Site icon Vistara News

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Narendra Modi

ವಾರಾಣಸಿ: ಮೂರನೇ ಬಾರಿ ಗೆಲುವಿನ ನಿರೀಕ್ಷೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಕೆಲವೇ ಕ್ಷಣಗಳಲ್ಲಿ ವಾರಾಣಸಿ(Varanasi)ಯಲ್ಲಿ ನಾಮಪತ್ರ(Nomination Filing) ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ವಾರಾಣಸಿಯಲ್ಲಿರುವ ದಶಾಶ್ವಮೇಧ ಘಾಟ್‌ಗೆ ಭೇಟಿ ಕೊಟ್ಟ ಮೋದಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಐದು ಅರ್ಚಕರ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಗಂಗಾ ನದಿ(Ganga River)ಗೆ ಪ್ರಧಾನಿ ಆರತಿ ಬೆಳಗಿದರು.

ಇನ್ನು ಇದಕ್ಕೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಅಂದರೆ ಸೋಮವಾರ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್‌ ಶೋ ನಡೆಸಿದರು. ಸರಿಸುಮಾರು 5 ಕಿಮೀ ವರೆಗೆ ರೋಡ್ ಶೋನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೇ ಇತರ ಪ್ರಮುಖರು ಭಾಗವಹಿಸಲಿದ್ದರು. ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸದರು. 5,000 ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದು, 100 ಪಾಯಿಂಟ್‌ಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮುಸ್ಲಿಂ ಸಮುದಾಯದವರೂ ಮೋದಿಗೆ ವಿಶೇಷ ಸ್ವಾಗತ ಕೋರಿದ್ದರು. ರೋಡ್‌ ಶೋ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

Exit mobile version