Site icon Vistara News

New Virus: ಕೊರೊನಾ ಬೆನ್ನಲ್ಲೇ ಪತ್ತೆಯಾಯ್ತು ಮತ್ತೊಂಡು ಡೆಡ್ಲಿ ವೈರಸ್!‌ ಭಾರತದಲ್ಲೇ ಮೊದಲ ಕೇಸ್‌!

#image_title

ನವದೆಹಲಿ: ಕೊರೊನಾ ಸೋಂಕು ವಿಶ್ವಾದ್ಯಂತ ಭಾರೀ ತಲ್ಲಣವನ್ನೇ ಉಂಟುಮಾಡಿತ್ತು. ಲಕ್ಷಾಂತರ ಜೀವಗಳು ಈ ಸೋಂಕಿನಿಂದಾಗಿ ಸಾವನ್ನಪ್ಪಿವೆ. ಅದರ ಬೆನ್ನಲ್ಲೇ ಇದೀಗ ಮತ್ತೊಂದು ವೈರಸ್‌ (New Virus) ಬಂದಿರುವ ಬಗ್ಗೆ ಸುದ್ದಿ ಹರಿದಾಡಲಾರಂಭಿಸಿದೆ. ಅದರಲ್ಲೂ ಭಾರತದಲ್ಲಿಯೇ ಮೊದಲನೆಯದಾಗಿ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Covid-19 Cases: ಕೊರೊನಾ ಸೋಂಕಿನ ಕೇಸ್​​ನಲ್ಲಿ 24ಗಂಟೆಯಲ್ಲಿ ಶೇ.40 ಏರಿಕೆ; ಇಂದು 3ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲು
ಹೌದು. ಭಾರತದಲ್ಲಿ ಸಸ್ಯಗಳಿಗೆ ಹೆಚ್ಚಾಗಿ ಕಾಡುವ ರೋಗವೆಂದರೆ ಅದು ಸಿಲ್ವರ್‌ ಲೀಫ್‌ ರೋಗ. ಈ ರೋಗದ ವೈರಸ್‌ ಇದೀಗ ಮಾನವನ ದೇಹಕ್ಕೂ ಹೊಗ್ಗಿರುವುದಾಗಿ ವರದಿಯಾಗಿದೆ. ಭಾರತದ ರೈತನೊಬ್ಬನಿಗೆ ಈ ಸೋಂಕು ತಗುಲಿದ್ದು, ಆತನಲ್ಲಿ ಜ್ವರ, ಕೆಮ್ಮುವಿನಂತಹ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವರದಿಯಾಗಿದೆ. ಇದುವರೆಗೆ ಈ ಸೋಂಕು ಯಾವುದೇ ದೇಶದಲ್ಲಿಯೂ ಮನುಷ್ಯರಿಗೆ ಹಬ್ಬಿರಲಿಲ್ಲ. ಇದೇ ಮೊದಲನೇ ಬಾರಿಗೆ ಇಂತದ್ದೊಂದು ಪ್ರಕರಣ ವರದಿಯಾಗಿದೆ.

ಅಂದ ಹಾಗೆ ಈ ಸೋಂಕು ಯಾವಾಗ ರೈತನಿಗೆ ತಗುಲಿದ್ದು ಎನ್ನುವ ವಿಚಾರದಲ್ಲಿ ಸ್ಪಷ್ಟ ಮಾಹಿತಿಯಿಲ್ಲ. ಆದರೆ ಈ ಕುರಿತಾದ ವರದಿಯೊಂದು ʼಮೆಡಿಕಲ್‌ ಮೈಕೋಲಜಿ ಕೇಸ್‌ ರಿಪೋರ್ಟ್ಸ್‌ʼ ಜರ್ನಲ್‌ನಲ್ಲಿ ದಾಖಲಾಗಿದೆ.

ಇದನ್ನೂ ಓದಿ: Coronavirus: ಇಂದು 1800ಕ್ಕೂ ಅಧಿಕ ಕೊರೊನಾ ಕೇಸ್​ಗಳು ಪತ್ತೆ; ಏಪ್ರಿಲ್​​ನಲ್ಲಿ 2 ದಿನ ಆಸ್ಪತ್ರೆಗಳಲ್ಲಿ ಅಣುಕು ಕಾರ್ಯಾಚರಣೆ

ಇತ್ತೀಚೆಗೆ ಅಮೆರಿಕದ ಆರೋಗ್ಯ ಅಧಿಕಾರಿಗಳು ವೈರಸ್‌ ಒಂದರ ಬಗ್ಗೆ ಎಚ್ಚರಿಕೆ ಕೊಟ್ಟಿದ್ದರು. ಕ್ಯಾಂಡಿಡಾ ಔರಿಸ್‌ ಫಂಗಸ್‌ ಹೆಸರಿನ ಸೋಂಕು ಇತ್ತೀಚಿನ ದಿನಗಳಲ್ಲಿ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಹೇಳಿದ್ದರು. ಹಾಗೆಯೇ ಈ ಸೋಂಕಿಗೆ ತುತ್ತಾಗುವವರಲ್ಲಿ ಶೇ.60 ಮಂದಿ ಸಾವನ್ನಪ್ಪುವ ಸಾಧ್ಯತೆಯಿದೆ ಎಂದೂ ಅವರು ತಿಳಿಸಿದ್ದರು. ಅದರ ಬೆನ್ನಲ್ಲೇ ಇದೀಗ ಭಾರತದಲ್ಲಿ ಮತ್ತೊಂದು ಸೋಂಕಿನ ವಿಚಾರ ಸುದ್ದಿಯಾಗಿದೆ. ಇದರ ಬಗ್ಗೆ ಭಾರತೀಯ ಆರೋಗ್ಯ ಇಲಾಖೆಯಿಂದ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ.

Exit mobile version