ಪುಣೆ: ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ಟಾಟಾ ಸಮೂಹದ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರನ್ನು ಬಲಿ (Cyrus Mistry death) ತೆಗೆದುಕೊಂಡ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ, ಕಾರನ್ನು ಚಲಾಯಿಸುತ್ತಿದ್ದ ಡಾ. ಅನಾಹಿತಾ ಪಂಡೋಲೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಕಾರನ್ನು ಅಜಾಗರೂಕತೆಯಿಂದ ಚಲಾಯಿಸಿದ್ದಕ್ಕಾಗಿ ಐಪಿಸಿ ಮತ್ತು ಮೋಟಾರು ವಾಹನ ಕಾಯಿದೆಯ ಅಡಿಯಲ್ಲಿ ಡಾ. ಅನಾಹಿತಾ ಪಂಡೋಲೆ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಗುಜರಾತ್‌ನಿಂದ ಮುಂಬಯಿಗೆ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಮಹಾರಾಷ್ಟ್ರದ ಪಾಲ್ಘಾರ್ ಬಳಿ ರಸ್ತೆ ಅಪಘಾತ ಸಂಭವಿಸಿತ್ತು. ಕಾರು ಅತಿ ವೇಗದಲ್ಲಿ ಹೋಗುತ್ತಿದ್ದಾಗ ಅಪಘಾತ ಉಂಟಾಗಿತ್ತು.