Narendra Modi: ತೆಲಂಗಾಣ, ಒಡಿಶಾಕ್ಕೆ ಮೋದಿ ಭೇಟಿ; 26,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ - Vistara News

ದೇಶ

Narendra Modi: ತೆಲಂಗಾಣ, ಒಡಿಶಾಕ್ಕೆ ಮೋದಿ ಭೇಟಿ; 26,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ

Narendra Modi: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸದ್ಯ ವಿವಿಧ ರಾಜ್ಯಗಳ ಪ್ರವಾಸದಲ್ಲಿದ್ದಾರೆ. ಸೋಮವಾರ ಮತ್ತು ಮಂಗಳವಾರ ಅವರು ತೆಲಂಗಾಣ ಮತ್ತು ಒಡಿಶಾದಲ್ಲಿ 26,000 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.

VISTARANEWS.COM


on

modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭುವನೇಶ್ವರ: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸದ್ಯ ವಿವಿಧ ರಾಜ್ಯಗಳ ಪ್ರವಾಸದಲ್ಲಿದ್ದಾರೆ. ಸೋಮವಾರ ಮತ್ತು ಮಂಗಳವಾರ ಅವರು ತೆಲಂಗಾಣ ಮತ್ತು ಒಡಿಶಾದಲ್ಲಿ 26,000 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಇದರಲ್ಲಿ ತೆಲಂಗಾಣದಲ್ಲಿ 6,800 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮತ್ತು ಒಡಿಶಾದಲ್ಲಿ 19,600 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸೇರಿದೆ. ಈ ಯೋಜನೆಗಳು ರಸ್ತೆ, ರೈಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದಂತಹ ಹಲವಾರು ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿವೆ ಎನ್ನುವುದು ವಿಶೇಷ.

ಉಜ್ಜಯಿನಿ ದೇಗುಲಕ್ಕೆ ಭೇಟಿ

ಸೋಮವಾರ ಬೆಳಗ್ಗೆ ತೆಲಂಗಾಣದ ಉಜ್ಜಯಿನಿ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ ಮೋದಿ ಅವರು ಅಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಇತರ ಯೋಜನೆಗಳ ಜತೆಗೆ ಪೆದ್ದಪಲ್ಲಿಯಲ್ಲಿನ ನ್ಯಾಷನಲ್‌ ಥರ್ಮಲ್‌ ಪವರ್‌ ಕಾರ್ಪೋರೇಷನ್‌ ತೆಲಂಗಾಣ ಸೂಪರ್‌ ಥರ್ಮಲ್‌ ಪವರ್‌ ಪ್ರಾಜೆಕ್ಟ್‌ನ 800 ಎಂಡಬ್ಲ್ಯು ಅನ್ನು ಲೋಕಾರ್ಪಣೆಗೊಳಿಸಿದರು. ಈ ಹಿಂದೆ ಈ ಯೋಜನೆಗೆ ಮೋದಿ ಅವರೇ ಶಂಕು ಸ್ಥಾಪನೆ ನೆರವೇರಿಸಿದ್ದರು.

ಇಂದಿನ ಕಾರ್ಯಕ್ರಮ

ಮೋದಿ ಅವರು ಇಂದು ತೆಲಂಗಾಣ ಮತ್ತು ಒಡಿಶಾದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಅದರ ವಿವರ ಇಲ್ಲಿದೆ.

ತೆಲಂಗಾಣ

  • ಬೇಗಂಪೇಟೆ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ ಹೈದರಾಬಾದ್‌ನ ನಾಗರಿಕ ವಿಮಾನಯಾನ ಸಂಶೋಧನಾ ಸಂಸ್ಥೆ (CARO) ಕೇಂದ್ರವನ್ನು ಮೋದಿ ಉದ್ಘಾಟಿಸಲಿದ್ದಾರೆ. 350 ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ.
  • ಪ್ರಧಾನಿ ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ 65ರ 29 ಕಿ.ಮೀ ಉದ್ದದ ಪುಣೆ-ಹೈದರಾಬಾದ್ ವಿಭಾಗದ ಆರು ಪಥದ ರಸ್ತೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು.
  • ಘಾಟ್ಕೇಸರ್-ಲಿಂಗಂಪಲ್ಲಿಯಿಂದ ಮೌಲಾ ಅಲಿ-ಸನತನಗರ ಮಾರ್ಗವಾಗಿ ಸಾಗುವ ಬಹು ಮಾದರಿ ಸಾರಿಗೆ ಸೇವೆ(ಗೆMMTS) ಪ್ರಧಾನಮಂತ್ರಿ ಹಸಿರು ನಿಶಾನೆ ತೋರಲಿದ್ದಾರೆ.
  • 4.5 ಎಂಎಂಟಿಪಿಎ ಸಾಮರ್ಥ್ಯದ 1,212 ಕಿ.ಮೀ. ಉದ್ದದ ಪಾರಾದೀಪ್-ಹೈದರಾಬಾದ್ ಇಂಡಿಯನ್ ಆಯಿಲ್ ಉತ್ಪನ್ನ ಸಾಗಾಟದ ಪೈಪ್‌ಲೈನ್‌ ಅನ್ನು ಮೋದಿ ಉದ್ಘಾಟಿಸಲಿದ್ದಾರೆ. ಈ ಪೈಪ್‌ಲೈನ್‌ ಒಡಿಶಾ (329 ಕಿ.ಮೀ.), ಆಂಧ್ರಪ್ರದೇಶ (723 ಕಿ.ಮೀ.) ಮತ್ತು ತೆಲಂಗಾಣ (160 ಕಿ.ಮೀ.) ಮೂಲಕ ಹಾದುಹೋಗುತ್ತದೆ.

ಒಡಿಶಾ

  • ಪಾರಾದೀಪ್ ಸಂಸ್ಕರಣಾಗಾರದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನ ಮೊನೊ ಎಥಿಲೀನ್ ಗ್ಲೈಕಾಲ್ ಯೋಜನೆಯನ್ನು ಮೋದಿ ಉದ್ಘಾಟಿಸಲಿದ್ದಾರೆ. ಜತೆಗೆ ಒಡಿಶಾದ ಪಾರಾದೀಪ್‌ನಿಂದ ಪಶ್ಚಿಮ ಬಂಗಾಳದ ಹಲ್ದಿಯಾವರೆಗಿನ ಪೈಪ್‌ಲೈನ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗುವುದು.
  • ರಾಷ್ಟ್ರೀಯ ಹೆದ್ದಾರಿ 49ರ ಸಿಂಘಾರದಿಂದ ಬಿಂಜಬಹಲ್ ವಿಭಾಗ, ರಾಷ್ಟ್ರೀಯ ಹೆದ್ದಾರಿ 49ರ ಬಿಂಜಬಹಾರ್‌ನಿಂದ ತಿಲೇಬಾನಿ ವಿಭಾಗ, ರಾಷ್ಟ್ರೀಯ ಹೆದ್ದಾರಿ 18ರ ಬಾಲಸೋರ್-ಜಾರ್ಪೋಖಾರಿಯಾ ವಿಭಾಗ ಮತ್ತು ರಾಷ್ಟ್ರೀಯ ಹೆದ್ದಾರಿ 16ರ ತಂಗಿ-ಭುವನೇಶ್ವರ ವಿಭಾಗವನ್ನು ಚತುಷ್ಪಥಗೊಳಿಸುವ ಕಾಮಗಾರಿಯನ್ನೂ ಅವರು ಉದ್ಘಾಟಿಸಲಿದ್ದಾರೆ. ಮಾತ್ರವಲ್ಲ ಚಂಡಿಖೋಲ್-ಪಾರಾದೀಪ್ ರಸ್ತೆಯ ಎಂಟು ಪಥದ ರಸ್ತೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  • 162 ಕಿ.ಮೀ. ಉದ್ದದ ಬನ್ಸಪಾನಿ-ದೈತಾರಿ-ತೋಮ್ಕಾ-ಜಖಾಪುರ ರೈಲು ಮಾರ್ಗವನ್ನು ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಪ್ರಸ್ತುತ ಸಾಮರ್ಥ್ಯವನ್ನು ಹೆಚ್ಚಿಸುವುದರ ಹೊರತಾಗಿ, ಇದು ಕಿಯೋಂಜಾರ್‌ನಿಂದ ಬಂದರು ಮತ್ತು ಉಕ್ಕಿನ ಸ್ಥಾವರಗಳಿಗೆ ಕಬ್ಬಿಣ ಮತ್ತು ಮ್ಯಾಂಗನೀಸ್ ಅದಿರನ್ನು ಸಮರ್ಥವಾಗಿ ಸಾಗಿಸಲು ಅನುವು ಮಾಡಿಕೊಡುತ್ತದೆ.
  • ಒಡಿಶಾ ಸ್ಯಾಂಡ್ಸ್ ಕಾಂಪ್ಲೆಕ್ಸ್‌ನಲ್ಲಿರುವ ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ (Indian Rare Earths Ltd)ನ 5 ಎಂಎಲ್‌ಡಿ ಸಾಮರ್ಥ್ಯದ ಸಮುದ್ರದ ಉಪ್ಪುನೀರು ಶುದ್ಧೀಕರಣ ಘಟಕವನ್ನೂ ಪ್ರಧಾನಿ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: Narendra Modi : ಭಾರತ್​ ಶಕ್ತಿಯಲ್ಲಿ ಭಾಗಿಯಾಗಲಿದ್ದಾರೆ ಪ್ರಧಾನಿ ಮೋದಿ; ಏನಿದು ಮಿಲಿಟರಿ ಶಕ್ತಿ ಪ್ರದರ್ಶನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಚುನಾವಣೆ ಪ್ರಚಾರದ ವೇಳೆ 5 ಗ್ಯಾರಂಟಿಗಳನ್ನು ಘೋಷಿಸಿದ ಮೋದಿ; ಏನವು?

Narendra Modi: ಪಶ್ಚಿಮ ಬಂಗಾಳದ ಬರಾಕ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಬ್ಬರದ ಪ್ರಚಾರ ಕೈಗೊಂಡರು. ಇದೇ ವೇಳೆ ಟಿಎಂಸಿ ಸರ್ಕಾರದ ವಿರುದ್ಧ ಅವರು ವಾಗ್ಬಾಣ ಪ್ರಯೋಗಿಸಿದರು. ರೋಡ್‌ ಕೂಡ ಕೈಗೊಂಡು ಜನರ ವಿಶ್ವಾಸ ಗಳಿಸಲು ಯತ್ನಿಸಿದರು.

VISTARANEWS.COM


on

Narendra Modi
Koo

ಕೋಲ್ಕೊತಾ: ಲೋಕಸಭೆ ಚುನಾವಣೆಯ (Lok Sabha Election 2024) ಮೂರು ಹಂತದ ಮತದಾನ ಮುಗಿದು, ನಾಲ್ಕನೇ ಹಂತದ ಮತದಾನಕ್ಕೆ ಕೆಲವೇ ಗಂಟೆ ಬಾಕಿ ಇವೆ. ಇದರ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಶ್ಚಿಮ ಬಂಗಾಳದಲ್ಲಿ (West Bengal) ಅಬ್ಬರದ ಪ್ರಚಾರ ಮಾಡಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ (TMC) ವಿರುದ್ಧ ವಾಗ್ದಾಳಿ ನಡೆಸುವ ಜತೆಗೆ ಮೋದಿ ಅವರು ಪಶ್ಚಿಮ ಬಂಗಾಳಕ್ಕಾಗಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದರು.

ಪಶ್ಚಿಮ ಬಂಗಾಳದ ಪರಾಕ್‌ಪುರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಅವರು, “ನಾನು ಪಶ್ಚಿಮ ಬಂಗಾಳದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡುತ್ತಿದ್ದೇನೆ. ನಾನು ಇರುವವರೆಗೆ ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಡಲು ಬಿಡಲ್ಲ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸಲು ಬಿಡುವುದಿಲ್ಲ. ನೀವು ರಾಮನವಮಿಯನ್ನು ಆಚರಿಸುವುದನ್ನು ತಡೆಯಲು ಯಾರಿಂದಲೂ ಆಗಲ್ಲ. ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಯನ್ನು ತಡೆಯಲು ಬಿಡುವುದಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಯಾರಿಂದಲೂ ಬದಲಿಸಲು ಬಿಡಲ್ಲ” ಎಂದು ಮೋದಿ ಅವರು ಐದು ಗ್ಯಾರಂಟಿಗಳನ್ನು ಘೋಷಿಸಿದರು.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ

ಭಾಷಣದ ವೇಳೆ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. “ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್‌ನ ಒಂದು ಕುಟುಂಬದ ಸದಸ್ಯರು ದೇಶವನ್ನು ದಶಕಗಳವರೆಗೆ ಆಳಿದರು. ಆದರೆ, ಅವರು ಪೂರ್ವ ಭಾರತದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದರು. ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ ಸೇರಿ ಹಲವು ರಾಜ್ಯಗಳ ಅಭಿವೃದ್ಧಿಯನ್ನು ಕಾಂಗ್ರೆಸ್‌ ಕಡೆಗಣಿಸಿತು. ಆದರೆ, ನೀವು 2014ರಲ್ಲಿ ಮೋದಿಯನ್ನು ಆಯ್ಕೆ ಮಾಡಿದಿರಿ. ಹಾಗಾಗಿ, ಈಗ ಇಡೀ ದೇಶವೇ ಏಳಿಗೆ ಹೊಂದುತ್ತಿದೆ. ಆರ್ಥಿಕತೆಯಲ್ಲಿ ನಾವು ದಾಪುಗಾಲು ಇಡುತ್ತಿದ್ದೇವೆ” ಎಂದರು.

ಪ್ರಧಾನಿ ರೋಡ್‌ ಶೋ

ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರಕ್ಕೂ ಮೋದಿ ಚಾಟಿ ಬೀಸಿದರು. “ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಒಂದು ಕಾಲದಲ್ಲಿ ವೈಜ್ಞಾನಿಕ ಆವಿಷ್ಕಾರಗಳಿಗೆ ಬಂಗಾಳ ಖ್ಯಾತಿಯಾಗಿತ್ತು. ಆದರೆ, ಈಗ ರಾಜ್ಯದಲ್ಲಿ ಬಾಂಬ್‌ ತಯಾರಿಕೆ ಉದ್ಯಮವೇ ಹುಟ್ಟಿಕೊಂಡಿದೆ. ಒಂದು ಕಾಲದಲ್ಲಿ ಬಂಗಾಳದಲ್ಲಿ ಒಳನುಸುಳುಕೋರರ ವಿರುದ್ಧ ಕ್ರಾಂತಿ ನಡೆದಿತ್ತು. ಈಗ ನುಸುಳುಕೋರರಿಗೆ ರಾಜ್ಯದಲ್ಲಿ ರಕ್ಷಣೆ ನೀಡಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು. ಅಲ್ಲದೆ, ಬರಾಕ್‌ಪುರದಲ್ಲಿ ಮೋದಿ ಅಬ್ಬರದ ರೋಡ್‌ ಶೋ ಕೂಡ ಕೈಗೊಂಡರು.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading

ದೇಶ

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

VISTARANEWS.COM


on

Tirupathi Temple
Koo

ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಮಾತ್ರವಲ್ಲ ತಿರುಮಲ ಶ್ರೀವಾರಿ ವರ್ಚುವಲ್ ಸೇವೆಗಳಿಗೆ ಸಂಬಂಧಿಸಿದ ಆಗಸ್ಟ್ ತಿಂಗಳ ಕೋಟಾ ಮತ್ತು ಅವುಗಳ ಸ್ಲಾಟ್‌ಗಳನ್ನು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಲಭ್ಯ. ಜತೆಗೆ ಆಗಸ್ಟ್‌ನ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ

ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಟಿಕೆಟ್‌ ಬುಕ್‌ ಮಾಡುವ ವಿಧಾನ

  • ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್‌ https://ttdevasthanams.ap.gov.inಗೆ ಭೇಟಿ ನೀಡಿ.
  • ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್‌ ನಂಬರ್‌ ನೀಡಿ ಲಾಗಿನ್‌ ಆಗಿ.
  • ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
  • ಆಲ್‌ನೈಲ್‌ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿ.
  • ನಿಮ್ಮ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್‌ ಮೂಲಕ ನಿಮಗೆ ರವಾನೆಯಾಗುತ್ತದೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಜನದಟ್ಟಣೆ ನಿಭಾಯಿಸುವ ಸಲಹೆ ನೀಡಿದ ತಿರುಪತಿಯ ಎಂಜಿನಿಯರ್‌ಗಳ ತಂಡ

Continue Reading

ತಂತ್ರಜ್ಞಾನ

Elon Musk: ದೇಶದಲ್ಲಿ 1.8 ಲಕ್ಷ ಎಕ್ಸ್‌ ಖಾತೆಗಳು ಬಂದ್‌; ಕಾರಣವೇನು?

Elon Musk: ಮಕ್ಕಳ ಲೈಂಗಿಕ ಶೋಷಣೆ ಮತ್ತು ಒಮ್ಮತವಿಲ್ಲದ ನಗ್ನತೆಯನ್ನು ಉತ್ತೇಜಿಸಿದ್ದಕ್ಕಾಗಿ ಭಾರತದ 1,84,241 ಎಕ್ಸ್‌ ಖಾತೆಗಳನ್ನು ನಿಷೇಧಿಸಲಾಗಿದೆ. ಜತೆಗೆ ದೇಶದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಲಾಗುತ್ತದೆ ಎನ್ನುವ ಕಾರಣಕ್ಕೆ 1,303 ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಕಳೆದ ಬಾರಿ ಇದೇ ಕಾರಣಕ್ಕೆ ದೇಶದಲ್ಲಿ 2,12,627 ಎಕ್ಸ್ ಖಾತೆಗಳನ್ನು ನಿಷೇಧಿಸಲಾಗಿತ್ತು.

VISTARANEWS.COM


on

Elon Musk
Koo

ನವದೆಹಲಿ: ಉದ್ಯಮಿ ಎಲಾನ್‌ ಮಸ್ಕ್‌ (Elon Musk) ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್‌ (Social media X) ಈ ವರ್ಷದ ಮಾರ್ಚ್ 26ರಿಂದ ಏಪ್ರಿಲ್ 25ರ ನಡುವೆ ಭಾರತದಲ್ಲಿ 1,84,241 ಖಾತೆಗಳನ್ನು ನಿಷೇಧಿಸಿದೆ. ಮಕ್ಕಳ ಲೈಂಗಿಕ ಶೋಷಣೆ ಮತ್ತು ಒಮ್ಮತವಿಲ್ಲದ ನಗ್ನತೆಯನ್ನು ಉತ್ತೇಜಿಸಿದ್ದಕ್ಕಾಗಿ ಹೆಚ್ಚಿನ ಖಾತೆಗಳನ್ನು ಬ್ಯಾನ್‌ ಮಾಡಲಾಗಿದೆ. ಜತೆಗೆ ದೇಶದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಲಾಗುತ್ತದೆ ಎನ್ನುವ ಕಾರಣಕ್ಕೆ 1,303 ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೈಕ್ರೋ ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ ಹೊಸ ಐಟಿ ನಿಯಮ 2021ರ ಪ್ರಕಾರ ತನ್ನ ಮಾಸಿಕ ವರದಿ ಬಿಡುಗಡೆ ಮಾಡಿದೆ. ಅದರಲ್ಲಿ ಈ ಅಂಕಿ-ಅಂಶ ಬಹಿರಂಗಗೊಂಡಿದೆ. ಅದರಂತೆ ಈ ವೇಳೆ ಭಾರತೀಯ ಬಳಕೆದಾರರಿಂದ ಸುಮಾರು 18,562 ದೂರುಗಳ ಬಂದಿತ್ತು ಎಂದು ಸಂಸ್ಥೆ ಹೇಳಿದೆ.

ನಿಷೇಧಿತ ಖಾತೆಗಳು

ಭಾರತದಲ್ಲಿ ದಾಖಲಾದ ದೂರುಗಳ ಪೈಕಿ ನಿರ್ಬಂಧಗಳ ಉಲ್ಲಂಘನೆ (7,555), ದ್ವೇಷಪೂರಿತ ನಡವಳಿಕೆ (3,353), ಸೂಕ್ಷ್ಮ ವಯಸ್ಕ ವಿಷಯ (3,335) ಮತ್ತು ನಿಂದನೆ/ಕಿರುಕುಳ (2,402) ಹೆಚ್ಚಿನ ಸಂಖ್ಯೆಯಲ್ಲಿವೆ. ಇದಕ್ಕೂ ಹಿಂದಿನ ಬಾರಿ ಅಂದರೆ ಫೆಬ್ರವರಿ 26 ಮತ್ತು ಮಾರ್ಚ್ 25ರ ನಡುವೆ ದೇಶದಲ್ಲಿ 2,12,627 ಎಕ್ಸ್ ಖಾತೆಗಳನ್ನು ನಿಷೇಧಿಸಲಾಗಿತ್ತು. ಈ ಪೈಕಿ ಭಯೋತ್ಪಾದನೆಯನ್ನು ಉತ್ತೇಜಿಸಿದ್ದಕ್ಕಾಗಿ 1,235 ಖಾತೆಗಳನ್ನು ತೆಗೆದು ಹಾಕಲಾಗಿತ್ತು.

ಎಕ್ಸ್‌ಮೇಲ್‌ ಮೂಲಕ ಜಿಮೇಲ್‌ಗೆ ಪೈಪೋಟಿ

ಚಾಟ್‌ಜಿಪಿಟಿಗೆ (ChatGPT) ಪ್ರತಿಯಾಗಿ ತನ್ನದೇ ಆದ ಎಐ ಆವೃತ್ತಿಯನ್ನು ಬಿಡುಗಡೆ ಮಾಡಿದ ನಂತರ ಉದ್ಯಮಿ ಎಲಾನ್ ಮಸ್ಕ್ (Elon Musk) ಅವರು ಎಕ್ಸ್‌ಮೇಲ್ (Xmail) ಸೇವೆ ಆರಂಭಿಸುವುದನ್ನು ಖಚಿತಪಡಿಸಿದ್ದಾರೆ. ಎಕ್ಸ್‌ಮೇಲ್, ಗೂಗಲ್‌ನ (Google) ಜನಪ್ರಿಯ ಜಿಮೇಲ್‌ಗೆ (Gmail) ಪೈಪೋಟಿ ನೀಡಲಿದೆ. ಈ ಮಧ್ಯೆ, ಗೂಗಲ್‌ ತನ್ನ ಜಿಮೇಲ್ ಸೇವೆಯನ್ನು ಸ್ಥಗಿತಗೊಳಿಸಲಿದೆ ಎಂಬ ವದಂತಿ ಕೆಲ ಕಾಲ ಆತಂಕಕ್ಕೆ ಕಾರಣವಾಯಿತು. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಗೂಗಲ್, ಜಿಮೇಲ್ ಸ್ಥಗಿತವಾಗುತ್ತಿಲ್ಲ. ಈ ಹಿಂದೆ ಎಚ್‌ಟಿಎಂಎಲ್ ಆಗಿದ್ದ ಡಿಫಾಲ್ಟ್ ಜಿಮೇಲ್ ಇಂಟರ್‌ಫೇಸ್‌ ಅನ್ನು ಮತ್ತಷ್ಟು ವರ್ಣರಂಜಿತಗೊಳಿಸಲಿದೆ. ಈ ಬದಲಾವಣೆ ಜನವರಿ 24ರಿಂದಲೇ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಎಕ್ಸ್‌ನಲ್ಲಿನ ಸಂಭಾಷಣೆಯೊಂದರಲ್ಲಿ ಮಸ್ಕ್ ಅವರು ‘ಎಕ್ಸ್‌ಮೇಲ್’ ಎಂದು ಕರೆಯಲ್ಪಡುವ ಉತ್ಪನ್ನವು ‘ಬರುತ್ತಿದೆ’ ಎಂದು ಹೇಳಿದ್ದಾರೆ. ಗೂಗಲ್‌ ಜಿಮೇಲ್ ಸ್ಥಗಿತವಾಗಲಿದೆ ಎಂಬ ನಕಲಿ ದಾಖಲೆಯು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವಾಗಲೇ ಎಕ್ಸ್‌ಮೇಲ್ ಆರಂಭದ ಕುರಿತು ಮಸ್ಕ್ ಹೇಳಿಕೆಯು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಇಷ್ಟಾಗಿಯೂ ಎಕ್ಸ್‌ಮೇಲ್ ಆರಂಭದ ಕುರಿತು ಹೆಚ್ಚೇನೂ ಅವರು ಮಾಹಿತಿಯನ್ನು ನೀಡಿಲ್ಲ. ಈ ಸೇವೆ ಯಾವಾಗ ಆರಂಭವಾಗಲಿದೆ ಎಂಬ ಬಗ್ಗೆ ಯಾವುದೇ ವಿವರವನ್ನು ನೀಡಿಲ್ಲ. ಎಕ್ಸ್‌ನ ಸೆಕ್ಯುರಿಟಿ ಇಂಜಿನಿಯರಿಂಗ್ ತಂಡದ ಹಿರಿಯ ಸದಸ್ಯರಾದ ನಾಥನ್ ಮೆಕ್‌ಗ್ರಾಡಿ ಅವರು ಎಕ್ಸ್‌ಮೇಲ್ ಲಾಂಚ್ ದಿನಾಂಕದ ಬಗ್ಗೆ ಪ್ರಶ್ನಿಸಿದ ನಂತರ ಈ ದೃಢೀಕರಣವು ಬಂದಿದೆ. ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಮಸ್ಕ್, ಎಕ್ಸ್ ಮೇಲ್ ಶೀಘ್ರವೇ ಚಾಲ್ತಿಗೆ ಬರಲಿದೆ ಎಂದು ದೃಢಿಕರಿಸಿದರು.

ಇದನ್ನೂ ಓದಿ: OpenAI ChatGPT: ಚಾಟ್‌ಜಿಪಿಟಿ VS ಇಲಾನ್ ಮಸ್ಕ್‌ನ ಗ್ರೋಕ್‌: ಏನು ವ್ಯತ್ಯಾಸ?

Continue Reading

ದೇಶ

ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

ಪಾಕಿಸ್ತಾನದ ಬಳಿ ಅಣುಬಾಂಬ್‌ ಇವೆ ಎಂದು ಎಚ್ಚರಿಸಿದ್ದ ಕಾಂಗ್ರೆಸ್‌ ನಾಯಕರ ಮಣಿಶಂಕರ್‌ ಅಯ್ಯರ್‌ ಅವರಿಗೆ ಯೋಗಿ ಆದಿತ್ಯನಾಥ್‌ ತಿರುಗೇಟು ನೀಡಿದರು. “ನಾವೇನೂ ಅಣುಬಾಂಬ್‌ಗಳನ್ನು ಫ್ರಿಡ್ಜ್‌ನಲ್ಲಿ ಇರಿಸಲು ತಯಾರಿಸಿಲ್ಲ. ಇದು ಹೊಸ ಭಾರತ. ನಮ್ಮ ತಂಟೆಗೆ ಬಂದರೆ ಯಾರನ್ನೂ ನಾವು ಬಿಡುವುದಿಲ್ಲ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ಭಾರತ ಕಳೆದ 10 ವರ್ಷಗಳಲ್ಲಿ ಕಂಡುಕೊಂಡಿದೆ” ಎಂದು ಹೇಳಿದರು.

VISTARANEWS.COM


on

Yogi Adityanath
Koo

ನವದೆಹಲಿ: ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ಅವರು ಪಾಕಿಸ್ತಾನದ ಕುರಿತು ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. “ಪಾಕಿಸ್ತಾನದ ಬಳಿ ಅಣುಬಾಂಬ್‌ಗಳು ಇವೆ, ನಾವು ಆ ರಾಷ್ಟ್ರವನ್ನು ಗೌರವಿಸಬೇಕು” ಎಂದು ಮಣಿಶಂಕರ್‌ ಅಯ್ಯರ್‌ ನೀಡಿದ ಹೇಳಿಕೆಯಿಂದ ಖುದ್ದು ಕಾಂಗ್ರೆಸ್‌ ಪಕ್ಷವೇ ಅಂತರ ಕಾಯ್ದುಕೊಂಡಿದೆ. ಇದರ ಬೆನ್ನಲ್ಲೇ, ಮಣಿಶಂಕರ್‌ ಅಯ್ಯರ್‌ ಅವರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಅವರು ತಿರುಗೇಟು ನೀಡಿದ್ದು, “ನಮ್ಮ ಬಳಿಯ ಅಣುಬಾಂಬ್‌ಗಳು ಫ್ರಿಡ್ಜ್‌ನಲ್ಲಿ ಇಡಲು ತಯಾರಿಸಿದ್ದೇವೆಯೇ” ಎಂದಿದ್ದಾರೆ.

ಇಂಡಿಯಾ ಟಿವಿ ಚಾನೆಲ್‌ನ ಆಪ್‌ ಕಿ ಅದಾಲತ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯೋಗಿ ಆದಿತ್ಯನಾಥ್‌, ಮಣಿಶಂಕರ್‌ ಅಯ್ಯರ್‌ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದರು. “ನಾವೇನೂ ಫ್ರಿಡ್ಜ್‌ನಲ್ಲಿ ಇರಿಸಲು ಅಣುಬಾಂಬ್‌ ತಯಾರಿಸಿಲ್ಲ. ಇದು ನವ ಭಾರತ. ಹೊಸ ಭಾರತವು ಯಾರ ತಂಟೆಗೂ ಹೋಗುವುದಿಲ್ಲ. ಹಾಗಂತ, ನಮ್ಮ ತಂಟೆಗೆ ಬಂದರೆ ಸುಮ್ಮನೆ ಇರುವುದಿಲ್ಲ. ನಮ್ಮ ತಂಟೆಗೆ ಬಂದವರ ಮನೆಗೆ ನುಗ್ಗಿ ಪ್ರತ್ಯುತ್ತರ ನೀಡುವ ಸಾಮರ್ಥ್ಯ ಹೊಂದಿದ್ದೇವೆ” ಎಂದು ಹೇಳಿದರು.

“ಮನೆಗೆ ನುಗ್ಗಿ ಪ್ರತ್ಯುತ್ತರ ನೀಡುವುದನ್ನು ಭಾರತ ಸಾಬೀತುಪಡಿಸಿದೆ. ಇದಕ್ಕೂ ಮೊದಲು ದೇಶದ ಹಲವೆಡೆ ಸ್ಫೋಟಗಳು ಸಂಭವಿಸಿದವು. ಮುಂಬೈ, ಅಯೋಧ್ಯೆ, ದೆಹಲಿ, ಕಾಶಿ, ಲಖನೌ, ವಾರಾಣಸಿ, ಗೋರಖ್‌ಪುರ ಸೇರಿ ಹಲವೆಡೆ ದಾಳಿಗಳು ನಡೆದವು. ದೇಶದ ಸಂಸತ್‌ ಮೇಲೆಯೇ ದಾಳಿ ನಡೆಯಿತು. ವಿವಿಧ ಸಂದರ್ಭಗಳಲ್ಲಿ ಹಲವು ರೀತಿಯ ದಾಳಿ ನಡೆದವು. ಆದರೆ, ಕಳೆದ 10 ವರ್ಷಗಳಲ್ಲಿ ಉಗ್ರವಾದ, ನಕ್ಸಲ್‌ವಾದವನ್ನು ನಿಗ್ರಹಿಸಲಾಗಿದೆ. ಭಾರತದಲ್ಲಿ ಜೋರಾಗಿ ಪಟಾಕಿ ಸಿಡಿದರೂ, ಇದರ ಹಿಂದೆ ನಮ್ಮ ಕೈವಾಡವಿಲ್ಲ ಎಂದು ಪಾಕಿಸ್ತಾನ ಹೇಳುತ್ತದೆ. ಇದು ಭಾರತದ ತಾಕತ್ತು. ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಅಂತಹ ಸಾಮರ್ಥ್ಯ ಬೆಳೆಸಿಕೊಂಡಿದೆ” ಎಂದು ತಿಳಿಸಿದರು.

ಮಣಿಶಂಕರ್‌ ಅಯ್ಯರ್‌ ಹೇಳಿದ್ದೇನು?

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದರು.

ಇದನ್ನೂ ಓದಿ: ಪಿತ್ರೋಡಾ ‘ಸಂಪತ್ತು ಹಂಚಿಕೆ’ ಹೇಳಿಕೆ, ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ; ಕಾಂಗ್ರೆಸ್‌ಗೆ ಈಗ ತೀವ್ರ ಫಜೀತಿ!

Continue Reading
Advertisement
Narendra Modi
ದೇಶ3 mins ago

Narendra Modi: ಚುನಾವಣೆ ಪ್ರಚಾರದ ವೇಳೆ 5 ಗ್ಯಾರಂಟಿಗಳನ್ನು ಘೋಷಿಸಿದ ಮೋದಿ; ಏನವು?

Prajwal Revanna Case Preetham Gowda close aides arrested and Congress hits back at BJP
ಕ್ರೈಂ6 mins ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಹಂಚಿಕೆ ಕೇಸ್‌; ಪ್ರೀತಂ ಗೌಡ ಅತ್ಯಾಪ್ತರ ಸೆರೆ: ಬಿಜೆಪಿಗೆ ಚೆಕ್‌ಮೇಟ್‌?

Mother's Day
ಮಹಿಳೆ21 mins ago

Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

Prajwal Revanna Case Two people of pen drive allottees arrested
ಕ್ರೈಂ34 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

karnataka Rain Effected
ಮಳೆ35 mins ago

Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

Pavithra Jayaram Trinayani serial Fame No More
ಕಿರುತೆರೆ38 mins ago

Pavithra Jayaram: ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

six seats of Karnataka Legislative Council Elections to be held on June 3
ರಾಜಕೀಯ1 hour ago

Karnataka Legislative Council: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಐದಲ್ಲ 4 ಕ್ಷೇತ್ರ; ಜೆಡಿಎಸ್‌ಗೆ 2 ಕ್ಷೇತ್ರ ಬಿಟ್ಟುಕೊಡಲು ತೀರ್ಮಾನ?

IPL 2024
ಕ್ರಿಕೆಟ್1 hour ago

IPL 2024: ಬೆಂಗಳೂರಲ್ಲಿಂದು ಆರ್‌ಸಿಬಿ, ಡೆಲ್ಲಿ ನಿರ್ಣಾಯಕ ಪಂದ್ಯ; ಮಳೆ ಅಡ್ಡಿ ಆಗತ್ತಾ ? ಇಲ್ಲಿದೆ ರಿಪೋರ್ಟ್

Shekhar Suman Says Sex Workers Keep Society
ಬಾಲಿವುಡ್1 hour ago

Shekhar Suman: ಲೈಂಗಿಕ ಕಾರ್ಯಕರ್ತರು, ವೇಶ್ಯೆಯರ ನಡುವೆ ವ್ಯತ್ಯಾಸಗಳಿವೆ ಎಂದ ʻಹೀರಾಮಂಡಿʼನಟ!

Tirupathi Temple
ದೇಶ1 hour ago

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Two people of pen drive allottees arrested
ಕ್ರೈಂ34 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ8 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು22 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

ಟ್ರೆಂಡಿಂಗ್‌