರ ಜುಲೈ 14ರಂದು ಆಯ್ಕೆ ಮಾಡಲಾಗಿತ್ತು. ಜೂನ್‌ 24ರಂದು ಪಿಯೂಷ್‌ ಗೋಯಲ್‌ ಅವರು ಲೋಕಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೆ.ಪಿ. ನಡ್ಡಾ ಅವರು ವರ್ಷದ ಆರಂಭದಲ್ಲಿ ಗುಜರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಸದ್ಯ, ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷ ನಾಯಕರಾಗಿದ್ದಾರೆ.

BJP National President JP Nadda Election campaign in Surapura

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರ ಅವಧಿಯು ಇದೇ ತಿಂಗಳು ಮುಗಿಯಲಿದೆ. 2020ರಿಂದ ಬಿಜೆಪಿ ಅಧ್ಯಕ್ಷರಾಗಿರುವ ನಡ್ಡಾ ಅವರು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಈಗ ಜೆ.ಪಿ. ನಡ್ಡಾ ಅವರ ಹುದ್ದೆಗೆ ಯಾರು ಆಯ್ಕೆಯಾಗುತ್ತಾರೆ, ಯಾರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂಬ ಕುತೂಹಲ ಮೂಡಿದೆ. ಜೆ.ಪಿ. ನಡ್ಡಾ ಅವರಿಗೆ ಆರೋಗ್ಯ ಖಾತೆ ಜತೆಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆಗಳನ್ನೂ ನೀಡಲಾಗಿದೆ.

ಬಜೆಟ್‌ನಲ್ಲಿ ಹೊಸ ತೆರಿಗೆ ಸ್ಲ್ಯಾಬ್‌?

“ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Parliament Session 2024: ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಎಚ್‌ಡಿಕೆ, ಶೋಭಾ ಕರಂದ್ಲಾಜೆ; Video ಇಲ್ಲಿದೆ

Continue Reading

ದೇಶ

AI Sex Dolls: ಶೀಘ್ರವೇ ಬರಲಿವೆ ಎಐ ಆಧಾರಿತ ‘ಸೆಕ್ಸ್‌’ ಬೊಂಬೆಗಳು; ನೈಜ ‘ಸುಖ’ಕ್ಕೆ ಇನ್ನು ಮನುಷ್ಯರೇ ಬೇಕಿಲ್ಲ!

AI Sex Dolls: ಚೀನಾದ ಶೆಂಝೆನ್‌ ಮೂಲದ ಸ್ಟಾರ್‌ಪೆರಿ ಟೆಕ್ನಾಲಜಿ ಎಂಬ ಕಂಪನಿಯ ವಿಜ್ಞಾನಿಗಳು ಸೆಕ್ಸ್‌ ಬೊಂಬೆಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಇವರು ಸೆಕ್ಸ್‌ ರೋಬೊಗಳನ್ನು ತಯಾರಿಸುತ್ತಿದ್ದಾರೆ. ಇವುಗಳು ಮನುಷ್ಯರಿಗೆ ನೈಜವಾದ ಲೈಂಗಿಕ ಸುಖವನ್ನು ನೀಡಲಿವೆ ಎಂದು ಸೌತ್‌ ಚೀನಾ ಮಾರ್ನಿಂಗ್‌ ಪೋಸ್ಟ್‌ ಸುದ್ದಿಸಂಸ್ಥೆಯು ವರದಿ ಮಾಡಿದೆ.

VISTARANEWS.COM


on

Sex Doll
Koo

ನವದೆಹಲಿ: ಭಾರತ ಸೇರಿ ಜಗತ್ತಿನೆಲ್ಲೆಡೆ ಪ್ರತಿಯೊಂದು ಕ್ಷೇತ್ರಕ್ಕೂ ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನ ಕಾಲಿಟ್ಟಿದೆ. ಲವ್‌ ಲೆಟರ್‌ ಬರೆಯುವುದರಿಂದ ಹಿಡಿದು ಕೋಡ್‌ ರಚನೆವರೆಗೆ, ರೋಬೊಗಳು ಕುಳಿತಲ್ಲಿಗೆ ಬಂದು ಊಟ ಸರಬರಾಜು ಮಾಡುವವರೆಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಪಸರಿಸಿದೆ. ಇದರ ಬೆನ್ನಲ್ಲೇ, ವಿಜ್ಞಾನಿಗಳು ಮತ್ತೊಂದು ಹೆಜ್ಜೆ ಇರಿಸಿದ್ದಾರೆ. ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಸೆಕ್ಸ್‌ ಬೊಂಬೆಗಳನ್ನು (AI Powered Sex Dolls) ಅಥವಾ ಸೆಕ್ಸ್‌ ರೋಬೊಗಳನ್ನು ಅಭಿವೃದ್ಧಿಪಡಿಸಿದ್ದು, ಇವು ಮನುಷ್ಯರಿಗೆ ನೈಜ ಲೈಂಗಿಕ ಸುಖವನ್ನು ಅನುಭವಿಸಲು ಸಾಧ್ಯವಾಗಿಸುತ್ತವೆ ಎಂದು ತಿಳಿದುಬಂದಿದೆ.

ಹೌದು, ಚೀನಾದ ಶೆಂಝೆನ್‌ ಮೂಲದ ಸ್ಟಾರ್‌ಪೆರಿ ಟೆಕ್ನಾಲಜಿ ಎಂಬ ಕಂಪನಿಯ ವಿಜ್ಞಾನಿಗಳು ಸೆಕ್ಸ್‌ ಬೊಂಬೆಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಇವರು ಸೆಕ್ಸ್‌ ರೋಬೊಗಳನ್ನು ತಯಾರಿಸುತ್ತಿದ್ದಾರೆ. ಇವುಗಳು ಮನುಷ್ಯರಿಗೆ ನೈಜವಾದ ಲೈಂಗಿಕ ಸುಖವನ್ನು ನೀಡಲಿವೆ ಎಂದು ಸೌತ್‌ ಚೀನಾ ಮಾರ್ನಿಂಗ್‌ ಪೋಸ್ಟ್‌ ಸುದ್ದಿಸಂಸ್ಥೆಯು ವರದಿ ಮಾಡಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಪುರುಷರು, ಮಹಿಳೆಯರು ಸೇರಿ ಯಾರಿಗೇ ಆಗಲಿ ಲೈಂಗಿಕ ಸುಖ ಅನುಭವಿಸಲು ಬೇರೊಬ್ಬರ ಅವಶ್ಯಕತೆಯೇ ಇರುವುದಿಲ್ಲ. ಸೆಕ್ಸ್‌ ಡಾಲ್‌ಗಳ ಮೂಲಕವೇ ಸಂಭೋಗ ಸುಖ ಅನುಭವಿಸಬಹುದು ಎಂದು ಹೇಳಲಾಗುತ್ತಿದೆ.

ಇವುಗಳ ಕಾರ್ಯನಿರ್ವಹಣೆ ಹೇಗೆ?

ಜಗತ್ತಿನಲ್ಲಿ ಇದುವರೆಗೆ ಕೃತಕವಾಗಿ ಲೈಂಗಿಕ ಸುಖ ಅನುಭವಿಸಲು ಸಾಧ್ಯವಿರಲಿಲ್ಲ. ಆದರೆ, ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಚೀನಾ ವಿಜ್ಞಾನಿಗಳು ನೈಜ ಸುಖ ಅನುಭವಿಸುವ ರೋಬೊಗಳನ್ನು ತಯಾರಿಸುತ್ತಿದ್ದಾರೆ. ಸೆಕ್ಸ್‌ ಡಾಲ್‌ಗಳು ಬ್ಯಾಟರಿ ಚಾಲಿತ ಆಗಿರುತ್ತವೆ. ಅವುಗಳ ಮಾಂಸಖಂಡಗಳು ಕೂಡ ಮನುಷ್ಯರ ಹಾಗೆ ಇರಲಿದ್ದು, ಫ್ಲೆಕ್ಸಿಬಲ್‌ ಕೂಡ ಆಗಿರಲಿವೆ. ಮನುಷ್ಯರ ಭಾವನೆಗಳಿಗೆ ಸ್ಪಂದಿಸಿ, ನಿಜವಾದ ಲೈಂಗಿಕ ಸುಖವನ್ನು ಅನುಭವಿಸಲು ಇವು ನೆರವಾಗಲಿವೆ ಎಂದು ಹೇಳಲಾಗುತ್ತಿದೆ. ಹಲವು ಸವಾಲುಗಳನ್ನು ಮೀರಿಯೂ ವಿಜ್ಞಾನಿಗಳು ಈ ಕನಸು ನನಸಾಗಿಸಿಕೊಳ್ಳಲು ಶ್ರಮಿಸುತ್ತಿದ್ದಾರೆ ಎಂದು ಕಂಪನಿ ತಿಳಿಸಿದೆ.

ರೇಟ್‌ ಎಷ್ಟಾಗಬಹುದು?

ವಿಜ್ಞಾನಿಗಳು ಈಗಾಗಲೇ ಸೆಕ್ಸ್‌ ರೋಬೊಗಳನ್ನು ತಯಾರಿಸುತ್ತಿದ್ದಾರೆ. ಸುಮಾರು 5.6 ಅಡಿಯ ರೋಬೊಗಳನ್ನು ತಯಾರಿಸುತ್ತಿದ್ದು, ಬಳಸುವವರಿಗೆ ಅನುಕೂಲವಾಗಲಿ ಎಂದು 29 ಕೆ.ಜಿ ತೂಕದ ಡಾಲ್‌ಗಳನ್ನು ತಯಾರಿಸುತ್ತಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿ ಇವುಗಳನ್ನು ತಯಾರಿಸುವ ಕಾರಣ ಆರಂಭದಲ್ಲಿ ಇವುಗಳ ಬೆಲೆಯು 1.25 ಲಕ್ಷ ರೂ.ನಿಂದ 6 ಲಕ್ಷ ರೂ.ವೆರೆಗೆ ಇರಲಿವೆ ಎಂದು ತಿಳಿದುಬಂದಿದೆ. ಇದರ ಮಧ್ಯೆಯೇ ಸೆಕ್ಸ್‌ ರೋಬೊಗಳನ್ನು ತಯಾರಿಸುವುದರಿಂದ ಮನುಷ್ಯ ಮನುಷ್ಯನ ಸಂಬಂಧ, ಬಾಂಡಿಂಗ್‌ ಹಾಳಾಗುತ್ತದೆ ಎಂದು ಒಂದಷ್ಟು ಮಡಿವಂತರು ಟೀಕೆಗಳನ್ನು ಕೂಡ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Love Sex Dhoka: ಪ್ರೀತಿಸುವ ನಾಟಕವಾಡಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌; ಯುವಕನ ಬಂಧನಕ್ಕಾಗಿ ಪೊಲೀಸ್‌ ಠಾಣೆ ಮುಂದೆ ಯುವತಿ ಧರಣಿ

Continue Reading

ವಾಣಿಜ್ಯ

Union Budget 2024: ಬಜೆಟ್‌ನಲ್ಲಿ ಹೊಸ ಟ್ಯಾಕ್ಸ್‌ ಸ್ಲ್ಯಾಬ್‌ ಘೋಷಣೆ ಸಾಧ್ಯತೆ; ಯಾರಿಗೆಲ್ಲ ಅನುಕೂಲ?

Union Budget 2024: ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಬಜೆಟ್‌ ಮಂಡನೆ ಮಾಡಲಿದ್ದಾರೆ. ಇನ್ನು, ಬಜೆಟ್‌ನಲ್ಲಿ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಹೊಸ ತೆರಿಗೆ ಸ್ಲ್ಯಾಬ್‌ಅನ್ನು ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ. ಹಾಗಾದರೆ, ಎಷ್ಟು ಆದಾಯ ಇರುವವರಿಗೆ ಹೊಸ ತೆರಿಗೆ ಸ್ಲ್ಯಾಬ್‌ ಅನ್ವಯ ಲಾಭವಾಗುತ್ತದೆ? ಇಲ್ಲಿದೆ ಮಾಹಿತಿ.

VISTARANEWS.COM


on

Union Budget 2024
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರಕ್ಕೆ ಬಂದಿದ್ದು, ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹಾಗಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ ಮಂಡಿಸಲು (Union Budget 2024) ಸಿದ್ಧತೆ ನಡೆಸಿದ್ದಾರೆ. ಇದರ ಬೆನ್ನಲ್ಲೇ, ಈ ಬಾರಿಯ ಬಜೆಟ್‌ನಲ್ಲಿ ಹೊಸ ಟ್ಯಾಕ್ಸ್‌ ಸ್ಲ್ಯಾಬ್‌ ಪರಿಚಯ ಮಾಡಲಾಗುತ್ತದೆ. ಇದರಿಂದ ಮಧ್ಯಮ ವರ್ಗದವರಿಗೆ ಭಾರಿ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

“ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಹೊಸ ತೆರಿಗೆ ಪದ್ಧತಿಯ ಸ್ಲ್ಯಾಬ್‌ ಹೀಗೆ

ಆದಾಯವಿಧಿಸುವ ತೆರಿಗೆ
0-3 ಲಕ್ಷ ರೂ.ತೆರಿಗೆ ಇರಲ್ಲ
3-6 ಲಕ್ಷ ರೂ.5%
6-9 ಲಕ್ಷ ರೂ.10%
9-12 ಲಕ್ಷ ರೂ.15%
12-15 ಲಕ್ಷ ರೂ.20%
15 ಲಕ್ಷ ರೂ.ಗಿಂತ ಹೆಚ್ಚು30%

ದೇಶದಲ್ಲಿ ಈಗ ಹಳೆಯ ತೆರಿಗೆ ಪದ್ಧತಿ ಹಾಗೂ ಹೊಸ ತೆರಿಗೆ ಪದ್ಧತಿ ಚಾಲ್ತಿಯಲ್ಲಿವೆ. ಆದಾಯ ತೆರಿಗೆ ಪಾವತಿದಾರರು ಯಾವ ತೆರಿಗೆ ಪದ್ಧತಿಯನ್ನು ಬೇಕಾದರೂ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಹಳೆಯ ತೆರಿಗೆ ಪದ್ಧತಿಯಲ್ಲಿ 2.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಇದೆ. ಹೊಸ ತೆರಿಗೆ ಪದ್ಧತಿ ಅಳವಡಿಸಿಕೊಂಡವರಿಗೆ 3 ಲಕ್ಷ ರೂ.ವರೆಗೆ ವಿನಾಯಿತಿ ಇದೆ. ಈಗ ಇದನ್ನು 5 ಲಕ್ಷ ರೂ.ಗೆ ಏರಿಕೆ ಮಾಡಬಹುದು ಎಂಬ ನಿರೀಕ್ಷೆ ಇದೆ. ಆದರೆ, ಗರಿಷ್ಠ ತೆರಿಗೆ ಪ್ರಮಾಣವನ್ನು ಶೇ.30ರಿಂದ ಶೇ.25ಕ್ಕೆ ಇಳಿಸಬೇಕು ಎಂಬ ಒತ್ತಾಯವಿದ್ದು, ಇದನ್ನು ಈಡೇರಿಸುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ. ಜುಲೈ 15ರಿಂದ 22ರ ಅವಧಿಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲಿದ್ದಾರೆ ಎಂದು ಹೇಳಲಾಗತ್ತಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಜುಲೈನಲ್ಲಿ ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

Continue Reading

ದೇಶ

Physical Abuse: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಬರ್ಬರ ಕೊಲೆ; ದೇಹದ ತುಂಡುಗಳನ್ನು ರೈಲಿನಲ್ಲಿ ಪಾರ್ಸೆಲ್‌

Physical Abuse:ಪತಿಯೊಂದಿಗೆ ಜಗಳ ಮಾಡಿ ಹೊರಬಂದಿದ್ದ ಮಹಿಳೆಗೆ ಆಶ್ರಯ ಕೊಡುವ ನೆಪದಲ್ಲಿ 60ರ ಕಾಮುಕ ಆಕೆಯನ್ನು ರೈಲು ನಿಲ್ದಾಣದ ಪಕ್ಕದಲ್ಲೇ ಇರುವ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅದಕ್ಕೆ ಆಕೆ ವಿರೋಧ ವ್ಯಕ್ತಪಡಿಸಿದಾಗ ಪಾಪಿ ಆಕೆಯನ್ನು ಹತ್ಯೆ ಮಾಡಿ ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ಹಾಕಿದ್ದಾನೆ. ಇದಷ್ಟೇ ಅಲ್ಲದೇ ಬಳಿಕ ಎರಡು ರೈಲಿನಲ್ಲಿ ಮೃತದೇಹ ತುಂಡುಗಳನ್ನು ಪಾರ್ಸೆಲ್ ಮಾಡಿದ್ದಾನೆ. ಇನ್ನು ಆರೋಪಿಯನ್ನು 60 ವರ್ಷ ಕಮಲೇಶ್ ಪಟೇಲ್ ಎಂದು ಗುರುತಿಸಲಾಗಿದ್ದು, ಪೊಲೀಸರು ಅವರ ಹೆಡೆಮುರಿಕಟ್ಟಿದ್ದಾರೆ.

VISTARANEWS.COM


on

Physical abuse
Koo

ಇಂಧೋರ್‌: ಬೀದಿ ಕಾಮುಕರ ಕಾಟ ದಿನೇದಿನೇ ಹೆಚ್ಚಾಗುತ್ತಲೇ ಇದೆ. ತಮ್ಮ ತೃಷೆಯನ್ನು ತೀರಿಸಿಕೊಳ್ಳಲು ಎಂಥಾ ನೀಚ ಮಟ್ಟಕ್ಕಾದರೂ ಕಾಮುಕರು ಇಳಿಯುತ್ತಾರೆ. ಒಂದು ವೇಳೆ ತಮ್ಮ ಕೃತ್ಯಕ್ಕೆ ಅಡ್ಡಿಯಾದರೆ ಆ ಮಹಿಳೆಯನ್ನೇ ಬರ್ಬರವಾಗಿ ಕೊಲೆಗೈಯುವ ಪ್ರಕರಣಗಳೂ ಆಗಾಗ ಬೆಳಕಿಗೆ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳೆಯನ್ನು ಎಳೆದೊಯ್ದ 60 ವರ್ಷದ ಕಾಮುಕ ಅತ್ಯಾಚಾರ(Physical Abuse) ಎಸಗಿ ಹತ್ಯೆ ಮಾಡಿದ ಭೀಕರ ಘಟನೆ(Viral News) ಉಜ್ಜೈನಿಯಲ್ಲಿ ನಡಿದಿದೆ

ಘಟನೆ ವಿವರ:

ಪತಿಯೊಂದಿಗೆ ಜಗಳ ಮಾಡಿ ಹೊರಬಂದಿದ್ದ ಮಹಿಳೆಗೆ ಆಶ್ರಯ ಕೊಡುವ ನೆಪದಲ್ಲಿ 60ರ ಕಾಮುಕ ಆಕೆಯನ್ನು ರೈಲು ನಿಲ್ದಾಣದ ಪಕ್ಕದಲ್ಲೇ ಇರುವ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅದಕ್ಕೆ ಆಕೆ ವಿರೋಧ ವ್ಯಕ್ತಪಡಿಸಿದಾಗ ಪಾಪಿ ಆಕೆಯನ್ನು ಹತ್ಯೆ ಮಾಡಿ ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ಹಾಕಿದ್ದಾನೆ. ಇದಷ್ಟೇ ಅಲ್ಲದೇ ಬಳಿಕ ಎರಡು ರೈಲಿನಲ್ಲಿ ಮೃತದೇಹ ತುಂಡುಗಳನ್ನು ಪಾರ್ಸೆಲ್ ಮಾಡಿದ್ದಾನೆ. ಇನ್ನು ಆರೋಪಿಯನ್ನು 60 ವರ್ಷ ಕಮಲೇಶ್ ಪಟೇಲ್ ಎಂದು ಗುರುತಿಸಲಾಗಿದ್ದು, ಪೊಲೀಸರು ಅವರ ಹೆಡೆಮುರಿಕಟ್ಟಿದ್ದಾರೆ.

ಜೂನ್ 6ರಂದು ಈ ಘಟನೆ ನಡೆದಿದ್ದು, ಪತಿಯೊಂದಿಗೆ ಜಗಳ ಮಾಡಿದ 36 ವರ್ಷದ ಮಹಿಳೆ ಉಜ್ಜೈನಿ ರೈಲು ನಿಲ್ದಾಣದಲ್ಲಿ ಕುಳಿತಿದ್ದಳು. ಮಥುರಾಗೆ ತೆರಳಲು ರೈಲಿಗಾಗಿ ಕಾಯುತ್ತಿದ್ದ ಮಹಿಳೆಗೆ ಆಶ್ರಯ ನೀಡುವ ನೆಪದಲ್ಲಿ ಬಂದ ಕಮಲೇಶ್‌ ಪಟೇಲ್‌ ಆಕೆಯನ್ನು ಪಕ್ಕದಲ್ಲೇ ಇರುವ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಮನೆಯಲ್ಲಿ ಆಕೆಗೆ ತಿನ್ನುವ ಊಟದಲ್ಲಿ ನಿದ್ದೆ ಮಾತ್ರೆ ನೀಡಿದ್ದಾನೆ. ಆಕೆ ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಆದರೆ ನಿದ್ದೆಯ ಮಂಪರಿನಲ್ಲಿದ್ದ ಆಕೆ ಅತ್ಯಾಚಾರ ಪ್ರತಿಭಟಿಸಿದ್ದಾಳೆ. ಆಗ ಕೋಪದಲ್ಲಿ ಕಮಲೇಶ್ ಪಟೇಲ್ ಮಹಿಳೆಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ಆಕೆಯ ದೇಹವನ್ನು ಕತ್ತರಿಸಿದ್ದಾನೆ. ಸರಿಸುಮಾರು 4 ಗಂಟೆಗೂ ಹೆಚ್ಚು ಕಾಲ ಮಹಿಳೆಯ ದೇಹ ಹತ್ತರಿಸಿದ ಕಮಲೇಶ್ ಪಟೇಲ್‌, ಗೋಣಿ ಚೀಲದಲ್ಲಿ ಪ್ಯಾಕ್ ಮಾಡಿದ್ದಾನೆ. ಬಳಿಕ ರೈಲು ನಿಲ್ದಾಣಕ್ಕೆ ತೆರಳಿ ಎರಡು ರೈಲುಗಳಲ್ಲಿ ಆಕೆಯ ಮೃತದೇಹದ ತುಂಡುಗಳನ್ನು ಇಟ್ಟು ಪರಾರಿಯಾಗಿದ್ದಾನೆ.

ಇನ್ನು ಜೂನ್ 10 ರಂದು ಉತ್ತರಖಂಡ ರಿಷಿಕೇಶಿ ರೈಲು ನಿಲ್ದಾಣದಲ್ಲಿ ರೈಲಿನಲ್ಲಿ ಮಹಿಳೆಯ ಕೈ ಕಾಲುಗಳು ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹುಡುಕಾಟ ನಡೆಸಿದಾಗ ಮಹಿಳೆಯ ದೇಹದ ಇತರ ಭಾಗಗಳು ಸಿಕ್ಕಿವೆ. ಈ ಕುರಿತು ತನಿಖೆ ನಡೆಸಿದ ಪೊಲೀಸರು ರೈಲು ಹಾದು ಬಂದ ಎಲ್ಲಾ ನಿಲ್ದಾಣಗಲ್ಲಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಆರೋಪಿ ಪತ್ತೆ ಹಚ್ಚಿದ ಪೊಲೀಸರು ಕಮಲೇಶ್ ಪಟೇಲ್ ಬಂಧಿಸಿದ್ದಾರೆ. ಆರೋಪಿ ಇದೇ ರೀತಿ ಹಿಂದೆಯೂ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Shashi Tharoor Controversy: ಉತ್ತರಪ್ರದೇಶದ ಬಗ್ಗೆ ಶಶಿ ತರೂರ್‌ ಹೇಳಿದ್ದೇನು ಗೊತ್ತಾ?; ಭಾರೀ ವಿವಾದಕ್ಕೀಡಾಗ್ತಿದೆ ಈ ಪೋಸ್ಟ್‌

Continue Reading
Advertisement
Sleep After Lunch
ಲೈಫ್‌ಸ್ಟೈಲ್3 mins ago

Sleep After Lunch: ಊಟದ ನಂತರ ನಮಗೆ ಆಕಳಿಕೆ, ನಿದ್ದೆ ಬರುವುದೇಕೆ?

R Ashok demands that the Congress apologize for imposing emergency
ಕರ್ನಾಟಕ10 mins ago

R Ashok: ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಲಿ; ಆರ್‌. ಅಶೋಕ್‌

Viral Video
Latest17 mins ago

Viral Video: ರೀಲ್ಸ್ ಮಾಡಲು ಹೋದ ವಿದ್ಯಾರ್ಥಿನಿಗೆ ಕೊನೆಗೆ ಆಗಿದ್ದೇನು? ವಿಡಿಯೊ ನೋಡಿ

JP Nadda
ದೇಶ23 mins ago

JP Nadda: ರಾಜ್ಯಸಭೆ ಸದನ ನಾಯಕರಾಗಿ ಜೆ.ಪಿ. ನಡ್ಡಾ ಆಯ್ಕೆ; ಪಿಯೂಷ್‌ ಗೋಯಲ್‌ ಬದಲು ನೇಮಕ

LKG UKG in Anganwadis
ಪ್ರಮುಖ ಸುದ್ದಿ24 mins ago

LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

Monsoon Trench Coat Fashion
ಫ್ಯಾಷನ್33 mins ago

Monsoon Trench Coat Fashion: ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

Kamal Haasan predicts Deepika Padukone baby choose cinema career
ಟಾಲಿವುಡ್48 mins ago

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

tumkur Shoot out
ಕ್ರೈಂ56 mins ago

Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

LKG UKG In Govt Schools
ಕರ್ನಾಟಕ1 hour ago

LKG UKG In Govt Schools: ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

Sex Doll
ದೇಶ1 hour ago

AI Sex Dolls: ಶೀಘ್ರವೇ ಬರಲಿವೆ ಎಐ ಆಧಾರಿತ ‘ಸೆಕ್ಸ್‌’ ಬೊಂಬೆಗಳು; ನೈಜ ‘ಸುಖ’ಕ್ಕೆ ಇನ್ನು ಮನುಷ್ಯರೇ ಬೇಕಿಲ್ಲ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌