Narendra Modi: ಇತಿಹಾಸದ ತಪ್ಪುಗಳನ್ನು ಸರಿಪಡಿಸಲಾಗಿದೆ, ಇದು ನವಭಾರತ ಎಂದ ಮೋದಿ - Vistara News

ದೇಶ

Narendra Modi: ಇತಿಹಾಸದ ತಪ್ಪುಗಳನ್ನು ಸರಿಪಡಿಸಲಾಗಿದೆ, ಇದು ನವಭಾರತ ಎಂದ ಮೋದಿ

Narendra Modi: ಭಾರತದ ಇತಿಹಾಸವು ಅಮೋಘವಾಗಿದ್ದು, ಬಲಿಷ್ಠ ನಾಗರಿಕತೆಯಿಂದ ರೂಪುಗೊಂಡಿದೆ. ಇತಿಹಾಸದ ತಪ್ಪುಗಳನ್ನು ಸರಿಪಡಿಸಿಕೊಂಡು, ಹೊಸ ಮನ್ವಂತರಕ್ಕೆ ಸಾಕ್ಷಿಯಾಗುತ್ತಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi To Visit US
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: “ದೇಶದ ಇತಿಹಾಸದಲ್ಲಿ ನಡೆದ ತಪ್ಪುಗಳನ್ನು ಸರಿಪಡಿಸಲಾಗಿದೆ. ಇದು ನವಭಾರತವಾಗಿದ್ದು, ಜಗತ್ತೇ ನಮ್ಮನ್ನು ಭರವಸೆಯ ಕಣ್ಣುಗಳಿಂದ ನೋಡುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ರಾಜಸ್ಥಾನದಲ್ಲಿ ಭಗವಾನ್‌ ದೇವನಾರಾಯಣರ ಜಯಂತಿ ಹಿನ್ನೆಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದೇಶದ ಇತಿಹಾಸದ ತಪ್ಪುಗಳು ಮರುಕಳಿಸುವುದಿಲ್ಲ. ಅದರಲ್ಲೂ, ಕಳೆದ ಕೆಲವು ದಶಕಗಳಿಂದ ಮಾಡಿದ್ದ ತಪ್ಪುಗಳನ್ನು ಸರಿಪಡಿಸಲಾಗಿದೆ” ಎಂದರು.

“ದೇಶಕ್ಕಾಗಿ ನಿಜವಾಗಿಯೂ ಶ್ರಮಿಸಿದವರನ್ನು ಈಗ ಸ್ಮರಿಸಲಾಗುತ್ತಿದೆ. ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ. ಇತಿಹಾಸದುದ್ದಕ್ಕೂ ಭಾರತವನ್ನು ವಿಭಜಿಸಲು ಯತ್ನಗಳು ನಡೆದಿವೆ. ಭೌಗೋಳಿಕವಾಗಿ, ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ಹಾಗೂ ಸೈದ್ಧಾಂತಿಕವಾಗಿ ಭಾರತವನ್ನು ಇಬ್ಭಾಗ ಮಾಡಲು ಯತ್ನಿಸಲಾಗಿದೆ. ಆದರೆ, ಭಾರತವು ಬಲಿಷ್ಠ ನಾಗರಿಕತೆ ಹಾಗೂ ಬಲಿಷ್ಠ ತತ್ತ್ವಗಳ ಮೇಲೆ ನಿಂತಿರುವ ರಾಷ್ಟ್ರವಾಗಿರುವುದರಿಂದ ಯಾರೂ ನಮ್ಮನ್ನು ಮುಗಿಸಲು ಸಾಧ್ಯವಾಗಿಲ್ಲ. ಮುಂದೆಯೂ ಇದು ನೆರವೇರುವುದಿಲ್ಲ” ಎಂದು ಹೇಳಿದರು.

“ಭಾರತವು ಈಗ ಹೊಸ ದಿಕ್ಕಿನೆಡೆಗೆ ಸಾಗುತ್ತಿದೆ. ಗತಕಾಲದ ತಪ್ಪುಗಳನ್ನು ಸರಿಪಡಿಸಿಕೊಂಡು, ಏಳಿಗೆಯೆಡೆಗೆ ಮುನ್ನುಗುತ್ತಿದೆ. ಹಾಗಾಗಿ, ಜಗತ್ತೇ ಇಂದು ಭಾರತದ ಕಡೆ ನೋಡುತ್ತಿದೆ. ಹೊಸ ಆಶಾವಾದವು ನಮ್ಮ ಮೇಲೆ ಮೂಡಿದೆ. ಇದಕ್ಕೆ ನಮ್ಮ ಬಲಿಷ್ಠ ಮೌಲ್ಯಗಳು ಹಾಗೂ ನಾಗರಿಕತೆಯೇ ಕಾರಣ” ಎಂದು ತಿಳಿಸಿದರು.

ಇದನ್ನೂ ಓದಿ: Narendra Modi Bust | ಬಂಗಾರದಲ್ಲಿ ನರೇಂದ್ರ ಮೋದಿ ಪುತ್ಥಳಿ ಕೆತ್ತಿಸಿದ ಗುಜರಾತ್‌ ಉದ್ಯಮಿ, ಏನಿದಕ್ಕೆ ಕಾರಣ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Arvind Kejriwal : ಜಾಮೀನಿಗಾಗಿ ಕುತಂತ್ರ; ಸಿಹಿ ತಿಂಡಿ ತಿಂದು ಸಕ್ಕರೆ ಕಾಯಿಲೆ ಎನ್ನುತ್ತಿರುವ ಕೇಜ್ರಿವಾಲ್​ ಎಂದ ಇಡಿ

Aravind Kejriwal: ಅಧಿಕ ಮಧುಮೇಹವಿದೆ ಎಂದು ಹೇಳಿಕೊಳ್ಳುತ್ತಿರುವ ವ್ಯಕ್ತಿ. ಮಾವಿನ ಹಣ್ಣುಗಳನ್ನು ಸೇವಿಸುವುದು, ನಿಯಮಿತವಾಗಿ ಸಿಹಿತಿಂಡಿಗಳನ್ನು ಸೇವಿಸುವುದು ಮತ್ತು ಸಕ್ಕರೆ ಇರುವ ಚಹಾ ಸೇವಿಸುತ್ತಿದ್ದಾರೆ. ಈ ಮೂಲಕ ಸಕ್ಕರೆ ಮಟ್ಟ ಹೆಚ್ಚಿಸಿಕೊಂಡು ಜಾಮೀನು ಪಡೆಯಲು ಸುಳ್ಳು ಹೇಳುತ್ತಿದ್ದಾರೆ ” ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಕೋರ್ಟ್​ ಮುಂದೆ ಆರೋಪಿಸಿದ್ದಾರೆ.

VISTARANEWS.COM


on

Aravind Kejriwal
Koo

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal ) ಅವರಿಗೆ ತಿಹಾರ್​ ಜೈಲಿನಲ್ಲಿ ಮಾವಿನ ಹಣ್ಣುಗಳು ಹಾಗೂ ಸಿಹಿ ತಿಂಡಿಗಳ ಪುಷ್ಕಳ ಭೋಜನ ನಡೆಯುತ್ತಿದೆ. ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟ ಸೇರಿದಂತೆ ಎಲ್ಲ ಸಂದರ್ಭಗಳಲ್ಲಿ ಸಕ್ಕರೆ ಅಂಶವಿರುವ ವಸ್ತುಗಳನ್ನು ತಿನ್ನುತ್ತಿದ್ದಾರೆ. ಇದು ಕುತಂತ್ರ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಂಡು ಕೋರ್ಟ್​​ ಮುಂದೆ ತಮಗೆ ಸಕ್ಕರೆ ಕಾಯಿಲೆ ಇದೆ ಎಂದು ಹೇಳುವ ಮೂಲಕ ಜಾಮೀನು ಕೋರುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆಕ್ಷೇಪ ವ್ಯಕ್ತಪಡಿಸಿದೆ.

ತಮ್ಮ ಸಕ್ಕರೆ ಮಟ್ಟವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಮತ್ತು ವೈದ್ಯರನ್ನು ಸಂಪರ್ಕಿಸಲು ಅವಕಾಶ ನೀಡುವಂತೆ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ದೆಹಲಿ ನ್ಯಾಯಾಲಯ ವಿಚಾರಣೆ ನಡೆಸಿತು. ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು ಏರಿಳಿತಗೊಳ್ಳುತ್ತಿದೆ ಮತ್ತು ಅವರು ತಮ್ಮ ನಿಯಮಿತ ವೈದ್ಯರನ್ನು ಸಂಪರ್ಕಿಸುವ ಅಗತ್ಯವಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಕೇಜ್ರಿವಾಲ್ ಅವರು ವಾರಕ್ಕೆ ಮೂರು ಬಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಮ್ಮ ವೈದ್ಯರನ್ನು ಸಂಪರ್ಕಿಸಬೇಕಾಗಿದೆ ಎಂದು ಹೇಳಿದರು.

“ಅಧಿಕ ಮಧುಮೇಹವಿದೆ ಎಂದು ಹೇಳಿಕೊಳ್ಳುತ್ತಿರುವ ವ್ಯಕ್ತಿ. ಮಾವಿನ ಹಣ್ಣುಗಳನ್ನು ಸೇವಿಸುವುದು, ನಿಯಮಿತವಾಗಿ ಸಿಹಿತಿಂಡಿಗಳನ್ನು ಸೇವಿಸುವುದು ಮತ್ತು ಸಕ್ಕರೆ ಇರುವ ಚಹಾ ಸೇವಿಸುತ್ತಿದ್ದಾರೆ. ಈ ಮೂಲಕ ಸಕ್ಕರೆ ಮಟ್ಟ ಹೆಚ್ಚಿಸಿಕೊಂಡು ಜಾಮೀನು ಪಡೆಯಲು ಸುಳ್ಳು ಹೇಳುತ್ತಿದ್ದಾರೆ ” ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಕೋರ್ಟ್​ ಮುಂದೆ ಹೇಳಿದ್ದಾರೆ.

ಇದನ್ನೂ ಓದಿ: Lok Sabha Election 2024: ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಬಿಜೆಪಿಗೆ ಮತ ನೀಡಿ: ಕಾಗೇರಿ ಮನವಿ

ಈ ಉದ್ದೇಶಪೂರ್ವಕ ಸೇವನೆಯ ಹಿಂದೆ ಕೇಜ್ರಿವಾಲ್ ಅವರ ಕೆಟ್ಟ ಉದ್ದೇಶವಿದೆ. ಅವರ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿನ ಏರಿಳಿತಗಳನ್ನು ಉಲ್ಲೇಖಿಸಿ ಜಾಮೀನು ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಹುಸೇನ್ ವಾದಿಸಿದರು.

ಈಗ ರದ್ದುಪಡಿಸಲಾದ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದ ನಂತರ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ವಿಚಾರಣಾ ನ್ಯಾಯಾಲಯವು ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23, 2024 ರವರೆಗೆ ವಿಸ್ತರಿಸಿತು.

ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನ ಮತ್ತು ನಂತರದ ರಿಮಾಂಡ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ

ವಿಧಾನಸಭಾ ಸದಸ್ಯರು ಮತ್ತು ಕ್ಯಾಬಿನೆಟ್ ಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಲು ಕೇಜ್ರಿವಾಲ್ ಅವರಿಗೆ ಅವಕಾಶ ನೀಡುವ ಮೂಲಕ ದೆಹಲಿಯ ದಕ್ಷ ಆಡಳಿತಕ್ಕಾಗಿ ವ್ಯವಸ್ಥೆ ಮಾಡಲು ಕಾರಾಗೃಹಗಳ ಮಹಾನಿರ್ದೇಶಕರಿಗೆ ನಿರ್ದೇಶನ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರುವುದಕ್ಕೆ ಸಂಬಂಧಿಸಿದ ತಪ್ಪು ಸಂದೇಶಗಳನ್ನು ಸಾರುವ ಶೀರ್ಷಿಕೆಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಲು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿದೆ.

Continue Reading

ಉದ್ಯೋಗ

Job Alert: ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿದೆ 4,660 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ರೈಲ್ವೆ ನೇಮಕಾತಿ ಮಂಡಳಿ 4,660 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇನ್ನು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಇಲ್ಲಿದೆ ಭರಪೂರ ಅವಕಾಶ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಭಾರೀ ಉದ್ಯೋಗಾವಕಾಶಗಳಿವೆ. ರೈಲ್ವೆ ನೇಮಕಾತಿ ಮಂಡಳಿ (Railway Recruitment Board) ಈ ನೇಮಕಾತಿ ನಡೆಸುತ್ತಿದೆ (RPF Recruitment 2024). ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ (Railway Protection Force)ನಲ್ಲಿ ಬರೋಬ್ಬರಿ 4,660 ಹುದ್ದೆಗಳಿವೆ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಾನ್‌ಸ್ಟೇಬಲ್‌ – 4,208, ಸಬ್‌ ಇನ್ಸ್‌ಪೆಕ್ಟರ್‌ – 452 ಹುದ್ದೆಗಳಿವೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇನ್ನು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ, ಗರಿಷ್ಠ ವಯಸ್ಸು 25 ವರ್ಷ. ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 28 ವರ್ಷ. ಅರ್ಜಿ ಶುಲ್ಕವಾಗಿ ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು 500 ರೂ. ಮತ್ತು ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳು 250 ರೂ. ಪಾವತಿಸಬೇಕು.

ವೇತನ ಮತ್ತು ಆಯ್ಕೆ ವಿಧಾನ

ಕಾನ್ಸ್‌ಟೇಬಲ್‌ ಹುದ್ದೆಗಳಿಗೆ 21,700 ರೂ. ಮತ್ತು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ 35,400 ರೂ. ಮಾಸಿಕ ವೇತನ ಲಭ್ಯ. ಕಂಪ್ಯೂಟರ್‌ ಆಧಾರಿತ ಪರೀಕ್ಷೆ (CBT), ದೈಹಿಕ ಸಾಮರ್ಥ್ಯ ಪರೀಕ್ಷೆ (PET, PMT), ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಹೆಸರು, ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಈಗ ರಿಜಿಸ್ಟ್ರೇಷನ್‌ ಐಡಿ ಮತ್ತು ಪಾಸವರ್ಡ್‌ ದೊರೆಯುತ್ತದೆ. ಅದನ್ನು ಬಳಿಸಿ ಲಾಗಿನ್‌ ಆಗಿ.
  • ಈಗ ಕಂಡು ಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ. ವೈಯಕ್ತಿಕ, ಶೈಕ್ಷಣಿಕ ಮಾಹಿತಿ ನೀಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಗಮನಿಸಿ

ಲಿಖಿತ ಪರೀಕ್ಷೆಯಲ್ಲಿ ನೆಗೆಟಿವ್‌ ಅಂಕಗಳಿದ್ದು, ಎಚ್ಚರಿಕೆಯಿಂದ ಉತ್ತರ ಬರೆಯಬೇಕು ಎಂದು ಪ್ರಕಟಣೆ ತಿಳಿಸಿದೆ. ಲಿಖಿತ ಪರೀಕ್ಷೆಯ ಅವಧಿ 90 ನಿಮಿಷದ ಅವಧಿಯದ್ದಾಗಿದ್ದು, ಪ್ರಶ್ನೆಗಳು ಬಹು ಆಯ್ಕೆಯ ಉತ್ತರವನ್ನು ಒಳಗೊಂಡಿದೆ. ಕಾನ್‌ಸ್ಟೇಬಲ್‌ ಹುದ್ದೆಯ ಪರೀಕ್ಷೆ ಎಸ್ಸೆಸ್ಸೆಲ್ಸಿ ಹಂತದ ಪ್ರಶ್ನೆಗಳನ್ನು ಒಳಗೊಂಡಿದ್ದು, ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಯ ಪರೀಕ್ಷೆ ಪದವಿ ಹಂತದ ಪ್ರಶ್ನೆಗಳನ್ನು ಒಳಗೊಂಡಿದೆ.

ಇದನ್ನೂ ಓದಿ: Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

Continue Reading

Fact Check

Fact Check: ಮತದಾನ ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ? ವಾಸ್ತವ ಹೀಗಿದೆ

Fact Check: ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದವರ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತಗೊಳಿಸಲಾಗುತ್ತದೆ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ನಕಲಿ ಸುದ್ದಿಯ ಕುರಿತು ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಇದರ ಬೆನ್ನಲ್ಲೇ, ಹಲವು ಮಾಧ್ಯಮ ಸಂಸ್ಥೆಗಳು, ಚುನಾವಣೆ ಆಯೋಗವು ಫ್ಯಾಕ್ಟ್‌ ಚೆಕ್‌ ಮಾಡಿದೆ.

VISTARANEWS.COM


on

Fact Check
Koo

ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election 2024) ಶುಕ್ರವಾರ (ಏಪ್ರಿಲ್‌ 19) ಚಾಲನೆ ಸಿಗಲಿದೆ. ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಾಳೆ ಮೊದಲ ಹಂತದ ಮತದಾನ (First Phase Voting) ನಡೆಯಲಿದ್ದು, ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆವರೆಗೆ ಜನರು ಹಕ್ಕು ಚಲಾಯಿಸಬಹುದಾಗಿದೆ. ಇದರ ಬೆನ್ನಲ್ಲೇ, ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದವರ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತವಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಹಾಗಾದರೆ ಈ ಸುದ್ದಿ ಎಷ್ಟು ನಿಜ? ಇಲ್ಲಿದೆ (Fact Check) ಸತ್ಯಾಂಶ.

ಏನಿದು ವದಂತಿ?

ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದವರ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತಗೊಳಿಸಲಾಗುತ್ತದೆ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಪತ್ರಿಕೆಯೊಂದರಲ್ಲಿ ಈ ಕುರಿತು ವರದಿ ಪ್ರಕಟಿಸಲಾಗಿದೆ ಎಂಬುದಾಗಿ ನಕಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ದೇಶದಲ್ಲಿ ಮತದಾನ ಮಾಡುವುದು ಕಡ್ಡಾಯವಾಗಿದೆ. ಯಾರು ಮತದಾನ ಮಾಡುವುದಿಲ್ಲವೋ, ಅವರ ಬ್ಯಾಂಕ್‌ ಖಾತೆಯಿಂದ 350 ರೂಪಾಯಿಯನ್ನು ಕಡಿತಗೊಳಿಸಲಾಗುತ್ತದೆ ಎಂಬುದಾಗಿ ಮಾಹಿತಿ ಹರಿದಾಡಿದೆ.

‌ವಾಸ್ತವಾಂಶ ಏನು?

ಸಾಮಾಜಿಕ ಜಾಲತಾಣಗಳಲ್ಲಿ ವರದಿಯ ಪೋಸ್ಟ್‌ ವೈರಲ್ ಆಗುತ್ತಲೇ, ಚುನಾವಣಾ ಆಯೋಗ, ಹಲವು ಪೊಲೀಸ್‌ ಇಲಾಖೆಗಳು ಫ್ಯಾಕ್ಟ್‌ ಚೆಕ್‌ ಮಾಡಿವೆ. ಫ್ಯಾಕ್ಟ್‌ ಚೆಕ್‌ ಮಾಹಿತಿ ಪ್ರಕಾರ, ಮತದಾನ ಮಾಡದವರ ಬ್ಯಾಂಕ್‌ ಖಾತೆಯಿಂದ ಹಣ ಕಡಿತವಾಗುವುದಿಲ್ಲ. ಇದರ ಕುರಿತು ಯಾವುದೇ ಮಾಧ್ಯಮಗಳೂ ವರದಿ ಮಾಡಿಲ್ಲ. ಇವೆಲ್ಲ ನಕಲಿ ಸುದ್ದಿಯಾಗಿವೆ. ಯಾರೂ ಕೂಡ ಇಂತಹ ಪೋಸ್ಟ್‌ಗಳನ್ನು ಶೇರ್‌ ಮಾಡಬಾರದು ಎಂಬುದಾಗಿ ಪೊಲೀಸರು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

ನಾಳೆ ಮೊದಲ ಹಂತದ ಮತದಾನ

ಶುಕ್ರವಾರ (ಏಪ್ರಿಲ್‌ 19) ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಪ್ರಜಾಪ್ರಭುತ್ವದ ಹಬ್ಬವನ್ನು ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ಆಚರಿಸಲು ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಮತಗಟ್ಟೆಗಳಿಗೆ ಮತಯಂತ್ರಗಳು ಸೇರಿ ಅಗತ್ಯ ಉಪಕರಣಗಳ ರವಾನೆ, ಸಿಬ್ಬಂದಿಯ ರವಾನೆ, ಮತದಾರರಿಗೆ ಸಕಲ ರೀತಿಯ ಸೌಲಭ್ಯ ಒದಗಿಸುವುದು ಸೇರಿ ಎಲ್ಲ ರೀತಿಯಲ್ಲೂ ಸಜ್ಜಾಗಿದೆ. ಇನ್ನು ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಶಾಂತಿಯುತ ಮತದಾನ ಪ್ರಕ್ರಿಯೆಗೆ ಅನುವು ಮಾಡಿಕೊಡುತ್ತಿದೆ.

ಇದನ್ನೂ ಓದಿ: Fact Check: 10 ರಾಜ್ಯಗಳಲ್ಲಿ ಇಂಡಿಯಾ ಒಕ್ಕೂಟಕ್ಕೆ 200 ಸ್ಥಾನ ಎಂಬ ವರದಿ ನಿಜವೇ? ಇಲ್ಲಿದೆ ಸತ್ಯ!

Continue Reading

ದೇಶ

Mahua Moitra: ‘ಸೆಕ್ಸ್’‌ ನನ್ನ ಸಾಮರ್ಥ್ಯದ ಗುಟ್ಟು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ!

Mahua Moitra: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಪಡೆದ ಆರೋಪ ಹೊತ್ತಿರುವ ಟಿಎಂಸಿ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ನನ್ನ ಸಾಮರ್ಥ್ಯದ ಗುಟ್ಟು ಎಂದರೆ ಅದು ಸೆಕ್ಸ್‌ ಎಂಬುದಾಗಿ ಅವರು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Mahua Moitra
Koo

ಕೋಲ್ಕೊತಾ: ಕೇಂದ್ರ ಸರ್ಕಾರದ (Central Government) ವಿರುದ್ಧ ಸಂಸತ್ತಿನಲ್ಲಿ ಟೀಕಾಸ್ತ್ರ ಬಳಸುತ್ತಿದ್ದ, ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದಲ್ಲಿ ಸಿಲುಕಿರುವ ಟಿಎಂಸಿ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರೀಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಟಿಎಂಸಿಯಿಂದ ಕೃಷ್ಣನಗರ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಮಹುವಾ ಮೊಯಿತ್ರಾ ಅವರು ಪತ್ರಕರ್ತರೊಬ್ಬರ ಪ್ರಶ್ನೆಗೆ, “ನನ್ನ ಸಾಮರ್ಥ್ಯದ ಗುಟ್ಟು ಎಂದರೆ ಸೆಕ್ಸ್”‌ ಎಂಬುದಾಗಿ ಹೇಳಿದ್ದಾರೆ ಎನ್ನಲಾದ ವಿಡಿಯೊ ಈಗ ಭಾರಿ ವೈರಲ್‌ (Viral Video) ಆಗಿದೆ. ಇದು ವಿವಾದಕ್ಕೂ ಕಾರಣವಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೃಷ್ಣನಗರ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಮನೆಗೆ, ಪ್ರತಿ ಗ್ರಾಮಕ್ಕೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಹೀಗೆ, ಬಿಡುವಿಲ್ಲದ ಪ್ರಚಾರದಲ್ಲಿ ತೊಡಗಿರುವ ಮಹುವಾ ಮೊಯಿತ್ರಾ ಅವರಿಗೆ ಪತ್ರಕರ್ತರೊಬ್ಬರು “ನಿಮ್ಮ ಸಾಮರ್ಥ್ಯದ ಗಟ್ಟೇನು” ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಮಹುವಾ ಮೊಯಿತ್ರಾ ಅವರು, “ಸೆಕ್ಸ್‌ ನನ್ನ ಸಾಮರ್ಥ್ಯದ ಗುಟ್ಟು” ಎಂದಿದ್ದಾರೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ವರದಿಗಾರನ ಸ್ಪಷ್ಟನೆ ಏನು?

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ಒಪ್ಪಿಸಿದ್ದಾರೆ. ಅವರು ಲಂಚವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಲಾಗಿನ್‌ ವಿವರ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು. ಅಲ್ಲದೆ ಇದು ಸಂಸದರಲ್ಲಿ ಸಾಮಾನ್ಯ ಅಭ್ಯಾಸ ಎಂದು ವಾದಿಸಿದ್ದರು. ಆರು ಸದಸ್ಯರ ಸಮಿತಿಯಲ್ಲಿ ನಾಲ್ಕು ಮಂದಿ ಮಹುವಾ ಮೊಯಿತ್ರಾ ಅವರನ್ನು ಉಚ್ಚಾಟಿಸಲು ಮತ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಈಗಲೂ ಅವರ ವಿರುದ್ಧ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Mahua Moitra: ಹಣ ಅಕ್ರಮ ವರ್ಗಾವಣೆ; ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

Continue Reading
Advertisement
Safest Countries
ವಿದೇಶ6 mins ago

Safest Countries : ವಿಶ್ವದ ಎಲ್ಲೆಡೆ ನೋಡಿದರೂ ಯುದ್ಧ ಭೀತಿ; ಈ ದೇಶಗಳಷ್ಟೇ ಸುರಕ್ಷಿತ!

Lok Sabha Election 2024 How much is BY Raghavendra assets worth
Lok Sabha Election 20249 mins ago

Lok Sabha Election 2024: ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ಆಸ್ತಿ ಮೌಲ್ಯ ಎಷ್ಟು ಕೋಟಿ?

Aravind Kejriwal
ದೇಶ20 mins ago

Arvind Kejriwal : ಜಾಮೀನಿಗಾಗಿ ಕುತಂತ್ರ; ಸಿಹಿ ತಿಂಡಿ ತಿಂದು ಸಕ್ಕರೆ ಕಾಯಿಲೆ ಎನ್ನುತ್ತಿರುವ ಕೇಜ್ರಿವಾಲ್​ ಎಂದ ಇಡಿ

Job Alert
ಉದ್ಯೋಗ31 mins ago

Job Alert: ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿದೆ 4,660 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Kodagu Gowda Premier League Cricket Tournament inauguration
ಕ್ರೀಡೆ46 mins ago

Kodagu News: ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

Bhasha Utsav 2024 programme on 24th April
ಬೆಂಗಳೂರು49 mins ago

Bengaluru News: ಬೆಂಗಳೂರಿನಲ್ಲಿ ಏ. 24ರಂದು ಭಾಷಾ ಉತ್ಸವ

Uttara Kannada Lok Sabha Constituency BJP candidate Vishweshwara Hegade Kageri election campaign in Honnavara
ಉತ್ತರ ಕನ್ನಡ52 mins ago

Lok Sabha Election 2024: ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಬಿಜೆಪಿಗೆ ಮತ ನೀಡಿ: ಕಾಗೇರಿ ಮನವಿ

Bangalore Rural Lok Sabha Constituency Congress candidate DK Suresh fans prayed in sri Chamundeshwari hill
ಮೈಸೂರು56 mins ago

Lok Sabha Election 2024: ಡಿ.ಕೆ. ಸುರೇಶ್ ಗೆಲುವಿಗಾಗಿ ಚಾಮುಂಡಿ ಬೆಟ್ಟ ಹತ್ತಿ ಪ್ರಾರ್ಥಿಸಿದ ಅಭಿಮಾನಿಗಳು

Lok Sabha Elections-2024
Lok Sabha Election 202459 mins ago

Lok sabha election: 2019ರಲ್ಲಿ 77 ಕ್ಷೇತ್ರಗಳಲ್ಲಿ ಪ್ರಯಾಸದ ಗೆಲುವು ಕಂಡಿದ್ದ ಬಿಜೆಪಿ; ಎಲ್ಲೆಲ್ಲಿ ಎಂಬ ಮಾಹಿತಿ ಇಲ್ಲಿದೆ

Sweet potatoes have the ability to control diabetes and prevent cancer
ಆರೋಗ್ಯ60 mins ago

Sweet Potatoes: ಗೆಣಸಿಗೆ ಮಧುಮೇಹ ನಿಯಂತ್ರಿಸುವ, ಕ್ಯಾನ್ಸರ್ ತಡೆಯುವ ಸಾಮರ್ಥ್ಯವಿದೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌