ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG Retest) ಕೃಪಾಂಕ (Grace Marks) ಪಡೆದ 1,563 ವಿದ್ಯಾರ್ಥಿಗಳಿಗೆ ಭಾನುವಾರ (ಜೂನ್ 23) ಮರು ಪರೀಕ್ಷೆ ನಡೆಸಲಾಗಿದ್ದು, ಅರ್ಧದಷ್ಟು ಅಭ್ಯರ್ಥಿಗಳು ಗೈರಾಗಿದ್ದಾರೆ. ಆ ಮೂಲಕ ಅಭ್ಯರ್ಥಿಗಳು ನೀಟ್ ಪರೀಕ್ಷೆ ಕುರಿತೇ ಆಸಕ್ತಿ ಕಳೆದುಕೊಂಡರೇ ಎಂಬ ಪ್ರಶ್ನೆ ಉದ್ಭವಿಸಿದೆ. ಗ್ರೇಸ್ ಮಾರ್ಕ್ಸ್ ಪಡೆದ 1,563 ಅಭ್ಯರ್ಥಿಗಳ ಪೈಕಿ 750 ಅಭ್ಯರ್ಥಿಗಳು ಮರು ಪರೀಕ್ಷೆಗೆ ಗೈರಾಗಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯೇ (NTA) ತಿಳಿಸಿದೆ.
ಚಂಡೀಗಢ, ಗುಜರಾತ್, ಹರಿಯಾಣ, ಮೇಘಾಲಯ ಸೇರಿ ಆರು ರಾಜ್ಯಗಳ ನಗರಗಳಲ್ಲಿ ಮರು ಪರೀಕ್ಷೆ ನಡೆದಿದ್ದು, 813 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದಾರೆ. ಛತ್ತೀಸ್‌ಗಢದಲ್ಲಿ 602 ಅಭ್ಯರ್ಥಿಗಳ ಪೈಕಿ 291 ವಿದ್ಯಾರ್ಥಿಗಳು ಹಾಜರಾದರೆ, ಹರಿಯಾಣದಲ್ಲಿ 494 ಅಭ್ಯರ್ಥಿಗಳ ಪೈಕಿ 287, ಮೇಘಾಲಯದಲ್ಲಿ 464 ವಿದ್ಯಾರ್ಥಿಗಳ ಪೈಕಿ 234 ಅಭ್ಯರ್ಥಿಗಳು ಮಾತ್ರ ಹಾಜರಾದರು. ಗುಜರಾತ್ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಮರು ಪರೀಕ್ಷೆಗೆ ಹಾಜರಾದ ಎಂದು ಎನ್‌ಟಿಎ ತಿಳಿಸಿದೆ.
A total of 813 out of 1563 candidates appeared for #NEET UG re-exam today, NTA says.
— Nidhi Taneja (@NidhiTanejaa) June 23, 2024
Meaning:
Only half of retest candidates actually appeared today
750 candidates who did not appear… they will have their previous scores (minus the grace marks) as their FINAL scores.
ನೀಟ್ ಪರೀಕ್ಷೆ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮತ್ತು ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಹಾಜರಿದ್ದು, ಮರುಪರೀಕ್ಷೆಯ ಮೇಲ್ವಿಚಾರಣೆ ನಡೆಸಿದರು. 2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಸುದ್ದಿ ಆಯಿತು.
ಗ್ರೇಸ್ ಅಂಕದ ವಿವಾದ ದೇಶಾದ್ಯಂತ ಹರಡುತ್ತಿದ್ದಂತೆ ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದ 1,563 ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. 1,563 ಅಭ್ಯರ್ಥಿಗಳಲ್ಲಿ ಯಾರಾದರೂ ಮರುಪರೀಕ್ಷೆಯಿಂದ ಹೊರಗುಳಿದಿದ್ದರೆ ಗ್ರೇಸ್ ಅಂಕಗಳಿಲ್ಲದ ಅವರ ಹಿಂದಿನ ಅಂಕಗಳನ್ನು ಫಲಿತಾಂಶಗಳಿಗಾಗಿ ಬಳಸಲಾಗುತ್ತದೆ ಎಂದೂ ಕೇಂದ್ರ ಕೋರ್ಟ್‌ಗೆ ತಿಳಿಸಿತ್ತು. ಅದರಂತೆ ಇಂದು ಪರೀಕ್ಷೆ ನಡೆಸಿದ್ದು, ಜೂನ್ 30ರೊಳಗೆ ಫಲಿತಾಂಶ ಪ್ರಕಟಿಸಲಿದೆ.
ಇದನ್ನೂ ಓದಿ: NTA Website: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲು ಎನ್‌ಟಿಎ ವೆಬ್‌ಸೈಟ್ ಹ್ಯಾಕ್? ಸಂಸ್ಥೆ ಹೇಳೋದಿಷ್ಟು