ದೇಶ
New Parliament Building: ನೂತನ ಸಂಸತ್ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಹೊಸ ಸಂಸತ್ ಭವನದ ಉದ್ಘಾಟನೆ ನಿಮಿತ್ತ ಕಾರ್ಯಕ್ರಮಗಳು ಇಂದು ಮುಂಜಾನೆ 7.30ರಿಂದಲೇ ಪ್ರಾರಂಭಗೊಂಡಿವೆ. ಎರಡನೇ ಹಂತದ ಕಾರ್ಯಕ್ರಮಗಳು ಕೆಲವೇ ಹೊತ್ತಲ್ಲಿ ಶುರುವಾಗಲಿದ್ದು, ನಾವಿಲ್ಲಿ ಕೆಳಗೆ ಕೊಟ್ಟಿರುವ ಲಿಂಕ್ ಮೂಲಕ ನೇರಪ್ರಸಾರ ವೀಕ್ಷಿಸಬಹುದು.
ಇಂದು ದೆಹಲಿಯಲ್ಲಿ ನೂತನ ಸಂಸತ್ ಭವನ (New Parliament Building)ದ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದೆ (New Parliament Building Inauguration). ಬೆಳಗ್ಗೆ 7.30ರಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭವಾಗಿವೆ. ಪ್ರಧಾನಿ ನರೇಂದ್ರ ಮೋದಿಯವರು ಸೆಂಗೋಲ್ ಪ್ರತಿಷ್ಠಾಪನೆ ಮಾಡಿದ್ದಾರೆ. ಇಂದು ಮಧ್ಯಾಹ್ನ 2.30ರವರೆಗೂ ಸಂಸತ್ ಭವನದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ನೀವು ಈ ಕೆಳಗಿನ ಲಿಂಕ್ ಮೂಲಕ ನೇರಪ್ರಸಾರ ವೀಕ್ಷಿಸಬಹುದಾಗಿದೆ.
ಕರ್ನಾಟಕ
Cauvery Dispute: ಕಾವೇರಿ ಕಿಚ್ಚು; ಸತ್ತ ಇಲಿಯನ್ನು ಬಾಯಿ ಬಳಿ ಇಟ್ಟು ಪ್ರತಿಭಟನೆ ನಡೆಸಿದ ರೈತರು
Cauvery Water Dispute: ಕಾವೇರಿ ನದಿ ನೀರು ಹಂಚಿಕೆ (Cauvery Water Dispute) ಗಲಾಟೆ ಹೆಚ್ಚಾಗುತ್ತಿದೆ. ಈ ಮಧ್ಯೆ ತಮಿಳುನಾಡಿನ ರೈತರು ಕೈಯಲ್ಲಿ ಸತ್ತ ಇಲಿಯನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ(Cauvery Dispute) ಗಲಾಟೆ ದಿನ ಕಳೆದಂತೆ ಕಾವೇರುತ್ತಿದೆ. ಈ ವಿಚಾರ ಕರ್ನಾಟಕ ಮತ್ತು ತಮಿಳುನಾಡಿನ ಮಧ್ಯೆ ಒಡಕು ಮೂಡುವಂತೆ ಮಾಡಿದೆ. ಇತ್ತ ಕರ್ನಾಟಕದ ರೈತರು ನೀರು ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರೆ ಅತ್ತ ತಮಿಳುನಾಡಿನ ಕೃಷಿಕರು ಸತ್ತ ಇಲಿಯನ್ನು ತಮ್ಮ ಬಾಯಿಯ ಬಳಿ ಇಟ್ಟುಕೊಂಡು ವಿಚಿತ್ರ ರೀತಿಯಲ್ಲಿ ಹೋರಾಟಕ್ಕೆ ಇಳಿದಿದ್ದಾರೆ.
ತಮಿಳಿನಾಡಿನ ತಿರುಚಿರಪಳ್ಳಿಯಲ್ಲಿ ರೈತರು ಈ ರೀತಿಯ ವಿಚಿತ್ರ ಪ್ರತಿಭಟನೆಗೆ ಇಳಿದು ರಾಜ್ಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ಕಾವೇರಿ ನೀರು ಒದಗಿಸಬೇಕೆಂದು ಕರ್ನಾಟಕ ಮತ್ತು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಸದ್ಯ ಈ ವಿಡಿಯೊ ವೈರಲ್ ಆಗಿದೆ. ಕರ್ನಾಟಕವು ಕಾವೇರಿ ನೀರನ್ನು ತಡೆಹಿಡಿಯುವುದನ್ನು ಮುಂದುವರಿಸಿದರೆ, ಭತ್ತದ ಕೃಷಿಗೆ ನೀರಿನ ಕೊರತೆ ಕಾಡಲಿದೆ. ಇದರಿಂದ ರೈತರು ಬದುಕುಳಿಯಲು ಇಲಿ ಮಾಂಸವನ್ನು ಸೇವಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎನ್ನುವುದನ್ನು ಸಂಕೇತಿಸುವಂತೆ ಇಲಿಯ ಮೃತದೇಹವನ್ನು ಕೈಯಲ್ಲಿಟ್ಟು ಪ್ರತಿಭಟನೆ ನಡೆಸಲಾಗಿದೆ.
#WATCH | A group of Tamil Nadu farmers in Tiruchirappalli holding dead rats in their mouths protest against the Karnataka government and demand the release of Cauvery water to the state from Karnataka pic.twitter.com/CwQyVelyjF
— ANI (@ANI) September 26, 2023
ಇದೇ ಮೊದಲ ಸಲ ಅಲ್ಲ
ವಿಶೇಷವೆಂದರೆ ರೈತರು ಈ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಇದು ಮೊದಲ ಸಲವೇನಲ್ಲ. 2017ರಲ್ಲಿ 65 ವರ್ಷದ ಚಿನ್ನಗೊಡಂಗಿ ಪಳನಿಸ್ವಾಮಿ ಎನ್ನುವ ರೈತರೊಬ್ಬರು ಜೀವಂತ ಇಲಿಯೊಂದನ್ನು ಹಲ್ಲಿನ ನಡುವೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದರು. ಆ ಮೂಲಕ ತಮಿಳುನಾಡಿನ ರೈತರ ಸಮಸ್ಯೆಯನ್ನು ಸರ್ಕಾರದ ಗಮನ ಸೆಳೆಯಲು ಯತ್ನಿಸಿದ್ದರು.
“ಪರಿಸ್ಥಿತಿ ಸುಧಾರಿಸದಿದ್ದರೆ ನಾವು ಇಲಿಗಳನ್ನು ಸೇವಿಸ ಬೇಕಾದ ಪರಿಸ್ಥಿತಿ ಎದುರಾಗಬಹುದು ಎಂಬ ಸಂದೇಶವನ್ನು ನಾನು ನನ್ನ ಸಹವರ್ತಿಗಳೊಂದಿಗೆ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದೆ” ಎಂದು ಚಿನ್ನಗೊಡಂಗಿ ಪಳನಿಸ್ವಾಮಿ ತಿಳಿಸಿದ್ದರು.
ಅದಕ್ಕೂ ಮೊದಲು 2016ರಲ್ಲಿ, ತಮಿಳುನಾಡಿನ ತಿರುಚ್ಚಿಯಲ್ಲಿ ಸುಮಾರು 30 ರೈತರ ಗುಂಪು ಸತ್ತ ಇಲಿಗಳನ್ನು ಬಾಯಿ ಬಳಿ ಹಿಡಿದುಕೊಂಡು ಪ್ರತಿಭಟನೆ ನಡೆಸಿತ್ತು. ನೀರಿನ ಬಿಕ್ಕಟ್ಟು ಭತ್ತದ ಕೃಷಿಯ ಮೇಲೆ ತೀವ್ರ ಪರಿಣಾಮ ಬೀರಿದೆ ಮತ್ತು ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತವಾಗದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ. ಆರ್ಥಿಕ ಸಂಕಷ್ಟದ ಪರಿಣಾಮವಾಗಿ ಇಲಿ ಮಾಂಸವನ್ನೂ ರೈತರು ಸೇವಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಬಹುದು ಎಂಬುದನ್ನು ಆ ಗುಂಪು ವಿವರಿಸಿತ್ತು.
ಇದನ್ನೂ ಓದಿ: Cauvery Dispute : 3000 ಕ್ಯೂಸೆಕ್ ನೀರು ಬಿಡುಗಡೆ ಆದೇಶವನ್ನೂ ಪಾಲಿಸುತ್ತಾ ಸರ್ಕಾರ?; ಸಿಎಂ ಹೇಳಿದ್ದೇನು?
ರಾಜ್ಯಕ್ಕೆ ಹೊಡೆತ
ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ. ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ಸೆಪ್ಟೆಂಬರ್ 13ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 15 ದಿನಗಳವರೆಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿತ್ತು. ಸೆ. 18ರಂದು ನಡೆದ ಪ್ರಾಧಿಕಾರದ ಸಭೆ ಅದನ್ನು ಅನುಮೋದಿಸಿತ್ತು. ಸೆಪ್ಟೆಂಬರ್ 21ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆ ಈ ಆದೇಶವನ್ನು ಎತ್ತಿ ಹಿಡಿಯಲಾಗಿತ್ತು. ಇದೀಗ ಮಂಗಳವಾರ (ಸೆ. 26) ನಡೆದ ಸಭೆಯಲ್ಲಿ ಕರ್ನಾಟಕದ ಮಂಡಿಸಿದ ವಾದವನ್ನು ಪರಿಗಣಿಸಿದ ಸಮಿತಿ ನೀರೇ ಬಿಡುವುದಿಲ್ಲ ಎಂಬ ಮನವಿಯನ್ನು ಒಪ್ಪಲಿಲ್ಲ. ಐದು ಸಾವಿರ ಕ್ಯೂಸೆಕ್ ಬದಲಿಗೆ ಮೂರು ಸಾವಿರ ಕ್ಯೂಸೆಕ್‌ಗೆ ಇಳಿಸಿ ಎಂದು ಸೂಚನೆ ನೀಡಿದೆ.
ದೇಶ
Mulayam Singh Yadav: ಮುಲಾಯಂ ಸಿಂಗ್ ಮೂರ್ತಿ ತೆರವು; ಯೋಗಿ ನಾಡಲ್ಲಿ ರೂಲ್ಸ್ ಎಂದರೆ ರೂಲ್ಸ್!
Mulayam Singh Yadav: ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ಅನುಮತಿ ಇಲ್ಲದೆ ಪ್ರತಿಷ್ಠಾಪನೆ ಮಾಡಿದ ಕಾರಣ ಮುಲಾಯಂ ಸಿಂಗ್ ಯಾದವ್ ಮೂರ್ತಿಯನ್ನು ತೆರವುಗೊಳಿಸಲಾಗಿದೆ.
ಲಖನೌ: ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ (Uttar Pradesh) ಕಾನೂನು ಪಾಲನೆ ಹಾಗೂ ಕಾನೂನು ಸುವ್ಯವಸ್ಥೆಗೆ (Law And Order) ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳ ತೆರವು, ಅಪರಾಧಿಗಳನ್ನು ಮಟ್ಟಹಾಕುವುದು ಸೇರಿ ಹಲವು ದಿಸೆಯಲ್ಲಿ ಯೋಗಿ ಆದಿತ್ಯನಾಥ್ ಕ್ರಮ ತೆಗೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ, ಅನುಮತಿ ಇಲ್ಲದೆ ಮೂರ್ತಿ ಸ್ಥಾಪನೆ ಮಾಡಿದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಮೂರ್ತಿಯನ್ನು (Mulayam Singh Yadav) ತೆರವುಗೊಳಿಸಲಾಗಿದೆ.
ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸಮಾಜವಾದಿ ಪಕ್ಷದ ಕಚೇರಿಯನ್ನು ನಿರ್ಮಿಸಲಾಗಿದೆ. ಆ ಕಚೇರಿಯ ಬಳಿ ಮುಲಾಯಂ ಸಿಂಗ್ ಯಾದವ್ ಅವರ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಆದರೆ, ಅನುಮತಿ ಇಲ್ಲದೆ ಆರು ಅಡಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ನಗರ ಪಾಲಿಕೆ ಪರಿಷತ್ ಅಧಿಕಾರಿಗಳು ಮೂರ್ತಿಯನ್ನು ತೆರವುಗೊಳಿಸಿದ್ದಾರೆ. ಆದರೆ, ಮೂರ್ತಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ಸಮಾಜವಾದಿ ಪಕ್ಷದ ಹರ್ದೋಯಿ ಜಿಲ್ಲಾ ಘಟಕವು ನಿರಾಕರಿಸಿದೆ.
BREAKING: UP Civic Body Removes
— ADV. ASHUTOSH J. DUBEY 🇮🇳 (@AdvAshutoshBJP) September 26, 2023
Mulayam Singh Yadav Statue 'Installed Without Permission' In Hardoi.
The deceased Samajwadi Party leader's 6-foot-tall statue was installed on a platform at the SP office near the Nagar Palika Parishad office by district president Virendra Yadav. pic.twitter.com/2u53gREjG4
ನೋಟಿಸ್ ನೀಡಿದರೂ ಡೋಂಟ್ ಕೇರ್
“ನಗರ ಪಾಲಿಕೆ ಪರಿಷತ್‌ನಿಂದ ಹರ್ದೋಯಿಯಲ್ಲಿ ಎಂಟು ಅಂಗಡಿಗಳನ್ನು ವ್ಯಾಪಾರಿಗಳಿಗೆ ನೀಡಲಾಗಿದೆ. ಇವುಗಳ ಬಳಿಯೇ ಸಮಾಜವಾದಿ ಪಕ್ಷದ ಕಚೇರಿ ನಿರ್ಮಿಸಲಾಗಿದೆ. ಆದರೆ, ಅನುಮತಿ ಇಲ್ಲದೆಯೇ ನಗರ ಪಾಲಿಕೆ ಪರಿಷತ್ ಕಚೇರಿ ಬಳಿಯೇ ಮುಲಾಯಂ ಸಿಂಗ್ ಯಾದವ್ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಅದನ್ನು ತೆರವುಗೊಳಿಸಲಾಗಿದೆ” ಎಂದು ನಗರ ಪಾಲಿಕೆ ಪರಿಷತ್ ಇ.ಒ ವಿನೋದ್ ಕುಮಾರ್ ಸೋಲಂಕಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Women’ Reservation bill : ಮಹಿಳಾ ಮೀಸಲಾತಿಗೆ ಸಿದ್ದರಾಮಯ್ಯ ಸ್ವಾಗತ, ಈಗ ಯೋಗಿ ಆದಿತ್ಯನಾಥ್ ಏನಂತಾರೆ?
“ಅನುಮತಿ ಇಲ್ಲದೆ ಪ್ರತಿಷ್ಠಾಪನೆ ಮಾಡಿರುವ ಮೂರ್ತಿಯನ್ನು ತೆರವುಗೊಳಿಸಬೇಕು ಎಂದು ಸೆಪ್ಟೆಂಬರ್ 23ರಂದು ನೋಟಿಸ್ ಜಾರಿಗೊಳಿಸಲಾಗಿತ್ತು. 24 ಗಂಟೆಯಲ್ಲಿ ಮೂರ್ತಿ ತೆರವುಗೊಳಿಸಬೇಕು ಎಂದು ಸೂಚಿಸಲಾಗಿತ್ತು. ಆದರೆ, ಗಡುವು ಮೀರಿದರೂ ಮೂರ್ತಿ ತೆರವು ಮಾಡದ ಕಾರಣ ಅಧಿಕಾರಿಗಳೇ ತೆರವು ಮಾಡಬೇಕಾಯಿತು” ಎಂದು ತಿಳಿಸಿದ್ದಾರೆ. ಸಮಾಜವಾದಿ ಪಕ್ಷದ ಕಚೇರಿ ಹಾಗೂ ಮೂರ್ತಿ ಪ್ರತಿಷ್ಠಾಪನೆಗೆ ಸಮಾಜವಾದಿ ಪಕ್ಷದ ಕಾರ್ಯಕರ್ತರು 10 ಲಕ್ಷ ರೂ. ಸಂಗ್ರಹಿಸಿದ್ದರು ಎಂದು ತಿಳಿದುಬಂದಿದೆ.
ಕ್ರೈಂ
ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯು ಲೈಂಗಿಕ ದೌರ್ಜನ್ಯಕ್ಕೀಡಾಗಿದ್ದಾಳೆ. ಆಕೆ ಮನೆ ಮನೆಗೆ ತೆರಳಿ ಸಹಾಯಕ್ಕೆ ಅಂಗಲಾಚಿದರೂ ಯಾರೂ ಸಹಾಯ ಮಾಡದಿರುವುದು ಕೂಡ ಅಮಾನವೀಯ ಎನಿಸಿದೆ.
ಭೋಪಾಲ್: ದೇಶದಲ್ಲಿ ಬಾಲಕಿಯರು ಸೇರಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದು, ಅತ್ಯಾಚಾರ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಎಷ್ಟೇ ಕಠಿಣ ಕ್ರಮ ಜಾರಿಗೆ ತಂದರೂ ಕ್ರೂರ ಜನ ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದಲ್ಲಿ (Madhya Pradesh) 12 ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಲೈಂಗಿಕ ದೌರ್ಜನ್ಯದ ಬಳಿಕ ಬಾಲಕಿಯು ಸಹಾಯಕ್ಕಾಗಿ ಅಂಗಲಾಚಿಕೊಂಡು ಮನೆ ಮನೆಗೆ ಹೋದರೂ ಯಾರೂ ಸಹಾಯ ಮಾಡದಿರುವುದು ಜನರ ಮನಸ್ಥಿತಿಗೂ ಕನ್ನಡಿ ಹಿಡಿದಂತಿದೆ.
ಉಜ್ಜಯಿನಿಯ ಬದ್ನಗರದ ಬಳಿ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಇದಾದ ಬಳಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯು ಅರೆಬೆತ್ತಲೆಯಾಗಿ ರಸ್ತೆ ಮೇಲೆ ನಡೆದುಕೊಂಡು ಹೋಗಿದ್ದಾಳೆ. ನನಗೆ ಸಹಾಯ ಮಾಡಿ ಎಂದು ಮನೆ ಮನೆಗೆ ತೆರಳಿ ಅಂಗಲಾಚಿದರೂ ಯಾರೋಬ್ಬರು ಕೂಡ ಬಾಲಕಿಗೆ ಸಹಾಯ ಮಾಡಿಲ್ಲ. ಬಾಲಕಿಯ ದುಸ್ಥಿತಿಯನ್ನು ನೋಡಿಕೊಂಡು ಸುಮ್ಮನಿದ್ದರೇ ಹೊರತು, ಏನಾಯ್ತಮ್ಮ ಎಂದು ಕೇಳಿಲ್ಲ, ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡಿಲ್ಲ. ಇಂತಹ ಭೀಕರ ದೃಶ್ಯಗಳಿರುವ ವಿಡಿಯೊ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಆಸ್ಪತ್ರೆಗೆ ಸಾಗಿಸಿದ ಸಂತ
ಗೋಳಾಡುತ್ತ ಗೋಳಾಡುತ್ತ ಬಾಲಕಿಯು ಆಶ್ರಮವೊಂದನ್ನು ಪ್ರವೇಶಿಸಿದ್ದಾಳೆ. ಅಲ್ಲಿರುವ ಸಂತರೊಬ್ಬರು ಬಾಲಕಿಗೆ ಟವೆಲ್ ಹೊದಿಸಿ, ಆಕೆಯನ್ನು ಉಜ್ಜಯಿನಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ನಿಜ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಗೊತ್ತಾಗಿದೆ. ರಕ್ತಸ್ರಾವ, ಮೈತುಂಬ ಗಾಯಗಳಾದ ಕಾರಣ ಬಾಲಕಿಯನ್ನು ಇಂದೋರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಆಕೆಯ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ದೂರು ನೀಡಲು ಹೋದ ದಲಿತ ಮಹಿಳೆ ಮೇಲೆಯೇ ಅತ್ಯಾಚಾರ ಎಸಗಿದ ಪಿಎಸ್‌ಐ; ಇದೆಂಥಾ ಅನಾಚಾರ!
ಬಾಲಕಿ ಮೇಲೆ ಯಾರು ಅತ್ಯಾಚಾರ ಎಸಗಿದ್ದಾರೆ ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಬಾಲಕಿಯಂತೂ ಪೊಲೀಸರ ಒಂದು ಪ್ರಶ್ನೆಗೂ ಉತ್ತರಿಸಲು ಆಗದಷ್ಟು ಕುಗ್ಗಿಹೋಗಿದ್ದಾಳೆ. ಅಪರಿಚಿತರ ವಿರುದ್ಧ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗೆಯೇ, ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡವೊಂದನ್ನು ರಚಿಸಿದ್ದಾರೆ. ಹಾಗೆಯೇ, ಆರೋಪಿಗಳ ಕುರಿತು ಸುಳಿವು ಸಿಕ್ಕರೆ ಮಾಹಿತಿ ಕೊಡಿ ಎಂಬುದಾಗಿಯೂ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ದೇಶ
Stadium row: ಕ್ರೀಡಾಂಗಣದಲ್ಲಿ ನಾಯಿ ಜತೆ ವಾಕಿಂಗ್ ಮಾಡಿದ್ದ ಅಧಿಕಾರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ!
Stadium Row: ದೆಹಲಿಯ ಕ್ರೀಡಾಂಗಣದಲ್ಲಿ (Delhi’s Thyagraj Stadium) ಅಭ್ಯಾಸ ನಡೆಸುತ್ತಿದ್ದ ಕ್ರೀಡಾಳುಗಳನ್ನು ಹೊರಗೆ ಕಳುಹಿಸಿ ಅಲ್ಲಿ ತಮ್ಮ ನಾಯಿ ಜತೆಗೆ ಮಾಕಿಂಗ್ ಮಾಡುತ್ತಿದ್ದ ಐಎಎಸ್ (IAS) ಅಧಿಕಾರಿ ರಿಂಕು ದುಗ್ಗ ಅವರಿಗೆ ಈಗ ಸರ್ಕಾರ ಕಡ್ಡಾಯ ನಿವೃತ್ತಿಯ ಸೂಚನೆ ನೀಡಿದೆ.
ದೆಹಲಿ: ದೆಹಲಿಯ ತ್ಯಾಗರಾಜ ಕ್ರೀಡಾಂಗಣದಿಂದ (Delhi’s Thyagraj Stadium) ಕ್ರೀಡಾಳುಗಳನ್ನು ಹೊರಗಟ್ಟಿ ನಾಯಿಯೊಂದಿಗೆ ವಾಕಿಂಗ್ ಮಾಡಿದ್ದ ಐಎಎಸ್ (IAS) ಅಧಿಕಾರಿ ರಿಂಕು ದುಗ್ಗ (54) ಅವರನ್ನು ಸರ್ಕಾರ ಕಡ್ಡಾಯ ನಿವೃತ್ತಿಗೊಳಿಸಿದೆ. 1994ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರಿಂಕು ದುಗ್ಗ ಅರುಣಾಚಲ ಪ್ರದೇಶದ ಸ್ಥಳೀಯ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ರಿಂಕು ದುಗ್ಗ ಅವರ ಪತಿ ಸಂಜೀವ್ ಖೈರ್ವಾರ್ ಕೂಡ 1994ರ ಬ್ಯಾಚ್‌ನ ಐಎಎಸ್ ಅಧಿಕಾರಿ. ಅವರನ್ನು ಕಳೆದ ವರ್ಷ ದೆಹಲಿಯಿಂದ ಲಡಾಕ್‌ಗೆ ವರ್ಗಾಯಿಸಲಾಗಿತ್ತು. ಇವರು ತಮ್ಮ ನಾಯಿಯ ಜತೆ ವಾಕಿಂಗ್‌ಗೆ ಹೋಗಲೆಂದು ದೆಹಲಿಯ ತ್ಯಾಗರಾಜ ಸ್ಟೇಡಿಯಂಅನ್ನು ಸಂಜೆ ಏಳು ಗಂಟೆಗೇ ಖಾಲಿ ಮಾಡಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಇಬ್ಬರನ್ನೂ ದೆಹಲಿಯಿಂದ ವರ್ಗಾಯಿಸಿ ಕಳೆದ ವರ್ಷ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿತ್ತು.
ರಿಂಕು ದುಗ್ಗ ಅವರ ಕೆಲಸದ ದಾಖಲೆಗಳನ್ನು ಪರಿಶೀಲಿಸಿ ಕಡ್ಡಾಯ ನಿವೃತ್ತಿಗೆ ಸೂಚಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಸೆಂಟ್ರಲ್ ಸಿವಿಲ್ ಸರ್ವಿಸಸ್ (CCS) ಪೆನ್ಶನ್ ರೂಲ್ಸ್, 1972ರ ಫಂಡಮೆಂಟಲ್ ರೂಲ್ಸ್ (FR) 56(j), ರೂಲ್ 48 ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಒಮ್ಮತದ ಅಭಿಪ್ರಾಯ ಇದ್ದರೆ ಯಾವುದೇ ಸರ್ಕಾರಿ ಉದ್ಯೋಗಿಗೆ ಕಡ್ಡಾಯ ನಿವೃತ್ತಿ ಸೂಚಿಸುವ ಅಧಿಕಾರ ಸರ್ಕಾರಕ್ಕೆ ಇದೆ ಎಂದು ಮೂಲಗಳು ತಿಳಿಸಿವೆ. ಸದ್ಯ ರಿಂಕು ದುಗ್ಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ವಿವಾದವೇನು?
ದೆಹಲಿಯ ಕಂದಾಯ ವಿಭಾಗದ ಪ್ರಿನ್ರಿಪಾಲ್ ಸೆಕ್ರೆಟರಿ ಅಗಿದ್ದ ಖೈರ್ವಾರ್ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತ್ಯಾಗರಾಜ ಸ್ಟೇಡಿಯಂನಿಂದ ಎಲ್ಲ ಕ್ರೀಡಾಳುಗಳನ್ನು ಏಳು ಗಂಟೆಗೆ ಹೊರ ಹೋಗುವಂತೆ ನೋಡಿಕೊಂಡು ಬಳಿಕ ಅವರು ತಮ್ಮ ಪತ್ನಿ ರಿಂಕು ದುಗ್ಗ ಮತ್ತು ನಾಯಿ ಜತೆ ಅಲ್ಲಿ ವಾಕಿಂಗ್ ಮಾಡುತ್ತಿದ್ದರು! ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ಕೇಳಿ ಬಂದಿತ್ತು.
ಇದನ್ನೂ ಓದಿ: UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
ವಿವಾದದ ಬಳಿಕ 1994ರ ಬ್ಯಾಚ್‌ನ ಎಜಿಎಂಯುಟಿ ಕೇಡರ್‌ಗೆ ಸೇರಿದ ರಿಂಕು ದುಗ್ಗ ಅವರನ್ನು 2022ರ ಮೇ ತಿಂಗಳಲ್ಲಿ ಅರುಣಾಚಲ ಪ್ರದೇಶಕ್ಕೆ ನಿಯೋಜಿಸಲಾಗಿತ್ತು. ಅವರನ್ನು ಈಶಾನ್ಯ ರಾಜ್ಯದ ಸ್ಥಳೀಯ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
ಇನ್ನಷ್ಟು ದೇಶದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
-
ದೇಶ15 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ23 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ15 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ಸುವಚನ10 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ16 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್22 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ23 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್19 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್