ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ಆದೇಶದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಗುರುವಾರ (ಜುಲೈ 25) ನೀಟ್ ಯುಜಿ 2024 (NEET UG 2024) ಪರೀಕ್ಷೆಯ ಪರಿಷ್ಕೃತ ಫಲಿತಾಂಶ ಪ್ರಕಟಿಸಿದೆ. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ಮೇ 5ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಅದರಂತೆ, ಈಗ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ. ನೀಟ್ ಕೌನ್ಸೆಲಿಂಗ್ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿದುಬಂದಿದೆ.
ನೀಟ್ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ
- ನೀಟ್ ಅಧಿಕೃತ ವೆಬ್ಸೈಟ್ exams.nta.ac.in. ಗೆ ಭೇಟಿ ನೀಡಿ
- NEET UG 2024 revised result ಎಂಬ ನೋಟಿಫಿಕೇಶನ್ ಮೇಲೆ ಕ್ಲಿಕ್ ಮಾಡಿ
- ಇದಾದ ಬಳಿಕ ಹೊಸ ವಿಂಡೋ ಓಪನ್ ಆಗಲಿದ್ದು, ಲಾಗಿನ್ ಮಾಹಿತಿ ಸೇರಿ ಹಲವು ಮಾಹಿತಿ ಒದಗಿಸಿ
- ಆಗ ನಿಮ್ಮ ಸ್ಕ್ರೀನ್ ಮೇಲೆ ನೀಟ್ ಯುಜಿ ಫಲಿತಾಂಶ ಗೋಚರವಾಗಲಿದೆ
- ಭವಿಷ್ಯದ ರೆಫರೆನ್ಸ್ಗಳಿಗಾಗಿ ನೀಟ್ ಪರೀಕ್ಷೆಯ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಿ
NTA announces NEET UG revised scorecard at https://t.co/FYeFIGrYlm. #NEETUGUPDATE #ntaofficialupdate #NTA #MBBS #neetresult2024 #neetresult2024 pic.twitter.com/pA4JHi0skc
— Siddhant Anand (@JournoSiddhant) July 25, 2024
ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.
ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ಸ್ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್ ಮಾರ್ಕ್ಸ್ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್ ಮೈಂಡ್ ಅಮಿತ್ ಆನಂದ್ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: NEET: ಕರ್ನಾಟಕ ಬಳಿಕ ಪಶ್ಚಿಮ ಬಂಗಾಳದಲ್ಲೂ ನೀಟ್ ಪರೀಕ್ಷೆ ವಿರುದ್ಧ ನಿರ್ಣಯ; ಹೆಚ್ಚಾಯ್ತು ಆಕ್ರೋಶ