Site icon Vistara News

ಒಡಿಶಾಗೆ ಬಿಜೆಪಿಯ ಮೋಹನ್‌ ಚರಣ್‌ ಮಾಝಿ, ಅರುಣಾಚಲಕ್ಕೆ ಪೆಮಾ ಖಂಡು ಸಿಎಂ; ಖಂಡು ನಾಳೆ ಪದಗ್ರಹಣ

New Chief Ministers

New Chief Ministers Sworn In Andhra Pradesh, Odisha, Arunachal Pradesh Today

ನವದೆಹಲಿ: ಆಂಧ್ರಪ್ರದೇಶಹಾಗೂ ಒಡಿಶಾದಲ್ಲಿ ಒಂದೇ ದಿನ ಇಬ್ಬರು ನೂತನ ಮುಖ್ಯಮಂತ್ರಿಗಳು ಪ್ರಮಾಣವಚನ (Oath) ಸ್ವೀಕರಿಸಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಟಿಡಿಪಿಯ ಎನ್‌.ಚಂದ್ರಬಾಬು ನಾಯ್ಡು (N Chandrababu Naidu), ಒಡಿಶಾ ಮುಖ್ಯಮಂತ್ರಿಯಾಗಿ ಮೋಹನ್‌ ಚರಣ್‌ ಮಾಝಿ (Mohan Charan Majhi) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು, ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಪೆಮಾ ಖಂಡು (Pema Khandu) ಅವರು ಆಯ್ಕೆಯಾಗಿದ್ದು, ಗುರುವಾರ (ಜೂನ್‌ 13) ಪ್ರಮಾಣವಚನ ಸ್ವೀಕರಿಸಿದ್ದಾರೆ.

ವಿಜಯವಾಡದಲ್ಲಿರುವ ಮೇಧಾ ಐಟಿ ಪಾರ್ಕ್‌ ಬಳಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಎನ್‌.ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾಗಿ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್‌ ಶಾ, ನಿತಿನ್‌ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ನಟರಾದ ಚಿರಂಜೀವಿ, ರಜನಿಕಾಂತ್‌, ಮಾಜಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ನಾಲ್ಕನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಚಂದ್ರಬಾಬು ನಾಯ್ಡು ಅವರು ದಾಖಲೆ ಬರೆದರು.

ಒಡಿಶಾ ರಾಜಧಾನಿ ಭುವನೇಶ್ವರದಲ್ಲಿ ಬಿಜೆಪಿಯ ಮೋಹನ್‌ ಚರಣ್‌ ಮಾಝಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಹಾಜರಾಗಿ ನೂತನ ಸಿಎಂಗೆ ಶುಭ ಹಾರೈಸಿದರು. ಕಳೆದ 24 ವರ್ಷಗಳಿಂದ ಸಿಎಂ ಆಗಿದ್ದ, ಬಿಜು ಜನತಾದಳದ ವರಿಷ್ಠ ನಾಯಕ ನವೀನ್‌ ಪಟ್ನಾಯಕ್‌ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಅರುಣಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಅವರು ಆಯ್ಕೆಯಾಗಿದ್ದು, ಗುರುವಾರ (ಜೂನ್‌ 13) ಬೆಳಗ್ಗೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಇಟಾನಗರದಲ್ಲಿ ನಡೆದ ಸಭೆಯಲ್ಲಿ ಪೆಮಾ ಖಂಡು ಅವರು ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆಯಾದರು. ಇದರೊಂದಿಗೆ ಸತತ ಎರಡನೇ ಬಾರಿಗೆ ಪೆಮಾ ಖಂಡು ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದಂತಾಗಿದೆ.

ಅರುಣಾಚಲ ಪ್ರದೇಶ, ಒಡಿಶಾ ಹಾಗೂ ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ವಿಧಾನಸಭೆ ಚುನಾವಣೆ ನಡೆದಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಿದೆ. ಆಂಧ್ರಪ್ರದೇಶದ 175 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಟಿಡಿಪಿ 135, ಮಿತ್ರಪಕ್ಷವಾದ ಜನಸೇನಾ ಪಕ್ಷವು 21 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಇದರೊಂದಿಗೆ ಪೂರ್ಣ ಬಹುಮತದೊಂದಿಗೆ ಮೈತ್ರಿ ಸರ್ಕಾರ ರಚಿಸಿವೆ. ಇನ್ನು ಒಡಿಶಾದ 147 ಕ್ಷೇತ್ರಗಳ ಪೈಕಿ ಬಿಜೆಪಿ 78 ಕ್ಷೇತ್ರಗಳಲ್ಲಿ ಗೆದ್ದು ಬಹುಮತ ಪಡೆದಿದೆ. ಅರುಣಾಚಲ ಪ್ರದೇಶದ ಒಟ್ಟು 60 ಕ್ಷೇತ್ರಗಳ ಪೈಕಿ ಬಿಜೆಪಿ 46ರಲ್ಲಿ ಗೆದ್ದು ಪ್ರಾಬಲ್ಯ ಸಾಧಿಸಿದೆ.

ಇದನ್ನೂ ಓದಿ: Chandrababu Naidu: ವಯಸ್ಸಲ್ಲಿ ಕಿರಿಯರಾದ ಮೋದಿ ಪಾದ ಮುಟ್ಟಲು ಮುಂದಾದ ಚಂದ್ರಬಾಬು ನಾಯ್ಡು; Video ಇದೆ

Exit mobile version