ಮುಂಬೈ: ಮಹಾರಾಷ್ಟ್ರದ ನಾಗ್ಪುರ ಮೆಟ್ರೋ ರೈಲು ಯೋಜನೆಯ ಮೊದಲ ಹಂತದ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. ಶಂಕುಸ್ಥಾಪನೆ ನೆರವೇರಿಸುವ ಮೊದಲು ಮೆಟ್ರೋ ರೈಲಿನಲ್ಲಿ (Modi Buys Metro Ticket) ಪ್ರಯಾಣಿಸಲು ಸಾಲಿನಲ್ಲಿ ನಿಂತು ಟಿಕೆಟ್ ಖರೀದಿಸಿದ್ದಾರೆ. ಹಾಗೆಯೇ, ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಗಳು, ಪ್ರಯಾಣಿಕರ ಜತೆ ಆಪ್ತ ಮಾತುಕತೆ ನಡೆಸಿದ್ದಾರೆ. ಈ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ನಾಗ್ಪುರ ಮೆಟ್ರೋದ ಫ್ರೀಡಂ ಪಾರ್ಕ್ ಸ್ಟೇಷನ್‌ನಲ್ಲಿ ಟಿಕೆಟ್ ಖರೀದಿಸಿದ ಮೋದಿ, ಖಪ್ರಿಯದಲ್ಲಿರುವ ಫ್ರೀಡಂ ಪಾರ್ಕ್‌ಗೆ ರೈಲಿನಲ್ಲಿ ತೆರಳಿದರು. ಇದೇ ವೇಳೆ, ರೈಲಿನಲ್ಲಿ ಜನರ ಜತೆ ಉಭಯ ಕುಶಲೋಪರಿ ನಡೆಸಿದರು.
ನಾಗ್ಪುರ ಮೆಟ್ರೋ ಯೋಜನೆಯ ಮೊದಲ ಹಂತದಲ್ಲಿ ೪೦ ಕಿ.ಮೀವರೆಗೆ ಮೆಟ್ರೋ ಸೌಲಭ್ಯ ಕಲ್ಪಿಸಲಾಗುತ್ತದೆ. ಇದಕ್ಕಾಗಿ, ೮,೬೫೦ ಕೋಟಿ ರೂ. ವ್ಯಯಿಸಲಾಗುತ್ತಿದೆ. ಹಾಗೆಯೇ, ಮಹಾರಾಷ್ಟ್ರ ಭೇಟಿ ವೇಳೆ ಮೋದಿ ಅವರು ದೇಶದ ಆರನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೂ ಚಾಲನೆ ನೀಡಿದರು.
ಇದನ್ನೂ ಓದಿ | Vande Bharat | ದೇಶದ 6ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭ; ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ