Modi Praises Gehlot: ಪಕ್ಷಭೇದ ಮರೆತು ರಾಜಸ್ಥಾನ ಸಿಎಂ ಗೆಹ್ಲೋಟ್‌ರನ್ನು ಹೊಗಳಿದ ಮೋದಿ, ಗೆಳೆಯ ಎಂದು ಬಣ್ಣನೆ - Vistara News

ದೇಶ

Modi Praises Gehlot: ಪಕ್ಷಭೇದ ಮರೆತು ರಾಜಸ್ಥಾನ ಸಿಎಂ ಗೆಹ್ಲೋಟ್‌ರನ್ನು ಹೊಗಳಿದ ಮೋದಿ, ಗೆಳೆಯ ಎಂದು ಬಣ್ಣನೆ

Modi Praises Gehlot: ಬೇರೆ ಪಕ್ಷದ ನಾಯಕರನ್ನು, ರಾಜಕೀಯ ವಿರೋಧಿಗಳನ್ನು ತೆಗಳುವ, ಅವಾಚ್ಯ ಶಬ್ದಗಳನ್ನು ನಿಂದಿಸುವ ಕಾಲಘಟ್ಟದಲ್ಲಿ ನರೇಂದ್ರ ಮೋದಿ ಅವರು ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಅವರನ್ನು ಹೊಗಳಿದ್ದಾರೆ.

VISTARANEWS.COM


on

Narendra Modi praises Rajasthan Chief Minister Gehlot
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ದೇಶದಲ್ಲಿ ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ಪ್ರತಿಪಕ್ಷಗಳ ನಾಯಕರನ್ನು, ರಾಜಕೀಯ ವಿರೋಧಿಗಳನ್ನು ಹೊಗಳುವುದು, ಅವರ ಗುಣವನ್ನು ಮೆಚ್ಚುವುದು ತುಂಬ ವಿರಳ. ರಾಜಕೀಯ ದ್ವೇಷ, ತಿಕ್ಕಾಟ, ಟೀಕೆ, ವ್ಯಂಗ್ಯ, ತಂತ್ರ, ಕುತಂತ್ರ, ಪ್ರತಿತಂತ್ರಗಳೇ ಇಂದಿನ ರಾಜಕೀಯದ ಶೈಲಿಯಾಗಿದೆ. ಇಂತಹ ಪರಿಸ್ಥಿತಿಯ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ (Modi Praises Gehlot) ಅವರನ್ನು ಹೊಗಳಿದ್ದಾರೆ. ಅಲ್ಲದೆ, ಗೆಹ್ಲೋಟ್‌ ಅವರನ್ನು ನನ್ನ ಗೆಳೆಯ ಎಂದು ಹೇಳಿದ್ದಾರೆ.

ರಾಜಸ್ಥಾನದ ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಜೈಪುರ ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಆಯೋಜಿಸಲಾಗಿತ್ತು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ರಾಜಸ್ಥಾನ ರಾಜ್ಯಪಾಲ ಕಲ್ರಾಜ್‌ ಮಿಶ್ರಾ ಹಾಗೂ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವರ್ಚ್ಯುವಲ್‌ ಮೂಲಕ ನರೇಂದ್ರ ಮೋದಿ ಅವರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದರು. ಇದಾದ ಬಳಿಕ ಮಾತನಾಡಿದ ಮೋದಿ, “ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿರುವ ಸಂದರ್ಭದಲ್ಲಿಯೂ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ, ಅಭಿವೃದ್ಧಿಗೆ ಸಮಯ ನೀಡಿದ್ದಕ್ಕಾಗಿ ಅಶೋಕ್‌ ಗೆಹ್ಲೋಟ್‌ ಅವರಿಗೆ ಕೃತಜ್ಞತೆಗಳು. ಅವರ ನಡೆಯನ್ನು ನಾನು ಸ್ವಾಗತಿಸುತ್ತೇನೆ” ಎಂದರು.

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಮೋದಿ ಚಾಲನೆ

“ಅಶೋಕ್‌ ಗೆಹ್ಲೋಟ್‌ ಅವರ ಎರಡೂ ಕೈಯಲ್ಲಿ ಲಡ್ಡುಗಳು ಇವೆ. ರೈಲ್ವೆ ಸಚಿವರು ರಾಜಸ್ಥಾನದವರಿದ್ದಾರೆ, ರೈಲ್ವೆ ಮಂಡಳಿಯ ಅಧ್ಯಕ್ಷರು ಕೂಡ ರಾಜಸ್ಥಾನದವರೇ ಆಗಿದ್ದಾರೆ. ಹಾಗಾಗಿ, ರಾಜ್ಯದಲ್ಲಿ ರೈಲು ಅಭಿವೃದ್ಧಿಗೆ ಹೇರಳ ಅವಕಾಶಗಳಿವೆ. ಹಾಗೆಯೇ, ಅಶೋಕ್‌ ಗೆಹ್ಲೋಟ್‌ ಅವರು ನನ್ನ ಮೇಲೆ ನಂಬಿಕೆ ಇಟ್ಟು, ನಮ್ಮ ಗೆಳೆತನಕ್ಕೆ ಆದ್ಯತೆ ನೀಡಿ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ನಮ್ಮ ಸ್ನೇಹದ ಮೇಲೆ ನೀವು ನಂಬಿಕೆ ಇಟ್ಟಿರುವುದಕ್ಕೆ ಧನ್ಯವಾದ” ಎಂದು ಹೇಳಿದರು.

ಹೊಗಳಿಕೆ ಇದೇ ಮೊದಲಲ್ಲ

ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಅವರನ್ನು ಮೋದಿ ಹೊಗಳುತ್ತಿರುವುದು ಇದೇ ಮೊದಲಲ್ಲ. ಕಳೆದ ಡಿಸೆಂಬರ್‌ನಲ್ಲಿ ನಡೆದ ರಾಜ್ಯಪಾಲರು, ಲೆಫ್ಟಿನೆಂಟ್‌ ಗವರ್ನರ್‌ಗಳು ಹಾಗೂ ಮುಖ್ಯಮಂತ್ರಿಗಳ ಸಭೆಯಲ್ಲಿಯೂ ಮೋದಿ ಅವರು ಗೆಹ್ಲೋಟ್‌ ಅವರನ್ನು ಹೊಗಳಿದ್ದರು. ಉದಯಪುರದಲ್ಲಿ ಜಿ-20 ಸಭೆಯನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಿದ್ದಕ್ಕಾಗಿ ಮೋದಿ ಶ್ಲಾಘಿಸಿದ್ದರು. ಹಾಗೆಯೇ, ಕೊರೊನಾ ಸೋಂಕಿನ ಬಿಕ್ಕಟ್ಟಿನ ನಿರ್ವಹಣೆಯ ವಿಷಯದಲ್ಲೂ ಮೋದಿ ಅವರು ಗೆಹ್ಲೋಟ್‌ ಅವರನ್ನು ಹೊಗಳಿದ್ದರು. ರಾಜಸ್ಥಾನದಲ್ಲಿ ಕೊರೊನಾ ನಿರ್ವಹಿಸಿದ ರೀತಿಯು ದೇಶಕ್ಕೇ ಮಾದರಿ ಎಂದು ಶ್ಲಾಘಿಸಿದ್ದರು.

ಇದನ್ನೂ ಓದಿ: Sachin Pilot: ಭ್ರಷ್ಟಾಚಾರ ವಿರುದ್ಧ ಸತ್ಯಾಗ್ರಹಕ್ಕೆ ಪೈಲಟ್ ಸಿದ್ಧತೆ; ರಾಜಸ್ಥಾನದಲ್ಲಿ ಮತ್ತೆ ಗೆಹ್ಲೋಟ್-ಸಚಿನ್ ಜಟಾಪಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hindenburg Report : ಸೆಬಿ ಅಧ್ಯಕ್ಷರ ವಜಾಗೆ ಆಗ್ರಹಿಸಿದ ಕಾಂಗ್ರೆಸ್​ನಿಂದ ಆಗಸ್ಟ್​​ 22ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ

Hindenburg Report : ದೇಶದಲ್ಲಿ ಈಗ ನಡೆಯುತ್ತಿರುವ ಅತಿದೊಡ್ಡ ಹಗರಣಗಳಲ್ಲೊಂದನ್ನು ಹಿಂಡೆನ್​ಬರ್ಗ್​​ ಬಹಿರಂಗಪಡಿಸಿದೆ. ಅದಾನಿ ಮತ್ತು ಸೆಬಿಗೆ ಸಂಬಂಧಿಸಿದ ಹಗರಣದ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ಜೈರಾಮ್ ರಮೇಶ್ ಹೇಳಿದರು. ಅದಾನಿ ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ಪಕ್ಷದ ನಾಯಕತ್ವ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಅವರು ಹೇಳಿದರು.

VISTARANEWS.COM


on

Hindenburg Report
Koo

ಬೆಂಗಳೂರು: ಸೆಬಿ ಅಧ್ಯಕ್ಷರು ಮತ್ತು ಅದಾನಿ ಗ್ರೂಪ್ ನಡುವೆ ಸಂಬಂಧವಿದೆ ಎಂದು ಆರೋಪಿಸಿ ಅಮೆರಿಕ ಮೂಲಕ ಶಾರ್ಟ್ ಸೆಲ್ಲರ್​ ಸಂಸ್ಥೆ ಹಿಂಡೆನ್​​ಬರ್ಗ್ (Hindenburg Report) ಮಾಡಿರುವ ​​ವರದಿಯ ವಿರುದ್ಧ ಆಗಸ್ಟ್ 22 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಮಂಗಳವಾರ ಘೋಷಿಸಿದೆ. ವರದಿಯ ಆರೋಪಗಳ ಹಿನ್ನೆಲೆಯಲ್ಲಿ ಸೆಬಿ ಅಧ್ಯಕ್ಷ ಸ್ಥಾನದಿಂದ ಮಾಧಾಬಿ ಬುಚ್ ಅವರನ್ನು ತೆಗೆದುಹಾಕಬೇಕೆಂದು ಕಾಂಗ್ರೆಸ್​ ಒತ್ತಾಯಿಸುತ್ತಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ರಾಜ್ಯ ಮುಖ್ಯಸ್ಥರ ಸಭೆಯ ನಂತರ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಈ ಘೋಷಣೆ ಮಾಡಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಮಲ್ಲಿಕಾರ್ಜುನ ಖರ್ಗೆ ವಹಿಸಿದ್ದರು.

ದೇಶದಲ್ಲಿ ಈಗ ನಡೆಯುತ್ತಿರುವ ಅತಿದೊಡ್ಡ ಹಗರಣಗಳಲ್ಲೊಂದನ್ನು ಹಿಂಡೆನ್​ಬರ್ಗ್​​ ಬಹಿರಂಗಪಡಿಸಿದೆ. ಅದಾನಿ ಮತ್ತು ಸೆಬಿಗೆ ಸಂಬಂಧಿಸಿದ ಹಗರಣದ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ಜೈರಾಮ್ ರಮೇಶ್ ಹೇಳಿದರು. ಅದಾನಿ ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ಪಕ್ಷದ ನಾಯಕತ್ವ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಅವರು ಹೇಳಿದರು.

ಈ ವಿಷಯದ ಬಗ್ಗೆ ಎರಡು ವಿಷಯಗಳಿಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ನಾವು ಸರ್ವಾನುಮತದಿಂದ ನಿರ್ಧರಿಸಿದ್ದೇವೆ. ಒಂದು ಅದಾನಿ ಮೆಗಾ ಹಗರಣದ ಬಗ್ಗೆ ಜೆಪಿಸಿ ತನಿಖೆ ನಡೆಸಬೇಕು. ಇದರಲ್ಲಿ ಪ್ರಧಾನಿ ಸಂಪೂರ್ಣವಾಗಿ ಭಾಗಿಯಾಗಿದ್ದಾರೆ. ಷೇರು ಮಾರುಕಟ್ಟೆ ನಿಯಂತ್ರಣವು ಈಗ ತೀವ್ರವಾಗಿ ಸ್ವಜನಪಕ್ಷಪಾತ ನಡೆಸಿರುವುದು ಕಂಡುಬಂದಿದೆ. ಜೈರಾಮ್ ರಮೇಶ್ ಹೇಳಿದರು.

ಹಿಂಡೆನ್​ಬರ್ಗ್​ ರಿಸರ್ಚ್ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸೆಬಿ ಮತ್ತು ಅದರ ಮುಖ್ಯಸ್ಥ ಮಾಧಾಬಿ ಬುಚ್ ವಿರುದ್ಧ ಆರೋಪ ಮಾಡಿದ ಬಳಿಕ ಕಾಂಗ್ರೆಸ್ ಸಂಸದೀಯ ತನಿಖೆಗೆ ಒತ್ತಾಯಿಸಿದೆ.

ಇದನ್ನೂ ಓದಿ: Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

ಅದಾನಿ ಮನಿ ಸ್ಪೋನಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ವಿದೇಶಿ ಸಂಸ್ಥೆಗಳಲ್ಲಿ ಸೆಬಿ ಮುಖ್ಯಸ್ಥೆ ಮಾಧಾಬಿ ಪುರಿ ಬುಚ್ ಮತ್ತು ಅವರ ಪತಿ ಪಾಲನ್ನು ಹೊಂದಿದ್ದಾರೆ ಎಂದು ಹಿಂಡೆನ್​ಬರ್ಗ್​​ ರಿಸರ್ಚ್ ಹೇಳಿದೆ. ಆದರೆ ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಗ್ರೂಪ್ ಆಫ್ ಕಂಪನಿಗಳಿಗೆ ಪಕ್ಷಪಾತ ಮಾಡಿರುವ ಆರೋಪಗಳನ್ನು ಸೆಬಿ, ಮಾಧಾಬಿ ಬುಚ್ ಮತ್ತು ಅವರ ಪತಿ ನಿರಾಕರಿಸಿದ್ದಾರೆ.

Continue Reading

ದೇಶ

Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

Kolkata Doctor Murder Case: ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ.

VISTARANEWS.COM


on

kolkata doctor murder case
Koo

ಕೋಲ್ಕತಾ: ಪಶ್ಚಿಮ ಬಂಗಾಳ(West Bengal)ದ ಕೋಲ್ಕತ್ತಾ(Kolkata)ದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ(Kolkata Doctor Murder Case) ಪ್ರಕರಣವನ್ನು ಹೈಕೋರ್ಟ್‌ ಸಿಬಿಐ(CBI Probe) ತನಿಖೆಗೆ ಆದೇಶಿಸಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ಕೋಲ್ಕತಾ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.

ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ಘೋಷ್ ಅವರು ರಾಜೀನಾಮೆ ನೀಡಿದ ಗಂಟೆಗಳ ನಂತರ ಮತ್ತೊಂದು ಕಾಲೇಜಿನ ಪ್ರಾಂಶುಪಾಲರಾಗಿ ಏಕೆ ನೇಮಕಗೊಂಡರು ಎಂದು ಪೀಠವು ರಾಜ್ಯ ಸರ್ಕಾರದ ವಕೀಲರನ್ನು ಪ್ರಶ್ನಿಸಿತು.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.
ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kolkata Doctor Murder Case: ನೋ ಸೇಫ್ಟಿ…ನೋ ಡ್ಯೂಟಿ- ವೈದ್ಯೆ ಕೊಲೆ ಖಂಡಿಸಿ ದೇಶವ್ಯಾಪಿ ಭಾರೀ ಪ್ರತಿಭಟನೆ

Continue Reading

ದೇಶ

Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ದಾಖಲೆ ಬರೆದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಈ ಬಾರಿಯ ಸ್ವಾತಂತ್ರ್ಯ ದಿನದ (Independence day 2024) ಭಾಷಣ ಹೊಸ ದಾಖಲೆಯನ್ನು ಬರೆಯಲಿದೆ. ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿಯವರ ಅನಂತರ ಕೆಂಪು ಕೋಟೆಯಲ್ಲಿ ಸತತ 11 ಸ್ವಾತಂತ್ರ್ಯ ದಿನದ ಭಾಷಣ ಮಾಡುವ ಮೂರನೇ ಭಾರತೀಯ ಪ್ರಧಾನಿಯಾಗಿ ಅವರು ದಾಖಲೆ ನಿರ್ಮಿಸಲಿದ್ದಾರೆ.

VISTARANEWS.COM


on

By

Independence day 2024
Koo

ಕಳೆದ ಹತ್ತು ವರ್ಷಗಳಿಂದ ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ (PM Modi) ಅವರು ಈ ಬಾರಿಯು ಸ್ವಾತಂತ್ರ್ಯ ದಿನದ (Independence day 2024) 11ನೇ ಭಾಷಣ ಮಾಡಲಿದ್ದಾರೆ. ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸುವ ಅವರ ಭಾಷಣದಲ್ಲಿ ಎಂದಿನಂತೆ ಏನಾದರೂ ವಿಶೇಷ ಇದ್ದೇ ಇರುತ್ತದೆ. ಹೀಗಾಗಿ ಅವರ ಭಾಷಣವನ್ನು ಕೇಳಲು ದೇಶದ ಮೂಲೆಮೂಲೆಯಲ್ಲೂ ಜನರು ಕಾತರರಾಗಿರುತ್ತಾರೆ. ಮೂರನೇ ಅವಧಿಗೆ ದೇಶದ ಪ್ರಧಾನಿ ಆಗಿರುವ ನರೇಂದ್ರ ಮೋದಿ ಅವರು ಈ ಬಾರಿ ಸ್ವಾತಂತ್ರ್ಯ ದಿನವದ ಆಗಸ್ಟ್ 15ರಂದು ಗುರುವಾರ ತಮ್ಮ ಸತತ 11ನೇ ಸ್ವಾತಂತ್ರ್ಯ ದಿನದ ಭಾಷಣವನ್ನು ಮಾಡಲು ಸಿದ್ಧರಾಗಿದ್ದಾರೆ.

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ದಾಖಲೆ ಬರೆದಿರುವ ಅವರು, ಈ ಅವಧಿಯ ಮೊದಲ ಸ್ವಾತಂತ್ರ್ಯ ದಿನದ ಭಾಷಣವಾಗಿದೆ. ಈ ಭಾಷಣದೊಂದಿಗೆ ಪ್ರಧಾನಿ ಮೋದಿ ಅವರು ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿಯವರ ಅನಂತರ ಕೆಂಪು ಕೋಟೆಯಲ್ಲಿ ಸತತ 11 ಸ್ವಾತಂತ್ರ್ಯ ದಿನದ ಭಾಷಣ ಮಾಡುವ ಮೂರನೇ ಭಾರತೀಯ ಪ್ರಧಾನಿಯಾಗಲಿದ್ದಾರೆ.


ದಾಖಲೆ ನಿರ್ಮಿಸಿದ ಮೋದಿ

ಮೋದಿಯವರ ಈ ಬಾರಿಯ 11ನೇ ಭಾಷಣ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಂಖ್ಯೆಯನ್ನು ಮೀರಿಸಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 10 ಸ್ವಾತಂತ್ರ್ಯ ದಿನದ ಭಾಷಣಗಳನ್ನು ಮಾಡಿರುವ ದಾಖಲೆ ಹೊಂದಿದ್ದಾರೆ.


ಭಾರತದ ಮೊದಲ ಪ್ರಧಾನಿ ನೆಹರೂ ಅವರು 17 ಬಾರಿ ನಿರಂತರವಾಗಿ ಸ್ವಾತಂತ್ರ್ಯ ದಿನದ ಭಾಷಣಗಳನ್ನು ಮಾಡಿದ ದಾಖಲೆಯನ್ನು ಹೊಂದಿದ್ದಾರೆ.

ಜನವರಿ 1966ರಿಂದ ಮಾರ್ಚ್ 1977ರವರೆಗೆ ಮತ್ತು ಅನಂತರ ಜನವರಿ 1980ರಿಂದ ಅಕ್ಟೋಬರ್ 1984ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಇಂದಿರಾ ಗಾಂಧಿ ಅವರು ಒಟ್ಟು 16 ಬಾರಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣಗಳನ್ನು ಮಾಡಿದ್ದರು.

Independence day 2024
Independence day 2024


ಮಾತಿನ ಅವಧಿ

ಇನ್ನು ಪ್ರಧಾನಿಯವರ ಸ್ವಾತಂತ್ರ್ಯ ದಿನದ ಭಾಷಣದ ಅವಧಿಗೆ ಹೋಲಿಸಿದರೆ ಮೋದಿಯವರೇ ಅತಿ ಉದ್ದದ ಭಾಷಣ ಮಾಡಿರುವ ಪ್ರಧಾನಿಯಾಗಿದ್ದರೆ. ಪ್ರಧಾನಿ ಮೋದಿಯವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರತಿ ಭಾಷಣವನ್ನೂ ಸರಾಸರಿ 82 ನಿಮಿಷಗಳ ಕಾಲ ನಡೆಸಿದ್ದಾರೆ. ಇದು ಭಾರತದ ಇತಿಹಾಸದಲ್ಲೇ ಪ್ರಧಾನಿಯವರ ಅತಿ ಉದ್ದದ ಭಾಷಣವಾಗಿದೆ.


ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರು 1997ರಲ್ಲಿ 71 ನಿಮಿಷಗಳ ಕಾಲ ಕೆಂಪುಕೋಟೆಯಲ್ಲಿ ಭಾಷಣ ಮಾಡಿದ್ದರು. ಪಿಎಂ ಮೋದಿಯವರ ಭಾಷಣಗಳ ಉದ್ದವು 2017ರಲ್ಲಿ 55 ನಿಮಿಷಗಳ ಕಡಿಮೆ ಅವಧಿಯಿಂದ 2016ರಲ್ಲಿ 94 ನಿಮಿಷಗಳವರೆಗೆ ವಿಸ್ತರಿಸಿತ್ತು.

ಇದನ್ನೂ ಓದಿ: Paris Olympics 2024 : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯಿಂದ ಪ್ಯಾರಿಸ್ ಒಲಿಂಪಿಕ್ಸ್ ಸಾಧಕರಿಗೆ ಆತಿಥ್ಯ


ಮಾತಿನ ವಿಷಯ

ಪ್ರಧಾನಿ ಮೋದಿ ಅವರು ಪ್ರತಿ ಬಾರಿಯೂ ಸ್ವಾತಂತ್ರ್ಯ ದಿನದಂದು ವಿಶೇಷ ಘೋಷಣೆಗಳನ್ನು ಮಾಡಿರುವುದು ಹಿಂದಿನ ದಾಖಲೆಗಳಿಂದ ತಿಳಿಯುತ್ತದೆ. 2014ರಲ್ಲಿ ಅವರು ತಮ್ಮ ಮೊದಲ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಸ್ವಚ್ಛ ಭಾರತ ಮತ್ತು ಜನ್ ಧನ್ ಖಾತೆಗಳಂತಹ ಹೊಸ ಕಾರ್ಯಕ್ರಮಗಳನ್ನು ಘೋಷಿಸಿದರು. ಅಂದಿನಿಂದ ಅವರು ವಿವಿಧ ಪ್ರಮುಖ ಘೋಷಣೆಗಳನ್ನು ಮಾಡಲು ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಅಲ್ಲದೇ ಅವರ ಭಾಷಣಗಳ ಜೊತೆಗೆ ಅವರು ಧರಿಸುವ ವಿವಿಧ ರೀತಿಯ ಪೇಟಗಳು ಎಲ್ಲರ ಗಮನ ಸೆಳೆಯುತ್ತಿವೆ.

Continue Reading

ವಿದೇಶ

Bangladesh Unrest: ಬಾಂಗ್ಲಾ ಹಿಂದೂಗಳ ಪರ ಸೋಶಿಯಲ್‌ ಮೀಡಿಯಾ ಅಭಿಯಾನ; All eyes on hindus ಭಾರೀ ಟ್ರೆಂಡ್!

Bangladesh Unrest: ಬಾಂಗ್ಲಾದೇಶದ ಹಿಂದೂಗಳು ಮತ್ತು ದೇವಾಲಯಗಳ ಮೇಲಿನ ದಾಳಿಯ ಬಗ್ಗೆ ಮೌನವಾಗಿರುವುದಕ್ಕೆ ಬಾಲಿವುಡ್ ಸೆಲೆಬ್ರಿಟಿಗಳನ್ನು ನೆಟ್ಟಿಗರು ಟೀಕಿಸುತ್ತಿರುವ ಪರಿಕಲ್ಪನೆ ‘ಎಲ್ಲಾ ಕಣ್ಣುಗಳು ಬಾಂಗ್ಲಾದೇಶ ಹಿಂದೂಗಳ ಮೇಲೆ’ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿವೆ.

VISTARANEWS.COM


on

Bangladesh Unrest
Koo

ಢಾಕಾ: ಬಾಂಗ್ಲಾದೇಶ(Bangladesh Unrest)ದಲ್ಲಿ ತಲೆದೋರಿರುವ ಅರಾಜಕತೆ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಜೀವಕ್ಕೆ ಅಪಾಯವನ್ನು ತಂದೊಡ್ಡಿದೆ. ಅದಕ್ಕೆ ಪೂರಕ ಎನ್ನುವಂತೆ ಅಲ್ಲಿನ ಹಿಂದೂಗಳು ಸಹಾಯಕ್ಕಾಗಿ ಅಂಗಲಾಚುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇನ್ನು ಶೇಕ್ ಹಸೀನಾ ಪ್ರಧಾನಿ ಹುದ್ದೆಯಿಂದ ನಿರ್ಗಮನದ ಬಳಿಕ ಮೊಹಮ್ಮದ್ ಯೂನಸ್ ಅಧಿಕಾರ ವಹಿಸಿಕೊಂಡರೂ ದಾಳಿ ಕಡಿಮೆಯಾಗಿಲ್ಲ. ಈ ನಡುವೆ ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌(All eyes on Bangladesh Hindus) ಎಂಬ ಪರಿಕಲ್ಪನೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಟ್ರೆಂಡಿಂಗ್‌ ಆಗುತ್ತಿದೆ.

ಬಾಂಗ್ಲಾದೇಶದ ಹಿಂದೂಗಳು ಮತ್ತು ದೇವಾಲಯಗಳ ಮೇಲಿನ ದಾಳಿಯ ಬಗ್ಗೆ ಮೌನವಾಗಿರುವುದಕ್ಕೆ ಬಾಲಿವುಡ್ ಸೆಲೆಬ್ರಿಟಿಗಳನ್ನು ನೆಟ್ಟಿಗರು ಟೀಕಿಸುತ್ತಿರುವ ಪರಿಕಲ್ಪನೆ ‘ಎಲ್ಲಾ ಕಣ್ಣುಗಳು ಬಾಂಗ್ಲಾದೇಶ ಹಿಂದೂಗಳ ಮೇಲೆ’ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿವೆ. ಕೆಲವು ತಿಂಗಳುಗಳ ಹಿಂದೆ ಇಸ್ರೇಲ್ ದಾಳಿಯನ್ನು ಖಂಡಿಸಿ ಪ್ಯಾಲೆಸ್ಟೈನ್‌ ಗೆ ಬೆಂಬಲ ಸೂಚಿಸಿ ಅನೇಕರು ಇನ್ ಸ್ಟಾ ಗ್ರಾಮ್ ನಲ್ಲಿ ‘ಆಲ್ ಐಸ್ ಆನ್ ರಫಾ’ ಘೋಷಣೆಯೊಂದಿಗೆ ಹಂಚಿಕೊಂಡಿದ್ದಾರೆ. ಇದನ್ನು ಇನ್ ಸ್ಟಾ ಗ್ರಾಮ್ ನಲ್ಲಿ ಹಂಚಿಕೊಂಡಿರುವವರ ಸಂಖ್ಯೆ 30 ಮಿಲಿಯನ್ ದಾಟಿತ್ತು. ಈ ಪೋಸ್ಟನ್ನು ಬಾಲಿವುಡ್‌ ತಾರೆಯರು ತಮ್ಮ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದರು.

ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಆಗಸ್ಟ್ 5 ರಂದು Ms ಹಸೀನಾ ನೇತೃತ್ವದ ಸರ್ಕಾರ ಪತನದ ನಂತರ 52 ಜಿಲ್ಲೆಗಳಲ್ಲಿ 205 ಕ್ಕೂ ಹೆಚ್ಚು ದಾಳಿಯ ಘಟನೆಗಳನ್ನು ಎದುರಿಸಿದ್ದಾರೆ. ನೂರಾರು ಹಿಂದೂಗಳು ತಮ್ಮ ಮನೆಗಳು ಮತ್ತು ವ್ಯವಹಾರಗಳ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ನಂಬಲಾಗಿದೆ. ಹಲವಾರು ಹಿಂದೂ ದೇವಾಲಯಗಳನ್ನು ಸಹ ಧ್ವಂಸಗೊಳಿಸಲಾಗಿದೆ ಮತ್ತು ಶೇಖ್‌ ಹಸೀನಾ ಅವರ ಅವಾಮಿ ಲೀಗ್ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಕನಿಷ್ಠ ಇಬ್ಬರು ಹಿಂದೂ ನಾಯಕರು ಹಿಂಸಾಚಾರದಲ್ಲಿ ಬಲಿಯಾಗಿದ್ದಾರೆ.

ಅಲ್ಪಸಂಖ್ಯಾತರ ಮೇಲಿನ ದಾಳಿಯ ಕುರಿತು ಬಾಂಗ್ಲಾದೇಶದ ಹಂಗಾಮಿ ನಾಯಕ ಬಾಂಗ್ಲಾದೇಶದ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ಪ್ರತಿಕ್ರಿಯಿಸಿದ್ದಾರೆ. ಶನಿವಾರ ಹಿಂಸಾಚಾರ ಪೀಡಿತ ರಾಷ್ಟ್ರದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ, ಅವರನ್ನು “ಹೇಯ ಕೃತ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಶೇಖ್‌ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿರುವುದು ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರುತ್ತಾ? ಬಾಂಗ್ಲಾದೇಶ ಹೇಳಿದ್ದೇನು?

Continue Reading
Advertisement
Murder Case
ಬೆಳಗಾವಿ13 mins ago

Murder Case : ಕಂಡವರ ಹೆಂಡ್ತಿ ಮೇಲೆ ವ್ಯಾಮೋಹ; ಸುಪಾರಿ ಕೊಟ್ಟು ಚಟ್ಟ ಕಟ್ಟಿದ ಕಿರಾತಕ

Varamahalakshmi Festival Fashion
ಫ್ಯಾಷನ್14 mins ago

Varamahalakshmi Festival Fashion: ಫೆಸ್ಟಿವ್‌ ಸೀಸನ್‌ಗೆ ಮರಳಿದ ಹೆಣ್ಣುಮಕ್ಕಳ ಟ್ರೆಡಿಷನಲ್‌ ಉದ್ದ ಲಂಗ!

Hindenburg Report
ಪ್ರಮುಖ ಸುದ್ದಿ17 mins ago

Hindenburg Report : ಸೆಬಿ ಅಧ್ಯಕ್ಷರ ವಜಾಗೆ ಆಗ್ರಹಿಸಿದ ಕಾಂಗ್ರೆಸ್​ನಿಂದ ಆಗಸ್ಟ್​​ 22ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ

karnataka Weather Forecast
ಮಳೆ40 mins ago

Karnataka Weather : ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ ಮಳೆರಾಯ

MUDA SCAM
ಪ್ರಮುಖ ಸುದ್ದಿ42 mins ago

Muda Case : ಪಿಸಿಆರ್​ ಏನೆಂದು ಗೊತ್ತಿಲ್ಲದವರು ಸಿದ್ದರಾಮಯ್ಯ ಪರ ಅರ್ಜಿ ಸಲ್ಲಿಸಿದ್ದೀರಾ? ಸಿಎಂ ಪರ ಅರ್ಜಿ ಸಲ್ಲಿಸಿದವರಿಗೆ ಕೋರ್ಟ್ ತರಾಟೆ

Duleep Trophy
ಕ್ರೀಡೆ53 mins ago

Duleep Trophy: 14 ವರ್ಷಗಳ ಬಳಿಕ ದುಲೀಪ್‌ ಟ್ರೋಫಿ ಆಡಲಿದ್ದಾರೆ ವಿರಾಟ್​ ಕೊಹ್ಲಿ?

kolkata doctor murder case
ದೇಶ1 hour ago

Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ಪ್ರಮುಖ ಸುದ್ದಿ1 hour ago

Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

Janhvi Kapoor
ಸಿನಿಮಾ2 hours ago

Janhvi Kapoor: ಇಂದು ನಟಿ ಶ್ರೀದೇವಿ ಜನ್ಮದಿನ; ಬಾಯ್‌ಫ್ರೆಂಡ್‌ ಜತೆ ತಿರುಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಜಾಹ್ನವಿ ಕಪೂರ್‌

Bengaluru Police
ಬೆಂಗಳೂರು2 hours ago

Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌