Site icon Vistara News

Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

Mallikarjun Kharge

Narendra Modi government may fall: Mallikarjun Kharge's ominous warning to BJP

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಪಡೆದು ಸರ್ಕಾರ ರಚಿಸಿದೆ. ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರು ಖಾತೆ ಹಂಚಿಕೆಯನ್ನೂ ಮಾಡಿದ್ದಾರೆ. ಇದರ ಬೆನ್ನಲ್ಲೇ, “ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶೀಘ್ರದಲ್ಲೇ ಪತನವಾಗಲಿದೆ. ಈ ಕುರಿತು ಕಾದು ನೋಡೋಣ” ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಭವಿಷ್ಯ ನುಡಿದಿದ್ದಾರೆ.

“ದೇಶದ ಜನರು ಬಹುಮತದ ಸರ್ಕಾರವನ್ನು ಆಯ್ಕೆ ಮಾಡಿಲ್ಲ. ಅಲ್ಪಮತದ ಸರ್ಕಾರವು ದೇಶದಲ್ಲಿದೆ. ಆಕಸ್ಮಿಕವಾಗಿ ಬಿಜೆಪಿ ಮೈತ್ರಿಕೂಟವು ಸರ್ಕಾರ ರಚಿಸಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಎನ್‌ಡಿಎ ಮೈತ್ರಿಕೂಟದ ಸರ್ಕಾರವು ಪತನವಾಗಬಹುದು” ಎಂಬುದಾಗಿ ಪಿಟಿಐ ಸುದ್ದಿಸಂಸ್ಥೆಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 240 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಟಿಡಿಪಿ, ಜೆಡಿಯು, ಎಲ್‌ಜೆಪಿ ಹಾಗೂ ಏಕನಾಥ್‌ ಶಿಂಧೆ ಬಣದ ಶಿವಸೇನೆಯ ಬೆಂಬಲದೊಂದಿಗೆ ಮೈತ್ರಿ ಸರ್ಕಾರ ರಚಿಸಿದೆ.

Narendra Modi Live

ಕೆ.ಸಿ.ತ್ಯಾಗಿ ತಿರುಗೇಟು

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಜೆಡಿಯು ನಾಯಕ ಕೆ.ಸಿ. ತ್ಯಾಗಿ ತಿರುಗೇಟು ನೀಡಿದ್ದಾರೆ. “ಮಲ್ಲಿಕಾರ್ಜುನ ಖರ್ಗೆ ಅವರು ಹುರುಳಿಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಖರ್ಗೆ ಅವರ ಹೇಳಿಕೆಯನ್ನು ಖಂಡಿಸುತ್ತೇನೆ” ಎಂಬುದಾಗಿ ಕೆ.ಸಿ.ತ್ಯಾಗಿ ಹೇಳಿದ್ದಾರೆ. “ನಾವು ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟವನ್ನು ತೊರೆಯುವುದಿಲ್ಲ” ಎಂಬುದಾಗಿ ನಿತೀಶ್‌ ಕುಮಾರ್‌ ಅವರು ಇದಕ್ಕೂ ಮೊದಲು ಹೇಳಿದ್ದರು. ಚಂದ್ರಬಾಬು ನಾಯ್ಡು ಅವರ ಟಿಡಿಪಿಯು ಕೂಡ ಬಿಜೆಪಿ ಜತೆ ಅಚಲವಾಗಿ ನಿಂತಿದೆ.

ಮೊದಲು ಭವಿಷ್ಯ ನುಡಿದಿದ್ದು ಮಮತಾ

ಕೇಂದ್ರ ಸರ್ಕಾರವು ಶೀಘ್ರದಲ್ಲೇ ಪತನವಾಗಲಿದೆ ಎಂದು ಒಂದು ವಾರದ ಹಿಂದಷ್ಟೇ ಟಿಎಂಸಿ ವರಿಷ್ಠ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದರು. “ಯಾರು (ಬಿಜೆಪಿ) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ ಎಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಎಂಬುದಾಗಿ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ. ಯಾವ ಸರ್ಕಾರವೂ 15 ದಿನದಲ್ಲಿ ಬೇಕಾದರು ಪತನವಾಗಬಹುದು” ಎಂದಿದ್ದರು.

ಇದನ್ನೂ ಓದಿ: Narendra Modi: ನಗು ನಗುತ್ತಾ ಸೆಲ್ಫಿಗೆ ಪೋಸ್‌ ಕೊಟ್ಟ ಮೋದಿ, ಮೆಲೋನಿ; ಸೋಷಿಯಲ್‌ ಮೀಡಿಯಾದಲ್ಲಿ ʼಮೆಲೋಡಿʼಯದ್ದೇ ಸದ್ದು

Exit mobile version