Site icon Vistara News

Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

Nijjar Killing

jaishankar

ನವದೆಹಲಿ: ಖಲಿಸ್ತಾನಿ ಉಗ್ರ (Khalistani Terrorist) ಹರ್ದೀಪ್‌ ಸಿಂಗ್‌ ನಿಜ್ಜರ್‌ ಕೊಲೆ(Nijjar Killing) ಪ್ರಕರಣದಲ್ಲಿ ಭಾರತದ ಕೈವಾಡ ಇದೆ ಎಂಬ ಕೆನಡಾ(Canada) ಆರೋಪಕ್ಕೆ ಭಾರತ ತಿರುಗೇಟು ನೀಡಿದೆ. ಕೆನಡಾ ಆರೋಪಕ್ಕೆ ತಿರುಗೇಟು ಕೊಟ್ಟಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈ ಶಂಕರ್‌(Jai Shankar), ಜಸ್ಟಿನ್‌ ಟ್ರೂಡೋ ಸರ್ಕಾರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೇ ಭಾರತದ ವಿರುದ್ಧ ಆರೋಪ ಮಾಡುವ ಮೂಲಕ ಗೌರವಕ್ಕೆ ಚ್ಯುತಿ ತರುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೆನಡಾ ಆರೋಪಕ್ಕೆ ತಿರುಗೇಟು ನೀಡಿದ ಜೈಶಂಕರ್‌, ನಿಜ್ಜರ್‌ ಕೊಲೆಗೂ ಭಾರತಕ್ಕೂ ಯಾವುದೇ ಸಂಬಂಧ ಇಲ್ಲ. ಕೆನಡಾದಲ್ಲಿ ಆಂತರಿಕ ಅಲ್ಪ ಸಂಖ್ಯಾತರ ವೋಟ್‌ ಪಡೆಯಲು ನಿಜ್ಜರ್‌ ಕೊಲೆ ಪ್ರಕರಣವನ್ನು ಬಳಸಿಕೊಳ್ಳುತ್ತಿದೆ. ಖಲಿಸ್ತಾನದ ಜೊತೆ ಲಿಂಕ್‌ ಇರುವ ಡೆಮಾಕ್ರಟಿಕ್‌ ಪಕ್ಷದ ಸಹಾಯದೊಂದಿಎಗೆ ಟ್ರೂಡೋ ಸರ್ಕಾರ ನಡೆಸುತ್ತಿದ್ದಾರೆ. ಹೀಗಾಗಿ ಸಿಖ್‌ ಅಲ್ಪ ಸಂಖ್ಯಾತರನ್ನು ಓಲೈಸುವ ನಿಟ್ಟಿನಲ್ಲಿ ಕೆನಡಾ ಸರ್ಕಾರ ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಭಾರತ ಈ ಹಿಂದೆಯೇ ಉಗ್ರ ಚಟುಟಿಕೆಯಲ್ಲಿ ಭಾಗಿಯಾಗಿರುವ 25 ವ್ಯಕ್ತಿಗಳನ್ನು ಗಡಿಪಾರು ಮಾಡುವಂತೆ ಕೆನಡಾ ಸರ್ಕಾರಕ್ಕೆ ಭಾರತ ಮನವಿ ಮಾಡಿತ್ತು. ಆದರೆ ಟ್ರೂಡೋ ಸರ್ಕಾರ ಯಾವುದೇ ರೀತಿಯ ಸ್ಪಂದನೆ ನೀಡಿರಲಿಲ್ಲ. ಈಗ ಈ ವಿಚಾರದಲ್ಲಿ ಡ್ರಾಮಾ ಮಾಡುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಕಳೆದ ವರ್ಷ ಕೆನಡಾದ ಬ್ರಿಟೀಷ್‌ ಕೊಲಂಬಿಯಾದಲ್ಲಿ ಹರ್ದೀಪ್‌ ಸಿಂಗ್‌ನನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಮೂವರು ಹಂತಕರನ್ನುಕೆನಡಾ ಪೊಲೀಸರು ಅರೆಸ್ಟ್‌ ಮಾಡಿದ್ದರು. ಬಂಧಿತರನ್ನು ಕರಣ್‌ ಪ್ರಿತ್‌ ಸಿಂಗ್(28) ಕಮಲ್‌ ಪ್ರಿತ್‌ ಸಿಂಗ್‌(22) ಮತ್ತು ಕರಣ್‌ ಬ್ರಾರ್‌(22) ಎಂದು ಗುರುತಿಸಲಾಗಿದೆ. ಅಲ್ಲದೇ ಪೊಲೀಸರು ಮೂವರು ಹಂತಕರ ಫೊಟೋವನ್ನೂ ಕೂಡ ರಿಲೀಸ್‌ ಮಾಡಿದ್ದರು. ಆರೋಪಿಗಳ ವಿರುದ್ಧ ಕೊಲೆಗೆ ಸಂಚು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಕೋರ್ಟ್‌ಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸಲಾಗಿದೆ.

ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ಮೂಲದ ಮೂವರನ್ನು ಅರೆಸ್ಟ್‌ ಮಾಡಿರುವ ಬೆನ್ನಲ್ಲೇ ಕೆನಡಾ ಮತ್ತೆ ಭಾರತದತ್ತ ಬೊಟ್ಟು ಮಾಡಿ ತೋರಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೆನಡಾ ಸಂಸದ ಜಗ್ಮಿತ್‌ ಸಿಂಗ್‌, ಪ್ರಕರಣದಲ್ಲಿ ಭಾರತದ ಕೈವಾಡವಿರುವುದು ಸಾಬೀತಾಗಿದೆ. ಕೆನಡಾದಂತಹ ಪೂಜ್ಯನೀಯ ಸ್ಥಳದಲ್ಲಿ ಕೆನಡಾ ಪ್ರಜೆಯನ್ನು ಕೊಲ್ಲಲು ಭಾರತ ಹಂತಕರನ್ನು ನೇಮಿಸಿದೆ ಎಂದು ಆರೋಪಿಸಿದ್ದರು.

2023ರ ಜೂನ್‌ 18ರಂದು ಕೆನಡಾದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಆರೋಪ ಕೂಡ ಮಾಡಿದ್ದರು. ಹೀಗೆ, ಕೆನಡಾವನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಪಾಕಿಸ್ತಾನದ ಐಎಸ್‌ಐ ಇಂತಹ ಕುತಂತ್ರ ಮಾಡಿದೆ. ಆದರೆ, ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಆರೋಪವನ್ನು ತಿರಸ್ಕರಿಸುವ ಭಾರತ, ಆರೋಪಗಳಿಗೆ ಸಾಕ್ಷ್ಯ ಕೊಡಿ ಎಂದು ತಿರುಗೇಟು ನೀಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗ ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ.

ಇದನ್ನೂ ಓದಿ:HD Revanna: ಅಶ್ಲೀಲ ವಿಡಿಯೊ ಪ್ರಕರಣ: ದೂರು ನೀಡಲು ಮುಂದೆ ಬಂದ ಮೂವರು ಸಂತ್ರಸ್ತೆಯರು; ರೇವಣ್ಣ, ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ?

“ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಕುರಿತು ನಾನು ಭಾರತದ ಜತೆ ಮಾತನಾಡಿದ್ದೇನೆ. ಆದರೆ, ಆತನ ಹತ್ಯೆಯ ಕುರಿತು ಭಾರತಕ್ಕೆ ತುಂಬ ವಾರಗಳ ಹಿಂದೆಯೇ ನಂಬಲರ್ಹ ಆರೋಪಗಳ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ತುಂಬ ಗಂಭೀರವಾದ ವಿಚಾರದ ಕುರಿತು ಭಾರತ ಹಾಗೂ ಕೆನಡಾ ಒಗ್ಗೂಡಿ ಕಾರ್ಯನಿರ್ವಹಿಸುವ ಕುರಿತು ಕೂಡ ಮನವರಿಕೆ ಮಾಡಲಾಗಿದೆ. ಗಂಭೀರ ಹತ್ಯೆಯ ವಿಚಾರದಲ್ಲಿ ಭಾರತವು ನಮ್ಮ ಜತೆ ಕೈಗೂಡಿಸುತ್ತದೆ ಎಂಬ ಆಶಾಭಾವನೆಯಲ್ಲಿ ಇದ್ದೇವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದರು. ಆದರೆ, ಭಾರತ ಮಾತ್ರ ಸರಿಯಾದ ಸಾಕ್ಷ್ಯ ಕೊಡಿ ಎಂದು ಹೇಳಿದೆ.

Exit mobile version