Site icon Vistara News

Narendra Modi Russia Visit: ಪ್ರಧಾನಿ ಮೋದಿ ಮೂರು ದಿನಗಳ ವಿದೇಶ ಪ್ರವಾಸ; ರಷ್ಯಾ, ಆಸ್ಟ್ರೀಯಾಕ್ಕೆ ಭೇಟಿ

Narendra modi Russia visit

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ(Narendra Modi Russia Visit ) ಮೂರು ದಿನಗಳ ರಷ್ಯಾ(Russia) ಮತ್ತು ಆಸ್ಟ್ರೀಯಾ ಪ್ರವಾಸ(Austria) ಕೈಗೊಂಡಿದ್ದಾರೆ. ಮೂರು ವರ್ಷಗಳ ನಂತರ ರಷ್ಯಾದಲ್ಲಿ ಶೃಂಗಸಭೆ ನಡೆಯುತ್ತಿದ್ದು, 22ನೇ ಭಾರತ-ರಷ್ಯಾ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಇನ್ನು ಈ ಶೃಂಗಸಭೆ ಉಭಯ ರಾಷ್ಟ್ರಗಳ ನಡುವಿನ ಬಾಂದವ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ. ಇಂದು ಮತ್ತು ನಾಳೆ ಪ್ರಧಾನಿ ಮೋದಿ ರಷ್ಯಾ ಪ್ರವಾಸ ಕೈಗೊಳ್ಳಲಿದ್ದು, ಜು.10ರಂದು ಆಸ್ಟ್ರೀಯಾಕ್ಕೆ ಭೇಟಿ ನೀಡಲಿದ್ದಾರೆ. ಆಸ್ಟ್ರಿಯಾದಲ್ಲಿ ಅಧ್ಯಕ್ಷ ಅಲೆಕ್ಸಾಂಡರ್ ವ್ಯಾನ್ ಡೆರ್ ಬೆಲ್ಲೆನ್ ಮತ್ತು ಚಾನ್ಸೆಲರ್ ಕಾರ್ಲ್ ನೆಹ್ಮರ್ ಅವರನ್ನು ಭೇಟಿ ಮಾಡಿ ಮಾತಕತೆ ನಡೆಸಲಿದ್ದಾರೆ.

ಇನ್ನು ಈ ಭೇಟಿ ಬಗ್ಗೆ ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. 22ನೇ ವಾರ್ಷಿಕ ಶೃಂಗಸಭೆಗಾಗಿ ನಾನು ರಷ್ಯಾಕ್ಕೆ ಅಧಿಕೃತ ಭೇಟಿ ನೀಡಲಿದ್ದೇನೆ ಮತ್ತು ಮುಂದಿನ ಮೂರು ದಿನಗಳಲ್ಲಿ ಆಸ್ಟ್ರಿಯಾ ಗಣರಾಜ್ಯಕ್ಕೆ ಇದು ನನ್ನ ಮೊದಲ ಭೇಟಿಯಾಗಿದೆ. ತಂತ್ರಜ್ಞಾನ, ಸುಸ್ಥಿರ ಅಭಿವೃದ್ಧಿಯ ಹೊಸ ಮತ್ತು ಉದಯೋನ್ಮುಖ ಕ್ಷೇತ್ರಗಳಲ್ಲಿ ನಮ್ಮ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲು ಮಾತುಕತೆಗಳನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದರು. ವೃತ್ತಿಪರತೆ ಮತ್ತು ನಡವಳಿಕೆಗೆ ಹೆಸರುವಾಸಿಯಾದ ಆಸ್ಟ್ರಿಯಾದಲ್ಲಿರುವ ಭಾರತೀಯ ಸಮುದಾಯದೊಂದಿಗೆ ನಾನು ಸಂವಹನ ನಡೆಸಲಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಉಕ್ರೇನ್‌ ಹಾಗೂ ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ರಷ್ಯಾ ಪ್ರವಾಸ ಕೊಂಡಿದ್ದು, ಇಂದು ಮತ್ತು ನಾಳೆ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಬಳಿಕ ಬುಧವಾರ ಆಸ್ಟ್ರಿಯಾಗೆ ತೆರಳಿ ಗುರುವಾರದವರೆಗೂ ಅಲ್ಲೆ ಇರಲಿದ್ದಾರೆ.

ಇನ್ನು ಭಾರತ ಮತ್ತು ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದ್ದು, ರಷ್ಯಾ-ಉಕ್ರೇನ್‌ ಯುದ್ಧದ ಬಳಿಕ ಮೊದಲ ಭೇಟಿಯಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ಈ ಕುರಿತು ಮಾತುಕತೆ ನಡೆಸಲಿದ್ದಾರೆ. ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಇಂದು ನರೇಂದ್ರ ಮೋದಿ ಅವರಿಗೆ ಔತಣ ಕೂಡ ಏರ್ಪಡಿಸಿದ್ದಾರೆ. ನಾಳೆ ಶೃಂಗಾಸಭೆ ನಡೆಯಲಿದ್ದು, ಉಭಯ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

Exit mobile version