Site icon Vistara News

National Space Day: ಆಗಸ್ಟ್ 23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ! ಕೇಂದ್ರ ಸಚಿವ ಸಂಪುಟ ಒಪ್ಪಿಗೆ

Chandrayaan 3 Lander

ನವದೆಹಲಿ: ಚಂದ್ರಯಾನ-3 (Chandrayaan 3) ಲ್ಯಾಂಡರ್ (Vikram Lander) ಚಂದ್ರನ ಮೇಲೆ ಇಳಿದ ಆಗಸ್ಟ್ 23 ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ (National Space Day) ಆಚರಿಸಲು ಕೇಂದ್ರ ಸಚಿವ ಸಂಪುಟ ಸಭೆಯು ತನ್ನ ಒಪ್ಪಿಗೆಯನ್ನು ನೀಡಿದೆ. ಚಂದ್ರಯಾನ-3 ಮಿಷನ್ ಯಶಸ್ಸಿಗೆ ಕಾರಣರಾದ ವಿಜ್ಞಾನಿಗಳ ಪರಿಶ್ರಮವನ್ನು ಸಚಿವ ಸಂಪುಟ ಶ್ಲಾಘಿಸಿತು(Central Cabinet). ಜಾಗತಿಕ ವೇದಿಕೆಯಲ್ಲಿ ನಮ್ಮ ಭಾರತದ ಶಕ್ತಿ ಅಭ್ಯುದಯಕ್ಕೆ ಇದು ಸಂಕೇತವಾಗಿದೆ. ಇದೇ ವೇಳೆ, ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸುವ ನಿರ್ಧಾರವನ್ನು ಸಂಪುಟವು ಸ್ವಾಗತಿಸಿತು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Union Minister Anurag Thakur) ಅವರು ಹೇಳಿದರು. ಸಚಿವ ಸಂಪುಟದಲ್ಲಿ ಕೈಗೊಳ್ಳಲಾದ ನಿರ್ಣಯಗಳ ಕುರಿತು ಮಾಧ್ಯಮಗಳಿಗೆ ಠಾಕೂರ್ ಅವರು ಮಾಹಿತಿ ನೀಡಿದರು.

ಚಂದ್ರನ ಮೇಲೆ ಚಂದ್ರಯಾನ-3 ಲ್ಯಾಂಡರ್ ಯಶಸ್ವಿಯಾಗಿ ಇಳಿಯಲು ನಮ್ಮ ಇಸ್ರೋದ ಮಹಿಳಾ ವಿಜ್ಞಾನಿಗಳ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಕುರಿತು ಕೇಂದ್ರ ಸಚಿವ ಸಂಪುಟ ಹೆಮ್ಮೆ ವ್ಯಕ್ತಪಡಿಸಿತು. ಚಂದ್ರಯಾನ-3 ಯಶಸ್ಸು ಮುಂಬರುವ ಪೀಳಿಗೆಗೆ ಸ್ಫೂರ್ತಿ ಒದಗಿಸಲಿದೆ. ಇದೇ ವೇಳೆ, ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಮೋದಿ ಅವರ ನಾಯಕತ್ವ ಹಾಗೂ ದೂರದೃಷ್ಟಿಯ ಕುರಿತು ವಂದನೆ ತಿಳಿಸಲಾಯಿತು ಎಂದು ಸಚಿವ ಅನುರಾಗ್ ಠಾಕೂರ್ ಅವರು ಹೇಳಿದರು.

ಈ ಸುದ್ದಿಯನ್ನೂ ಓದಿ: Chandrayaan 3: ನಾಲ್ಕು ಮೀಟರ್ ದೊಡ್ಡ ಕುಳಿಯೊಳಗೇ ಬೀಳುತ್ತಿತ್ತು ಪ್ರಜ್ಞಾನ್ ರೋವರ್! ಆದರೆ…

ಇಂದಿನ ಯುಗದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದಿರುವ ದೇಶವು ಇತಿಹಾಸವನ್ನು ಸೃಷ್ಟಿಸುತ್ತದೆ. ನಮ್ಮ ಯುವ ಪೀಳಿಗೆಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸಲು ನಾವು ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲು ನಿರ್ಧರಿಸಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆಂದು ಸಚಿವರು ತಿಳಿಸಿದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version