Site icon Vistara News

Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು? ಇಲ್ಲಿದೆ ಲೈವ್

Narendra Modi

Narendra Modi To File Namination In Varanasi On May 14

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿ (Varanasi) ಲೋಕಸಭೆ ಕ್ಷೇತ್ರದಿಂದ ಸತತ ಮೂರನೇ ಬಾರಿ ಸ್ಪರ್ಧಿಸುತ್ತಿರುವ (Lok Sabha Election) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಮೇ 14) ನಾಮಪತ್ರ ಸಲ್ಲಿಸಲಿದ್ದಾರೆ. ಸೋಮವಾರ (ಮೇ 13) ಬೃಹತ್‌ ರೋಡ್‌ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿರುವ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಜತೆಗೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಬೆಳಗ್ಗೆ 10.45ಕ್ಕೆ ಕಾಲಭೈರವ ದೇಗುಲಕ್ಕೆ ಭೇಟಿ

ನರೇಂದ್ರ ಮೋದಿ ಅವರು ವಾರಾಣಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆಗೂ ಮೊದಲು ಬೆಳಗ್ಗೆ 10.45ಕ್ಕೆ ಕಾಲಭೈರವ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಮೋದಿ ಅವರು ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆ ಗೆಲುವು, ಪಕ್ಷ ಸಂಘಟನೆ ಸೇರಿ ಹಲವು ವಿಷಯಗಳ ಕುರಿತು ನಾಯಕರು ಹಾಗೂ ಕಾರ್ಯಕರ್ತರ ಜತೆ ಮೋದಿ ಚರ್ಚಿಸಲಿದ್ದಾರೆ.

ವಾರಾಣಸಿಯಲ್ಲಿ ಮೋದಿ ರೋಡ್‌ ಶೋ ಝಲಕ್

11.40ಕ್ಕೆ ನಾಮಪತ್ರ ಸಲ್ಲಿಕೆ

ಮಂಗಳವಾರ ಬೆಳಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದೆ. ಇದು ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನವೇ ಅವರು ಸೋಮವಾರ ರೋಡ್‌ ಶೋ ನಡೆಸಿ ಜನರ ಗಮನ ಸೆಳೆದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿಯ ಕೆಲ ನಾಯಕರು ಮೋದಿ ಅವರಿಗೆ ಸಾಥ್‌ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ರೋಡ್‌ ಶೋ ಬಳಿಕ ಅವರು ಕಾಶಿ ವಿಶ್ವನಾಥ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Exit mobile version