Onion Price : ಈರುಳ್ಳಿ ತುರ್ತು ಸಂಗ್ರಹ 5 ಲಕ್ಷ ಟನ್​ಗೆ ಹೆಚ್ಚಿಸಿದ ಕೇಂದ್ರ ಸರಕಾರ - Vistara News

ದೇಶ

Onion Price : ಈರುಳ್ಳಿ ತುರ್ತು ಸಂಗ್ರಹ 5 ಲಕ್ಷ ಟನ್​ಗೆ ಹೆಚ್ಚಿಸಿದ ಕೇಂದ್ರ ಸರಕಾರ

ತುರ್ತು ಸಂಗ್ರಹದ ಈರುಳ್ಳಿ (Onion Price) ಮಾರುಕಟ್ಟೆಗೆ ತಲುಪುವಂತೆ ನೋಡಿಕೊಳ್ಳುವಂತೆ ನೋಡುವ ಜತೆಗೆ ಸಂಗ್ರಹದ ಮಟ್ಟವನ್ನು ಇನ್ನೂ ಎರಡು ಲಕ್ಷ ಟನ್​ ಹೆಚ್ಚಿಸಲಾಗುತ್ತಿದೆ.

VISTARANEWS.COM


on

Onion Price
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆಯು (Onion Price Rise) ಗಗನಕ್ಕೇರುತ್ತಿದೆ. ಈರುಳ್ಳಿಯ ಬೆಲೆ ಏರಿಕೆಯು ಸರಕಾರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಅಂದಾಜಿಸಿರುವ ಆಡಳಿತಗಾರರು ನಿಯಂತ್ರಣಕ್ಕೆ ನಾನಾ ಸರ್ಕಸ್ ಮಾಡುತ್ತಿದ್ದಾರೆ. ಈರುಳ್ಳಿ ರಫ್ತಿನ (Onion Export) ಮೇಲೆ ಶೇಕಡಾ 40ರಷ್ಟು ತೆರಿಗೆ ವಿಧಿಸುವ ಮೂಲಕ ವಿದೇಶಕ್ಕೆ ಈರುಳ್ಳಿ ಹೋಗದಂತೆ ನೋಡಿಕೊಂಡಿರುವ ಜತೆಗೆ ಇದೀಗ ತುರ್ತು ಸಂಗ್ರಹದ ಪ್ರಮಾಣವನ್ನೂ ಏರಿ ಮಾಡಲು ನಿರ್ಧರಿಸಿದೆ. 3 ಲಕ್ಷ ಟನ್ ಆರಂಭಿಕ ಖರೀದಿ ಗುರಿಯನ್ನು ಸಾಧಿಸಲಾಗಿದ್ದು ಅದರ ಪ್ರಮಾಣವನ್ನು 5 ಲಕ್ಷ ಟನ್​ಗೆ ಏರಿಕೆ ಮಾಡಲಾಗಿದೆ ಈ ನಿಟ್ಟಿನಲ್ಲಿ, ಗ್ರಾಹಕ ವ್ಯವಹಾರಗಳ ಇಲಾಖೆ ಎನ್​ಸಿಎಫ್ (NCFC) ಮತ್ತು ನಾಫೆಡ್​ಗೆ (NAFED) ಹೆಚ್ಚುವರಿ ಖರೀದಿ ಗುರಿಯನ್ನು ಸಾಧಿಸಲು ತಲಾ 1.00 ಲಕ್ಷ ಟನ್ ಸಂಗ್ರಹಿಸಲು ನಿರ್ದೇಶನ ನೀಡಿದೆ.

ಈರುಳ್ಳಿಯ ಚಿಲ್ಲರೆ ಮಾರಾ ಬೆಲೆಗಳು ಸರಾಸರಿ ಮತ್ತು ಹಿಂದಿನ ತಿಂಗಳಿಗಿಂತ ಗಮನಾರ್ಹವಾಗಿ ಹೆಚ್ಚಿದೆ. ಹೀಗಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಮುಖ ಮಾರುಕಟ್ಟೆಗಳನ್ನು ಗುರಿಯಾಗಿಸಿಕೊಂಡು ತುರ್ತು ಸಂಗ್ರಹದಿಂದ ಈರುಳ್ಳಿ ವಿಲೇವಾರಿ ಮಾಡಲಾಗುತ್ತಿದೆ . ಇಲ್ಲಿಯವರೆಗೆ ಸಂಗ್ರಹದಿಂದ 1,400 ಮೆಟ್ರಿಕ್ ಟನ್ ಈರುಳ್ಳಿಯನ್ನು ಉದ್ದೇಶಿತ ಮಾರುಕಟ್ಟೆಗಳಿಗೆ ರವಾನಿಸಲಾಗಿದೆ. ಮಾರುಕಟ್ಟೆಯಲ್ಲಿ ಲಭ್ಯತೆಯನ್ನು ಹೆಚ್ಚಿಸಲು ನಿರಂತರವಾಗಿ ಬಿಡುಗಡೆ ಮಾಡಲಾಗುತ್ತಿದೆ.

ಪ್ರಮುಖ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡುವುದರ ಹೊರತಾಗಿಯೂ ಈರುಳ್ಳಿಯನ್ನು ನಾಳೆಯಿಂದ (ಆಗಸ್ಟ್ 21,ಸೋಮವಾರದಿಂದ) ಚಿಲ್ಲರೆ ಮಾರಾಟ ಮಳಿಗೆಗಳು ಮತ್ತು ಎನ್​​​ಸಿಎಫ್​ ಮೊಬೈಲ್ ವ್ಯಾನ್​ಗಳ ಮೂಲಕ ಚಿಲ್ಲರೆ ಗ್ರಾಹಕರಿಗೆ ಪ್ರತಿ ಕೆ.ಜಿ.ಗೆ 25 ರೂ.ಗಳ ಸಬ್ಸಿಡಿ ದರದಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತಿದೆ. ಇತರ ಏಜೆನ್ಸಿಗಳು ಮತ್ತು ಇ-ಕಾಮರ್ಸ್ ಫ್ಲ್ಯಾಟ್​ಫಾರ್ಮ್​ಗಳನ್ನು ಸೇರಿದಂತೆ ಮುಂಬರುವ ದಿನಗಳಲ್ಲಿ ಈರುಳ್ಳಿಯ ಚಿಲ್ಲರೆ ಮಾರಾಟವನ್ನು ಹೆಚ್ಚಿಸಲು ಸರಕಾರ ನಿರ್ಧರಿಸಿದೆ.

ತುರ್ತು ಸಂಗ್ರಹದ ಖರೀದಿ, ದಾಸ್ತಾನುಗಳ ಉದ್ದೇಶಿತ ಬಿಡುಗಡೆ ಮತ್ತು ರಫ್ತು ಸುಂಕವನ್ನು ವಿಧಿಸುವುದು ಸರ್ಕಾರ ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಸದ್ಯಕ್ಕೆ ಕೈಗೊಂಡ ಕ್ರಮಕಗಳಾಗಿವೆ. ಈರುಳ್ಳಿ ರೈತರಿಗೆ ಲಾಭದಾಯಕ ಬೆಲೆಗಳನ್ನು ಖಾತರಿಪಡಿಸುವ ಮೂಲಕ ರೈತರು ಮತ್ತು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರಿಗೆ ಈರುಳ್ಳಿ ತಲುಪುವಂತೆ ನೋಡಿಕೊಳ್ಳಲಾಗಿದೆ.

ಈರುಳ್ಳಿ ರಫ್ತು ಮೇಲೆ ಶೇ.40ರಷ್ಟು ಸುಂಕ ವಿಧಿಸಿದ ಸರ್ಕಾರ! ಬೆಲೆ ಏರಿಕೆ ತಡೆಯಲು ಕ್ರಮ

ಟೊಮೆಟೋ ಬೆಲೆ ಏರಿಕೆಯಿಂದ (Tomato Price) ಬಸವಳಿದಿದ್ದ ಜನರಿಗೆ ಈರುಳ್ಳಿ ಬೆಲೆ (Onion Price) ಏರಿಕೆ ಕೂಡ ನಿಧಾನವಾಗಿ ತಟ್ಟಲಾರಂಭಿಸಿತ್ತು. ಈ ಬೆಳವಣಿಗೆಯನ್ನು ಗಮನಿಸಿರುವ ಕೇಂದ್ರ ಸರ್ಕಾರವು(Central Government), ಏರುತ್ತಿರುವ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಲು ಪ್ರಸಕ್ತ ಸಾಲಿನ ಡಿಸೆಂಬರ್ ವರೆಗೂ ಈರುಳ್ಳಿ ರಫ್ತು ಮೇಲೆ ಶೇ.40ರಷ್ಟು ಸುಂಕ ವಿಧಿಸಿದೆ(40% Duty On Onion Export).

ಡಿಸೆಂಬರ್ 31ರ ವರೆಗೂ ಈರುಳ್ಳಿ ರಫ್ತು ಮೇಲೆ ಶೇ.40 ಸುಂಕ ವಿಧಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವಾಲಯವು ತಿಳಿಸಿದೆ. ಸುಂಕ ಏರಿಕೆಯು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸಚಿವಾಲಯವು ಸ್ಪಷ್ಟಪಡಿಸಿದೆ.

ಪ್ರಸಕ್ತ ತಿಂಗಳಲ್ಲಿ ಈರುಳ್ಳಿ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಮುಂಬರುವ ಸೆಪ್ಟೆಂಬರ್‌ ತಿಂಗಳಲ್ಲಿ ಬೆಲೆ ಇನ್ನಷ್ಟು ಜಾಸ್ತಿಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಕೇಂದ್ರ ಸರ್ಕಾರವು ಈರುಳ್ಳಿ ರಫ್ತು ಮೇಲೆ ತನ್ನ ಸುಂಕಾಸ್ತ್ರವನ್ನು ಪ್ರಯೋಗಿಸಿದೆ. ಇನ್ನು ಕೆಲವೇ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ಕೂಡ ಬರಲಿದೆ. ಈ ಸಂದರ್ಭದಲ್ಲಿ ಬೆಲೆ ಏರಿಕೆ ಕೂಡ ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಸರ್ಕಾರವು, ಸಾಧ್ಯವಾದಷ್ಟು ಬೆಲೆ ನಿಯಂತ್ರಣ ಮಾಡಲು ಮುಂದಾಗುತ್ತಿದೆ. ಕೆಲವು ವರದಿಗಳ ಪ್ರಕಾರ, ಪೆಟ್ರೋಲ್, ಡಿಸೇಲ್ ಮತ್ತು ಅಡುಗೆ ಅನಿಲ ಬೆಲೆ ಕೂಡ ಇಳಿಕೆಯಾಗಲಿದೆ.

ಇತ್ತೀಚೆಗಷ್ಟೇ ಟೊಮೆಟೊ ಬೆಲೆ ಏರಿಕೆ ಭಾರೀ ಸಂಚಲನವನ್ನು ಸೃಷ್ಟಿಸಿತ್ತು. ಕಳೆದ ವಾರದಿಂದ ಟೊಮೆಟೋ ಬೆಲೆ ನಿಯಂತ್ರಣಕ್ಕೆ ಬಂದಿದೆ. ಆದರೆ, ಈರುಳ್ಳಿ ಮತ್ತು ಆಲೂ ಸತತವಾಗಿ ಏರಿಕೆಯಾಗುತ್ತಿವೆ ಎಂಬ ಮಾಹಿತಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಗುರುವಾರದ ವಾರ್ತಾಪತ್ರದಲ್ಲಿ ತಿಳಿಸಿದೆ.

ಮತ್ತೆ ದುಬಾರಿ ದುನಿಯಾ… 15 ತಿಂಗಳ ಗರಿಷ್ಠ ಮಟ್ಟಕ್ಕೆ ಹಣದುಬ್ಬರ ಏರಿಕೆ!

ಭಾರತದ ಆರ್ಥಿಕಾಭಿವೃದ್ಧಿ (Indian Economy) ಏರುಗತಿಯಲ್ಲಿದೆ ಎಂದು ವಿಶ್ಲೇಷಣೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಈ ವಿಶ್ಲೇಷಣೆಗಳಿಗೆ ವಿರುದ್ಧವಾದ ಬೆಳವಣಿಗೆ ಘಟಿಸಿದೆ. ಭಾರತೀಯ ಚಿಲ್ಲರೆ ಹಣದುಬ್ಬರವು (Retail Inflation) ಜುಲೈನಲ್ಲಿ ಶೇ.7.44ಕ್ಕೆ ಏರಿಕೆಯಾಗಿದೆ. ಕಳೆದ 15 ತಿಂಗಳಲ್ಲೇ ಇದು ಗರಿಷ್ಠ ಮಟ್ಟದ ಏರಿಕೆಯಾಗಿದೆ. ಅರ್ಥಾತ್, ಭಾರತದಲ್ಲಿ ಮತ್ತೆ ದುಬಾರಿ ದುನಿಯಾ(Food Prices Spike) ಶುರುವಾಗಿದೆ. ಭಾರತದ ಚಿಲ್ಲರೆ ಹಣದುಬ್ಬರವು ಜೂನ್‌ನಲ್ಲಿ ಶೇ.4.81ರಿಂದ ವಾರ್ಷಿಕ ಆಧಾರದ ಮೇಲೆ ಜುಲೈನಲ್ಲಿ ಶೇ.7.44ಕ್ಕೆ ಏರಿದೆ. ಕೇಂದ್ರ ಸಾಂಖೀಕ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ವರದಿಯಲ್ಲಿ ಈ ಮಾಹಿತಿಯನ್ನು ವಿವರಿಸಲಾಗಿದೆ.

2022ರ ಮೇ ತಿಂಗಳ ಬಳಿಕ ಚಿಲ್ಲರೆ ಹಣದುಬ್ಬರವು ಈಗ ಗರಿಷ್ಠ ಮಟ್ಟಕ್ಕೆ ತಲುಪಿದೆ. ಅಂದು ಶೇ.7.79ರಷ್ಟು ದಾಖಲಾಗಿತ್ತು. ಗ್ರಾಹಕ ಆಹಾರ ಬೆಲೆ ಸೂಚ್ಯಂಕ (CFPI) ಜೂನ್‌ನಲ್ಲಿ ಶೇ 4.49ರಿಂದ ಶೇ 11.51ಕ್ಕೆ ಏರಿದೆ. ಗ್ರಾಮೀಣ ಹಣದುಬ್ಬರವು ಶೇ.7.63 ರಷ್ಟಿದ್ದರೆ, ನಗರ ಹಣದುಬ್ಬರವು ಶೇ.7.20 ರಷ್ಟಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Election Icon: ಹಿಮಾಚಲ ಪ್ರದೇಶದ ಮಂಗಳಮುಖಿ ಈಗ ‘ಚುನಾವಣಾ ಐಕಾನ್’

ಶಿಕ್ಷಣ, ಉದ್ಯೋಗಗಳು ಟ್ರಾನ್ಸ್‌ಜೆಂಡರ್‌ಗಳ ವಿರುದ್ಧದ ತಾರತಮ್ಯವನ್ನು ಕೊನೆಗೊಳಿಸುವುದು. ಅಧ್ಯಯನ ಮಾಡಲು, ಶಿಕ್ಷಕರಾಗಲು, ವಕೀಲರಾಗಲು, ಪೊಲೀಸ್‌ ಸೇವೆಗೆ ಸೇರಲು ಮತ್ತು ಜೀವನದ ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಬಯಸುವ ಟ್ರಾನ್ಸ್‌ಜೆಂಡರ್‌ಗಳು ಇದ್ದಾರೆ. ಆದರೆ ನಾವು ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿದಾಗ ಸಾಕಷ್ಟು ಹಿನ್ನಡೆಯಾಗುತ್ತದೆ ಎಂದು ಬೇಸರ ವ್ಯಕ್ತಪಡಿಸುತ್ತಾರೆ ಹಿಮಾಚಲ ಪ್ರದೇಶ ರಾಜ್ಯ ಚುನಾವಣಾ ಆಯೋಗದ ರಾಯಭಾರಿ (Election Icon) ತೃತೀಯಲಿಂಗಿ ಮಾಯಾ ಠಾಕೂರ್.

VISTARANEWS.COM


on

By

Election Icon
Koo

ಶಿಮ್ಲಾ: ವಿದ್ಯಾರ್ಥಿಗಳಿಂದ (students) ನಿಂದನೆ ಮತ್ತು ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಶಿಕ್ಷಕರ (teachers) ಹಿಂಜರಿಕೆಯಿಂದ 9ನೇ ತರಗತಿಯಲ್ಲೇ ಆಕೆ ಶಾಲೆ (school) ಬಿಡಬೇಕಾಯಿತು. ಆದರೆ ಈಗ ಆಕೆ ಹಿಮಾಚಲ ಪ್ರದೇಶ (himachal pradesh) ರಾಜ್ಯ ಚುನಾವಣಾ ಆಯೋಗದ (Election Icon) ಚುನಾವಣಾ ರಾಯಭಾರಿ! ಆಕೆಯೇ ತೃತೀಯಲಿಂಗಿ ಮಾಯಾ ಠಾಕೂರ್.

ಶಿಮ್ಲಾ ಸಂಸದೀಯ ಕ್ಷೇತ್ರದ ಅಡಿಯಲ್ಲಿ ಸೋಲನ್ ಜಿಲ್ಲೆಯ ಕುನಿಹಾರ್ ಪ್ರದೇಶದ ಕೋಠಿ ಗ್ರಾಮದಿಂದ ಬಂದ ಠಾಕೂರ್, ಆಗ ಪರಿಸ್ಥಿತಿ ತುಂಬಾ ಕಠೋರವಾಗಿತ್ತು. ಗ್ರಾಮಸ್ಥರು ನನ್ನನ್ನು ಗ್ರಾಮದಿಂದಲೇ ಹೊರಹಾಕುವಂತೆ ಕುಟುಂಬವನ್ನು ಒತ್ತಾಯಿಸಲು ಪ್ರಾರಂಭಿಸಿದ್ದರು ಎನ್ನುವುದನ್ನು ನೆನಪಿಸಿಕೊಂಡರು.

ಶೌಚಾಲಯವನ್ನು ಬಳಸಲು ಅನುಮತಿಸದ ಮಟ್ಟಿಗೆ ಶಾಲೆಯಲ್ಲಿನ ದೌರ್ಜನ್ಯ ಮತ್ತು ತಾರತಮ್ಯದ ಬಗ್ಗೆ ನಾನು ನನ್ನ ಕುಟುಂಬ ಸದಸ್ಯರಿಗೆ ಹೇಳಿದಾಗ, ಅವರು ನಾನು ಶಾಲೆಯನ್ನು ಬಿಡಲು ಬಯಸುತ್ತಿದ್ದೇನೆ ಎಂದು ಭಾವಿಸಿದರು. ಅವಕಾಶವನ್ನು ನೀಡಿದರೆ ನಾನು ನನ್ನ ಶಿಕ್ಷಣವನ್ನು ಪುನರಾರಂಭಿಸಲು ಬಯಸುತ್ತೇನೆ ಎಂದು ಅವರು ಅರ್ಥ ಮಾಡಿಕೊಳ್ಳಲಿಲ್ಲ. ಜೀವನದ ಪ್ರತಿ ಹಂತದಲ್ಲೂ ನನ್ನಂಥವರು ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ವಿಷಾದಿಸಿದರು.

ಸಾಧಿಸುವ ಇಚ್ಛೆ ಇದೆ

ಶಿಕ್ಷಣ, ಉದ್ಯೋಗಗಳು ಟ್ರಾನ್ಸ್‌ಜೆಂಡರ್‌ಗಳ ವಿರುದ್ಧದ ತಾರತಮ್ಯವನ್ನು ಕೊನೆಗೊಳಿಸುವುದು. ಅಧ್ಯಯನ ಮಾಡಲು, ಶಿಕ್ಷಕರಾಗಲು, ವಕೀಲರಾಗಲು, ಪೊಲೀಸ್‌ ಸೇವೆಗೆ ಸೇರಲು ಮತ್ತು ಜೀವನದ ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಬಯಸುವ ಟ್ರಾನ್ಸ್‌ಜೆಂಡರ್‌ಗಳು ಇದ್ದಾರೆ. ಆದರೆ ನಾವು ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿದಾಗ ಸಾಕಷ್ಟು ಹಿನ್ನಡೆಯಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಗಂಡಾಗಿ ಹುಟ್ಟಿದ್ದೇನೆ. ಆದರೆ ನನ್ನನ್ನು ಮಹಿಳೆ ಎಂದು ಗುರುತಿಸಿಕೊಂಡಿದ್ದೇನೆ. ನಾವು ಯುನಿಸೆಕ್ಸ್ ಮತ್ತು ನಪುಂಸಕರಲ್ಲ. ಜನರು ನಮ್ಮನ್ನು ನಪುಂಸಕರೆಂದು ಅಂತರವನ್ನು ಕಾಯ್ದುಕೊಳ್ಳುತ್ತಾರೆ ಎಂದು ಹೇಳಿದರು.

ಜಾಗೃತಿ ಅಗತ್ಯ

ಉತ್ತರಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಪರಿಸ್ಥಿತಿ ಉತ್ತಮವಾಗಿದೆ. ತಮ್ಮ ಆಯ್ಕೆಯ ಜೀವನವನ್ನು ನಡೆಸುವ ಹಕ್ಕನ್ನು ಹೊಂದಿರುವ ಟ್ರಾನ್ಸ್‌ಜೆಂಡರ್‌ಗಳಿಗೆ ಸಾಮಾಜಿಕ ಸ್ವೀಕಾರಕ್ಕಾಗಿ ಜಾಗೃತಿ ಮೂಡಿಸುವ ಅಗತ್ಯವಿದೆ. ಆದರೆ ನಮ್ಮ ವಿರುದ್ಧ ನಡೆಯುವ ದೌರ್ಜನ್ಯದ ವಿರುದ್ಧ ದೂರುಗಳನ್ನು ಪೊಲೀಸರು ದಾಖಲಿಸಿಕೊಳ್ಳುವುದಿಲ್ಲ ಎಂದು ದೂಷಿಸಿದರು.

ಇದನ್ನೂ ಓದಿ: Voter Turnout: 4ನೇ ಹಂತದಲ್ಲಿ ಹೆಚ್ಚಿದ ಮತದಾನ; ಪುರುಷರಿಗಿಂತ ಸ್ತ್ರೀಯರಿಂದಲೇ ಹೆಚ್ಚು ಮತ ಚಲಾವಣೆ; ಹೀಗಿದೆ ಆಯೋಗದ ಮಾಹಿತಿ

ಈ ಹಿಂದೆ ದೆಹಲಿಯ ಎನ್‌ಜಿಒದಲ್ಲಿ ಕೆಲಸ ಮಾಡಿದ್ದ ಠಾಕೂರ್, ಕೆನಡಾದಂತಹ ದೇಶಗಳ ರೀತಿಯಲ್ಲಿ ಶೈಕ್ಷಣಿಕ ಪಠ್ಯಕ್ರಮದಲ್ಲಿ ಟ್ರಾನ್ಸ್‌ಜೆಂಡರ್‌ಗಳ ಬಗ್ಗೆ ಪಾಠಗಳನ್ನು ಇರಿಸಬೇಕೆಂದು ಪ್ರತಿಪಾದಿಸುತ್ತಾರೆ. ಇದು ತಾರತಮ್ಯ ಮತ್ತು ಕಿರುಕುಳದಿಂದ ಮುಕ್ತವಾದ ಶೈಕ್ಷಣಿಕ ವಾತಾವರಣದ ಹಕ್ಕನ್ನು ಒದಗಿಸುತ್ತದೆ. ಬೆದರಿಸಿ ಅಥವಾ ಶಾಪ ಹಾಕಿ ಹಣ ವಸೂಲಿ ಮಾಡುವ ಕಾರ್ಯವನ್ನು ಮಂಗಳಮುಖಿಯರು ನಿಲ್ಲಿಸಬೇಕು ಎಂದೂ ಅವರು ಸಲಹೆ ನೀಡಿದರು.

ಟ್ರಾನ್ಸ್‌ಜೆಂಡರ್‌ಗಳನ್ನು ಬಲವಂತವಾಗಿ ಕರೆದೊಯ್ಯುವ ಮತ್ತು ಅವರಿಗೆ ಕಿರುಕುಳ ನೀಡುವ ಜನರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂದೂ ಅವರು ಪ್ರತಿಪಾದಿಸಿದರು.

Continue Reading

ವಿದೇಶ

Covid 19: ಸಿಂಗಾಪುರದಲ್ಲಿ ಕೊರೊನಾ ಹೊಸ ಅಲೆ; ವಾರದಲ್ಲಿ 25 ಸಾವಿರ ಕೇಸ್‌, ಭಾರತಕ್ಕೆ ಇದೆಯೇ ಭೀತಿ?

Covid 19: ಸಿಂಗಾಪುರದಲ್ಲಿ ಕೊರೊನಾ ಪ್ರಕರಣಗಳು ದಿನೇದಿನೆ ಜಾಸ್ತಿಯಾಗುತ್ತಿವೆ. ಕೊರೊನಾ ಹೊಸ ಅಲೆಯ ಆರಂಭಿಕ ಹಂತದಲ್ಲಿ ನಾವಿದ್ದೇವೆ. ಎರಡರಿಂದ ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗಲಿದೆ ಎಂಬುದಾಗಿ ವರದಿಗಳು ತಿಳಿಸಿವೆ ಎಂದು ಸಿಂಗಾಪುರ ಆರೋಗ್ಯ ಸಚಿವ ತಿಳಿಸಿದ್ದಾರೆ.

VISTARANEWS.COM


on

Covid 19
Koo

ಸಿಂಗಾಪುರ: ಭಾರತ ಸೇರಿ ಜಗತ್ತನ್ನೇ ಪಿಡುಗಿನಂತೆ ಕಾಡಿದ ಕೊರೊನಾ ಸೋಂಕು (Covid 19) ಈಗ ಸಿಂಗಾಪುರದಲ್ಲಿ ಹೊಸದೊಂದು ಅಲೆ ಸೃಷ್ಟಿಸಿದೆ. ಸಿಂಗಾಪುರದಲ್ಲಿ (Singapore) ಕಳೆದ ಒಂದು ವಾರದಲ್ಲಿಯೇ (ಮೇ 5-11) 25,900 ಪ್ರಕರಣಗಳು ದಾಖಲಾಗಿದ್ದು, ಪ್ರತಿಯೊಬ್ಬರೂ ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವ ಓಂಗ್‌ ಯೆ ಕುಂಗ್‌ (Ong Ye Kung) ಅವರು ಖಡಕ್‌ ಆದೇಶ ಹೊರಡಿಸಿದ್ದಾರೆ. ಸಿಂಗಾಪುರದಲ್ಲಿ ಏಕಾಏಕಿ ಮಹಾಮಾರಿಯ ಹೊಸ ಅಲೆ ಸೃಷ್ಟಿಯಾಗಿರುವುದರಿಂದ ಭಾರತಕ್ಕೂ ಭೀತಿ ಎದುರಾಗಿದೆ.

“ಸಿಂಗಾಪುರದಲ್ಲಿ ಕೊರೊನಾ ಪ್ರಕರಣಗಳು ದಿನೇದಿನೆ ಜಾಸ್ತಿಯಾಗುತ್ತಿವೆ. ಕೊರೊನಾ ಹೊಸ ಅಲೆಯ ಆರಂಭಿಕ ಹಂತದಲ್ಲಿ ನಾವಿದ್ದೇವೆ. ಎರಡರಿಂದ ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗಲಿದೆ ಎಂಬುದಾಗಿ ವರದಿಗಳು ತಿಳಿಸಿವೆ. ಜೂನ್‌ ಅಂತ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ವಿಪರೀತವಾಗಿ ಏರಿಕೆಯಾಗುವ ಸಾಧ್ಯತೆ ಇದೆ. ಇದಕ್ಕಾಗಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿಯೊಬ್ಬರೂ ಮಾಸ್ಕ್‌ ಧರಿಸುವ ಜತೆಗೆ ಅಂತರ ಕಾಪಾಡಿಕೊಳ್ಳುವ ಮೂಲಕ ಸೋಂಕನ್ನು ನಿಗ್ರಹಿಸಲು ಸೂಚಿಸಲಾಗಿದೆ” ಎಂದು ಓಂಗ್‌ ಯೆ ಕುಂಗ್‌ ತಿಳಿಸಿದ್ದಾರೆ.

ಮೇ 5ಕ್ಕಿಂತ ಮೊದಲಿನ ಒಂದು ವಾರದಲ್ಲಿ ಸಿಂಗಾಪುರದಲ್ಲಿ 13,700 ಕೇಸ್‌ಗಳು ದಾಖಲಾಗಿದ್ದವು. ಆದರೆ, ಒಂದೇ ವಾರದ ಅಂತರದಲ್ಲಿ ಪ್ರಕರಣಗಳ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗಿದೆ. ಒಂದು ವಾರದಲ್ಲಿ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ 181ರಿಂದ 250ಕ್ಕೆ ಏರಿಕೆಯಾಗಿದೆ. ಪ್ರತಿ ದಿನ ಸರಾಸರಿ ಮೂವರು ಸೋಂಕಿತರು ಐಸಿಯು ಸೇರುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಕೊರೊನಾ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುತ್ತಿರುವ ಕಾರಣ ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯ ಸೇರಿ ಹಲವು ವೈದ್ಯಕೀಯ ಸೌಕರ್ಯಗಳನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ.

ಭಾರತಕ್ಕೂ ಇದೆ ಹೊಸ ಅಲೆಯ ಭೀತಿ

ಸಿಂಗಾಪುರದಿಂದ ಭಾರತಕ್ಕೆ ಬರುವವರ ಸಂಖ್ಯೆ ಜಾಸ್ತಿ ಇರುವುದರಿಂದ ಭಾರತಕ್ಕೂ ಹೊಸ ಸೋಂಕಿನ ಅಲೆಯ ಭೀತಿ ಇದ್ದೇ ಇದೆ. ಹಾಗೊಂದು ವೇಳೆ, ಸಿಂಗಾಪುರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟ ಜಾಸ್ತಿಯಾದರೆ ಭಾರತಕ್ಕೆ ಬರುವವರ ಮೇಲೆ ಹೆಚ್ಚಿನ ನಿಗಾ ಇರಿಸುವುದು ಸೇರಿ ಹಲವು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮದ ಕುರಿತು ವರದಿಗಳು ಬಹಿರಂಗವಾದ ಬೆನ್ನಲ್ಲೇ ಹೊಸ ತಳಿಯ ಸೋಂಕು ಹರಡುವ ಭೀತಿಯು ಜನರನ್ನು ಆತಂಕಕ್ಕೀಡು ಮಾಡಿದೆ.

ಇದನ್ನೂ ಓದಿ: Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

Continue Reading

ಶಿಕ್ಷಣ

Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

Inspirational Story: ಸುಮಾರು ಇಪ್ಪತ್ತೈದು ವರ್ಷಗಳ ಹಿಂದೆ ದೃಷ್ಟಿದೋಷವುಳ್ಳ ಹೆಣ್ಣು ಶಿಶುವೊಂದು ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದಲ್ಲಿ ಕಸದ ಬುಟ್ಟಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೀಗ ಆಕೆಗೆ 25 ವರ್ಷ. ಮಹಾರಾಷ್ಟ್ರ ಸರ್ಕಾರದ ಉದ್ಯೋಗ ಪರೀಕ್ಷೆಯಲ್ಲಿ ಆಕೆ ಉತ್ತೀರ್ಣಳಾಗಿರುವುದು ರಾಜ್ಯಕ್ಕೆ ಹೆಮ್ಮೆ ತಂದಿದೆ.

VISTARANEWS.COM


on

By

Inspirational Story
Koo

ಅಮರಾವತಿ: ಇಪ್ಪತ್ತೈದು ವರ್ಷಗಳ (Inspirational Story) ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕಿದ್ದ ದೃಷ್ಟಿ ದೋಷವುಳ್ಳ ಹೆಣ್ಣು ಮಗುವೊಂದು ಈಗ ಬೆಳೆದು ಬ್ರೈಲ್ ಲಿಪಿಯಲ್ಲಿ (Braille script) ಮಹಾರಾಷ್ಟ್ರ (maharastra) ಸಾರ್ವಜನಿಕ ಸೇವಾ ಆಯೋಗದ (Maha Job Test) ಪರೀಕ್ಷೆಯನ್ನು ಬರೆದು ಉತ್ತೀರ್ಣಳಾಗಿದ್ದಾಳೆ. ಅಲ್ಲದೇ ಯುಪಿಎಸ್ ಸಿ (UPSC) ಪರೀಕ್ಷೆ ಬರೆಯುವ ತಯಾರಿ ನಡೆಸುತ್ತಿದ್ದಾಳೆ.

ಸುಮಾರು ಇಪ್ಪತ್ತೈದು ವರ್ಷಗಳ ಹಿಂದೆ ದೃಷ್ಟಿದೋಷವುಳ್ಳ ಹೆಣ್ಣು ಶಿಶುವೊಂದು ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದಲ್ಲಿ ಕಸದ ಬುಟ್ಟಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆಕೆಯ ಹೆತ್ತವರು ಸಿಗದ ಕಾರಣ ಪೊಲೀಸರು ಹಸಿವಿನಿಂದ ಬಳಲುತ್ತಿದ್ದ ನವಜಾತ ಶಿಶುವನ್ನು ಜಲಗಾಂವ್‌ನ ರಿಮ್ಯಾಂಡ್ ಹೋಮ್‌ಗೆ ಕರೆದೊಯ್ದರು. ಅಲ್ಲಿ ಆಕೆಗೆ ಆಹಾರವನ್ನು ನೀಡಲಾಯಿತು. ಬಳಿಕ ಸುಮಾರು 270 ಕಿ.ಮೀ. ದೂರದಲ್ಲಿರುವ ಅಮರಾವತಿಯ ಪರತ್ವಾಡದಲ್ಲಿ ಕಿವುಡ ಮತ್ತು ಕುರುಡರಿಗಾಗಿ ಇರುವ ಸುಸಜ್ಜಿತ ಪುನರ್ವಸತಿ ಮನೆಗೆ ಆಕೆಯನ್ನು ಸ್ಥಳಾಂತರಿಸಲಾಯಿತು.

ಇಲ್ಲಿ ಆಕೆಗೆ ಮಾಲಾ ಪಾಪಲ್ಕರ್ ಎಂದು ಹೆಸರಿಟ್ಟು ಸಾಕಲಾಯಿತು. ಇದೀಗ ಎರಡು ದಶಕಗಳ ಅನಂತರ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ (MPSC) ಪರೀಕ್ಷೆಯನ್ನು ಬರೆದು ಆಕೆ ಉತ್ತೀರ್ಣಳಾಗಿದ್ದಾಳೆ ಮತ್ತು ಮುಂಬಯಿನ ಮಹಾರಾಷ್ಟ್ರ ಸೆಕ್ರೆಟರಿಯೇಟ್ – ಗುಮಾಸ್ತ-ಕಮ್-ಟೈಪಿಸ್ಟ್ ಆಗಿ ಸಚಿವಾಲಯಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಮಾಲಾ ಅವರ ಮಾರ್ಗದರ್ಶಕ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ 81 ವರ್ಷದ ಶಂಕರಬಾಬಾ ಪಾಪಲ್ಕರ್ ಅವರು ಅವರಿಗೆ ತಮ್ಮ ಉಪನಾಮವನ್ನು ಮಾತ್ರ ನೀಡಲಿಲ್ಲ. ಅವಳಲ್ಲಿದ್ದ ಪ್ರತಿಭೆಯನ್ನು ಪೋಷಿಸಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಮಾಲಾ, ದೇವರು ಕೇವಲ ನನ್ನನ್ನು ರಕ್ಷಿಸಲಿಲ್ಲ. ನಾನು ಇಂದು ಇರುವ ಸ್ಥಳಕ್ಕೆ ಕರೆದೊಯ್ಯಲು ದೇವತೆಗಳನ್ನು ಕಳುಹಿಸಿದ್ದಾರೆ. ನಾನು ಇಲ್ಲಿ ನಿಲ್ಲುವುದಿಲ್ಲ. ನಾನು ಯುಪಿಎಸ್ ಸಿ ಪರೀಕ್ಷೆಗಳಿಗೆ ಕುಳಿತು ಐಎಎಸ್ ಅಧಿಕಾರಿಯಾಗುತ್ತೇನೆ ಎಂದರು.

ಶಂಕರಬಾಬಾ ಅವರ ಪ್ರಕಾರ, ಮಾಲಾ ತನ್ನ ಪ್ರಾಥಮಿಕ ಶಿಕ್ಷಣವನ್ನು ಅಂಧರ ಶಾಲೆಯಲ್ಲಿ ಮುಗಿಸಿದರು ಮತ್ತು ಹೈಯರ್ ಸೆಕೆಂಡರಿಯನ್ನು ಪ್ರಥಮ ವಿಭಾಗದಲ್ಲಿ ಉತ್ತೀರ್ಣರಾದರು. ಅವರು 2018ರಲ್ಲಿ ಅಮರಾವತಿ ವಿಶ್ವವಿದ್ಯಾನಿಲಯದಿಂದ ಪದವಿ ಮತ್ತು ಸರ್ಕಾರಿ ವಿದರ್ಭ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಹ್ಯುಮಾನಿಟೀಸ್ ನಿಂದ ಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು ಬ್ರೈಲ್ ಅನ್ನು ಬಳಸಿದರು ಮತ್ತು ಪ್ರತಿ ಪರೀಕ್ಷೆಯಲ್ಲಿ ಬರಹಗಾರರ ಸಹಾಯವನ್ನು ಪಡೆದರು. ಅನಂತರ ದರ್ಯಾಪುರದ ಪ್ರೊ. ಪ್ರಕಾಶ್ ತೋಪ್ಲೆ ಪಾಟೀಲ್ ಅವರು ಅವಳನ್ನು ದತ್ತು ಪಡೆದರು ಎಂದು ತಿಳಿಸಿದರು.

ಇದನ್ನೂ ಓದಿ: KEA : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ; ಕೆಇಎ ಎಕ್ಸಿಕ್ಯುಟಿವ್‌ ಡೈರೆಕ್ಟರ್‌ ರಮ್ಯಾ ಎತ್ತಂಗಡಿ

ಎಂಪಿಎಸ್‌ಸಿ ಪರೀಕ್ಷೆಗಳಿಗೆ ಮಾಲಾಗೆ ತರಬೇತಿ ನೀಡುವ ಜವಾಬ್ದಾರಿಯನ್ನು ವಹಿಸಿಕೊಂಡ ವಿಶಿಷ್ಟ ಅಕಾಡೆಮಿಯ ನಿರ್ದೇಶಕ ಪ್ರೊ. ಅಮೋಲ್ ಪಾಟೀಲ್‌ನಲ್ಲಿ ಮಾಲಾ ಮತ್ತೊಬ್ಬ ಉತ್ತಮ ಸಮರಿಟನ್‌ನನ್ನು ಕಂಡುಕೊಂಡರು. ಮಾಲಾ ಅವರು ಆಗಸ್ಟ್ 2022 ಮತ್ತು ಡಿಸೆಂಬರ್ 2023 ರಲ್ಲಿ ತಹಸೀಲ್ದಾರ್ ಹುದ್ದೆಗೆ ಪರೀಕ್ಷೆಯನ್ನು ಬರೆದಿದ್ದು ಎರಡು ಬಾರಿ ವಿಫಲರಾಗಿದ್ದಾರೆ. ಇದೀಗ MPSC ಕ್ಲರ್ಕ್ (ಟೈಪ್ ರೈಟಿಂಗ್) ಪರೀಕ್ಷೆಯನ್ನು ತೆಗೆದುಕೊಂಡರು. ಈ ಪರೀಕ್ಷೆಯಲ್ಲಿ ಆಕೆ ಪಡೆದಿರುವ ಯಶಸ್ಸು ಆಕೆಯ ಮನೆಯಾದ ಪರತ್ವಾಡದಲ್ಲಿರುವ ನಿರ್ಗತಿಕರ ಕೇಂದ್ರಕ್ಕೆ ಸಂತೋಷ ತಂದಿದೆ ಎಂದರು.

Continue Reading

ದೇಶ

Voter Turnout: 4ನೇ ಹಂತದಲ್ಲಿ ಹೆಚ್ಚಿದ ಮತದಾನ; ಪುರುಷರಿಗಿಂತ ಸ್ತ್ರೀಯರಿಂದಲೇ ಹೆಚ್ಚು ಮತ ಚಲಾವಣೆ; ಹೀಗಿದೆ ಆಯೋಗದ ಮಾಹಿತಿ

Voter Turnout: ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಈಗ ನಾಲ್ಕನೇ ಹಂತದಲ್ಲಿ ಮತದಾನ ಪ್ರಮಾಣವು ಹೆಚ್ಚಾಗಿರುವುದು ಸಕಾರಾತ್ಮಕ ಬೆಳವಣಿಗೆ ಎಂದೇ ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.

VISTARANEWS.COM


on

Voter Turnout
Koo

ನವದೆಹಲಿ: ಕಳೆದ ಸೋಮವಾರ (ಮೇ 13) ನಡೆದ ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನದ ಕುರಿತು ಚುನಾವಣೆ ಆಯೋಗವು (Election Commission) ಶುಕ್ರವಾರ ತಡರಾತ್ರಿ (ಮೇ 17) ಮಾಹಿತಿ ನೀಡಿದೆ. ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಮೂರು ಹಂತಗಳಿಗಿಂತ ಗರಿಷ್ಠ ಮತದಾನ (Voter Turnout) ದಾಖಲಾಗಿರುವುದು ಸಕಾರಾತ್ಮಕ ಸಂಗತಿಯಾಗಿದೆ. ಅಷ್ಟೇ ಅಲ್ಲ, ಬಿಹಾರದಲ್ಲಿ 2, 3, ಹಾಗೂ 4ನೇ ಹಂತದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ ಎಂಬುದಾಗಿ ಆಯೋಗವು ಮಹತ್ವದ ಮಾಹಿತಿ ಹಂಚಿಕೊಂಡಿದೆ.

ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಬಿಹಾರ, ಜಾರ್ಖಂಡ್‌ನಲ್ಲಿ ಹೆಣ್ಮಕ್ಳೇ ಸ್ಟ್ರಾಂಗು!

ಸಾಮಾನ್ಯವಾಗಿ ಬಹುತೇಕ ಕ್ಷೇತ್ರಗಳಲ್ಲಿ ಮತದಾನ ಮಾಡುವವರು ಮಹಿಳೆಯರಿಗಿಂತ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಇರುತ್ತಾರೆ. ಆದರೆ, ಎರಡು, ಮೂರು ಹಾಗೂ ನಾಲ್ಕನೇ ಹಂತದಲ್ಲಿ ಬಹಾರದ 15 ಹಾಗೂ ಜಾರ್ಖಂಡ್‌ನ 13 ಕ್ಷೇತ್ರಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ ಎಂಬುದಾಗಿ ಚುನಾವಣೆ ಆಯೋಗ ತಿಳಿಸಿದೆ. ಹಾಗೆಯೇ, ಪಶ್ಚಿಮ ಬಂಗಾಳದ 6, ಬಿಹಾರ, ಆಂಧ್ರದಲ್ಲಿ ತಲಾ 5, ಒಡಿಶಾ 2, ತೆಲಂಗಾಣ ಹಾಗೂ ಮಧ್ಯಪ್ರದೇಶದಲ್ಲಿ ತಲಾ 1 ಕ್ಷೇತ್ರಗಳಲ್ಲಿ ಹೆಣ್ಣುಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವೋಟ್‌ ಹಾಕಿದ್ದಾರೆ.

ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು ಐದನೇ ಹಂತದ ಮತದಾನವು ಮೇ 20ರಂದು ನಡೆಯಲಿದೆ. ಜೂನ್‌ 1ರಂದು ಕೊನೆಯ ಅಥವಾ ಏಳನೇ ಹಂತದ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇದುವರೆಗೆ 379 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯಗೊಂಡಂತಾಗಿದೆ.

ಇದನ್ನೂ ಓದಿ: Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Continue Reading
Advertisement
Rain News Boy dies after being struck by lightning in Banavasi Heavy rains lash Chikkamagaluru and Hassan
ಮಳೆ6 mins ago

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Election Icon
Lok Sabha Election 20248 mins ago

Election Icon: ಹಿಮಾಚಲ ಪ್ರದೇಶದ ಮಂಗಳಮುಖಿ ಈಗ ‘ಚುನಾವಣಾ ಐಕಾನ್’

Virat Kohli
ಕ್ರೀಡೆ28 mins ago

Virat Kohli: ರೋಹಿತ್​ ಶರ್ಮ ರನ್​ ದಾಖಲೆ ಮುರಿದ ಕಿಂಗ್​ ಕೊಹ್ಲಿ

Covid 19
ವಿದೇಶ29 mins ago

Covid 19: ಸಿಂಗಾಪುರದಲ್ಲಿ ಕೊರೊನಾ ಹೊಸ ಅಲೆ; ವಾರದಲ್ಲಿ 25 ಸಾವಿರ ಕೇಸ್‌, ಭಾರತಕ್ಕೆ ಇದೆಯೇ ಭೀತಿ?

Inspirational Story
ಶಿಕ್ಷಣ32 mins ago

Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

MLC Election Withdrawal of nomination paper says Suresh Sajjan
ಕರ್ನಾಟಕ33 mins ago

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

SSLC 2024 Exam 2
ಪ್ರಮುಖ ಸುದ್ದಿ43 mins ago

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

Two killed after being hit by the wheel of a chariot while performing at Veerabhadreswara fair
ಕರ್ನಾಟಕ52 mins ago

Veerabhadreswara Fair: ವೀರಭದ್ರೇಶ್ವರ ಜಾತ್ರೆಯಲ್ಲಿ ಉತ್ತತ್ತಿ ಆಯುವಾಗ ರಥದ ಚಕ್ರದಡಿ‌ ಸಿಲುಕಿ ಇಬ್ಬರ ಸಾವು

Voter Turnout
ದೇಶ1 hour ago

Voter Turnout: 4ನೇ ಹಂತದಲ್ಲಿ ಹೆಚ್ಚಿದ ಮತದಾನ; ಪುರುಷರಿಗಿಂತ ಸ್ತ್ರೀಯರಿಂದಲೇ ಹೆಚ್ಚು ಮತ ಚಲಾವಣೆ; ಹೀಗಿದೆ ಆಯೋಗದ ಮಾಹಿತಿ

Uttara Kannada News Take precautionary measures to prevent the spread of infectious diseases in the district says DC Gangubai manakar
ಉತ್ತರ ಕನ್ನಡ1 hour ago

Uttara Kannada News: ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ: ಡಿಸಿ ಮಾನಕರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌