ನವದೆಹಲಿ: ಸನಾತನ ಧರ್ಮ (Santana Dharma Remark Row)ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇದೇ ಮೊದಲ ಬಾರಿಗೆ ಮಾತನಾಡಿದ್ದು, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Tamil Nadu Minister Udhayanidhi Stalin) ಅವರ ಹೇಳಿಕೆಗೆ ಸೂಕ್ತ ಪ್ರತಿಕ್ರಿಯೆ ನೀಡಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ. ಹೊಸ ಸಂಸತ್ತಿನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Rashtrapati Draupadi Murmu) ಅವರಿಗೆ ಆಹ್ವಾನವನ್ನು ಕೇಂದ್ರ ಸರ್ಕಾರ (Central Government) ಕೈಬಿಟ್ಟಿರುವುದು ಸನಾತನ ಧರ್ಮದ ಸಾಧಕರ ತಾರತಮ್ಯಕ್ಕೆ ಉದಾಹರಣೆ ಎಂದು ಉದಯನಿಧಿ ಸ್ಟಾಲಿನ್ ಹೇಳಿದ ಒಂದು ದಿನದ ಬಳಿಕ, ಮೋದಿಯಿಂದ ಪ್ರತಿಕ್ರಿಯೆ ಬಂದಿದೆ.
ಸನಾತನ ಧರ್ಮವನ್ನು ವಿರೋಧಿಸುವುದು ಮಾತ್ರವಲ್ಲ ನಿರ್ಮಲನೆ ಮಾಡಬೇಕು ಎಂದು ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಅವರ ಪುತ್ರರೂ ಆಗಿರುವ, ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದರು. ಈ ಹೇಳಿಕೆ ವಿರುದ್ಧ ದೇಶಾದ್ಯಂತ ಭಾರೀ ಖಂಡನೆ ವ್ಯಕ್ತವಾಗಿದೆ. ಹಲವು ರಾಜ್ಯಗಳಲ್ಲಿ ಉದಯನಿಧಿ ವಿರುದ್ಧ ಪ್ರಕರಣಗಳು ಕೂಡ ದಾಖಲಾಗಿವೆ. ಇಷ್ಟಾಗಿಯೂ ಅವರು ತಮ್ಮ ಹೇಳಿಕೆ ಬದ್ಧವಿರುವುದಾಗಿ ಹೇಳಿದ್ದರು ಮಾತ್ರವಲ್ಲದೇ, ಮತ್ತೆ ಮತ್ತೆ ಈ ವಿಷಯವನ್ನು ಹೇಳುವೆ ಎಂದು ಭಂಡತನ ತೋರಿಸಿದ್ದರು. ಉದಯನಿಧಿ ಅವರ ಹೇಳಿಕೆಯನ್ನು ಬೆಂಬಲಿಸಿದ್ದ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧವೂ ಉತ್ತರ ಪ್ರದೇಶದಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಉದಯನಿಧಿ ಮಾತ್ರವಲ್ಲ ಅವರ ತಂದೆ ಸ್ಟಾಲಿನ್ ವಿರುದ್ಧವೂ ಕೇಸ್
ಸನಾತನ ಧರ್ಮದ (Sanatana Dharma) ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ (Tamil Nadu CM MK Stalin) ಅವರ ಪುತ್ರರೂ ಆಗಿರುವ ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ವಿರುದ್ದ ಮತ್ತೊಂದು ಪ್ರಕರಣವು ದಾಖಲಾಗಿದೆ. ದಿಲ್ಲಿಯಲ್ಲಿ ಕೇಸ್ ದಾಖಲಾದ ಬೆನ್ನಲ್ಲೇ ಬಿಹಾರದ ಮುಝಫ್ಪರ್‌ಪುರ (Muzaffarpur Lawyer) ಮೂಲಕ ವಕೀಲ ಸುಧೀರ್ ಕುಮಾರ್ ಅವರು ಸಿಎಂ ಎಂ ಕೆ ಸ್ಟಾಲಿನ್ ಹಾಗೂ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ದ ಕೋರ್ಟ್‌ಗೆ (Muzaffarpur Court) ದೂರು ನೀಡಿದ್ದಾರೆ.
ಸುಧೀರ್ ಕುಮಾರ್ ಓಝಾ ಅವರು ಮುಝಾಫ್ಪರ್‌ಪುರದ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪಂಕಜ್ ಕುಮಾರ್ ಅವರ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಉದಯನಿಧಿ ಅವರು ಆಡಿರುವ ಮಾತುಗಳು ಹಿಂದೂಗಳ ಭಾವನೆಗೆ ಧಕ್ಕೆ ತಂದಿವೆ. ಭಾರತೀಯ ದಂಡ ಸಂಹಿತೆಯ ಅನುಸಾರ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ. ವಿಚಾರಣೆಯನ್ನು ಸೆಪ್ಟೆಂಬರ್ 14 ಮುಂದೂಡಲಾಗಿದೆ.
ಈ ಸುದ್ದಿಯನ್ನೂ ಓದಿ: Udhayanidhi Stalin: ಯೋಗಿ ರಾಜ್ಯ ಉತ್ತರ ಪ್ರದೇಶದಲ್ಲಿ ಉದಯನಿಧಿ, ಪ್ರಿಯಾಂಕ್ ಖರ್ಗೆ ವಿರುದ್ಧ ಬಿತ್ತು ಕೇಸ್!
ಮುಝಫ್ಪರ್‌ಪುರದ ಈ ವಕೀಲ ಸುಧೀರ್ ಕುಮಾರ್ ಓಝಾ ಅವರು, ಹಿರಿಯ ರಾಜಕೀಯ ನಾಯಕರು ಮತ್ತು ಸಿನಿಮಾ ನಟರು, ಇತರ ಸೆಲೆಬ್ರಿಟಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಮೂಲಕ ಆಗಾಗ ಸುದ್ದಿಯಲ್ಲಿರುತ್ತಾರೆ.
ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ, ಸಚಿವರೂ ಆದ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ (Sanatana Dharma) ಕುರಿತು ನೀಡಿದ ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. “ಸನಾತನ ಧರ್ಮವು ಮಲೇರಿಯಾ, ಕೊರೊನಾ ಹಾಗೂ ಡೆಂಗ್ಯೂ ಇದ್ದಂತೆ” ಎಂದು ಉದಯನಿಧಿ (Udhayanidhi Stalin) ಸ್ಟಾಲಿನ್ ಹೇಳಿದ್ದು, ಅವರ ಹೇಳಿಕೆಗೆ ತೀವ್ರ ವಿರೋಧ, ಟೀಕೆ ವ್ಯಕ್ತವಾಗಿವೆ.
ತಮಿಳುನಾಡಿನ ಚೆನ್ನೈನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಉದಯನಿಧಿ ಸ್ಟಾಲಿನ್ ಮಾತನಾಡಿದರು. “ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದರು.
ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.