ನವ ದೆಹಲಿ: ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (National Film Awards 2023) ಪ್ರದಾನ ಸಮಾರಂಭದಲ್ಲಿ ದಕ್ಷಿಣ ಭಾರತದ ತಾರೆಯರು ಮಿಂಚಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು.
ಅಲ್ಲು ಅರ್ಜುನ್ ನ್ಯಾಷನಲ್ ಅವಾರ್ಡ್ ಸ್ವೀಕರಿಸಿದರು. ‘ಪುಷ್ಪ’ ಚಿತ್ರದಲ್ಲಿ ಅವರ ಅಭಿನಯಕ್ಕೆ ಈ ಪ್ರಶಸ್ತಿ ಬಂದಿದೆ. ಇನ್ನ ಬಾಲಿವುಡ್ ನಟಿಯರಾದ ಆಲಿಯಾ ಭಟ್ ಮತ್ತು ಕೃತಿ ಸನೂನ್ ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದರು. ಕ್ರಮವಾಗಿ ‘ಗಂಗೂಬಾಯಿ ಕಾಥಿಯಾವಾಡಿ’ ಮತ್ತು ‘ಮಿಮಿ’ ಚಿತ್ರಕ್ಕಾಗಿ ಈ ಪ್ರಶಸ್ತಿ ಲಭಿಸಿದೆ. ಇನ್ನು ದಕ್ಷಿಣದ ಮತ್ತೊಬ್ಬ ಸೂಪರ್ ಸ್ಟಾರ್ ಆರ್. ಮಾಧವನ್ ʼರಾಕೆಟ್ರಿ: ದಿ ನಂಬಿ ಎಫೆಕ್ಟ್ʼ ಚಿತ್ರಕ್ಕಾಗಿ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಸ್ವೀಕರಿಸಿದರು. ಈ ಚಿತ್ರವನ್ನು ಅವರು ನಿರ್ದೇಶಿಸಿದ್ದಾರೆ. ಜತೆಗೆ ʼಆರ್‌ಆರ್‌ಆರ್ʼ ತೆಲುಗು ಚಿತ್ರವೂ ಪ್ರಶಸ್ತಿ ಭಾಜನವಾಗಿದ್ದು ನಿರ್ದೇಶಕ ರಾಜಮೌಳಿ ಸ್ವೀಕರಿಸಿದರು.
ನಾನ್-ಫೀಚರ್ ಫಿಲ್ಮ್ ವಿಭಾಗದಲ್ಲಿ ಪ್ರಶಸ್ತಿ ಸ್ವೀಕರಿಸಿದ ಅನಿರುದ್ಧ್
ವಿಶೇಷ ಎಂದರೆ ಕನ್ನಡ ಚಿತ್ರರಂಗದ ನಟಿ ಭಾರತಿ ವಿಷ್ಣುವರ್ಧನ್ ಅವರ ಸಾಧನೆ ಹಾಗೂ ಜೀವನದ ಬಗ್ಗೆ ‘ಬಾಳೆ ಬಂಗಾರ’ ಸಾಕ್ಷ್ಯಚಿತ್ರ ನಿರ್ಮಾಣ ಆಗಿದ್ದು ಇದನ್ನು ಅನಿರುದ್ಧ್ ಜತ್ಕರ್ ನಿರ್ದೇಶನ ಮಾಡಿದ್ದಾರೆ. ಈ ಸಾಕ್ಷ್ಯಚಿತ್ರಕ್ಕೆ ನಾನ್-ಫೀಚರ್ ಫಿಲ್ಮ್ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನಿರುದ್ಧ್ ಜತ್ಕರ್ ಪ್ರಶಸ್ತಿ ಪಡೆದಿದ್ದಾರೆ.