Site icon Vistara News

National Herald case| ಶುಕ್ರವಾರ ವಿಚಾರಣೆಗೆ ಹಾಜರಾಗಲು ರಾಹುಲ್‌ಗೆ ಮತ್ತೆ ಇಡಿ ಸಮನ್ಸ್‌

Rahul Gandhi ED

ನವ ದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಹಗರಣಕ್ಕೆ (National Herald case) ಸಂಬಂಧಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ವಿಚಾರಣೆಯನ್ನು ಬುಧವಾರ ಮುಕ್ತಾಯಗೊಳಿಸಲಾಗಿದೆ.

ಆದರೆ ಮತ್ತೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್‌ ನೀಡಲಾಗಿದೆ. ಜಾರಿ ನಿರ್ದೇಶನಾಲಯ (ಇ.ಡಿ) ಮೂರು ದಿನಗಳ ಕಾಲ ಅಂದರೆ ಸುಮಾರು ೩೦ ಗಂಟೆ ವಿಚಾರಣೆ ನಡೆಸಿ, ಬುಧವಾರ ಅವರಿಗೆ ಮನೆಗೆ ತೆರಳಲು ಅವಕಾಶ ನೀಡಿತು.

ಇದರ ಬೆನ್ನಲ್ಲೇ ಮತ್ತೆ ಸಮನ್ಸ್‌ ನೀಡಿದೆ. ಹೀಗಾಗಿ ಕಾಂಗ್ರೆಸ್‌ ರೊಚ್ಚಿಗೆದ್ದಿದ್ದು, ಗುರುವಾರ ಕೂಡ ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದೆ. ಹೀಗಾಗಿ ಬೆಂಗಳೂರಿನಲ್ಲಿಯೂ ಕೆಪಿಸಿಸಿ ರಾಜಭವನ ಚಲೋ ಹಮ್ಮಿಕೊಂಡಿದೆ.

ಇಡಿ ಅಧಿಕಾರಿಗಳು ಅನೇಕ ಪ್ರಶ್ನೆಗಳನ್ನು ಕೇಳಿ ರಾಹುಲ್‌ ಗಾಂಧಿಯವರಿಂದ ಲಿಖಿತ ಉತ್ತರವನ್ನು ಪಡೆದಿದ್ದಾರೆ ಎನ್ನಲಾಗಿದೆ. ಆದರೆ, ಕೆಲವು ಉತ್ತರಗಳು ಸಮರ್ಪಕವಾಗಿಲ್ಲ, ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಈ ವಿಚಾರಣೆಯನ್ನು ಮತ್ತೆ ನಡೆಸುವ ತೀರ್ಮಾನಕ್ಕೆ ಬರಲಾಗಿದ ೆ ಎಂದು ತಿಳಿದು ಬಂದಿದೆ.

ಈ ನಡುವೆ ರಾಹುಲ್‌ ಗಾಂಧಿ ವಿಚಾರಣೆ ವಿರುದ್ಧ ಕಾಂಗ್ರೆಸ್‌ ನಡೆಸುತ್ತಿರುವ ಬೀದಿ ಪ್ರತಿಭಟನೆ ಮೂರನೇ ದಿನವೂ ಮುಂದುವರಿದಿತ್ತು. ಬುಧವಾರ ೮-೧೦ ಹಿರಿಯ ಕಾಂಗ್ರೆಸ್‌ ನಾಯಕರು ಸೇರಿದಂತೆ ಒಟ್ಟು ೨೪೦ ಮಂದಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಅಧಿಕಾರವಧಿ ವಿಸ್ತರಣೆಗೆ ವಿರೋಧ

ಈ ನಡುವೆ ಜಾರಿ ನಿರ್ದೇಶನಾಲಯ (ಇ.ಡಿ)ದ ನಿದೇಶಕ ಸಂಜಯ್‌ ಕುಮಾರ್‌ ಮಿಶ್ರಾ ಅವರ ಆಧಿಕಾರದ ಅವಧಿ ಮುಕ್ತಾಯವಾಗಿದ್ದು, ಕೇಂದ್ರ ಸರ್ಕಾರವು ಅವರ ಅಧಿಕಾರಾವಧಿಯನ್ನು ವಿಸ್ತರಿಸಿದೆ. ಇದನ್ನು ಮಹಿಳಾ ಕಾಂಗ್ರೆಸ್‌ನ ನಾಯಕಿಯೊಬ್ಬರು ಸುಪ್ರೀಂಕೋಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ ೨೦೨೧ರ ನವೆಂಬರ್‌ ನಂತರ ಮಿಶ್ರಾ ಅವರ ಅಧಿಕಾರಾವಧಿಯನ್ನು ವಿಸ್ತರಿಸದಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಇದನ್ನು ಸರ್ಕಾರ ಉಲ್ಲಂಘಿಸಿದೆ ಎಂದು ಜಯಾ ಠಾಕೂರ್‌ ಸುಪ್ರಿಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಮಿಶ್ರಾ ಅವರ ಮೂಲಕ ರಾಜಕೀಯ ಕಾರಣಗಳಿಗಾಗಿ ಇಡಿಯನ್ನು ಬಳಸಿಕೊಳ್ಳುತ್ತಿದೆ ಎಂದು ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ| ಇ.ಡಿ. ವಿಚಾರಣೆ ಖಂಡಿಸಿ ಕಾಂಗ್ರೆಸ್‌ನಿಂದ ರಾಜಭವನ ಮುತ್ತಿಗೆ: ಡಿಕೆಶಿ, ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ

Exit mobile version