Site icon Vistara News

NEET UG 2024 Result: ಕ್ಷೇತ್ರವಾರು ನೀಟ್‌ ಪರೀಕ್ಷಾ ಫಲಿತಾಂಶ ಪ್ರಕಟ

NEET-UG 2024 result

NEET-UG 2024

ಹೊಸದಿಲ್ಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET UG 2024 Result)ರ ಫಲಿತಾಂಶಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ, ನಗರ ಮತ್ತು ಕೇಂದ್ರವಾರು ಪ್ರಕಟಿಸಿದೆ. NEET UG 2024 ಕ್ಕೆ ಹಾಜರಾದ ಅಭ್ಯರ್ಥಿಗಳು NTA NEET exams.nta.ac.in/NEET/ ಅಥವಾ neet.ntaonline.in ನ ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

NTA NEET UG ಪರೀಕ್ಷೆಯನ್ನು ಮೇ 5, 2024 ರಂದು 4750 ಸ್ಥಳಗಳಲ್ಲಿ ನಡೆಸಲಾಗಿತ್ತು. ಈ ವರ್ಷ, ಸುಮಾರು 24 ಲಕ್ಷ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆ ಬರೆದಿದ್ದರು. 1563 ಜನರು ಮರುಪರೀಕ್ಷೆಯನ್ನು ಎದುರಿಸಿದ್ದರು. ಇನ್ನು ಪರೀಕ್ಷಾ ಫಲಿತಾಂಶವನ್ನು ವಿದ್ಯಾರ್ಥಿಗಳು ಈ ರೀತಿಯಾಗಿ ನೋಡಬಹುದಾಗಿದೆ:

  1. NTA NEET ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
    NEET UG 2024 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ
    ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು ಕ್ಲಿಕ್ ಮಾಡಿ.
    ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
    ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್‌ಲೋಡ್ ಮಾಡಿ.
    ಮುಂದಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿ

ಕೇಂದ್ರವಾರು ಮತ್ತು ನಗರವಾರು ಫಲಿತಾಂಶ

ಎರಡು ವಾರಗಳ ಹಿಂ ನೀಟ್-ಯುಜಿ 2024 (NEET UG 2024) ಅಕ್ರಮಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ನೀಟ್‌ ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ(NTA)ಗೆ ಸೂಚಿಸಿದೆ. ಆದರೆ ವಿದ್ಯಾರ್ಥಿಗಳ ಗುರುತು ಬಹಿರಂಗ ಪಡಿಸದಂತೆ ಖಡಕ್‌ ಸೂಚನೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಸೋಮವಾರಕ್ಕೆ ಅಂದರೆ ಜು.22ಕ್ಕೆ ಮುಂದೂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವ್ಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ವಿವಾದಾತ್ಮಕ ನೀಟ್-ಯುಜಿ 2024ಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಗುರುವಾರ ನಡೆಸಿತು. ನೀವು ಡಮ್ಮಿ ರೋಲ್ ಸಂಖ್ಯೆಗಳ ಮೂಲಕ ಫಲಿತಾಂಶ ಪ್ರಕಟಿಸಬಹುದು. ಇದರಿಂದ ಯಾವುದೇ ವಿದ್ಯಾರ್ಥಿಯ ಗುರುತನ್ನು ಬಹಿರಂಗವಾಗುವುದಿಲ್ಲ. ಪ್ರತಿ ಕೇಂದ್ರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಫಲಿತಾಂಶವನ್ನು ಪ್ರಕಟಿಸಬೇಕು. ಅಲ್ಲದೇ ಕೇಂದ್ರವಾರು ಮತ್ತು ನಗರವಾರು ಫಲಿತಾಂಶ ಪ್ರಕಟಿಸುವಂತೆ ಸೂಚಿಸಲಾಗುತ್ತಿದೆ ಎಂದು ಸಿಜೆಐ ಹೇಳಿದ್ದರು.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 2024ರ ಮೇ 5ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Bangladesh Protests: ಬಾಂಗ್ಲಾದಲ್ಲಿ ಹಿಂಸಾಚಾರ ಉಲ್ಬಣ, 105 ಸಾವು; 300 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ

Exit mobile version