Site icon Vistara News

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Narendra Modi

Beat Drums, Clang Thalis; PM Narendra Modi Tells Varanasi Women How To Boost Polling

ಲಖನೌ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಮೇ 5) ಉತ್ತರ ಪ್ರದೇಶದಲ್ಲಿ (Uttar Pradesh) ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ದೌರಾಹ್ರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಅದರಲ್ಲೂ, “ಮುಸ್ಲಿಮರು ಈಗ ಮತಬ್ಯಾಂಕ್‌ನ ಗುತ್ತಿಗೆದಾರರಿಂದ ಪ್ರತ್ಯೇಕವಾಗಿದ್ದಾರೆ. ಅವರು ಅಭಿವೃದ್ಧಿಯ ಪರವಾಗಿದ್ದಾರೆ” ಎಂದು ಕಾಂಗ್ರೆಸ್‌ಗೆ ಮೋದಿ ಟಾಂಗ್‌ ಕೊಟ್ಟರು.

“ದೇಶದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಯಾವುದೇ ಜಾತಿ, ಧರ್ಮದ ತಾರತಮ್ಯ ಇಲ್ಲದೆ ಜನರಿಗೆ ತಲುಪುತ್ತಿವೆ. ಮುಸ್ಲಿಂ ಸಹೋದರ-ಸಹೋದರಿಯರು ಕೂಡ ನೋಡುತ್ತಿದ್ದಾರೆ. ಪಿಎಂ ಆವಾಸ್‌ ಯೋಜನೆ, ಉಜ್ವಲ ಯೋಜನೆ ಸೇರಿ ಎಲ್ಲ ಯೋಜನೆಗಳ ಸೌಲಭ್ಯಗಳು ಮುಸ್ಲಿಮರಿಗೂ ತಲುಪುತ್ತಿವೆ. ಯಾವುದೇ ಭೇದ-ಭಾವ ಇಲ್ಲದೆ, ಪ್ರತಿಯೊಬ್ಬರಿಗೂ ಯೋಜನೆಗಳು ತಲುಪುತ್ತವೆ. ಹಾಗಾಗಿ, ಮುಸ್ಲಿಮರು ಕೂಡ ಮತಬ್ಯಾಂಕ್‌ನ ಗುತ್ತಿಗೆದಾರರ ಸಹವಾಸ ಬಿಟ್ಟಿದ್ದಾರೆ” ಎಂದು ಹೇಳಿದರು.

“ಮುಸ್ಲಿಮರನ್ನು ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಮತಬ್ಯಾಂಕ್‌ಗಾಗಿ ಬಳಸಿಕೊಂಡವು. ಆದರೆ, ಈಗ ಮುಸ್ಲಿಮರು ಅಂತ ತುಷ್ಟೀಕರಣದ ಕುತಂತ್ರದಿಂದ ಹೊರಬಂದಿದ್ದಾರೆ. ಆದರೆ, ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಮಾತ್ರ ಈಗಲೂ ಓಲೈಕೆಯಲ್ಲಿಯೇ ತೊಡಗಿವೆ. ಮುಸ್ಲಿಮರನ್ನು ಮತ ಬ್ಯಾಂಕ್‌ಗಾಗಿಯೇ ಬಳಸಿಕೊಳ್ಳಲು ಯತ್ನಿಸುತ್ತಿವೆ. ಇದೇ ಕಾರಣಕ್ಕಾಗಿಯೇ, ಮುಸ್ಲಿಂ ಲೀಗ್‌ನ ಪ್ರತಿರೂಪದಂತಿರುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ” ಎಂಬುದಾಗಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

“2014ಕ್ಕಿಂತ ಮೊದಲು ದೇಶದಲ್ಲಿ ತುಷ್ಟೀಕರಣದ ಆಡಳಿತ ನಡೆಯುತ್ತಿತ್ತು. ಉಗ್ರವಾದದ ವಿರುದ್ಧ ಕ್ರಮ ತೆಗೆದುಕೊಳ್ಳಲು ತನಿಖಾ ಸಂಸ್ಥೆಗಳಿಗೆ ಅಧಿಕಾರವೇ ಇರಲಿಲ್ಲ. ಇನ್ನು, ಸಮಾಜವಾದಿ ಪಕ್ಷವಂತೂ ಉಗ್ರರ ವಿರುದ್ಧದ ಪ್ರಕರಣಗಳನ್ನು ವಾಪಸ್‌ ಪಡೆಯುತ್ತಿತ್ತು. ಆದರೀಗ ಉಗ್ರರನ್ನು ಹೆಡೆಮುರಿ ಕಟ್ಟಲಾಗುತ್ತಿದೆ. ನನಗೆ ಕುಟುಂಬ ಇಲ್ಲ. ಆದರೆ, ದೇಶದ ಜನರೇ ನನ್ನ ಕುಟುಂಬ. ಜನರ ಏಳಿಗೆಗಾಗಿ, ವಿಕಸಿತ ಭಾರತದ ನಿರ್ಮಾಣಕ್ಕಾಗಿ ನಾನು ನಿರಂತರವಾಗಿ ಶ್ರಮಿಸುತ್ತೇನೆ” ಎಂದರು.

ಇದನ್ನೂ ಓದಿ: Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Exit mobile version